ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿ


Team Udayavani, May 4, 2019, 3:00 AM IST

swayam

ಚಿಕ್ಕಬಳ್ಳಾಪುರ: ಆರೋಗ್ಯವಂತ ನಾಗರಿಕ ಸಮಾಜ ನಿರ್ಮಾಣಕ್ಕಾಗಿ ಯುವಕರು ಸ್ವಯಂ ಪ್ರೇರಣೆಯಿಂದ ರಕ್ತದಾನಕ್ಕೆ ಮುಂದಾಗಬೇಕಿದ್ದು, ರಕ್ತದಾನದಿಂದ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ ಎಂಬ ತಪ್ಪು ಕಲ್ಪನೆಯನ್ನು ಜನರಿಂದ ತೊಲಗಿಸಬೇಕಿದೆ ಎಂದು ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್‌ ತಿಳಿಸಿದರು.

ನಗರದ ವಾಸವಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಸ್ಥಳೀಯ ಆರ್ಯವೈಶ್ಯ ಮಂಡಳಿ, ಶ್ರೀ ಪೇಟೆ ಆಂಜನೇಯಸ್ವಾಮಿ ದೇವಾಲಯ ಟ್ರಸ್ಟ್‌ ಹಾಗೂ ಭಾರತೀಯ ರೆಡ್‌ಕ್ರಾಸ್‌ ಸೊಸೈಟಿ ಜಿಲ್ಲಾ ಶಾಖೆ ಸಂಯುಕ್ತಾಶ್ರಯದಲ್ಲಿ ವಾಸವಿ ಜಯಂತಿ ಪ್ರಯುಕ್ತ ಎಂಟನೇ ವರ್ಷದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಅವರು ಮಾತನಾಡಿದರು.

ರಕ್ತದಾನದ ಮೂಲಕ ಮರುಜನ್ಮ: ತುರ್ತು ಸಂದರ್ಭಗಳಲ್ಲಿ ರಕ್ತದ ಕೊರತೆಯಿಂದ ನಿತ್ಯ ಅನೇಕ ಮಂದಿ ರೋಗಿಗಳು, ಗರ್ಬಿಣಿಯರು, ಅಪಘಾತದಲ್ಲಿ ಗಾಯಗೊಂಡವರು ಸಾವಿಗೀಡಾಗುತ್ತಿದ್ದು, ರಕ್ತದ ಕೊರತೆಯಿಂದ ಜೀವನ್ಮರಣದ ನಡುವೆ ಹೋರಾಟ ನಡೆಸುವವರಿಗೆ ರಕ್ತದಾನದ ಮೂಲಕ ಮರುಜನ್ಮ ನೀಡಿ ಪ್ರತಿಯೊಬ್ಬರು ತಮ್ಮ ಜೀವನವನ್ನು ಜೀವನ ಸಾರ್ಥಕ ಪಡಿಸಿಕೊಳ್ಳಬೇಕಿದೆ ಎಂದರು.

ದೇಶದ ಪ್ರಗತಿಗೆ ಅಡಿಪಾಯವಾಗಿರುವ ಯುವಜನರು ಕರ್ತವ್ಯ ಪ್ರಜ್ಞೆಯಿಂದ ಜವಾಬ್ದಾರಿ ಅರಿತು ಸ್ವಯಂ ಪ್ರೇರಿತ ರಕ್ತದಾನ ಶಿಬಿರಗಳಲ್ಲಿ ಪಾಲ್ಗೊಳ್ಳಬೇಕು. ಆಗ ಮಾತ್ರ ಉತ್ತಮ ಆರೋಗ್ಯವಂತ ಸಮಾಜ ನಿರ್ಮಾಣ ಆಗುತ್ತದೆ ಎಂದರು.

