ಶಿಥಿಲಾವಸ್ಥೆಯ ಶಾಲಾಕಟ್ಟಡ ಕೆಡವಲು ಆಗ್ರಹ

Team Udayavani, Dec 10, 2018, 3:38 PM IST

ಪಾತಪಾಳ್ಯ: ಚೇಳೂರು ಹೋಬಳಿಯ ಮಂಡ್ಯಂಪಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಶಿಥಿಲಾವಸ್ಥೆ ಯಲ್ಲಿರುವ ಶಾಲಾ ಕಟ್ಟಡವನ್ನು ಕೆಡವಬೇಕೆಂದು ಎಸ್‌ಡಿಎಂಸಿ ಅಧ್ಯಕ್ಷ ರಾಮಾಂಜಿ ಆಗ್ರಹಿಸಿದ್ದಾರೆ.

ಪಾಳ್ಯಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಮಂಡ್ಯಂಪಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆ ಊರ ಹೊರ ಭಾಗದಲ್ಲಿದ್ದು 35 ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ಇಬ್ಬರು ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಶಾಲಾ ಆವರಣದಲ್ಲಿ ಮೂರು ಕೊಠಡಿಗಳಿದ್ದರೂ ಎರಡು ಕೊಠಡಿಗಳು ಪ್ರಯೋ
ಜನೆಕ್ಕೆ ಇಲ್ಲದಂತಾಗಿದೆ. ಒಂದು ಕೊಠಡಿಯನ್ನು ಮಾತ್ರ ಪಾಠ ಮಾಡಲು ಉಪಯೋಗಿಸಬೇಕಾಗಿದ್ದು, ಮಕ್ಕಳಿಗೆ ತೊಂದರೆಯಾಗಿದೆ.

ಕಟ್ಟಡ ಕೆಡವುದರ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತಂದಿದ್ದರೂ ಇದುವರೆಗೆ ಕ್ರಮ ತೆಗೆದು ಕೊಂಡಿಲ್ಲ. ಗ್ರಾಪಂ ಕೇಂದ್ರ ಸ್ಥಾನವಾದ ಪಾಳ್ಯಕೆರೆಯಲ್ಲಿ ಇತ್ತೀಚೆಗೆ ನಡೆದ ಮಕ್ಕಳ ಗ್ರಾಮಸಭೆಯಲ್ಲಿ ಕಟ್ಟಡದ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ದರೂ ಗ್ರಾಪಂ ಅಧಿಕಾರಿಗಳು ಇದುವರೆಗೆ ಕ್ರಮ ತೆಗೆದುಕೊಂಡಿಲ್ಲ. ಶಿಥಿಲಾವಸ್ಥೆಯ ಕಟ್ಟಡದ ಬಳಿ ಮಕ್ಕಳು ಆಡುವಾಗ ಅನಾಹುತಗಳಾದರೆ ಅಧಿಕಾರಿಗಳೇ ನೇರ ಹೊಣೆಗಾರರಾಗಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
 
ಸಂಬಂಧಪಟ್ಟ ಅಧಿಕಾರಿಗಳು ಶಿಥಿಲಾವಸ್ಥೆಯ ಕಟ್ಟಡವನ್ನು ಕೆಡವಿ ಮುಂದೆ ಸಂಭವಿಸಬಹುದಾದ ಅನಾಹುತವನ್ನು ತಪ್ಪಿಸಬೇಕೆಂದು ಗ್ರಾಮದ ವೆಂಕಟ ರವಣ, ನರಸಿಂಹಪ್ಪ, ಗಂಗುಲಪ್ಪ ಒತ್ತಾಯಿಸಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಪಾಳ್ಯಕೆರೆ ಸಿಆರ್‌ಪಿ ಐ.ವಿ.ಕೃಷ್ಣಾರೆಡ್ಡಿ, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಗಮನಕ್ಕೆ ತಂದು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಪಾಳ್ಯಕೆರೆ ಗ್ರಾಪಂ ಪಿಡಿಒ ಚಂದ್ರಶೇಖರ ಪ್ರತಿಕ್ರಿಯಿಸಿ, ಇತ್ತೀಚೆಗೆ ನಡೆದ ಮಕ್ಕಳ ಗ್ರಾಮಸಭೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಕಟ್ಟಡದ ಬಗ್ಗೆ ಪ್ರಸ್ತಾಪನೆ ಸಲ್ಲಿಸಿದ್ದು, ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