Udayavni Special

ಬೆನ್ನಿಗೆ ಚೂರಿ ಹಾಕಿದ ಜೆಡಿಎಸ್‌ಗೆ ಮರಳಲ್ಲ: ರಾಜಣ್ಣ


Team Udayavani, Dec 6, 2020, 7:20 PM IST

ಬೆನ್ನಿಗೆ ಚೂರಿ ಹಾಕಿದ ಜೆಡಿಎಸ್‌ಗೆ ಮರಳಲ್ಲ: ರಾಜಣ್ಣ

ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಜನರ ಮನೆ ಮಗನಾಗಿ ಸೇವೆ ಸಲ್ಲಿಸಿದ್ದೇನೆ. ಕೊನೆಯುಸಿರು ಇರುವವರೆಗೆ ಜನಸೇವೆ ಮಾಡುತ್ತೇನೆ. ಆದರೆ ಯಾವುದೇ ಕಾರಣಕ್ಕೂನಂಬಿಕೆ ದ್ರೋಹ ಮಾಡಿದ ಜೆಡಿಎಸ್‌ಗೆ ವಾಪಸ್‌ ಹೋಗುವುದಿಲ್ಲ ಎಂದು ಮಾಜಿ ಶಾಸಕ ಎಂ. ರಾಜಣ್ಣ ಸ್ಪಷ್ಟಪಡಿಸಿದರು.

ಶಿಡ್ಲಘಟ್ಟ ನಗರದಲ್ಲಿ ತಮ್ಮ ಅಭಿಮಾನಿಗಳ ಸಭೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದಅವರು,ಕ್ಷೇತ್ರದ ಜನರ ಆಶೀರ್ವಾದದಿಂದ ಶಾಸಕನಾಗಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸಿದ್ದೇನೆ. ಆದರೆಪಕ್ಷದ ಮುಖಂಡರು ಬೆನ್ನಿಗೆ ಚೂರಿ ಹಾಕಿದ್ದರಿಂದಕಳೆದ ವಿಧಾನಸಭೆಯ ಚುನಾವಣೆಯಲ್ಲಿ ಬಿ ಫಾರಂ ತಪ್ಪಿ ಸೋಲು ಅನುಭವಿಸುವಂತಾಯಿತು.

ಎರಡು ದಿನದಲ್ಲಿ ಘೋಷಣೆ: ನನ್ನ ಮೇಲೆ ವಿಶ್ವಾಸವಿಟ್ಟು ಹಗಲಿರುಳು ಶ್ರಮಿಸಿದ ಕಾರ್ಯಕರ್ತರು ಮತ್ತು ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸಿದ್ದೇನೆ. ಮುಂದೆಯೂ ಸೇವೆ ಸಲ್ಲಿಸುತ್ತೇನೆ. ಮುಂದಿನ ಎರಡು ದಿನದೊಳಗೆಹಿರಿಯ ಮುಖಂಡರು ಮತ್ತು ಅಭಿಮಾನಿ ಗಳೊಂದಿಗೆ ಸಮಾಲೋಚನೆ ನಡೆಸಿ ರಾಜಕೀಯ ನಿಲುವು ಪ್ರಕಟಿಸುವುದಾಗಿ ಘೋಷಣೆ ಮಾಡಿದರು.

