ನಂದಿ ಪ್ರವಾಸಿಗರಿಗೆ ಕೋವಿಡ್‌ ಮಾರ್ಗಸೂಚಿ ಕಡ್ಡಾಯ

7ರಿಂದ ನಂದಿಗಿರಿಧಾಮ ಪ್ರವಾಸಿಗರಿಗೆ ಮುಕ್ತ

Team Udayavani, Sep 4, 2020, 2:44 PM IST

ನಂದಿ ಪ್ರವಾಸಿಗರಿಗೆ ಕೋವಿಡ್‌ ಮಾರ್ಗಸೂಚಿ ಕಡ್ಡಾಯ

ಶಿಡ್ಲಘಟ್ಟ: ಕರ್ನಾಟಕದ ಊಟಿಯೆಂದೇ ಖ್ಯಾತಿ ಪಡೆದಿರುವ ಪ್ರಕೃತಿ ಸೊಬಗಿನ ಮೂಲಕ ಪ್ರವಾಸಿಗರನ್ನು ಕೈಬೀಸಿ ಕರೆಯುವ ಜಿಲ್ಲೆಯ ಐತಿಹಾಸಿಕ ತಾಣ ನಂದಿ ಬೆಟ್ಟ ಸೆ.7 ರಿಂದ  ಸಾರ್ವಜನಿಕರ ಪ್ರವೇಶಕ್ಕೆ ಮುಕ್ತಗೊಳಿಸಲು ಜಿಲ್ಲಾಡಳಿತ ಮುಂದಾಗಿದ್ದು, ಪ್ರಕೃತಿ ಮತ್ತು ಪರಿಸರ ಪ್ರೇಮಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

ಕೋವಿಡ್ ಸಂಕಷ್ಟದ ಹಿನ್ನೆಲೆಯಲ್ಲಿ ವಿಶ್ವ ವಿಖ್ಯಾತ ನಂದಿ ಗಿರಿಧಾಮದಲ್ಲಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು. ಆದರೆ, ಕೇಂದ್ರ ಸರ್ಕಾರ ಆನ್‌ಲಾಕ್‌ 4ರ ಮಾರ್ಗ ಸೂಚಿಗಳನ್ನು ಪ್ರಕಟಿಸಿದ ಬಳಿಕ ಜಿಲ್ಲಾಡಳಿತ ಕೆಲವೊಂದು ಷರತ್ತುಗಳನ್ನು ವಿಧಿಸಿ ನಿರ್ಬಂಧವನ್ನು ತೆರವುಗೊಳಿಸಿ, ಇದೇ ತಿಂಗಳ 7 ರಿಂದ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತ ಗೊಳಿಸಲು ತೀರ್ಮಾನಿಸಿದೆ.

