ಭೂಸ್ವಾಧೀನ ಪರಿಹಾರ ನೀಡಲು ರೈತರ ಪ್ರತಿಭಟನೆ

Team Udayavani, Oct 12, 2022, 3:29 PM IST

ಭೂಸ್ವಾಧೀನ ಪರಿಹಾರ ನೀಡಲು ರೈತರ ಪ್ರತಿಭಟನೆ

ಗುಡಿಬಂಡೆ: ತಾಲೂಕಿನ ಸೋಮೇನಹಳ್ಳಿ ವಿದ್ಯುತ್‌ ಪ್ರಸರಣಾ ಕೇಂದ್ರದ ಲೈನ್‌ನ ಟವರ್‌ ನಿರ್ಮಾಣ ಮಾಡಲು ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ನೀಡದೇ ಹೊಸದಾಗಿ ಟವರ್‌ ನಿರ್ಮಿಸಲು ಮುಂದಾದ ಕೇಂದ್ರದ ವಿರುದ್ಧ ಸೂಕ್ತ ಪರಿಹಾರಕ್ಕಾಗಿ ಕೆಪಿಆರ್‌ಎಸ್‌ ನೇತೃತ್ವದಲ್ಲಿ ರೈತರು ಪ್ರತಿಭಟಿಸಿದರು.

ಕರ್ನಾಟಕ ಪ್ರಾಂತ್ಯ ರೈತ ಸಂಘದ ಜಿಲ್ಲಾದ್ಯಕ್ಷ ಮಂಜುನಾಥರೆಡ್ಡಿ ಮಾತನಾಡಿ, ಕೆಪಿಟಿಸಿಎಲ್‌ನ ಅಧಿಕಾರಿಗಳು ಪ್ರಸರಣ ವಿಭಾಗದಿಂದ ವಿದ್ಯುತ್‌ ಲೈನ್‌ ಹಾಕಲು ರೈತರ ಜಮೀನುಗಳನ್ನು ಒತ್ತುವರಿ ಮಾಡಿಕೊಂಡು ಟವರ್‌ ನಿರ್ಮಿಸಿ ಲೈನ್‌ ಹಾಕಿದ್ದಾರೆ. ಅಲ್ಲದೆ ರೈತರ ಜಮೀನುಗಳಲ್ಲಿರುವ ಬೃಹತ್‌ ಮರಗಳನ್ನು ಕಠಾವು ಮಾಡಿದ್ದಾರೆ. ಇದಕ್ಕಾಗಿ ಕೇವಲ ಕಾಟಾಚಾರಕ್ಕೆ ಎಂಬದಕ್ಕೆ ಒಂದಷ್ಟು ಹಣಕೊಟ್ಟು, ವಿದ್ಯುತ್‌ ಲೈನ್‌ ಹಾದುಹೋಗುವ ಜಮೀನಿಗೆ ಕೇಂದ್ರ ಸರ್ಕಾರದ ಭೂಸ್ವಾಧೀನ ಮಾರ್ಗದರ್ಶನದಂತೆ ಪರಿಹಾರ ನೀಡುತ್ತೇವೆ ಎಂದು ಹೇಳಿ ಹೋದವರು, ಇತ್ತ ತಲೆ ಹಾಕಿಲ್ಲ. ಈಗ ಪುನಃ ವಿದ್ಯುತ್‌ ಮಾರ್ಗ ಎಳೆದು ಟವರ್‌ ನಿರ್ಮಿಸುವ ಹುನ್ನಾರ ನಡೆಸಿದ್ದು, ಸೂಕ್ತ ಪರಿಹಾರ ನೀಡಿ ಎಂದು ರೈತರು ಪ್ರತಿಭಟನೆ ನಡೆಸಿದರು. ಬಳಿಕ ಸೂಕ್ತ ಪರಿಹಾರಕ್ಕಾಗಿ ಒತ್ತಾಯಿಸಿ ತಹಶೀಲ್ದಾರ್‌ ಅವರಿಗೆ ಮನವಿ ನೀಡಿದರು.

