ಎಪಿಎಂಸಿಯಲ್ಲಿ ಸೌಲಭ್ಯ ಮರೀಚಿಕೆ


Team Udayavani, Mar 19, 2019, 7:15 AM IST

apmc.jpg

ಬಾಗೇಪಲ್ಲಿ: ಆಂಧ್ರದ ಗಡಿಯಲ್ಲಿರುವ ಎಪಿಎಂಸಿ ಮಾರುಕಟ್ಟೆಯಲ್ಲಿ ರಾತ್ರಿ ವೇಳೆಯಲ್ಲಿ ಕೃಷಿ ಉತ್ಪನ್ನಗಳನ್ನು ತರುವ ರೈತರು ರೈತ ಭವನದಲ್ಲಿ ತಂಗುತ್ತಾರೆ. ಆದರೆ ಈ ಭವನದಲ್ಲಿ ಕುಡಿಯುವ ನೀರು, ಶೌಚಾಲಯ ಹಾಗೂ ರಸ್ತೆ, ಚರಂಡಿ ಮುಂತಾದ ಮೂಲಭೂತ ಸಮಸ್ಯೆಗಳಿಂದ ವಂಚಿತವಾಗಿದ್ದು, ರೈತರು ಪರದಾಡುವಂತಾಗಿದೆ. 

ಸುಮಾರು 10 ಎಕರೆ ಪ್ರದೇಶದಲ್ಲಿ ಇರುವ ಎಪಿಎಂಸಿ ಮಾರುಕಟ್ಟೆಯಲ್ಲಿ ಸರಿಯಾದ ರಸ್ತೆಯಿಲ್ಲದೇ ವಾಹನಗಳನ್ನು ಅಡ್ಡಾದಿಡ್ಡಿ ನಿಲ್ಲಿಸುತ್ತಿರುವುದರಿಂದ ಕಿಷ್ಕಿಂಧೆಯಾಗಿ ಪರಿವರ್ತನೆಯಾಗಿದೆ. ಟೊಮೆಟೋ ಮಾರಾಟ ಜೋರಾಗಿ ಸಾಗಿದ್ದು ಕಳಪೆ ಟೊಮೆಟೋವನ್ನು ರಸ್ತೆಗೆ ಎಸೆಯುತ್ತಿರುವುದರಿಂದ ಕೊಳೆತು ದುರ್ವಾಸನೆ ಬೀರುತ್ತಿದ್ದು, ಸೊಳ್ಳೆಗಳ ಆವಾಸ ಸ್ಥಾನವಾಗಿ ಮಾರ್ಪಟ್ಟಿದೆ. 

ಶುಚಿ ಮಾಡುವ ಕಾರ್ಮಿಕರು ಇಲ್ಲದಿರುವುದು, ಗುತ್ತಿಗೆ ಪಡೆದಿರುವವರು ಇತ್ತ ಸುಳಿವೇ ಇರುವುದಿಲ್ಲ. ಮಾರುಕಟ್ಟೆಗೆ ಕೃಷಿ ಉತ್ಪನ್ನಗಳನ್ನು ತರುವ ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ ಇಲ್ಲದಿರುವುದರಿಂದ ತೀವ್ರ ತೊಂದರೆ ಅನುಭವಿಸುವಂತಾಗಿದೆ. 

ಸಂಚಾರಕ್ಕೆ ತೊಂದರೆ: ಬೆಳಗ್ಗೆ 4 ಗಂಟೆಗೆ ಪ್ರಾರಂಭವಾಗುವ ಮಾರುಕಟ್ಟೆ 8 ಗಂಟೆವರೆಗೂ ವಾಹನ, ವ್ಯಾಪಾರಿಗಳ ಹಾಗೂ ರೈತರಿಂದ ತುಂಬಿರುತ್ತದೆ. ಆವರಣದಲ್ಲಿ ರಸ್ತೆಗಳಿಗೆ ಟಾರ್‌ ಅಥವಾ ಸಿಮೆಂಟ್‌ ಹಾಕಿಸದಿರುವುದರಿಂದ ವಾಹನ ಮತ್ತು ಜನ ಸಂಚಾರಕ್ಕೆ ಕಿರಿಕಿರಿಯಾಗಿದೆ. 