ಅಭಿಮಾನಿಗಳು ಸ್ಪರ್ಧೆ: ಜೆಡಿಎಸ್‌ನಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದರೂ ಸಹ ಟಿಕೆಟ್‌ ನೀಡುವ ವಿಚಾರದಲ್ಲಿ ನಂಬಿಕೆ ದ್ರೋಹ ಮಾಡಿದ್ದು, ಪುನಃ ಜೆಡಿಎಸ್‌ಗೆ ಹೋಗುವ ಪ್ರಶ್ನೆಯೇ ಇಲ್ಲ. ತಾವು ಶಾಸಕರಾಗಿ ಕ್ಷೇತ್ರದಲ್ಲಿ ಯಾವ ರೀತಿ ಅಭಿವೃದ್ಧಿ ಕೆಲಸ ಮಾಡಿದ್ದೇನೆ ಎಂದು ಕ್ಷೇತ್ರದ ಜನರಿಗೆಗೊತ್ತಿದೆ. ಗ್ರಾಪಂ ಚುನಾವಣೆಯಲ್ಲಿ ತಮ್ಮ ಅಭಿಮಾನಿ ಗಳನ್ನುಕಣಕ್ಕಿಳಿಸುತ್ತೇನೆ ಎಂದರು. ಮಾಜಿ ಶಾಸಕ ದಿ.ಎಸ್‌.ಮುನಿಶಾಮಪ್ಪ ಅವರ ಮಾರ್ಗದರ್ಶನದಲ್ಲಿ ರಾಜಕೀಯ ಜೀವನ ನಡೆಸಿಕೊಂಡು ಬಂದಿದ್ದೇನೆ. ನಿಸ್ವಾರ್ಥವಾಗಿ ಸೇವೆ ಮಾಡಿದರೂ ಸಹ ಬೆನ್ನಿಗೆ ಚೂರಿ ಹಾಕಿ ನಂಬಿಕೆದ್ರೋಹ ಮಾಡಿದರು. ಕ್ಷೇತ್ರದ ಶಾಸಕರಾಗಿ ಜನರವಿಶ್ವಾಸಕ್ಕೆಧಕ್ಕೆಬರುವಂತಹಕೆಲಸಮಾಡಿಲ್ಲ, ಮಾಡುವುದೂ ಇಲ್ಲ ಎಂದರು.

ಸಭೆಯಲ್ಲಿ ಭೂ ಅಭಿವೃದ್ಧಿ ಬ್ಯಾಂಕಿನ ಮಾಜಿ ಉಪಾಧ್ಯಕ್ಷ ಅಶ್ವತ್ಥನಾರಾಯಣ, ಶಿವಾರೆಡ್ಡಿ, ಅಬ್ಲೂಡು ಗ್ರಾಪಂ ಮಾಜಿ ಅಧ್ಯಕ್ಷ ಕೆ.ಎಸ್‌. ಕನಕಪ್ರಸಾದ್‌, ಕುಂದಲಗುರ್ಕಿ ಗ್ರಾಪಂ ಮಾಜಿ ಅಧ್ಯಕ್ಷ ದೊಣ್ಣಹಳ್ಳಿ ರಾಮಣ್ಣ, ಮಾಜಿ ಉಪಾಧ್ಯಕ್ಷಆಂಜಿನಪ್ಪ, ದೊಡ್ಡತೇಕಹಳ್ಳಿ ಗ್ರಾಪಂ ಮಾಜಿ ಸದಸ್ಯ ಆನೆಮಡುಗುಮುರಳಿ,ಹಿರಿಯಮುಖಂಡರಾದ ಹಸೇನ್‌ಖಾನ್‌,ಖಾಸಿಂಪಾಳ್ಯ ಬಾಸೀದ್‌,ಮಸ್ತಾನ್‌, ಮಾಜಿ ನಗರಸಭೆಯ ಸದಸ್ಯ ಮಂಜುನಾಥ್‌, ಜಾಬೀರ್‌, ಝಬೀ ಉಲ್ಲಾ,ಜಿಲ್ಲಾ ಸಹಕಾರಿಯೂನಿಯನ್‌ ಮಾಜಿನಿರ್ದೇಶಕ ತಾದೂರುರಮೇಶ್‌,ಸೊಣ್ಣೇನಹಳ್ಳಿಮುನಿರಾಜು,ಚೀಮಂಗಲ ಗ್ರಾಪಂ ಮಾಜಿ ಉಪಾಧ್ಯಕ್ಷ ನಾರಾಯಣ ಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

ಡಾ.ಧನಂಜಯರೆಡ್ಡಿ ಅವರೊಂದಿಗೆ ಕೆಟ್ಟದಾಗಿ ನಡೆದುಕೊಂಡಿಲ್ಲ. ಸಾದಲಿ ಮತ್ತು ಬಶೆಟ್ಟಹಳ್ಳಿ ಹೋಬಳಿಗಳ ಜವಾಬ್ದಾರಿ ಅವರಿಗೆ ನೀಡಿದ್ದೇನೆ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ವಿಶ್ವಾಸಕ್ಕೆ ತೆಗೆದುಕೊಂಡು ಅವರ ಸಲಹೆ ಪುರಸ್ಕರಿಸಿ ಕೆಲಸ ಮಾಡಿದ್ದೇನೆ. ಆದರೂ ಬೇರೆಯವರೊಂದಿಗೆ ಗುರುತಿಸಿಕೊಂಡಿರುವುದು ಅವರ ವೈಯಕ್ತಿಕ ತೀರ್ಮಾನ. ಎಂ.ರಾಜಣ್ಣ , ಮಾಜಿ ಶಾಸಕ

