ಮೃತ ವೃದ್ಧ 170 ಮನೆಗೆ ಪಡಿತರ ಹಂಚಿದ್ದ!

ಮಂಗಳವಾರ ಕೋವಿಡ್ -19ಗೆ ಬಲಿಯಾಗಿದ್ದ ವೃದ್ಧ; ಮತ್ತೆ ಮೂವರಲ್ಲಿ ಸೋಂಕು ಪತ್ತೆ

Team Udayavani, Apr 18, 2020, 3:40 PM IST

ಮೃತ ವೃದ್ಧ 170 ಮನೆಗೆ ಪಡಿತರ ಹಂಚಿದ್ದ!

ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರದ 17ನೇ ವಾರ್ಡ್‌ನಲ್ಲಿ ಮಂಗಳವಾರ ಕೋವಿಡ್ -19 ಸೋಂಕಿಗೆ ಬಲಿಯಾದ ವೃದ್ಧನ ಪ್ರಾಥಮಿಕ ಸಂಪರ್ಕದಲ್ಲಿದ್ದ 14 ಮಂದಿ ಪೈಕಿ 3 ಮಂದಿಗೆ ಶುಕ್ರವಾರ ಸೋಂಕು ಪತ್ತೆಯಾಗುವ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ದಿಢೀರನೆ 16ಕ್ಕೆ ಏರಿರುವುದು ಒಂದೆಡೆಯಾದರೆ, ಸೋಂಕಿಗೆ ಬಲಿಯಾದ ವೃದ್ಧ ಸಾವಿಗೂ ಮೊದಲು ತಮ್ಮ ವಾರ್ಡ್‌ನ 171 ಮನೆಗಳಿಗೆ ದವಸ, ಧಾನ್ಯಗಳನ್ನು ಹಂಚಿದ್ದ ಎಂಬ ಆಘಾತಕಾರಿ ಮಾಹಿತಿ ಹೊರ ಬಿದ್ದಿದೆ.

ಕಳೆದ ಮಂಗಳವಾರ ತೀವ್ರ ಉಸಿರಾಟದ ತೊಂದರೆಯಿಂದ ಬೆಂಗಳೂರಿನ ವಿಕ್ರಮ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 65 ವರ್ಷದ ವೃದ್ಧನಿಗೆ ವೈದ್ಯಕೀಯ ಪರೀಕ್ಷೆಯಲ್ಲಿ ಕೊರೊನಾ ಪಾಸಿಟಿವ್‌ ಬಂದ ಕೂಡಲೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫ‌ಲಿಸದೇ ಮೃತಪಟ್ಟಿದ್ದರು. ಇದರಿಂದ ಚಿಕ್ಕಬಳ್ಳಾಪುರ ನಗರದ 17ನೇ ವಾರ್ಡ್‌ ಜೊತೆಗೆ 11, 12, 10 ಸೇರಿ ನಾಲ್ಕು ವಾರ್ಡ್‌ಗಳನ್ನು ಮಂಗಳವಾರದಿಂದಲೇಸಂಪೂರ್ಣ ಸೀಲ್‌ಡೌನ್‌ ಮಾಡಲಾಗಿತ್ತು.

ವೃದ್ಧನ ಮಗನಿಗೂ ಸೋಂಕು: ಸೋಂಕಿಗೆ ಬಲಿಯಾದ ವೃದ್ಧನ 26 ವರ್ಷದ ಮಗನಿಗೂ ಕೋವಿಡ್ -19 ಪಾಸಿಟಿವ್‌ ಬಂದಿದೆ. ಆತ ಬೆಂಗಳೂರಿನ ಅರೇಬಿಕ್‌ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದನೆಂದು ತಿಳಿದು ಬಂದಿದೆ. ಆದರೆ ಆತನಿಗೆ ತನ್ನ ತಂದೆಯಿಂದ ಸೋಂಕು ಬಂತಾ ಇಲ್ಲ ಬೆಂಗಳೂರಿನಲ್ಲಿಯೇ ಸೋಂಕು ತಗುಲಿದೆಯಾ ಎನ್ನುವ ಬಗ್ಗೆ ಆರೋಗ್ಯ ಇಲಾಖೆ ಪರಿಶೀಲಿಸುತ್ತಿದೆ.ವೃದ್ಧನ ಮನೆ ಪಕ್ಕದಲ್ಲಿ ಅವರಿಗೆ ಆತ್ಮೀಯ ರಾಗಿದ್ದ ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ.

11 ಮಂದಿಯಲ್ಲಿ ನೆಗೆಟಿವ್‌: ಮೃತ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿದ್ದ 14 ಜನರನ್ನು ಹೋಂ ಕ್ವಾರಂಟೆನ್‌ನಲ್ಲಿರಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆ ಪೈಕಿ 11 ಮಂದಿ ವೈದ್ಯಕೀಯ ವರದಿ ನೆಗೆಟಿವ್‌ ಬಂದಿದ್ದು, ಪಾಸಿಟಿವ್‌ ಬಂದಿರುವ ಮೂವರನ್ನು ನಗರದ ಹಳೆ ಜಿಲ್ಲಾಸ್ಪತ್ರೆಯಲ್ಲಿ ಸ್ಥಾಪಿಸಲಾಗಿರುವ ಐಸೋಲೇಷನ್‌ನಲ್ಲಿ ಇಡಲಾಗಿದೆ ಎಂದರು. ಉಳಿದವರನ್ನು ವಾರ್ಡ್‌ನಲ್ಲಿ ಕ್ವಾರಂಟೈನ್‌ ಮಾಡಲಾಗುತ್ತಿದೆ. ಜೊತೆಗೆ ಸೋಂಕು ಕಾಣಿಸಿಕೊಂಡಿರುವ ಮೂರು ಮಂದಿಯ ದ್ವಿತೀಯ ಸಂಪರ್ಕದಲ್ಲಿ ಬರೋಬ್ಬರಿ 42 ಜನರಿದ್ದು ಅವರನ್ನು ಕ್ವಾರಂಟೈನ್‌ ಮಾಡಲಾಗಿದೆ.

ಚಿಕ್ಕಬಳ್ಳಾಪುರದ 17 ನೇ ವಾರ್ಡ್‌ನಲ್ಲಿ ಸಾವನ್ನಪ್ಪಿದ್ದ ವ್ಯಕ್ತಿ ತಮ್ಮ ವಾರ್ಡ್‌ನಲಿರುವ ಜನರಿಗೆ ಹಾಗೂ ನಿರಾಶ್ರಿತರಿಗೆ ದವಸ, ಧಾನ್ಯಗಳನ್ನು ಅಲ್ಲಿನ 171 ಮನೆಗಳಿಗೆ ನೀಡಿದ್ದಾರೆ ಎಂಬ ಮಾಹಿತಿ ದೊರೆಕಿದೆ. ಅವರಿಗೂ ಸಹ ಹೋಂ ಕ್ವಾರಂಟೈನ್‌ ಮಾಡಲಾಗಿದೆ. ಅವರ ಮನೆಗಳ ಮುಂದೆ ಭಿತ್ತಿ ಚಿತ್ರಗಳನ್ನು ಅಂಟಿಸಿ ಅವರಿಗೆ ಸ್ಟಾಂಪಿಂಗ್‌ ಸಹ ಮಾಡಲಾಗಿದೆ.
● ಆರ್‌.ಲತಾ, ಜಿಲ್ಲಾಧಿಕಾರಿ (ಸುದ್ದಿಗೋಷ್ಠಿಯಲೊಲಿ ಹೇಳಿದ್ದು)

ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.