ಚಿಕ್ಕಬಳಾಪುರ: ಬೆಳೆ ಸಮೀಕ್ಷೆಗೆ ಕ್ಷೀಣಿಸಿದ ಉತ್ಸಾಹ

ಜಿಲ್ಲೆಯಲ್ಲಿ ಭಾರೀ ಹಿನ್ನಡೆ, 21.54% ಮಾತ್ರ ಗುರಿ ಸಾಧನೆ

Team Udayavani, Sep 6, 2020, 1:20 PM IST

ಚಿಕ್ಕಬಳಾಪುರ: ಬೆಳೆ ಸಮೀಕ್ಷೆಗೆ ಕ್ಷೀಣಿಸಿದ ಉತ್ಸಾಹ

ಶಿಡ್ಲಘಟ್ಟ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ದೊರೆಯುವ ಸೌಲಭ್ಯಗಳಿಂದ ರೈತ ಸಮುದಾಯ ವಂಚಿತಗೊಳ್ಳಬಾರದು ಎಂದು ಜಾರಿಗೊಳಿಸಿರುವ ಬೆಳೆ ಸಮೀಕ್ಷೆ ಅಭಿಯಾನಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹಿನ್ನಡೆಯಾಗಿದೆ. ತಾಂತ್ರಿಕ ಸಮಸ್ಯೆ ಮತ್ತು ರೈತರ ನಿರೀಕ್ಷಿತ ಪ್ರಮಾಣದಲ್ಲಿ ಉತ್ಸಾಹ ಕಡಿಮೆಯಾಗಿದ್ದ ರಿಂದ ಜಿಲ್ಲಾದ್ಯಂತ 21.54% ಮಾತ್ರ ಗುರಿ ಸಾಧಿಸಲಾಗಿದೆ.

ಶಿಡ್ಲಘಟ್ಟದಲ್ಲಿ ಅತೀ ಕಡಿಮೆ: ಚಿಕ್ಕಬಳ್ಳಾಪುರ ಜಿಲ್ಲೆಯ ವಾಣಿಜ್ಯ ಕೇಂದ್ರವೆಂದು ಖ್ಯಾತಿ ಹೊಂದಿರುವ ಚಿಂತಾಮಣಿ ತಾಲೂಕಿನಲ್ಲಿ ಅತಿ ಹೆಚ್ಚು ಅಂದರೆ 30.2% ಸಾಧನೆ ಮಾಡಲಾಗಿದೆ. ಇನ್ನೂ ರೇಷ್ಮೆ ಉತ್ಪಾದನೆಯ ಕೇಂದ್ರ ಶಿಡ್ಲಘಟ್ಟ ತಾಲೂಕಿನಲ್ಲಿ ಅತಿ ಕಡಿಮೆ ಅಂದರೆ 13.45% ಸಾಧನೆಯಾಗಿರುವುದು ಚಿಂತೆಗೀಡು ಮಾಡಿದೆ.

ಗುರಿ ಸಾಧಿಸಲು ಹಿನ್ನಡೆ: ಬೆಳೆ ಸಮೀಕ್ಷೆ ಅಭಿಯಾನವನ್ನು ಯಶಸ್ವಿಗೊಳಿಸಲು ಕೃಷಿ ಇಲಾಖೆಯ ಅಧಿಕಾರಿಗಳು ವ್ಯಾಪಕವಾಗಿ ಪ್ರಚಾರ ಮತ್ತು ಜಾಗೃತಿ ಮೂಡಿಸಿ ದರೂ ಸಹ ನಿರೀಕ್ಷಿತ ಪ್ರಮಾಣದಲ್ಲಿ ಗುರಿ ಸಾಧಿಸಲು ಹಿನ್ನಡೆಯಾಗಿದೆ.

