ಕೈವಾರದಲ್ಲಿ 14ರಿಂದ 72 ಗಂಟೆ ಸಂಗೀತೋತ್ಸವ

Team Udayavani, Jul 12, 2019, 11:21 AM IST

cb-tdy-1..

ಚಿಕ್ಕಬಳ್ಳಾಪುರ: ಜಿಲ್ಲೆಯ ವಾಣಿಜ್ಯ ನಗರಿ ಚಿಂತಾಮಣಿಯ ಶ್ರೀ ಕ್ಷೇತ್ರ ಕೈವಾರ ಯೋಗಿ ನಾರೇಯಣ ಮಠದಲ್ಲಿ ಜುಲೈ 14 ರ ಗುರು ಪೌರ್ಣಮಿಯಂದು ಸಮಾವೇಶಗೊಳ್ಳಲಿರುವ ಮೂರು ದಿನಗಳ ರಾಷ್ಟ್ರೀಯ ಮಟ್ಟದ ಸತತ 72 ಗಂಟೆ ನಿರಂತರ ಸಂಗೀತೋತ್ಸವ ಹಾಗೂ ಗುರು ಮಹೋತ್ಸವಕ್ಕೆ ಕೇವಲ ಎರಡು ದಿನ ಮಾತ್ರ ಬಾಕಿ ಇದ್ದು, ಸಂಗೀತ ಪ್ರೇಮಿಗಳಿಗೆ ರಸದೌತಣ ಉಣಬಡಿಸಲು ಕೈವಾರ ಕ್ಷೇತ್ರ ನವ ವಧುವಿನಂತೆ ಸಿಂಗಾರಗೊಳ್ಳುತ್ತಿದೆ.

ರಾರಾಜಿಸುತ್ತಿವೆ ಫ್ಲೆಕ್ಸ್‌, ಬ್ಯಾನರ್‌: ದಕ್ಷಿಣ ಭಾರತ ದಲ್ಲಿಯೇ ಅತ್ಯಂತ ವೈಭವ ಹಾಗೂ ಶ್ರದ್ಧಾಭಕ್ತಿಯಿಂದ ನಡೆಯಲಿರುವ ಗುರುಪೂಜಾ ಮಹೋತ್ಸವ ಹಾಗೂ ಸಂಗೀತೋತ್ಸವಕ್ಕೆ ಶ್ರೀ ಕೈವಾರ ಮಠ ಅಗತ್ಯ ಸಿದ್ಧತೆ ಗಳನ್ನು ಕೈಗೊಳ್ಳುತ್ತಿದ್ದು, ಮಹೋತ್ಸವಕ್ಕೆ ಭಕ್ತರನ್ನು ಹಾಗೂ ಸಂಗೀತ ಪ್ರೇಮಿಗಳನ್ನು ಕೈಬೀಸಿ ಕರೆಯುವ ಸ್ವಾಗತ ಕಮಾನುಗಳು, ಫ್ಲೆಕ್ಸ್‌, ಬ್ಯಾನರ್‌ಗಳು ಜಿಲ್ಲಾ ದ್ಯಂತ ರಾರಾಜಿಸುತ್ತಿವೆ.

ಕೈವಾರ ಕ್ಷೇತ್ರದಲ್ಲಿ ಸಂಭ್ರಮ: ಗುರು ಪೌರ್ಣಮಿ ಯೆಂದು ಗುರುಗಳಿಗೆ ನಾದೋಪಾಸನೆಯನ್ನು ಸಮ ರ್ಪಿಸಲು ಸಜ್ಜಾಗುತ್ತಿರುವ ಕೈವಾರ ಮಠದಲ್ಲಿ ಈಗಾ ಗಲೇ ಬೃಹತ್‌ ಪ್ರಮಾಣದಲ್ಲಿ ಪೆಂಡಾಲ್ ನಿರ್ಮಾಣ ಕಾರ್ಯ ಶುರುವಾಗಿದ್ದು, ಸಂಗೀತೋತ್ಸವಕ್ಕೆ ಪೂರಕ ವಾಗಿ ವಿವಿಧ ಗಾಯನ ಕಚೇರಿಗಳನ್ನು ನಡೆಸಿ ಕೊಡಲು ವೇದಿಕೆಗಳನ್ನು ಸಿದ್ಧಪಡಿಸುವ ಕಾರ್ಯ ಭರದಿಂದ ಸಾಗಿದೆ. ಸುಮಾರು 100 ಕ್ಕೂ ಹೆಚ್ಚು ಮಂದಿ ಸಿದ್ಧತಾ ಕಾರ್ಯದಲ್ಲಿ ತೊಡಗಿದ್ದು, ಕೈವಾರ ಕ್ಷೇತ್ರದಲ್ಲಿ ಸಂಭ್ರಮ ಮನೆ ಮಾಡಿದೆ.