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

Centre to deploy more paramilitary forces in Delhi after violence during farmers’ tractor rally

ದೆಹಲಿ ಪರಿಸ್ಥಿತಿ ನಿರ್ವಹಣೆಗೆ ಹೆಚ್ಚುವರಿ ಅರೆಸೈನಿಕ ಪಡೆಗಳ ನಿಯೋಜನೆ

ದೆಹಲಿ ಟ್ರ್ಯಾಕ್ಟರ್ ರಾಲಿ ವೇಳೆ ಹಿಂಸಾಚಾರ; ನ್ಯಾಯಾಂಗ ತನಿಖೆ ನಡೆಸಿ: ಸುಪ್ರೀಂಗೆ ಪಿಐಎಲ್

ದೆಹಲಿ ಟ್ರ್ಯಾಕ್ಟರ್ ರಾಲಿ ವೇಳೆ ಹಿಂಸಾಚಾರ; ನ್ಯಾಯಾಂಗ ತನಿಖೆ ನಡೆಸಿ: ಸುಪ್ರೀಂಗೆ ಪಿಐಎಲ್

2021 Jeep Compass Facelift: Price Expectation In India

ಮಾರುಕಟ್ಟೆಗೆ ಸಜ್ಜಾಗಿದೆ ಜೀಪ್ ಕಂಪಾಸ್ ಫೇಸ್ ಲಿಫ್ಟ್

nalin

ಅಧಿಕಾರಕ್ಕಾಗಿ ಕಾಂಗ್ರೆಸ್ ಭಯೋತ್ಪಾದಕ ಕೃತ್ಯಕ್ಕೆ ಇಳಿದಿದೆ: ನಳೀನ್ ಕುಮಾರ್ ಕಟೀಲ್ ಆಕ್ರೋಶ

basavaraj-horatto

ಸಿಎಂ ನಿವಾಸಕ್ಕೆ ದೌಡಾಯಿಸಿದ ಹೊರಟ್ಟಿ; ಸಭಾಪತಿ ಸ್ಥಾನ ಜೆಡಿಎಸ್ ಗೆ ಬಿಟ್ಟುಕೊಡುವಂತೆ ಮನವಿ

ಎಲ್ಲೆಲ್ಲಿ ಎಷ್ಟು ಹೆಚ್ಚಳ?; ಬೆಂಗಳೂರು, ಮುಂಬೈನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಗರಿಷ್ಠ ಏರಿಕೆ

ಎಲ್ಲೆಲ್ಲಿ ಎಷ್ಟು ಹೆಚ್ಚಳ? ಬೆಂಗಳೂರು, ಮುಂಬೈನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಗರಿಷ್ಠ ಏರಿಕೆ

4 ವರ್ಷದ ಜೈಲುವಾಸ ಅಂತ್ಯ; ಜ.27ರಂದು ಎಐಎಡಿಎಂಕೆ ಮಾಜಿ ನಾಯಕಿ ಶಶಿಕಲಾ ಬಿಡುಗಡೆ

4 ವರ್ಷದ ಜೈಲುವಾಸ ಅಂತ್ಯ; ಜ.27ರಂದು ಎಐಎಡಿಎಂಕೆ ಮಾಜಿ ನಾಯಕಿ ಶಶಿಕಲಾ ಬಿಡುಗಡೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಾಲೆ ಸ್ವಚ್ಛಗೊಳಿಸುವ ವೇಳೆ ವಿದ್ಯುತ್‌ ಸ್ಪರ್ಶಿಸಿ ವಿದ್ಯಾರ್ಥಿ ಸಾವು