ನೋಟಿಸ್‌ ಜಾರಿ: ಬೆಂಗಳೂರಿನ ಗುತ್ತಿಗೆದಾರರೊಬ್ಬರು ಆವರಣದಲ್ಲಿ ಶುಚಿ ಕಾಪಾಡಲು ಟೆಂಡರ್‌ ಮೂಲಕ ಗುತ್ತಿಗೆ ಪಡೆದಿದ್ದು, ಆವರಣವನ್ನು ಸಮರ್ಪಕವಾಗಿ ಶುಚಿ ಮಾಡದಿರುವುದರಿಂದ ಎಪಿಎಂಸಿ ಅಧಿಕಾರಿಗಳು ನೋಟಿಸ್‌ ಜಾರಿ ಮಾಡಿದ್ದಾರೆ. ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಳೆ ಬಂದರೆ ಮಳೆ ನೀರು ಆವರಣದಲ್ಲಿಯೇ ಸಂಗ್ರಹವಾಗುವುದರಿಂದ ಚಿಕ್ಕ ಕೆರೆಯಂತೆ ಪರಿವರ್ತನೆಯಾಗುತ್ತದೆ.

ಎಪಿಎಂಸಿ ಆವರಣದಲ್ಲಿ ಒಂದು ರಸ್ತೆಗೆ ಸಿಮೆಂಟೆ ರಸ್ತೆ ಹಾಕಲಾಗಿದ್ದು, ಉಳಿದ ಕಡೆಗಳಲ್ಲಿ ಸಿಮೆಂಟ್‌ ರಸ್ತೆ ಹಾಕುವ ಕಾರ್ಯ ಪ್ರಗತಿಯಲ್ಲಿದೆ. ರೈತ ಭವನ ನಿರ್ಮಾಣ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮಂಜೂರಾತಿ ಪಡೆದ ನಂತರ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. ಶೌಚಾಲಯ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.
-ಉಮಾ, ಕಾರ್ಯದರ್ಶಿ ಎಪಿಎಂಸಿ ಮಾರುಕಟ್ಟೆ ಬಾಗೇಪಲ್ಲಿ  

ಟಾಪ್ ನ್ಯೂಸ್

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500ಗ್ರಾಂ ಗಾಂಜಾ ವಶ, ಒಬ್ಬನ ಬಂಧನ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500 ಗ್ರಾಂ. ಗಾಂಜಾ ವಶ, ಓರ್ವನ ಬಂಧನ