ಜಾಗೃತಿ ಅಗತ್ಯ: ರಕ್ತದಾನದಿಂದ ರಕ್ತದ ಅವಶ್ಯಕತೆ ಇರುವವರಿಗೆ ಮಾತ್ರ ಲಾಭವಾಗುವುದಿಲ್ಲ. ದಾನಿಗಳ ಆರೋಗ್ಯ ವೃದ್ಧಿಯಾಗುವ ಜೊತೆಗೆ ಹೃದಯಘಾತದ ಸಂಭವ, ರಕ್ತದಲ್ಲಿ ಕೊಬ್ಬಿನ ಅಂಶ ಕಡಿಮೆಯಾಗುತ್ತದೆ. ಆದ್ದರಿಂದ ರಕ್ತದಾನ ಮಾಡಲು ಯಾರೂ ಕೂಡ ಹಿಂಜರಿಯಬಾರದು. ಈ ಬಗ್ಗೆ ಯುವಕರು ಜನರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಸೇವಾ ಮನೋಭಾವ: ಆರ್ಯವೈಶ್ಯ ಮಂಡಳಿ ಅಧ್ಯಕ್ಷ ನಂಜುಂಡರಾಮಯ್ಯ ಶೆಟ್ಟಿ ಮಾತನಾಡಿ, ಯುವಕರಲ್ಲಿ ರಕ್ತದಾನದ ಕುರಿತ ಮೌಡ್ಯವನ್ನು ದೂರ ಮಾಡಬೇಕು. ರಕ್ತದ ಅವಶ್ಯಕತೆ ಬಂದೊದಗಿದ ಸಂದರ್ಭದಲ್ಲಿ ಮಾತ್ರ ರಕ್ತದ ಮಹತ್ವ ಅರಿವಾಗುತ್ತದೆ. ಆರೋಗ್ಯವಂತ ವ್ಯಕ್ತಿಗಳು ತಪ್ಪದೇ ರಕ್ತದಾನ ಮಾಡಬೇಕೆಂದರು. ಸತತ ಏಳು ವರ್ಷಗಳಿಂದ ಶ್ರೀವಾಸವಿ ಜಯಂತಿ ಪ್ರಯುಕ್ತ ಆರ್ಯವೈಶ್ಯ ಮಂಡಳಿ ರಕ್ತದಾನ ಶಿಬಿರಗಳನ್ನು ಆಯೋಜಿಸಿಕೊಂಡು ಬರುತ್ತಿದ್ದು, ಇದರಿಂದ ಯುವಕರಲ್ಲಿ ಸೇವಾ ಮನೋಭಾವ ಬೆಳೆಯುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಭಾರತೀಯ ರೆಡ್‌ಕ್ರಾಸ್‌ ಕಾರ್ಯದರ್ಶಿ ಗುರುರಾಜರಾವ್‌, ವೈದ್ಯಾಧಿಕಾರಿ ಡಾ.ಹೇಮಂತ್‌ ಸಾವಳಗಿ, ತಾಂತ್ರಿಕ ತಜ್ಞ ಶ್ರೀನಾಥ್‌, ಜಿಲ್ಲಾ ಸಂಚಾಲಕ ಭರತ್‌ ಕುಮಾರ್‌, ಆರ್ಯವೈಶ್ಯ ಮಂಡಳಿ ಕಾರ್ಯದರ್ಶಿ ಬಿ.ಎನ್‌.ಸೂರ್ಯನಾರಾಯಣ ಶೆಟ್ಟಿ, ವಾಸವಿ ಕ್ಲಬ್‌ ಅಧ್ಯಕ್ಷ ಶ್ರೀಧರ್‌, ವಾಸವಿ ಯೂತ್‌ ಕ್ಲಬ್‌ ಅಧ್ಯಕ್ಷ ಗಣೇಶ್‌, ಮುಖಂಡರಾದ ಲಕ್ಷ್ಮೀರಾಮ್‌, ಕೃಷ್ಣಮೂರ್ತಿ, ಬಿ.ಆರ್‌.ಬದರಿನಾಥ್‌, ರಾಣಿ ಪ್ರಭಾಕರ್‌, ಶ್ರೀಧರ್‌, ಸ್ವರೂಪ್‌ ಉಪಸ್ಥಿತರಿದ್ದರು.

