ಹೊನ್ನಪ್ಪನಹಳ್ಳಿಯಲ್ಲಿ ಕುಡಿವ ನೀರು ಪೋಲು


Team Udayavani, Apr 20, 2023, 4:08 PM IST

ಹೊನ್ನಪ್ಪನಹಳ್ಳಿಯಲ್ಲಿ ಕುಡಿವ ನೀರು ಪೋಲು

ಗೌರಿಬಿದನೂರು(ಮಂಚೇನಹಳ್ಳಿ): ಮಂಚೇನಹಳ್ಳಿ ತಾಲೂಕಿನ ಹೊನ್ನಪ್ಪನಹಳ್ಳಿ ಗ್ರಾಮದಲ್ಲಿರುವ ಕುಡಿಯುವ ನೀರಿನ ಟ್ಯಾಂಕ್‌ ನಿತ್ಯ ತುಂಬಿದ ಬಳಿಕ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ತುಂಬಲು ಬಿಡಲಾಗುತ್ತಿದ್ದು, ಅದು ತುಂಬಿದ ಬಳಿಕ ಮತ್ತೆ ಓವರ್‌ ಹೆಡ್‌ ಟ್ಯಾಂಕ್‌ಗೆ ವಾಪಸ್‌ ಆಗಿ ನೀರು ರಸ್ತೆ ಮೇಲೆ ಹರಿಯುತ್ತಿದ್ದರೂ ಈ ಬಗ್ಗೆ ಪಂಚಾಯ್ತಿ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಯಾರೊಬ್ಬರೂ ತಲೆಕೆಡಿಸಿಕೊಳ್ಳುತ್ತಿಲ್ಲ. ‌

ರಸ್ತೆ ಮೇಲೆ ಹರಿವ ಕುಡಿವ ನೀರು: ಪ್ರತಿನಿತ್ಯ ನೀರಿನ ಟ್ಯಾಂಕ್‌ ತುಂಬಿದ ರಸ್ತೆಗೆ ಹರಿಯುತ್ತಿರುತ್ತದೆ, ನೀರು ನಿಲ್ಲಿಸದ ವಾಟರ್‌ ಮ್ಯಾನ್ ನಿರ್ಲಕ್ಷ್ಯದಿಂದ ಟ್ಯಾಂಕ್‌ ಸೋರಿಕೆಯಾಗಿ ರಸ್ತೆ ಮೇಲೆ ಹರಿದು ಪಾದಚಾರಿಗಳ ಓಡಾಟಕ್ಕೆ ಅಡ್ಡಿಯಾಗಿದೆ ಎಂದು ಅಳಲು ತೋಡಿಕೊಂಡಿರುವ ಗ್ರಾಮಸ್ಥರು, ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಹೆಚ್ಚು, ಇಂತಹ ಸಂದರ್ಭದಲ್ಲಿ ಹೊನ್ನಪ್ಪನಹಳ್ಳಿಯಲ್ಲಿರುವ ಕುಡಿಯುವ ನೀರಿನ ಟ್ಯಾಂಕ್‌ ತುಂಬಿ ರಸ್ತೆ ಮೇಲೆ ನೀರು ಹರಿದು ನೀರೆಲ್ಲ ವ್ಯರ್ಥವಾಗುತ್ತಿದೆ.

ಸುತ್ತಮುತ್ತಲಿನ ನಿವಾಸಿಗಳಿಗೆ ಆತಂಕ: ಕುಡಿಯುವ ನೀರಿನ ಟ್ಯಾಂಕ್‌ ಗ್ರಾಮದ ಮನೆಗಳ ನಡುವೆ ಇದೆ. ಈ ಟ್ಯಾಂಕ್‌ನಲ್ಲಿ ತುಂಬಿ ನೀರು ಸೋರಿಕೆ ಆಗುತ್ತಿರುವುದ ರಿಂದ ನಿತ್ಯವೂ ಹೀಗೆ ಆದರೆ ಟ್ಯಾಂಕ್‌ ಬಿರುಕು ಬಿಡುವ ಹಾಗೂ ಟ್ಯಾಂಕ್‌ನ ಪಾಯಕ್ಕೆ ಹಾನಿಯಾಗಿ ಕುಯಿಯುವ ಭೀತಿ ನಿವಾಸಿಗಳನ್ನು ಕಾಡುತ್ತಿದೆ.

