ಬೆಳೆಗಳಿಗೆ ರಾಸಾಯನಿಕ ಗೊಬ್ಬರ ಬಳಸಬೇಡಿ


Team Udayavani, Nov 10, 2019, 3:00 AM IST

belegalige

ಚಿಂತಾಮಣಿ: ರೈತರು ಹೆಚ್ಚಾಗಿ ರಾಸಾಯನಿಕ ಗೊಬ್ಬರಗಳನ್ನು ಬಳಸದೇ ಸಾವಯುವ ಹಾಗೂ ಕೃತಕ ಗೊಬ್ಬರಗಳನ್ನು ಬಳಸಿ ಬೆಳೆಗಳನ್ನು ಬೆಳೆಯಬೇಕು ಎಂದು ಕೋಚಿಮೂಲ್‌ ನಿರ್ದೇಶಕ ಊಲವಾಡಿ ಆಶ್ವಥನಾರಾಯಣಬಾಬು ಹೇಳಿದರು.

ತಾಲೂಕಿನ ಕೈವಾರ ಹೋಬಳಿ ಜಂಗಮಶಿಗೇಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ, ಎಂ.ವಿ.ಜೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಜೆ.ಎಂ.ಡಿ ಚಾರಿಟಬಲ್‌ ಟ್ರಸ್ಟ್‌ ವತಿಯಿಂದ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಶಿಬಿರಜಂಗಮಶೀಗೆಹಳ್ಳಿಯ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ನೂತನವಾಗಿ ನಿರ್ಮಾಣ ಮಾಡಿದ ಬಿಎಂಸಿ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಆರೋಗ್ಯಕ್ಕೆ ಮಾರಕ: ಆರೋಗ್ಯವೇ ಮಹಾ ಭಾಗ್ಯ, ಮನುಷ್ಯ ಜೀವನದಲ್ಲಿ ಉತ್ತಮವಾಗಿ ಬದುಕಿಬಾಳಬೇಕಾದರೇ ಉತ್ತಮ ಆರೋಗ್ಯ ಆವಶ್ಯಕವಾಗಿದೆ. ಇತ್ತೀಚಿನ ದಿನಗಳಲ್ಲಿ ರಾಸಾಯನಿಕ ಗೊಬ್ಬರಗಳನ್ನು ಬಳಸಿ ಬೆಳೆದಂಥ ಆಹಾರ ಪದಾರ್ಥಗಳನ್ನು ತಿನ್ನುತ್ತಿರುವುದರಿಂದ ಜನರ ಆರೋಗ್ಯ ತುಂಬಾ ಹದಗೆಡುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ವಿಷ ಆಹಾರ ಸೇವನೆ: ಇತ್ತೀಚಿನ ದಿನಗಳಲ್ಲಿ ರೈತರು ಹೆಚ್ಚಾಗಿ ರಾಸಾಯನಿಕ ಗೊಬ್ಬರಗಳನ್ನು ಬಳಸಿ ಬೆಳೆಗಳನ್ನು ಬೆಳೆಯುತ್ತಿರುವುದರಿಂದ ನಾವು ದಿನನಿತ್ಯ ಸೇವಿಸುತ್ತಿರುವ ಅಹಾರ ಪದಾರ್ಥಗಳಲ್ಲಿ ರಾಸಾಯನಿಕ ಪದಾರ್ಥಗಳು ಹೆಚ್ಚಾಗಿ ಮನುಷ್ಯನ ಆರೋಗ್ಯದಲ್ಲಿ ಏರುಪೇರಾಗಿ, ಆಯಸ್ಸು ಕೂಡ ಕಡಿಮೆಯಾಗಿ ನೂರು ವರ್ಷ ಬದುಕಿ ಬಾಳಬೇಕಾದ ವ್ಯಕ್ತಿ ಆರುವತ್ತೇ ವರ್ಷಕ್ಕೆ ಸಾಯುವಂತ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ಸಾವಯವ ಗೊಬ್ಬರ ಬಳಸಿ: ಮನುಷ್ಯನ ಆರೋಗ್ಯ ಉತ್ತಮಗೊಳ್ಳಬೇಕಾದರೆ ಸಾವಯವ ಗೊಬ್ಬರಗಳನ್ನು ಬಳಸಿ ಬೆಳೆದಂತಹ ಆಹಾರ ಪದಾರ್ಥಗಳನ್ನು ತಿನ್ನಬೇಕಾದಂತಹ ಆವಶ್ಯಕತೆ ಇದೆ ಎಂದು ತಿಳಿಸಿದರು.