ಶಾಲೆ ಸ್ವಚ್ಛಗೊಳಿಸುವ ವೇಳೆ ವಿದ್ಯುತ್‌ ಸ್ಪರ್ಶಿಸಿ ವಿದ್ಯಾರ್ಥಿ ಸಾವು

ಪಿಎಂ ಕಿಸಾನ್‌ ಯೋಜನೆ: 17 ಕೋಟಿ ಜಮಾ

ಪಿಎಂ ಕಿಸಾನ್‌ ಯೋಜನೆ: 17 ಕೋಟಿ ಜಮಾ

ಬಾರದ 108, ಹೊಂಡಕ್ಕೆ ಬಿದ್ದ ಮಕ್ಕಳಿಬ್ಬರು ಸಾವು ; ಆಸ್ಪತ್ರೆಯಲ್ಲಿ ಯುವಕರಿಂದ ದಾಂಧಲೆ

ಬಾರದ 108, ಹೊಂಡಕ್ಕೆ ಬಿದ್ದ ಮಕ್ಕಳಿಬ್ಬರು ಸಾವು ; ಆಸ್ಪತ್ರೆಯಲ್ಲಿ ಯುವಕರಿಂದ ದಾಂಧಲೆ

ಸಕಾಲಕ್ಕೆ ಬಾರದ ತುರ್ತುವಾಹನ : ಸಾರ್ವಜನಿಕ ಆಸ್ಪತ್ರೆಗೆ ನುಗ್ಗಿ ದಾಂಧಲೆ ನಡೆಸಿದ ಗ್ರಾಮಸ್ಥರು

ಸಕಾಲಕ್ಕೆ ಬಾರದ ತುರ್ತುವಾಹನ : ಸಾರ್ವಜನಿಕ ಆಸ್ಪತ್ರೆಗೆ ನುಗ್ಗಿ ದಾಂಧಲೆ ನಡೆಸಿದ ಗ್ರಾಮಸ್ಥರು

Chikkamagaluru

ಮಾದರಿ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಿ: ವಾರಿಜಾ

MUST WATCH

udayavani youtube

ಕೃಷಿ ಕಾಯಿದೆ; ಕೃಷಿಕನ ಅಭಿಪ್ರಾಯ ಕ್ಕೆ ಕಿವಿಯಾಗೋಣ ಬನ್ನಿ

udayavani youtube

Udupiಯ ಜನತೆಗೆ ಕಲೆಯಿಂದ ಜನಜಾಗೃತಿ ಮೂಡಿಸಿದ ಕಲಾವಿದ KAMIL RAZA,

udayavani youtube

ದೇರಳಕಟ್ಟೆ ಅಯ್ಯಪ್ಪ ದೇವಸ್ಥಾನದಲ್ಲಿ ಕಳ್ಳತನ ನಡೆಸಿದ್ದ ಇಬ್ಬರ ಬಂಧನ!

udayavani youtube

ದ.ಕ.ಜಿಲ್ಲಾಡಳಿತದಿಂದ 72ನೇ ಗಣರಾಜ್ಯೋತ್ಸವ

udayavani youtube

ಉಡುಪಿ ಕೃಷ್ಣ ಮಠಕ್ಕೆ ಬಾಳೆ ಎಲೆಯನ್ನು ನೀಡುವ ಯುವಕ

ಹೊಸ ಸೇರ್ಪಡೆ

Freedom Movement which gave a new message to the world

ವಿಶ್ವಕ್ಕೆ ಹೊಸ ಸಂದೇಶ ನೀಡಿದ ಸ್ವಾತಂತ್ರ್ಯ ಚಳವಳಿ

republic ceremony at the airport

ಏರ್‌ಪೋರ್ಟ್‌ನಲ್ಲಿ ಅದ್ದೂರಿ ಗಣರಾಜ್ಯೋತ್ಸವ

I am an MLA from the Ambedkar Constitution

ಅಂಬೇಡ್ಕರ್‌ ಸಂವಿಧಾನದಿಂದಲೇ ನಾನು ಶಾಸಕನಾಗಿದ್ದೇನೆ

Wastewater

ಕೊಳಚೆ ನೀರು ಹರಿಸುವವರಿಗೆ “ನೋಟಿಸ್‌’ಬಿಸಿ !

Centre to deploy more paramilitary forces in Delhi after violence during farmers’ tractor rally

ದೆಹಲಿ ಪರಿಸ್ಥಿತಿ ನಿರ್ವಹಣೆಗೆ ಹೆಚ್ಚುವರಿ ಅರೆಸೈನಿಕ ಪಡೆಗಳ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.