ಕೆರೆಗಳಲ್ಲಿ ಜಾಲಿ ಮರ ತೆಗೆಸಲು ರೈತರ ಒತ್ತಾಯ

Team Udayavani, Oct 30, 2019, 3:00 AM IST

keregallai

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಕೆರೆ, ಕುಂಟೆಗಳ ಪುನಶ್ಚೇತನ ಜೊತೆಗೆ ಕೆರೆಗಳಲ್ಲಿ ವ್ಯಾಪಕ ಪ್ರಮಾಣದಲ್ಲಿ ಬೆಳೆದಿರುವ ಜಾಲಿ ಮರಗಳನ್ನು ತೆರವುಗೊಳಿಸಿ ಮಳೆ ನೀರು ಸಂಗ್ರಹಕ್ಕೆ ಅನುವು ಮಾಡಿಕೊಡಬೇಕೆಂದು ಜಿಲ್ಲೆಯ ರೈತರ ನಿಯೋಗ ಉಸ್ತುವಾರಿ ಸಚಿವ ಹಾಗೂ ಡಿಸಿಎಂ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರಿಗೆ ಮನವಿ ಮಾಡಿದರು.

ಜಿಪಂ ಸಭಾಂಗಣದಲ್ಲಿ ಸೋಮವಾರ ಪಗತಿ ಪರಿಶೀಲನೆ ಸಭೆಯಲ್ಲಿ ಪಾಲ್ಗೊಂಡು ಹೊರಡುವ ಸಂದರ್ಭದಲ್ಲಿ ಜಿಲ್ಲೆಯ ರೈತರು ಉಸ್ತುವಾರಿ ಸಚಿವರನ್ನು ಭೇಟಿ ಮಾಡಿ ಜಿಲ್ಲೆಯ ಕೆರೆ, ಕುಂಟೆಗಳ ಪರಿಸ್ಥಿತಿಯನ್ನು ಮನವಿ ಮೂಲಕ ವಿವರಿಸಿತು.

ಮನವರಿಕೆ: ಜಿಲ್ಲೆಗೆ ಎತ್ತಿನಹೊಳೆ ಹಾಗೂ ಹೆಚ್‌.ಎನ್‌.ವ್ಯಾಲಿ ನೀರು ಹರಿದರೆ ಕೆರೆಗಳಲ್ಲಿ ಸಂಗ್ರಹ ಆಗುವುದಿಲ್ಲ. ಕೆರೆ, ಕುಂಟೆಗಳು ಒತ್ತುವರಿ ಜೊತೆಗೆ ಪುನಶ್ಚೇತನವಾಗದೇ ಕೆರೆಗಳಲ್ಲಿ ವಿಪರೀತ ಜಾಲಿ ಮರಗಳು ಬೆಳೆದಿದ್ದು, ಇದರಿಂದ ಕೆರೆಗಳೇ ಕಣ್ಮರೆಯಾಗುವ ಸ್ಥಿತಿ ತಲುಪಿವೆ. ಇದರಿಂದ ಮಳೆಗಾಲದಲ್ಲಿ ಕೂಡ ಕೆರೆಗಳಿಗೆ ನೀರು ಹರಿದು ಬರುತ್ತಿಲ್ಲ. ಸಾಕಷ್ಟು ಕೆರೆಗಳು ಹೂಳು ತುಂಬಿರುವುದರಿಂದ ಮಳೆ ನೀರು ಸಂಗ್ರಹವಾಗದೇ ಅಂತರ್ಜಲ ಕುಸಿತಕ್ಕೆ ಕಾರಣವಾಗಿದೆ ಎಂದು ರೈತರು ಉಸ್ತುವಾರಿ ಸಚಿವರ ಗಮನ ಸೆಳೆದರು.