ಶಿಬಿರದಲ್ಲಿ 171 ಯೂನಿಟ್‌ ರಕ್ತ ಸಂಗ್ರಹ: ಆರ್ಯವೈಶ್ಯ ಮಂಡಳಿ ವಾಸವಿ ಜಯಂತಿ ಪ್ರಯುಕ್ತ ಜಿಲ್ಲಾ ಭಾರತೀಯ ರೆಡ್‌ಕ್ರಾಸ್‌ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಬರೋಬ್ಬರಿ 171 ಮಂದಿ ವಾಸವಿ ಕ್ಲಬ್‌, ವಾಸವಿ ಯೂತ್‌ ಹಾಗೂ ಆರ್ಯವೈಶ್ಯ ಮಂಡಳಿ ಸದಸ್ಯರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿದರು.

ರಕ್ತದಾನ ಮಾಡಿದವರಿಗೆ ಸಾಂಕೇತಿಕವಾಗಿ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್‌ ಪ್ರಮಾಣ ಪತ್ರ ವಿತರಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಶಿಬಿರದಲ್ಲಿ ಪಾಲ್ಗೊಂಡ ರಕ್ತದಾನಿಗಳಿಗೆ ಆರ್ಯವೈಶ್ಯ ಮಂಡಳಿಯಿಂದ ಲಘು ಉಪಹಾರ, ಹಣ್ಣು, ಬಿಸ್ಕೆಟ್‌, ಹಣ್ಣಿನ ರಸ ನೀಡಲಾಯಿತು.

ಟಾಪ್ ನ್ಯೂಸ್

Hejamady Port: ಭೂ ಸ್ವಾಧೀನ ತ್ವರಿತಗೊಳಿಸಲು ಸಂಸದ ಕೋಟ ಸೂಚನೆ

Hejamady Port: ಭೂ ಸ್ವಾಧೀನ ತ್ವರಿತಗೊಳಿಸಲು ಸಂಸದ ಕೋಟ ಸೂಚನೆ

Nellyadi ಶಿರಾಡಿ: ಕಾಡಾನೆ ದಾಳಿ, ಕೃಷಿ ಹಾನಿ

Nellyadi ಶಿರಾಡಿ: ಕಾಡಾನೆ ದಾಳಿ, ಕೃಷಿ ಹಾನಿ

ರಾಹುಲ್‌

NDA; ಸಣ್ಣ ಕಂಪನವೂ ಕೇಂದ್ರ ಸರ್ಕಾರವನ್ನೇ ಉರುಳಿಸಬಲ್ಲದು: ರಾಹುಲ್‌

Jaganmohan reddy

ಸದ್ದಾಂ, ಜನಾರ್ದನ ರೆಡ್ಡಿ ರೀತಿ ಜಗನ್‌ ಮನೆ ನಿರ್ಮಾ ಣ: ಟಿಡಿಪಿ

Theft Case ಬಿ.ಸಿ.ರೋಡಿನ ಕೈಕಂಬ: ಮನೆಯಿಂದ ಕಳವು

Theft Case ಬಿ.ಸಿ.ರೋಡಿನ ಕೈಕಂಬ: ಮನೆಯಿಂದ ಕಳವು

Kollur ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ: ಇಬ್ಬರ ಬಂಧನ

Kollur ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ: ಇಬ್ಬರ ಬಂಧನ

ರಿಯಾಯಿತಿ ಬೆಲೆಗೆ ಶೇರು ಮಾರಾಟ ಮಾಡುವುದಾಗಿ ಲಕ್ಷಾಂತರ ರೂ. ವಂಚನೆ

ರಿಯಾಯಿತಿ ಬೆಲೆಗೆ ಶೇರು ಮಾರಾಟ ಮಾಡುವುದಾಗಿ ಲಕ್ಷಾಂತರ ರೂ. ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapura; ಕ್ರಷರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕ ಸಾವು

