ಕುಡಿವ ನೀರಿನ ಸಮಸ್ಯೆ ಇತ್ಯರ್ಥಕ್ಕೆ ಆಗ್ರಹ

Team Udayavani, Jun 23, 2019, 3:00 AM IST

kudiva

ಗೌರಿಬಿದನೂರು: ಕಳೆದ ಜನವರಿ ತಿಂಗಳಿನಿಂದ ಕುಡಿಯುವ ನೀರು, ದಿನ ಬಳಕೆಯ ನೀರು ಬಿಡುತ್ತಿಲ್ಲ ಎಂದು ಆರೋಪಿಸಿ ಗೌರಿಬಿದನೂರು ನಗರ ವ್ಯಾಪ್ತಿಯ ಸದಾಶಿವ ಮತ್ತು ವಿಘ್ನೇಶ್ವರ ಬಡಾವಣೆಯ ನಿವಾಸಿಗಳು ಶನಿವಾರ ಕೊಳವೆ ಬಾವಿಗಳ ಮುಂದೆ ನಿಂತು ಪ್ರತಿಭಟಿಸಿದರು.

ಇಲ್ಲಿನ ವಾಸಿಗಳಾದ ಸುಮಲತಾ ಮಾತನಾಡಿ, ಕಳೆದ ಆರೇಳು ತಿಂಗಳಿನಿಂದ ಸಮರ್ಪಕವಾಗಿ ನೀರು ಬಿಡುತ್ತಿಲ್ಲ. ನಗರಸಭೆ ಅನೇಕ ಬಾರಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿ ಕನಿಷ್ಟ ಒಂದು ವಾರ ಅಥವಾ 15ದಿನಗಳಿಗೊಮ್ಮೆ ನೀರು ಬಿಡಿ ಎಂದು ಹೇಳಿದ್ದರೂ ತಿಂಗಳಿಗೊಮ್ಮೆಯೂ ಬಿಡಲಿಲ್ಲ. ಈಗಾಗಲೇ 6 ತಿಂಗಳಿನಿಂದ 600 ರಿಂದ 800 ರೂ. ಪಾವತಿಸಿ ಖಾಸಗಿ ಟ್ಯಾಂಕರ್‌ಗಳಿಂದ ನೀರು ಕೊಂಡುಕೊಳ್ಳುತ್ತಿದ್ದೇವೆ ಎಂದರು.

ಇಲ್ಲಸಲ್ಲದ ಸಬೂಬು: ಸದಾಶಿವ ಬಡಾವಣೆಯಲ್ಲಿ 3 ಕೊಳವೆ ಬಾವಿಗಳಿದ್ದು, ಸಮರ್ಪಕವಾಗಿ ನೀರು ಬರುತ್ತಿದೆ. ಆದರೆ ನ‌ಮಗೆ ನೀರು ಬಿಡುತ್ತಿಲ್ಲ. ನಗರಸಭೆ ಸಿಬ್ಬಂದಿಯನ್ನು ಕೇಳಿದರೆ ವಿದ್ಯುತ್‌ ಸಂಪರ್ಕವಿಲ್ಲ, ಪಂಪ್‌ ಅಳವಡಿಸಿಲ್ಲ, ಬೋರ್‌ವೆಲ್‌ ಕೆಟ್ಟಿದೆ. ರಿಪೇರಿ ಆಗಬೇಕಿದೆ ಎಂಬ ಸಬೂಬುಗಳನ್ನು ಹೇಳುತ್ತಿದ್ದಾರೆ. ಬೋರ್‌ವೆಲ್‌ಗ‌ಳಲ್ಲಿ ನೀರು ಬರುತ್ತಿದ್ದರೂ ಸಹ ನೀರು ಬಿಡದೇ ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಸಚಿವರ ಮಾತಿಗೂ ಬೆಲೆ ಇಲ್ಲ: ನಿವೃತ್ತ ಎಎಸ್‌ಐ ಮಲ್ಲಪ್ಪ ಮಾತನಾಡಿ, ಕಳೆದ ಜನವರಿಯಿಂದ ನಮಗೆ ನೀರು ಬಿಟ್ಟಿಲ್ಲ, ಮೂರು ಬೋರ್‌ವೆಲ್‌ಗ‌ಳಿದ್ದರೂ ಬಿಡುತ್ತಿಲ್ಲ. ಈ ಹಿಂದೆ ರಾಮಲಿಂಗೇಶ್ವರ ದೇವಾಲಯದ ಬಳಿ ಕೃಷಿ ಸಚಿವ ಶಿವಶಂಕರರೆಡ್ಡಿ ಅವರಿಗೆ ಮನವಿ ನೀಡಿದ್ದೆವು.

ಆಯುಕ್ತರಿಗೆ ಕರೆ ಮಾಡಿ ಸೂಕ್ತ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದ್ದರೂ ನೀರಿನ ವ್ಯವಸ್ಥೆ ಮಾಡಲಾಗಿಲ್ಲ. ಈ ಬಡಾವಣೆಗಳು ಹಿಂದೆ ಗ್ರಾಮ ಪಂಚಾಯಿತಿಗೆ ಸೇರ್ಪಡೆಗೊಂಡಿತ್ತು. ಆಗ ಸಮರ್ಪಕವಾಗಿ ನೀರು ಬರುತ್ತಿತ್ತು. ಆದರೆ ನಗರಸಭೆಗೆ ಸೇರಿದ ನಂತರ ತೊಂದರೆಗೆ ಒಳಗಾಗಿದ್ದೇವೆ ಎಂದು ಅಳಲು ತೋಡಿಕೊಂಡರು.

ಹೋರಾಟ ನಿಲ್ಲಲ್ಲ: ಸ್ಥಳೀಯರಾದ ಅನಿತಾ ಮಾತನಾಡಿ, ನಮ್ಮ ಬಡಾವಣೆಯ ಬೋರ್‌ವೆಲ್‌ನಲ್ಲಿ ನೀರು ಬರುತ್ತಿದ್ದರೂ ನಮಗೆ ನೀರು ಬಿಡುತ್ತಿಲ್ಲ. ಅನಿವಾರ್ಯವಾಗಿ ನಾವು ಕೊಳವೆಬಾವಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದೇವೆ. ನಗರಸಭೆ ಸೂಕ್ತ ನೀರಿನ ವ್ಯವಸ್ಥೆ ಮಾಡದಿದ್ದರೆ ಜಿಲ್ಲಾಧಿಕಾರಿಗಳಿಗೆ ಹಾಗೂ ಕೃಷಿ ಸಚಿವರಿಗೆ ಮತ್ತೂಮ್ಮೆ ದೂರು ನೀಡುತ್ತೇವೆ. ನಮ್ಮ ಸಮಸ್ಯೆ ಇತ್ಯರ್ಥ ಆಗುವವರೆಗೆ ಹೋರಾಟ ನಿಲ್ಲುವುದಿಲ್ಲ ಎಂದು ತಿಳಿಸಿದರು.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.