ಜಿಲ್ಲೆಯಲ್ಲಿ ಕಲ್ಯಾಣಿಗಳ ಸ್ವತ್ಛತೆ ಮಾಡುವ ರೀತಿಯಲ್ಲಿ ಕೆರೆಗಳನ್ನು ಪುನಶ್ಚೇತನ ಮಾಡಬೇಕೆಂದರು. ಜಿಲ್ಲೆಗೆ ಬಾಕಿ ಇರುವ ಹಾಲಿನ ಪ್ರೋತ್ಸಾಹ ಧನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಜಿಲ್ಲೆಯ ರೈತರ ಸಮಸ್ಯೆಗಳ ಬಗ್ಗ ಚರ್ಚಿಸಲು ಪ್ರತ್ಯೇಕವಾಗಿ ರೈತ ಸಂಘದ ಪದಾಧಿಕಾರಿಗಳ ಜೊತೆ ಸಭೆ ನಡೆಸುವಂತೆ ಮುಖಂಡರು ಕೋರಿದರು.

ಸಚಿವರೊಂದಿಗೆ ಯುವಶಕ್ತಿ ಚರ್ಚೆ: ಜಿಲ್ಲೆಯ ಯುವಶಕ್ತಿ ಪದಾಧಿಕಾರಿಗಳಾದ ಶಿವಪ್ರಕಾಶ್‌ರೆಡ್ಡಿ ಮತ್ತಿತರರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎನ್‌.ಸಿ.ಅಶ್ವತ್ಥನಾರಾಯಣರನ್ನು ಭೇಟಿ ಮಾಡಿ ಜಿಲ್ಲೆಗೆ ಶಾಶ್ವತವಾದ ನೀರಾವರಿ ಯೋಜನೆಗಳ ಅನುಷ್ಠಾನದ ಕುರಿತು ಚರ್ಚೆ ನಡೆಸಿದರು. ರೈತ ಸಂಘದ ಶಿಡ್ಲಘಟ್ಟದ ಪ್ರತೀಶ್‌, ಚಿಕ್ಕಬಳ್ಳಾಪುರದ ರಾಮಾಂಜಿನಪ್ಪ, ಶ್ರೀನಿವಾಸ್‌, ಮಂಜುನಾಥ, ಸುಬ್ರಹ್ಮಣಿ, ವೆಂಕಟರವಣಪ್ಪ, ಶ್ರೀನಾಥ ಉಪಸ್ಥಿತರಿದ್ದರು.

ಕಚೇರಿ ಉದ್ಘಾಟನೆ: ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವರ ಕೊಠಡಿಯನ್ನು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಉದ್ಘಾಟಿಸಿದರು. ಉಸ್ತುವಾರಿ ಸಚಿವರ ಉದ್ಘಾಟನೆಗಾಗಿ ಕಚೇರಿ ನವ ವಧುವಿನಂತೆ ಸಿಂಂಡಿತ್ತು. ಸಚಿವರ ಆಗಮನಕ್ಕೂ ಮೊದಲೇ ವೇದ ಪಂಡಿತರು ಕಚೇರಿಯಲ್ಲಿ ಶಾಸ್ತ್ರೋಕ್ತವಾಗಿ ಹೋಮ ಧಾರ್ಮಿಕ ಕಾರ್ಯಕ್ರಮಗಳನ್ನು ಶ್ರದ್ಧಾಭಕ್ತಿಯಿಂದ ನಡೆಸಿದರು. ಬಳಿಕ ಆಗಮಿಸಿದ ಡಿಸಿಎಂ ಕಚೇರಿ ಉದ್ಘಾಟಿಸಿದರು.

ಟಾಪ್ ನ್ಯೂಸ್

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

High temperature: ಉರಿ ಬಿಸಿಲಿಗೆ ಹೈರಾಣ: ಮಳೆಗಾಗಿ ಕಾದ ಜನ!

High temperature: ಉರಿ ಬಿಸಿಲಿಗೆ ಹೈರಾಣ: ಮಳೆಗಾಗಿ ಕಾದ ಜನ!

Lok Sabha election: ಎಸ್ಸೆಸ್ಸೆಲ್ಸಿ, ಪಿಯುಸಿ ಓದಿರುವ ಅಭ್ಯರ್ಥಿಗಳೇ ಹೆಚ್ಚು!

Lok Sabha election: ಎಸ್ಸೆಸ್ಸೆಲ್ಸಿ, ಪಿಯುಸಿ ಓದಿರುವ ಅಭ್ಯರ್ಥಿಗಳೇ ಹೆಚ್ಚು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.