ಅಧಿಕಾರಿಗಳ ನಿರ್ಲಕ್ಷ್ಯ ಆರೋಪ: ಈ ರೀತಿ ಅನೇಕ ಸಮಸ್ಯೆಗಳನ್ನು ಸ್ಥಳೀಯ ಗ್ರಾಮಸ್ಥರು ಎದುರಿಸುತ್ತಿದ್ದರೂ ಸಂಬಂಧಪಟ್ಟ ಗ್ರಾಪಂ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಲಿ ಯಾರು ಸಹ ಇತ್ತ ಗಮನಹರಿಸುತ್ತಿಲ್ಲ. ಇನ್ನಾದರೂ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಈ ಬಗ್ಗೆ ಗಮನ ಹರಿಸಿ ಸೋರಿಕೆಯಾಗುತ್ತಿರುವ ಟ್ಯಾಂಕ್‌ ಸರಿಪಡಿಸಿ, ನೀರು ಪೋಲಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಮೂರ್ನಾಲ್ಕು ದಿನಗಳಲ್ಲಿ ಸರಿಪಡಿಸಲಾಗುವುದು: ಪಿಡಿಒ: ಹೊನ್ನಪ್ಪನಹಳ್ಳಿಯಲ್ಲಿರುವ ಕುಡಿವ ನೀರಿನ ಟ್ಯಾಂಕ್‌ ಉತ್ತಮ ಸ್ಥಿತಿಯಲ್ಲಿದೆ. ಆದರೆ ಟ್ಯಾಂಕ್‌ ತುಂಬಿದ ನಂತರ ಅದೇ ನೀರಿನ ಸಂಪರ್ಕದಿಂದ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ತುಂಬುವುತ್ತಿರುವುದರಿಂದ ಅದು ತುಂಬಿದ ನಂತರ ನೀರು ಮತ್ತೆ ಟ್ಯಾಂಕ್‌ಗೆ ವಾಪಸ್‌ ಹೋಗುವುದದರಿಂದ ನೀರು ಪೋಲಾಗುತ್ತಿದ್ದು, ಅಲ್ಲಿನ ನಾಗರಿಕರಿಗೆ ಸಮಸ್ಯೆಯಾಗಿದೆ. ಚುನಾವಣೆ ಹಿನ್ನೆಲೆ ವಿಳಂಬವಾಗಿದ್ದು, ಮೂರ್ನಾಲ್ಕು ದಿನಗಳಲ್ಲಿ ಸರಿಪಡಿಸಲಾಗುವುದು ಎಂದು ಗೌಡಗೆರೆ ಗ್ರಾಪಂ ಪಿಡಿಒ ಲೋಕೇಶ್‌ ತಿಳಿಸಿದರು.

ಯಾರೂ ಗಮನ ಹರಿಸುತ್ತಿಲ್ಲ : ಈ ಟ್ಯಾಂಕ್‌ಗೆ ನೀರು ತುಂಬಿಸಲು ನೀರು ಬಿಟ್ಟಾಗಲೆಲ್ಲ ಸಂಬಂಧಪಟ್ಟವರು ಸರಿಯಾದ ಸಮಯಕ್ಕೆ ಆಫ್ ಮಾಡದಿರುವುದರಿಂದ ಟ್ಯಾಂಕ್‌ ತುಂಬಿ ಗಂಟೆಗಟ್ಟಲೇ ನೀರು ಸೋರಿಕೆಯಾಗಿ ರಸ್ತೆಗೆ ಹರಿಯುತ್ತದೆ. ಈ ರೀತಿ ನೀರು ಸೋರಿಕೆ ಆಗುವುದರಿಂದ ಟ್ಯಾಂಕ್‌ ನೆನೆದು ನೆನೆದು ಶಿಥಿಲ ಜತೆಗೆ ಪಾಯಕ್ಕೆ ಹಾನಿಯಾಗಿ ಯಾವಾಗ ಬೇಕಾದರೂ ಕುಸಿಯಬಹುದು ಎಂಬ ಭೀತಿ ಸುತ್ತಮುತ್ತಲಿನ ಜನರನ್ನು ಕಾಡುತ್ತಿದೆ. ಆದರೂ ಈ ಬಗ್ಗೆ ಯಾರೂ ಗಮನ ಹರಿಸುತ್ತಿಲ್ಲ. ಮೇಲಿನ ಅಧಿಕಾರಿಗಳು ಈ ಟ್ಯಾಂಕ್‌ನ ಪರಿಸ್ಥಿತಿಯನ್ನು ಗಮನಿಸಿ ಸೂಕ್ತ ಕ್ರಮ ಕೈಗೊಂಡು, ಆದಷ್ಟು ಬೇಗ ಸಮಸ್ಯೆ ಪರಿಹರಿಸಬೇಕೆಂದು ಸ್ಥಳೀಯ ನಿವಾಸಿ ಮಂಜಪ್ಪ ಒತ್ತಾಯಿಸಿದ್ದಾರೆ.

ಕುಡಿವ ನೀರು ಪೋಲಾಗುತ್ತಿರುವುದರ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳಿಗೆ ತಿಳಿಸಿದರೂ ಯಾವುದೇ ಕ್ರಮ ಕೈಗೊಳ್ಳದೇ ಕಂಡರೂ ಕಾಣದಂತೆ ಬೇಜವಾಬ್ದಾರಿತನ ತೋರುತ್ತಿದ್ದಾರೆ. ರಸ್ತೆ ಮೇಲೆ ನೀರು ಹರಿಯುವುದರಿಂದ ಓಡಾಡಲು ಸಹ ತೊಂದರೆಯಾಗುತ್ತಿದ್ದು, ಸಂಬಂಧಪಟ್ಟವರು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ● ರಾಮಪ್ಪ, ಹೊನ್ನಪನಹಳ್ಳಿ ನಿವಾಸಿ

-ವಿ.ಡಿ.ಗಣೇಶ್‌, ಗೌರಿಬಿದನೂರು

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.