1-ewrwe

ವಿದ್ಯಾರ್ಥಿಗಳೊಂದಿಗೆ ಕುಳಿತು ಬಿಸಿಯೂಟ ಸವಿದ ಆಹಾರ ನಿಗಮದ ಅಧ್ಯಕ್ಷ ನಡಹಳ್ಳಿ

ಕನ್ನಡದಲ್ಲೇ ಸಹಿ ಸಂಪೂರ್ಣ ಜಾರಿಗೆ ಬಂದರೆ ಸ್ವಾಗತಾರ್ಹ : ಶ್ರೀನಿವಾಸ ಮೂರ್ತಿ ಕುಲಕರ್ಣಿ

ಕನ್ನಡದಲ್ಲೇ ಸಹಿ ಸಂಪೂರ್ಣ ಜಾರಿಗೆ ಬಂದರೆ ಸ್ವಾಗತಾರ್ಹ : ಶ್ರೀನಿವಾಸ ಮೂರ್ತಿ ಕುಲಕರ್ಣಿ

1-rrr

ಕೈಗಾರಿಕೆಗಳಿಗೆ ಭೂಮಿ ನೀಡಲು ಶೀಘ್ರದಲ್ಲೇ ಹೊಸ ನೀತಿ: ಸಚಿವ ನಿರಾಣಿ

1-trtr

ಟಿಕೆಟ್ ಇಲ್ಲದೇ ಪರದಾಟ: 1300 ಭಕ್ತರಿಗೆ ತಿಮ್ಮಪ್ಪನ ದರ್ಶನ ಮಾಡಿಸಿದ ಎಸ್.ಆರ್.ವಿಶ್ವನಾಥ್

1-www

15 ಕೋಟಿ ಸದಸ್ಯರನ್ನು ಹೊಂದಿದ ಏಕೈಕ ಪಕ್ಷ ಬಿಜೆಪಿ : ಸಚಿವ ಹಾಲಪ್ಪ ಆಚಾರ್

congress

ಗೃಹಸಚಿವರ ತವರಿನಲ್ಲಿ ಪಟ್ಟಣ ಪಂಚಾಯತಿ ಕಾಂಗ್ರೆಸ್ ಪಾಲು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12 ಸಾವಿರ ಜೆಡಿಎಸ್‌ ಸದಸ್ಯತ್ವ ನೋಂದಣಿ ಮಾಡಿಸಿ

12 ಸಾವಿರ ಜೆಡಿಎಸ್‌ ಸದಸ್ಯತ್ವ ನೋಂದಣಿ ಮಾಡಿಸಿ

ಮೊದಲ ದಿನ ಶಾಲೆಗೆ 51,809 ಮಕಳು ಹಾಜರಿ

ಮೊದಲ ದಿನ ಶಾಲೆಗೆ 51,809 ಮಕಳು ಹಾಜರಿ

chikkaballapura news

ವೃದ್ದ ಮಹಿಳೆಯ ಅನುಮಾನಸ್ಪದ ಸಾವು : ಅತ್ಯಾಚಾರ ಆರೋಪ

gudibande news

ನೀರಿನಲ್ಲಿ ಸಿಲುಕಿಕೊಂಡಿದ್ದ ಆಂಬ್ಯುಲೆನ್ಸ್ ತಳ್ಳಿ ಮಾನವೀಯತೆ ಮೆರೆದ ಸಾರ್ವಜನಿಕರು

Mass confinement for poor pregnant women

ಬಡ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ

MUST WATCH

udayavani youtube

ಭತ್ತ ಬೇಸಾಯದಲ್ಲಿ ಯಂತ್ರೋಪಕರಣಗಳ ಬಳಕೆಯಿಂದ ಅಧಿಕ ಆದಾಯಕ್ಕೊಂದು ದಾರಿ

udayavani youtube

ರಾಜಸ್ಥಾನದ ಸಿಕ್ಸ್ ಸೆನ್ಸ್ ಫೋರ್ಟ್ ನಲ್ಲಿ ನೆರವೇರಲಿದೆಯಂತೆ ವಿಕ್ಕಿ – ಕತ್ರಿನಾ ಮದುವೆ

udayavani youtube

ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಹಾಡಿಗೆ ಹೆಜ್ಜೆ ಹಾಕಿದ ಸಿಎಂ ಬೊಮ್ಮಾಯಿ

udayavani youtube

ಕಾಪು ಕಡಲ ಕಿನಾರೆಯಲ್ಲಿ ‘ಕನ್ನಡಕ್ಕಾಗಿ ನಾವು ಗೀತ ಗಾಯನ’ ಕಾರ್ಯಕ್ರಮ ಸಂಪನ್ನ

udayavani youtube

ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮೊಳಗಿದ ಬಾರಿಸು ಕನ್ನಡ ಡಿಂಡಿಮವ

ಹೊಸ ಸೇರ್ಪಡೆ

davanagere news

30 ರಿಂದ ರಾಜ್ಯ ಮಟ್ಟದ ವಿವಿಧ ಪ್ರಶಸ್ತಿ ವಿತರಣೆ: ಶೆಣೈ

kottigehara news

ಗ್ರಾಪಂ ಸಂಕೀರ್ಣಕ್ಕೆ ಜಿಪಂ ಸಿಇಒ ಭೇಟಿ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500ಗ್ರಾಂ ಗಾಂಜಾ ವಶ, ಒಬ್ಬನ ಬಂಧನ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500 ಗ್ರಾಂ. ಗಾಂಜಾ ವಶ, ಓರ್ವನ ಬಂಧನ

Vehicle parking

ವಾಹನ ನಿಲುಗಡೆಗೆ ಶುಲ್ಕ

shivamogga news

ಸರ್ಕಾರದಿಂದ ಕುಡಿಯುವ ನೀರೂ ಮಾರಾಟ: ಆರೋಪ-ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.