Chikkaballapura; ಕ್ರಷರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕ ಸಾವು

Kodi Mutt Seer expressed his opinion regarding actor Darshan’s case

ನಟ ದರ್ಶನ್ ಪ್ರಕರಣಕ್ಕೆ ಸಂಬಂಧಿಸಿ ಅಭಿಪ್ರಾಯ ವ್ಯಕ್ತಪಡಿಸಿದ ಕೋಡಿ ಮಠದ ಶ್ರೀಗಳು

9

Monsoon: ಕುರಿ, ಕೋಳಿ ಸಾಕಾಣಿಕೆ ಜೋರು!

chiಅಖಾಡದಲ್ಲಿ ನಾನೇ ಇದ್ದಿದ್ದರೆ ಫ‌ಲಿತಾಂಶ ಬೇರೆಯೇ ರೀತಿಯಲ್ಲಿ ಇರುತ್ತಿತ್ತು: ಪ್ರದೀಪ್‌

ಅಖಾಡದಲ್ಲಿ ನಾನೇ ಇದ್ದಿದ್ದರೆ ಫ‌ಲಿತಾಂಶ ಬೇರೆಯೇ ರೀತಿಯಲ್ಲಿ ಇರುತ್ತಿತ್ತು: ಪ್ರದೀಪ್‌

Chikkaballapura; ಸುಧಾಕರ್ ಗೆ ಜನಾಭಿಪ್ರಾಯ ಸಿಕ್ಕಿದೆ, ಆದರೆ ರಾಜೀನಾಮೆ….:ಪ್ರದೀಪ್ ಈಶ್ವರ್

Chikkaballapura; ಸುಧಾಕರ್ ಗೆ ಜನಾಭಿಪ್ರಾಯ ಸಿಕ್ಕಿದೆ, ಆದರೆ ರಾಜೀನಾಮೆ….:ಪ್ರದೀಪ್ ಈಶ್ವರ್

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

Hejamady Port: ಭೂ ಸ್ವಾಧೀನ ತ್ವರಿತಗೊಳಿಸಲು ಸಂಸದ ಕೋಟ ಸೂಚನೆ

Hejamady Port: ಭೂ ಸ್ವಾಧೀನ ತ್ವರಿತಗೊಳಿಸಲು ಸಂಸದ ಕೋಟ ಸೂಚನೆ

Nellyadi ಶಿರಾಡಿ: ಕಾಡಾನೆ ದಾಳಿ, ಕೃಷಿ ಹಾನಿ

Nellyadi ಶಿರಾಡಿ: ಕಾಡಾನೆ ದಾಳಿ, ಕೃಷಿ ಹಾನಿ

ಬೈಕಿಗೆ ಹಿಂದಿನಿಂದ ಕಾರು ಢಿಕ್ಕಿ: ಸಹಸವಾರ ಗಾಯ

ಬೈಕಿಗೆ ಹಿಂದಿನಿಂದ ಕಾರು ಢಿಕ್ಕಿ: ಸಹಸವಾರ ಗಾಯ

ರಾಹುಲ್‌

NDA; ಸಣ್ಣ ಕಂಪನವೂ ಕೇಂದ್ರ ಸರ್ಕಾರವನ್ನೇ ಉರುಳಿಸಬಲ್ಲದು: ರಾಹುಲ್‌

Jaganmohan reddy

ಸದ್ದಾಂ, ಜನಾರ್ದನ ರೆಡ್ಡಿ ರೀತಿ ಜಗನ್‌ ಮನೆ ನಿರ್ಮಾ ಣ: ಟಿಡಿಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.