ಮಾಹಿತಿ ಕೊರತೆ, ನೆಟ್‌ವರ್ಕ್‌ ಸಮಸ್ಯೆ: ಪ್ರವಾಹ, ಬರಗಾಲದ ಸಂದರ್ಭ ಪರಿಹಾರ, ಬೆಳೆ ವಿಮೆ, ಕನಿಷ್ಠ ಬೆಂಬಲ ಬೆಲೆ ಮೊದಲಾದ ಯೋಜನೆಗಳಿಂದ ರೈತರು ವಂಚಿತರಾಗುತ್ತಿದ್ದರು. ಇದನ್ನು ಮನಗಂಡು ರಾಜ್ಯ ಸರ್ಕಾರವು ಪಹಣಿಯಲ್ಲಿ ಸರಿಯಾಗಿ ಬೆಳೆ ಮಾಹಿತಿ ನಮೂದಿಸಲು ಈ ವರ್ಷ “”ನನ್ನ ಬೆಳೆ ನನ್ನ ಹಕ್ಕು” ಘೋಷಣೆಯಡಿ ರೈತರಿಂದಲೇ ಬೆಳೆ ಸಮೀಕ್ಷೆ ಮಾಡುವ ಯೋಜನೆ ಹಮ್ಮಿಕೊಂಡಿತ್ತು. ಬೆಳೆ ಸಮೀಕ್ಷೆ 2020-21 ಎಂಬ ಮೊಬೈಲ್‌ ಆ್ಯಪ್‌ ಮೂಲಕ ಸೆಪ್ಟೆಂಬರ್‌ 23ರೊಳಗೆ ರೈತರೇ ತಮ್ಮ ಜಮೀ ನಿನ ಬೆಳೆ ಮಾಹಿತಿ ದಾಖಲಿಸಲು ವ್ಯವಸ್ಥೆ ಮಾಡಿಕೊಳ್ಳಲು ಬೆಳೆ ಸಮೀಕ್ಷೆಯ ಅವಧಿಯನ್ನು ವಿಸ್ತರಿಸಲಾಗಿದೆ. ಆದರೆ ಈ ಬಗ್ಗೆ ರೈತರಿಗೆ ಸೂಕ್ತ ಮಾಹಿತಿ ಕೊರತೆ ಮತ್ತು ನೆಟ್‌ವರ್ಕ್‌ ಸಮಸ್ಯೆಯಿಂದ ಸಮೀಕ್ಷೆಯಲ್ಲಿ ಜಿಲ್ಲೆ ಹಿಂದುಳಿದೆಯೆಂಬ ಮಾತು ಕೇಳಿ ಬರುತ್ತಿದೆ.

1.39 ಲಕ್ಷ ರೈತರ ಬೆಳೆ ಸಮೀಕ್ಷೆ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸೆ.03 ವರೆಗೆ 21.54% ಮಾತ್ರ ಗುರಿ ಸಾಧನೆಯಾಗಿದೆ. ಜಿಲ್ಲೆಯ 6,48,321 ಪಹಣಿಗಳಲ್ಲಿ 1,39,630 ಮಾತ್ರ ರೈತರ ಬೆಳೆ ಸಮೀಕ್ಷೆ ಕೈಗೊಳ್ಳಲಾಗಿದೆ. ಇನ್ನುಳಿದ ರೈತರ ಪಹಣಿಗಳ ಬೆಳೆ ಸಮೀಕ್ಷೆ ಕಾರ್ಯ ಆಗಬೇಕಾಗಿದೆ. ಈ ಯೋಜನೆಯ ಯಶಸ್ವಿಗೊಳಿಸಲು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಆಯಾ ತಾಲೂಕುಗಳು ಕೃಷಿ ಸಹಾಯಕ ನಿರ್ದೇಶಕರುಗಳ ಮೂಲಕ ತಹಶೀಲ್ದಾರ್‌ಗಳ ಅಧ್ಯಕ್ಷತೆಯಲ್ಲಿ ರೈತ ಸಂಘಗಳ ಪದಾಧಿಕಾರಿಗಳೊಂದಿಗೆ ಅರಿವು ಮತ್ತು ಜಾಗೃತಿ ಮೂಡಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ರೈತರ ಸಹಕಾರದಿಂದ ಶೇ.100 ರಷ್ಟು ಬೆಳೆ ಸಮೀಕ್ಷೆ ನಡೆಸಲು ಯೋಜನೆ ರೂಪಿಸಿ ಪ್ರತಿಯೊಂದು ಗ್ರಾಮದಲ್ಲಿ ರೈತರಿಗೆ ಬೆಳೆ ಸಮೀಕ್ಷೆ ಹೇಗೆ ಮಾಡಬೇಕೆಂದು ಅರಿವು ಮೂಡಿಸಲಾಗುತ್ತಿದೆ. ತಾಲೂಕು ಮಟ್ಟದಲ್ಲಿತಾಲೂಕು ಕೃಷಿ ಸಹಾಯಕ ನಿರ್ದೇಶಕರ  ಮೂಲಕ ರೈತರಿಗೆ ಮಾಹಿತಿ ನೀಡಲು ಸೂಚನೆ ನೀಡಲಾಗಿದೆ. ತಹಶೀಲ್ದಾರ್‌ ಮೂಲಕ ಜಾಗೃತಿ ಸಭೆ ನಡೆಸಲಾಗುತ್ತಿದೆ. ಸೆ.23 ರೊಳಗೆ ಗುರಿ ಸಾಧಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ.   ಎಲ್‌.ರೂಪಾ, ಜಂಟಿ ನಿರ್ದೇಶಕರು, ಕೃಷಿ ಇಲಾಖೆ

ಎಂ.ಎ.ತಮೀಮ್‌ ಪಾಷ

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.