ಡಿಕೆಶಿ ಪರ ಹೆದ್ದಾರಿ ತಡೆದ 20 ಮಂದಿ ಕೈ ಕಾರ್ಯಕರ್ತರ ಮೇಲೆ ಎಫ್ಐಆರ್

Team Udayavani, Sep 5, 2019, 10:09 AM IST

ಚಿಕ್ಕಬಳ್ಳಾಪುರ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನ ವಿರೋಧಿಸಿ ರಾಷ್ಟ್ರೀಯ ಹೆದ್ದಾರಿ ತಡೆದ ಆರೋಪ ಹಿನ್ನಲೆಯಲ್ಲಿ ಕೆಪಿಸಿಸಿ ಸದಸ್ಯ ಎಸ್.
ಪಿ.ಶ್ರೀನಿವಾಸ್ ಸೇರಿ 20ಕ್ಕೂ ಹೆಚ್ವು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಚಿಕ್ಕಬಳ್ಳಾಪುರ ನಂದಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡಿ.ಕೆ. ಶಿವಕುಮಾರ್ ಬಂಧನ ವಿರೋಧಿಸಿ ಮಂಗಳವಾರ ಮಧ್ಯರಾತ್ರಿ ಕೆಪಿಸಿಸಿ ಸದಸ್ಯ ಎಸ್.ಪಿ ಶ್ರೀನಿವಾಸ್ ಸೇರಿದಂತೆ ಯುವ ಕಾಂಗ್ರೆಸ್ ಮುಖಂಡರಾದ ಅರುಣ್ ಕೊಳವನಹಳ್ಳಿ, ಶೆಟ್ಟಿಗೆರೆ ಮುರುಳಿ, ಚಿಕ್ಕಬಳ್ಳಾಪುರ ನಗರದ ನಿವಾಸಿಗಳಾದ ಷಾಹೀದ್, ಬಾಬಾಜಾನ್, ಸುರೇಶ್, ವಿನಯ್, ರಾಜಶೇಖರ್ ಹಾಗೂ ಮಹಮದ್ ಮತ್ತಿತರರು ನಗರದ ಹೊರ ವಲಯದ ಚದಲುಪುರದ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಬೆಂಗಳೂರು, ಹೈದರಾಬಾದ್ ಹೆದ್ದಾರಿಯನ್ನು ತಡೆದು ವಾಹನ ಸಂಚಾರಕ್ಕೆ ಅಡ್ಡಿಪಡಿಸಿರುವ ಆರೋಪ ಹೊರೆಸಿ ಒಟ್ಟು 20 ಮಂದಿ ಮೇಲೆ ಏಫ್ಐಆರ್ ದಾಖಲಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