ಹಾಸ್ಟೆಲ್‌ಗ‌ಳಿಗೆ ಭೇಟಿ ನೀಡಿ ವ್ಯವಸ್ಥೆ ಪರಿಶೀಲಿಸಿದ ಡೀಸಿ

ಸದೃಢ ಸಮಾಜ ನಿರ್ಮಾಣಕ್ಕೆ ಕಾರಣೀ ಭೂತರಾಗಲು ವಿದ್ಯಾರ್ಥಿಗಳಿಗೆ ಮನವಿ ಮಾಡಿದರು.

Team Udayavani, Jul 22, 2022, 6:25 PM IST

ಹಾಸ್ಟೆಲ್‌ಗ‌ಳಿಗೆ ಭೇಟಿ ನೀಡಿ ವ್ಯವಸ್ಥೆ ಪರಿಶೀಲಿಸಿದ ಡೀಸಿ

ಚಿಕ್ಕಬಳ್ಳಾಪುರ: ನಗರದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಜಿಲ್ಲಾಧಿಕಾರಿ ಎನ್‌.ಎಂ.ನಾಗರಾಜ್‌ ಭೇಟಿ ನೀಡಿ, ಮಕ್ಕಳೊಂದಿಗೆ ಊಟ ಸೇವಿಸಿ, ಅಲ್ಲಿನ ಸ್ವತ್ಛತೆ, ಸೌಲಭ್ಯಗಳನ್ನು ಖುದ್ದು ಪರಿಶೀಲಿಸಿದರು.

ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದಿನವಿಡೀ ಸಭೆಗಳನ್ನು ನಡೆಸಿ ಜಿಲ್ಲೆಯ ಬಗ್ಗೆ ಒಂದಷ್ಟು ಮಾಹಿತಿ ಕಲೆ ಹಾಕಿದರು. ವಿದ್ಯಾರ್ಥಿನಿಲಯಗಳ ಕಾರ್ಯ ವೈಖರಿ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಪರಿಶೀಲನೆಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳಿಗೆ ಸಂಜೆ ಖುದ್ದು ಭೇಟಿ ನೀಡಿ ಪರಿಶೀಲಿಸಿದರು.

ವಿದ್ಯಾರ್ಥಿಗಳ ವಾಸದ ಕೊಠಡಿಗಳು, ಊಟದ ಕೋಣೆ, ಆಹಾರ ತಯಾರಿಕ ಕೋಣೆ, ಆಹಾರ ದಾಸ್ತಾನು ಕೋಣೆ, ಗ್ರಂಥಾಲಯ, ಕಂಪ್ಯೂಟರ್‌ ಲ್ಯಾಬ್‌ ಕಾರ್ಯವೈಖರಿ ಮತ್ತು ವಿದ್ಯಾರ್ಥಿ ನಿಲಯದ ಆವರಣದ ಸ್ವಚ್ಛತೆ ಪರಿಶೀಲಿಸಿದರು.

ಕೌಶಲ್ಯಗಳ ಬಗ್ಗೆ ಅರಿವು: ನಂತರ ನಿಲಯದಲ್ಲಿನ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಬಗ್ಗೆ ಅನುಕೂಲವಾಗಲು ಹಲವು ವಿಷಯಗಳ ಕುರಿತು ಸಲಹೆ ನೀಡುವುದರ ಜೊತೆಗೆ ಯಶಸ್ವಿ ವಿದ್ಯಾರ್ಥಿಗಳಾಗಿ ಹೊರಹೊಮ್ಮಲು ಅಗತ್ಯವಾಗಿ ಬೇಕಾಗಿರುವ ವಿವಿಧ ಕೌಶಲ್ಯಗಳ ಬಗ್ಗೆ ಅರಿವು ಮೂಡಿಸಿದರು.

ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸಿ: ಪ್ರತಿನಿತ್ಯ ನಿಲಯದಲ್ಲಿ ಒದಗಿಸಲಾಗುತ್ತಿರುವ ಸೌಲಭ್ಯಗಳಾದ ಗ್ರಂಥಾಲಯ, ದಿನಪತ್ರಿಕೆ, ನಿಯತಕಾಲಿಕ, ಪರಾಮರ್ಶನ ಗ್ರಂಥಗಳು, ವ್ಯಕ್ತಿತ್ವ ವಿಕಸನದ ಪುಸ್ತಕಗಳನ್ನು ದಿನದಲ್ಲಿ ಕನಿಷ್ಠ ಒಂದು ತಾಸು ಆದರೂ ಓದಿ ಅವುಗಳನ್ನು ಅಧ್ಯಯನ ಮಾಡಲು ತಿಳಿಸಿದರು. ಅದೇ ರೀತಿ ಅಧಿಕಾರಿಗಳು, ಸಿಬ್ಬಂದಿ ಸಹ ನಿಲಯದಲ್ಲಿ ಹೆಚ್ಚು ಕ್ರಿಯಾಶೀಲರಾಗಿ ಕಾರ್ಯನಿರ್ಹಿಸಲು ಸೂಚಿಸಿದರು.

ದೇಶದ ಆಸ್ತಿಗಳಾಗಿ: ಸರ್ಕಾರವು ಹಿಂದುಳಿದ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ನೀಡಲಾಗುತ್ತಿರುವ, ಶುಲ್ಕ ವಿನಾಯಿತಿ, ವಿದ್ಯಾಸಿರಿ, ಪ್ರೋತ್ಸಾಹ ಧನ, ವಿದ್ಯಾರ್ಥಿವೇತನ ಮುಂತಾದ ಸೌಲಭ್ಯ ಗಳನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಂಡು, ಜವಾಬ್ದಾರಿಯುತ ಪ್ರಜೆಗಳಾಗಿ, ದೇಶದ ಆಸ್ತಿಗಳಾಗಿ ಹೊರಹೊಮ್ಮುವಂತಾಗಬೇಕು ಎಂದು ಕಿವಿಮಾತು ಹೇಳಿದರು.

ಸದೃಢ ಸಮಾಜದ ನಿರ್ಮಾಣ: ವಿದ್ಯಾರ್ಥಿಗಳು ಕೇವಲ ಹೆಚ್ಚು ಅಂಕಗಳನ್ನು ಗಳಿಸುವುದಲ್ಲದೆ, ಸಮಾಜದ ವಿವಿಧ ಕ್ಷೇತ್ರಗಳ ಬಗ್ಗೆ ಹೆಚ್ಚಿನ ಜ್ಞಾನ ಸಂಪಾದಿಸುವುದು ಅತಿ ಮುಖ್ಯ. ತಮ್ಮ ವಿದ್ಯಾ ಭ್ಯಾಸದ ನಂತರ ಔದ್ಯೋಗಿಕ ಕ್ಷೇತ್ರದಲ್ಲಿ ತಮ್ಮದೇ ಆದ ಚಾಪನ್ನು ಮೂಡಿಸಲು ಮತ್ತು ಉತ್ತಮ
ಉದ್ಯೋಗಾವಕಾಶ ಪಡೆದುಕೊಳ್ಳಲು ಪ್ರಸ್ತುತ ಕಾಲಘಟ್ಟದಲ್ಲಿ ಇದು ಅವಶ್ಯಕವಾಗಿದೆ. ಆ ಮೂಲಕ ತಂದೆ ತಾಯಿಗೆ ಕೀರ್ತಿ ತರುವುದರೊಂದಿಗೆ ಸದೃಢ ಸಮಾಜ ನಿರ್ಮಾಣಕ್ಕೆ ಕಾರಣೀ ಭೂತರಾಗಲು ವಿದ್ಯಾರ್ಥಿಗಳಿಗೆ ಮನವಿ ಮಾಡಿದರು.

ಸ್ವಚ್ಛತೆ ಬಗ್ಗೆ ಇಲಾಖೆಯ ಸಿಬ್ಬಂದಿ ಪ್ರಶಂಸೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳ ಉತ್ತಮ ನಿರ್ವಹಣೆ ಬಗ್ಗೆ ಮತ್ತು ನಿಲಯಗಳಲ್ಲಿ ಒದಗಿಸಲಾಗಿರುವ ಗ್ರಂಥಾಲಯ, ಕಂಪ್ಯೂಟರ್‌ ಲ್ಯಾಬ್‌, ಸೋಲಾರ್‌ ಬಿಸಿ ನೀರಿನ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ನಿಲಯದಲ್ಲಿನ ಸ್ವತ್ಛತೆ ಬಗ್ಗೆ ಇಲಾಖೆಯ ಸಿಬ್ಬಂದಿ ಪ್ರಶಂಸಿಸಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಡಾ.ಅಶೋಕ್‌, ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.