ಪ್ರಾಕೃತಿಕ ಸೌಂದರ್ಯವನ್ನು ತನ್ನ ಮಡಲಲ್ಲಿಟ್ಟುಕೊಂಡಿರುವ ನಂದಿ ಗಿರಿಧಾಮವನ್ನು ನೋಡುವುದರಿಂದ ಒಂದು ರೀತಿಯ ಉಲ್ಲಾಸ ಮತ್ತು ಸಂತೋಷವೆಂದು ಬಣ್ಣಿಸುವ ಪ್ರಕೃತಿ ಪ್ರೇಮಿಗಳು ಇಂತಹ ಸೌಂದರ್ಯ ಎಲ್ಲಿಯೂ ನೋಡಲು ಸಾಧ್ಯವಿಲ್ಲ ಸಾಕ್ಷತ್‌ ಸ್ವರ್ಗ ನೋಡದಂತೆ ಭಾಸ ವಾಗುತ್ತದೆ ಎಂದು ಬಣ್ಣಿಸುತ್ತಾರೆ. ಜೊತೆಗೆ, ಕರ್ನಾಟಕದ ಊಟಿಯೆಂಬ ನಾಮಕರಣ ಮಾಡಿಬಿಟ್ಟಿದ್ದಾರೆ. ದೇಶ, ವಿದೇಶಿ ಪ್ರವಾಸಿಗರ ಗಮನ ಸೆಳೆದಿರುವ ನಂದಿ ಗರಿಧಾಮಕ್ಕೆ ಸೆ.7 ರಿಂದ ಪ್ರವೇಶ ಆರಂಭ ಗೊಳ್ಳಲಿದ್ದು ತೋಟಗಾರಿಕೆ ಇಲಾಖೆ, ಪ್ರವಾಸೋದ್ಯಮ ಹಾಗೂ ಪೊಲೀಸ್‌ ಇಲಾಖೆ ಈ ನಿಟ್ಟಿನಲ್ಲಿ ಪೂರಕ ಸಿದ್ಧತೆಗಳನ್ನು ಕೈ ಗೊಂಡಿದೆ. ಕೊರೊನಾ ಸೋಂಕು ನಿಯಂತ್ರಿಸುವ ಸಲು ವಾಗಿ ಕಳೆದ ಮಾ.23 ರಿಂದಲೇ ಕೇಂದ್ರ ಸರ್ಕಾರ ಘೋಷಿಸಿದ ಲಾಕ್‌ ಡೌನ್‌ ಪರಿಣಾಮ ಜಿಲ್ಲೆಯಲ್ಲಿ ಐತಿಹಾಸಿಕ ನಂದಿ ಗಿರಿಧಾಮಕ್ಕೆ ಪ್ರವಾಸಿಗರನ್ನು ನಿರ್ಬಂಧಿ ಸಲಾಗಿತ್ತು. ಆದರೆ, ಕೇಂದ್ರ ಸರ್ಕಾರ ಲಾಕ್‌ಡೌನ್‌ ಸಡಿಲಗೊಳಿಸಿ ಮಾರ್ಗಸೂಚಿ ಗಳನ್ನು ಪ್ರಕಟಿಸಿದ ಹಿನ್ನೆಲೆಯಲ್ಲಿ ನಂದಿಗಿರಿಧಾಮವನ್ನು ಪ್ರವಾಸಿಗರಿಗೆ ಮುಕ್ತಗೊಳಿಸಿ ಪ್ರಕೃತಿಯ ಸೌಂದರ್ಯವನ್ನು ವೀಕ್ಷಣೆ ಮಾಡಲು ಬರುವ ಪ್ರವಾಸಿಗರಿಗೆ ಹಲವು ಷರತ್ತು ಗಳನ್ನು ವಿಧಿಸಲು ಜಿಲ್ಲಾಡಳಿತ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಮಾಸ್ಕ್ ಧರಿಸುವುದು ಕಡ್ಡಾಯ : ನಂದಿ ಗಿರಿಧಾಮಕ್ಕೆ ಬರುವವರು ಕಡ್ಡಾಯವಾಗಿ ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಒಂದು ವೇಳೆ ತಪ್ಪಿದರೆ ದಂಡ ವಿಧಿ ಸಲಾಗುತ್ತದೆ ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಅಲ್ಲದೇ, ನಂದಿ ಗಿರಿಧಾಮದಲ್ಲಿ ಹೆಚ್ಚಿನ ಭದ್ರತೆಗಾಗಿ ಪೊಲೀಸ್‌ ಹಾಗೂ ಹೋಮ್‌ಗಾರ್ಡ್ಸ್‌ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಕುಡಿಯುವ ನೀರು, ತಿಂಡಿ ತಿನಿಸುಗಳ ಪ್ಲಾಸ್ಟಿಕ್‌ ಪೊಟ್ಟಣಗಳನ್ನು ಹೊರಗಡೆಯಿಂದ ನಂದಿ ಗಿರಿಧಾಮಕ್ಕೆ ತರುವುದು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಸೆ.7ರಿಂದ ಗಿರಿಧಾಮದಲ್ಲಿ ಸಾರ್ವಜನಿಕರಿಗೆ ಪ್ರವೇಶ ನೀಡಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಪ್ಲಾಸ್ಟಿಕ್‌ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ತಿಂಡಿ-ತಿನಿಸುಗಳನ್ನು ತರಲು ಅವಕಾಶವಿಲ್ಲ.ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಇಲ್ಲದಿದ್ದರೆ ದಂಡ ವಿಧಿ ಸಲಾಗುತ್ತದೆ.  -ಎನ್‌.ಗೋಪಾಲ್‌,ವಿಶೇಷ ಅಧಿಕಾರಿ, ನಂದಿ ಗಿರಿಧಾಮ.

ಕೇಂದ್ರ ಸರ್ಕಾರದ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸುವ ಮೂಲಕ ಜಿಲ್ಲೆಯ ಪ್ರವಾಸಿ ತಾಣ ನಂದಿ ಗಿರಿಧಾಮಕ್ಕೆಸೆ.7ರಿಂದ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತಗೊಳಿ ಸಲು ಕ್ರಮ ಕೈಗೊಳ್ಳಲಾಗಿದೆ. ಬೆಳಗ್ಗೆ 8ರಿಂದ ಸಂಜೆ 5 ಗಂಟೆಯವರೆಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ನಂದಿಗಿರಿಧಾಮಕ್ಕೆ ಪ್ರವೇಶಿಸುವ ಮುನ್ನ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸ್ಯಾನಿಟೈಸರ್‌ ಬಳಸಿಕೊಂಡು, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚನೆ ನೀಡಲಾಗಿದೆ.  – ಆರ್‌.ಲತಾ, ಜಿಲ್ಲಾಧಿಕಾರಿ,ಚಿಕ್ಕಬಳ್ಳಾಪುರ.

ಜಿಲ್ಲೆಯ ನಂದಿ ಗಿರಿಧಾಮ ಪ್ರವೇಶ ಮಾಡುವ ಮುನ್ನ ಪೊಲೀಸ್‌ ಠಾಣೆ ತೆರೆಯಲಾಗಿದೆ. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಇಲ್ಲದಿದ್ದ ಪಕ್ಷದಲ್ಲಿ ಸ್ಥಳೀಯ ಅಧಿಕಾರಿಗಳ ಮೂಲಕ ದಂಡ ವಿಧಿಸಲಾಗುತ್ತದೆ. ಜೊತೆಗೆ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದೆ. ಗೃಹ ರಕ್ಷಕರು ಸೇರಿ ಪೊಲೀಸ್‌ ಪೇದೆನಿಯೋಜಿಸಲು ಕ್ರಮ ಕೈಗೊಳ್ಳಲಾಗಿದೆ. – ಮಿಥುನ್‌ಕುಮಾರ್‌, ಎಸ್ಪಿ, ಚಿಕ್ಕಬಳ್ಳಾಪುರ

– ಎಂ.ಎ.ತಮೀಮ್‌ ಪಾಷ

ಟಾಪ್ ನ್ಯೂಸ್

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.