13 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ

Team Udayavani, Jul 6, 2023, 3:05 PM IST

13 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೇವಲ 13 ಗ್ರಾಮಗಳಲ್ಲಿ ಮಾತ್ರ ಕುಡಿಯುವ ನೀರಿನ ಸಮಸ್ಯೆಯಿದ್ದು, ಆ ಗ್ರಾಮಗಳಿಗೆ ಖಾಸಗಿ ಕೊಳವೆಬಾವಿಗಳ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್‌.ರವೀಂದ್ರ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಭವನದ ತಮ್ಮ ಕಚೇರಿಯಲ್ಲಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಜಿಲ್ಲೆಯ ಎಲ್ಲಾ ತಹಶೀಲ್ದಾರರು, ನಗರ ಸ್ಥಳೀಯ ಸಂಸ್ಥೆಗಳ ಆಯುಕ್ತರು, ಮುಖ್ಯಾಧಿಕಾರಿಗಳು ಹಾಗೂ ತಾಪಂ ಇಒಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸಿದರು.

ಸಮಸ್ಯೆ ಉದ್ಭವಿಸಿದರೆ ತಕ್ಷಣ ಕ್ರಮ: ಸಭೆ ಬಳಿಕ ಉದಯವಾಣಿಯೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಗಳು, ಜಿಲ್ಲೆಯ ಯಾವುದೇ ತಾಲೂಕುಗಳಲ್ಲಿ ನಾವು ಟ್ಯಾಂಕರ್‌ ಮೂಲಕ ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆ ಮಾಡುತ್ತಿಲ್ಲ. 13 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇರುವುದನ್ನು ಗಮನಿಸಿ ಆ ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರಿನ ಪೂರೈಕೆ ಮಾಡಲಾಗುತ್ತಿದೆ ಎಂದರು.

ಮಳೆ ಬಾರದೇ ಹೋದರೆ ಕುಡಿಯುವ ನೀರಿನ ಸಮಸ್ಯೆ ಎಲ್ಲಿಯೇ ಉದ್ಭವವಾದರೂ ತುರ್ತಾಗಿ ಗ್ರಾಮಗಳಿಗೆ ನೀರು ಪೂರೈಸಲು ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಟಾಸ್ಕ್ಫೋರ್ಸ್‌ ಮೂಲಕ ಪ್ರಕ್ರಿಯೆ: ನೀರಿನ ಸಮಸ್ಯೆ ಎದುರಾಗುವ ಗ್ರಾಮಗಳನ್ನು ಮೊದಲೇ ಗುರುತಿಸಿ ಅಂತಹ ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಒದಗಿಸಲು ಅಗತ್ಯ ಕ್ರಮ ವಹಿಸಬೇಕು. ಒಂದು ವೇಳೆ ಖಾಸಗಿ ಕೊಳವೆ ಬಾವಿಗಳು ಬತ್ತಿ ಹೋಗಿದ್ದರೂ ಸರ್ಕಾರದಿಂದ ಹೊಸ ಕೊಳವೆಬಾವಿ ಕೊರೆಸಲು ಪಾಯಿಂಟ್‌ ಗುರುತಿ ಆ ಮೂಲಕ ಹಳೆ ಪೈಪ್‌ಲೈನ್‌ ಇದ್ದರೆ ಅದರ ಮೂಲಕ ಕುಡಿಯುವ ನೀರು ಪೂರೈಕೆ ಮಾಡಬೇಕೆಂದು ಕಟ್ಟುನಿಟ್ಟಿನ ಸೂಚನೆಯನ್ನು ಅಧಿಕಾರಿಗಳಿಗೆ ನೀಡಲಾಗಿದೆ. ಎಲ್ಲಾ ಪ್ರಕ್ರಿಯೆಗಳನ್ನು ಟಾಸ್ಕ್ಫೋರ್ಸ್‌ ಮೂಲಕ ಕೈಗೆತ್ತಿಕೊಳ್ಳುವಂತೆ ಸೂಚಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಡಳಿತದಲ್ಲಿ ಯಾವುದೇ ರೀತಿ ಅನುದಾನದ ಕೊರತೆ ಇಲ್ಲ. ಸಮಸ್ಯೆ ಇರುವ ಗ್ರಾಮಗಳಿಗೆ ಮಾತ್ರ ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆಗೆ ಪಡೆದು ಕುಡಿಯುವ ನೀರು ಪೂರೈಕೆ ಮಾಡುತ್ತಿದ್ದೇವೆ. ಸದ್ಯಕ್ಕೆ ಯಾವುದೇ ಗ್ರಾಮಕ್ಕೆ ಟ್ಯಾಂಕರ್‌ ಮೂಲಕ ನೀರು ಪೂರೈಕೆ ಮಾಡುತ್ತಿಲ್ಲ. ●ಪಿ.ಎನ್‌.ರವೀಂದ್ರ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.