ಹಾಲಿನಲ್ಲಿ ಅನೇಕ ಶಕ್ತಿ ಇದೆ: ಇಂದು ಮನುಷ್ಯನ ಉತ್ತಮ ಆರೋಗ್ಯಕ್ಕೆ ಹಾಲು ಅತಿ ಮುಖ್ಯವಾಗಿ ಬೇಕಾಗಿದ್ದು, ಹಾಲಿನಲ್ಲಿ ಉತ್ತಮ ಆರೋಗ್ಯಕ್ಕೆ ಬೇಕಾದಂತೆ ಅನೇಕ ರೀತಿಯ ಪೋಷಾಕಂಶಗಳಿವೆ. ಕೇಂದ್ರ ಸರಕಾರ ವಿದೇಶಿ ಹಾಲು ಆಮುದಿಗೆ ತಾತ್ಕಾಲಿಕವಾಗಿ ತಡೆ ನೀಡಿರುವುದು ಸಂತಸದ ವಿಷಯವಾಗಿದೆ ಎಂದರು. ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಜಂಗಮಶಿಗೇಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಿಬಿರದ ಸದುಪಯೋಗ ಪಡೆದುಕೊಂಡರು.

ಕರ್ನಾಟಕ ಹಾಲು ಮಂಡಳಿ ಒಕ್ಕೂಟದ ನಿರ್ದೇಶಕ ಆರ್‌.ಶ್ರೀನಿವಾಸ್‌, ಮಹಿಳಾ ಕಾಲೇಜಿನ ಉಪನ್ಯಾಸಕ ಡಾ.ಎಂ.ಎನ್‌ ರಘು, ಜಂಗಮಶೀಗೇಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಮುನಿನಾರಾಯಣಪ್ಪ, ಕೋಚಿಮೂಲ್‌ ವ್ಯವಸ್ಥಾಪಕ ನಿರ್ದೇಶಕ ಡಾ.ಎಚ್‌.ವಿ.ತಿಪ್ಪಾರೆಡ್ಡಿ, ಪ್ರಭಾರ ವ್ಯವಸ್ಥಾಪಕ ಬಿ.ಶಿವರಾಜ್‌, ಉಪವ್ಯವಸ್ಥಾಪಕ ಎನ್‌.ನಾಗರಾಜ್‌, ಗ್ರಾಪಂ ಸದಸ್ಯ ಜೆ.ಎಂ.ದೇವರಾಜ್‌, ನಾರಾಯಣಮ್ಮ, ಮುನಿನಾರಾಯಣಪ್ಪ, ಸುನಂದಮ್ಮ, ನಾಗರಾಜ್‌ ಸೇರಿದಂತೆ ಎಲ್ಲಾ ಹಾಲು ಉತ್ಪಾದಕರ ಸಹಾಕರ ಸಂಘದ ಸದಸ್ಯರು ಹಾಗೂ ಮತಿತ್ತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Code of conduct: ಚುನಾವಣಾ ನೀತಿ ಸಂಹಿತೆ; ರಾಜಕೀಯ ಫ್ಲೆಕ್ಸ್‌, ಬ್ಯಾನರ್‌ ತೆರವು!

Code of conduct: ಚುನಾವಣಾ ನೀತಿ ಸಂಹಿತೆ: ರಾಜಕೀಯ ಫ್ಲೆಕ್ಸ್‌, ಬ್ಯಾನರ್‌ ತೆರವು!

H. D. Deve Gowda, ಕುಮಾರಸ್ವಾಮಿ ಬಿಜೆಪಿ ವಕ್ತಾರರು: ಸಿಎಂ ಸಿದ್ದರಾಮಯ್ಯ

H. D. Deve Gowda, ಕುಮಾರಸ್ವಾಮಿ ಬಿಜೆಪಿ ವಕ್ತಾರರು: ಸಿಎಂ ಸಿದ್ದರಾಮಯ್ಯ

LokSabha Election: ಕ್ಲೈಮ್ಯಾಕ್ಸ್‌ ತಲುಪಿದ ಕೈ, ಕಮಲ ಅಭ್ಯರ್ಥಿಗಳ ಆಯ್ಕೆ!

LokSabha Election: ಕ್ಲೈಮ್ಯಾಕ್ಸ್‌ ತಲುಪಿದ ಕೈ, ಕಮಲ ಅಭ್ಯರ್ಥಿಗಳ ಆಯ್ಕೆ!

Lok Sabha Elections; ವರಿಷ್ಠರು ಅವಕಾಶ ನೀಡಿದರೆ ಸ್ಪರ್ಧೆ: ಸುಧಾಕರ್‌

Lok Sabha Elections; ವರಿಷ್ಠರು ಅವಕಾಶ ನೀಡಿದರೆ ಸ್ಪರ್ಧೆ: ಸುಧಾಕರ್‌

marriage 2

Chikkaballapur: ಕಾರಿನಲ್ಲಿ ಇರಿಸಿದ್ದ 3 ಲಕ್ಷ ರೂ. ಮದುವೆ ಮುಯ್ಯಿ ಕಳ್ಳರ ಪಾಲು!

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.