ಉದ್ಯೋಗ ಖಾತ್ರಿಯಿಂದ ಜೀವನ ಹಸನು
Team Udayavani, Jan 21, 2021, 11:56 AM IST
ಪಾತಪಾಳ್ಯ: ಬಡವರ ಬದುಕನ್ನು ಹಸನಾಗಿಸುವುದೇ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಉದ್ದೇಶ ಎಂದು ತಾಲೂಕು ಕಾರ್ಯನಿರ್ವಹಣಾಧಿಕಾರಿ ಎಚ್.ಎನ್. ಮಂಜುನಾಥಸ್ವಾಮಿ ತಿಳಿಸಿದರು.
ದಾಸರಿವಾರಪಲ್ಲಿ ಊರ ಮುಂದಿನ ಕೆರೆಯಲ್ಲಿ ಕೂಲಿ ಕಾರ್ಮಿಕರು ಉದ್ಯೋಗ ಖಾತ್ರಿ ಯೋಜನೆಯಲ್ಲಿ ಮಾಡುತ್ತಿದ್ದ ಹೂಳೆತ್ತುವ ಕಾಮಗಾರಿಯನ್ನು ಮಂಗಳವಾರ ವೀಕ್ಷಿಸಿ ಮಾತನಾಡಿದರು. ಗ್ರಾಮೀಣ ಪ್ರದೇಶದ ಬಡತನ ನಿರ್ಮೂಲನೆಗಾಗಿ ಈ ಯೋಜನೆ ಅನುಷ್ಠಾನಗೊಳಿಸ ಲಾಗಿದೆ. ಅಕುಶಲ ದೈಹಿಕ ಕೆಲಸ ಮಾಡಲು ಇಚ್ಚಿಸುವ ಗ್ರಾಮೀಣ ಪ್ರದೇಶದ ವಯಸ್ಕರಿಗೆ ಒಂದು ಆರ್ಥಿಕ ವರ್ಷದಲ್ಲಿ ಕನಿಷ್ಠ 100 ದಿನಗಳ ಉದ್ಯೋಗಾವಕಾಶ ನೀಡಿ, ಬಡವರ ಬದುಕನ್ನು ಹಸನಾಗಿಸಲಿದೆ ಎಂದು ತಿಳಿಸಿದರು.
ಇದನ್ನೂ ಓದಿ:ಡ್ರಗ್ಸ್ ಪ್ರಕರಣ: ನಟಿ ರಾಗಿಣಿ ದ್ವಿವೇದಿಗೆ ಜಾಮೀನು ನೀಡಿದ ಸುಪ್ರೀಂ
ಕೃಷಿ ಕಾರ್ಮಿಕರಿಗೆ ಕೂಲಿ ನೀಡುವ ಉದ್ಯೋಗ, ಆಹಾರ ಭದ್ರತೆ, ದೀರ್ಘಕಾಲ ಬಾಳಿಕೆ ಬರುವಂತಹ ಸ್ವತ್ತುಗಳ ನಿರ್ಮಾಣ ಮುಂತಾದ ಕಾರ್ಯಕ್ರಮಗಳನ್ನು ಮಾಡಿಕೊಳ್ಳಬಹು ದಾಗಿದೆ. ಗ್ರಾಮೀಣ ಜನ ಯೋಜನೆಯನ್ನು ಸದ್ವಿನಿಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು. ಸಹಾಯಕ ನಿರ್ದೇಶಕ ಜಿ.ವಿ.ನಾರಾಯಣ, ಪಿಡಿಒ ಎ.ಅಬೂಬಕರ್ ಸಿದ್ದಿಕ್, ಕರ ವಸೂಲಿಗಾರ ಕೆ.ವಿ.ಶ್ರೀರಾಮಪ್ಪ, ಡಿಇಒ ಟಿ.ಎನ್.ಆದಿರೆಡ್ಡಿ, ಕೂಲಿ ಕಾರ್ಮಿಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್ ಕಗ್ಗಂಟು
Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!
Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ
Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