ನಂತರ ಕೆ.ಪಿ.ಆರ್‌.ಎಸ್‌ ನ ಜಿಲ್ಲಾ ಕಾರ್ಯದರ್ಶಿ ಲಕ್ಷ್ಮೀ ನಾರಾಯಣ ಮಾತನಾಡಿ, ಸೋಮೇನಹಳ್ಳಿ ಪ್ರಸರಣ ಕೇಂದ್ರದ ಪ್ರಾರಂಭದಲ್ಲಿ ಹೊಸದಾಗಿ ವಿದ್ಯುತ್‌ ಲೈನ್‌ ಹಾಕುವಾಗ ರೈತರ ಮೇಲೆ ದೌರ್ಜನ್ಯ ನಡೆಸಿದ ವಿದ್ಯುತ್‌ ಕೇಂದ್ರದ ಅಧಿಕಾರಿಗಳು ಹೆಚ್ಚು ಜಮೀನು ಕಳೆದುಕೊಂಡವರಿಗೆ ಸ್ವಲ್ಪ ಹಣ ನೀಡಿ ವಂಚಿಸಿದ್ದಾರೆ. ಈಗ ಪುನಃ ರೈತರಿಗೆ ಪರಿಹಾರ ನೀಡದೆ ಜಮೀನುಗಳಲ್ಲಿ ಟವರ್‌ ನಿರ್ಮಿಸಲು ಮುಂದಾಗಿದ್ದು, ಇದು ರೈತರಿಗೆ ಕೆಪಿಟಿಸಿಎಲ್‌ ಸಂಸ್ಥೆಯ ಅನ್ಯಾಯವಾಗಿದೆ ಎಂದು ಆರೋಪಿಸಿದರು.

ಕೆಲವು ಜಮೀನಲ್ಲಿ ರೈತರು ಹಸು ಕುರಿ ಸಾಕಾಣಿಕೆ ಶೆಡ್‌ ಗಳನ್ನೂ ನಿರ್ಮಿಸಿಕೊಂಡಿದ್ದಾರೆ ಹಾಗೂ ಇಲ್ಲಿ ಬಹುತೇಕ ಅರ್ಧ ಎಕರೆ ಒಂದು ಏಕರೆ ಹೊಂದಿರುವ ಸಣ್ಣ ಹಿಡುವಳಿದಾರರಿದ್ದು, ಅವರ ಬಹತೇಕ ಭೂಮಿ ಕಳೆದುಕೊಂಡಿದ್ದಾರೆ. ವಿದ್ಯುತ್‌ ಲೈನ್‌ ಹಾದು ಹೋಗಿರುವ ಜಾಗದ ಕೆಳಗೆ ಕೃಷಿ ಅಸಾಧ್ಯ. ರೈತರ ಜಮೀನನ್ನು ಸೂಕ್ತ ಸರ್ವೆ ಮಾಡಬೇಕು, ಕೊಳವೆ ಬಾವಿ, ಶೆಡ್‌, ಬƒಹತ್‌ ಮರಗಳು ಇರುವ ಜಮೀನಿಗೆ ಇರುವ ಮಾರುಕಟ್ಟೆ ದರಕ್ಕಿಂತ ಮೂರು ಪಟ್ಟು ಹೆಚ್ಚು ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿ ತಹಶೀಲ್ದಾರ್‌ ಸಿಗ್ಬತುಲ್ಲಾ ರವರಿಗೆ ರೈತರು ಮನವಿ ಪತ್ರ ನೀಡಿ, ಕೂಡಲೇ ಜಿಲ್ಲಾಧಿಕಾರಿಗಳು ಮಧ್ಯಸ್ಥಿಕೆ ವಹಿಸಿ, ರೈತ ಮತ್ತು ರೈತ ಸಂಘ ಮುಖಂಡರ ಸಭೆ ನಡೆಸಿ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.

ನಮಗೆ ಪರಿಹಾರ ನೀಡದೆ ಕಾಮಗಾರಿ ಮಾಡಲು ಬಿಡುವುದಿಲ್ಲ ಎಂದು ರೈತರು ಆಗ್ರಹಿಸಿದರು. ಕೆ.ಪಿ.ಆರ್‌.ಎಸ್‌ನ ಜಿಲ್ಲಾ ಸಮಿತಿ ಸದಸ್ಯ ಮಂಜುನಾಥ್‌, ಮುಖಂಡರಾದ ನಾಗರಾಜ್‌, ಆದಿನಾರಾಯಣ ಸ್ವಾಮಿ, ಶ್ರೀನಿವಾಸ, ಗ್ರಾಪಂ ಸದಸ್ಯ ರಾದ ಗಂಗಾನಹಳ್ಳಿ ವೆಂಕಟೇಶ್‌, ಸೋಮೇನಹಳ್ಳಿ ಸದಸ್ಯ ವೆಂಕಟೇಶ್‌, ವೆಂಕಟ ನಾರಾ ಯಣಚಾರಿ, ಗಂಗರಾಜು, ರಾಮಮೂರ್ತಿ ಇದ್ದರು.

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.