ಹಳ್ಳಿ ಹಳ್ಳಿಗೂ ಆಹ್ವಾನ ಪತ್ರಿಕೆ: ಕೈವಾರದ ಶ್ರೀ ಯೋಗಿ ನಾರೇಯಣ ಮಠ ಈ ವರ್ಷ 20ನೇ ವರ್ಷದ ಗುರು ಪೂಜಾ ಮಹೋತ್ಸವ ಹಾಗೂ ಸಂಗೀತೋತ್ಸವಕ್ಕೆ ಅಣಿಯಾಗುತ್ತಿದ್ದು, ಈಗಾಗಲೇ ಉತ್ಸವದ ಆಹ್ವಾನ ಪತ್ರಿಕೆಗಳು ಮುದ್ರಣಗೊಂಡು ಹಳ್ಳಿ ಹಳ್ಳಿಗೂ ತಲುಪಿವೆ. ಗುರು ಪೂಜಾ ಹಾಗೂ ಸಂಗೀತೋತ್ಸವದ ಬಗ್ಗೆ ವ್ಯಾಪಕ ಪ್ರಚಾರ ನಡೆಸಲು ಪೋಸ್ಟರ್‌ಗಳನ್ನು ಜಿಲ್ಲಾದ್ಯಂತ ಅಂಟಿಸಲಾಗಿದೆ.

20 ವರ್ಷಗಳಿಂದ ಆಯೋಜನೆ: ದೇಶದ ನಾನಾ ಭಾಗಗಳಿಂದ ಆಗಮಿಸುವ ಸಂಗೀತ ವಿದ್ವಾಂಸರಿಗೆ ಮತ್ತು ಕಲಾವಿದರಿಗೆ ಅನ್ನದಾಸೋಹ ಸೇರಿದಂತೆ ವಸತಿ ಸೌಕರ್ಯಗಳನ್ನು ಶ್ರೀ ಮಠದಿಂದ ನೆರವೇರಿಸ ಲಾಗು ತ್ತಿದ್ದು, ಆಷಾಢ ಮಾಸದ ಹುಣ್ಣಿಮೆಯೆಂದು ಗುರು ಗಳನ್ನು ಸ್ಮರಿಸುವ ಸಂಪ್ರದಾಯವನ್ನು ಕೈವಾರ ಮಠ ಸತತ 20 ವರ್ಷಗಳಿಂದ ನಡೆಸಿಕೊಂಡು ಬರುತ್ತಿದೆ.

3 ಲಕ್ಷಕೂ ಅಧಿಕ ಸಂಗೀತ ಪ್ರೇಮಿಗಳು ಭೇಟಿ: ದೇಶ ವಿದೇಶಗಳಲ್ಲಿ ಖ್ಯಾತಿ ಪಡೆದಿರುವ ಹಲವಾರು ಸಂಗೀತ ವಿದ್ವಾಂಸರನ್ನು ಮತ್ತು ಸಂಗೀತದ ನಾನಾ ಪ್ರಕಾರಗಳನ್ನು ಒಂದೇ ವೇದಿಕೆಯಲ್ಲಿ ನೋಡಿ ಆನಂದಿಸುವ ಸದಾವಕಾಶವನ್ನು ಯೋಗಿನಾರೇಯಣ ಮಠದಲ್ಲಿ ಕಲ್ಪಿಸಲಾಗಿದೆ. ಮೂರು ದಿನಗಳ ಕಾಲ ಮೂರು ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಸಂಗೀತ ಪ್ರೇಮಿಗಳು ಕೈವಾರಕ್ಕೆ ಲಗ್ಗೆ ಹಾಕಲಿದ್ದಾರೆ.

ಮೂರು ದಿನಗಳ ಸಂಗೀತೋತ್ಸವದಲ್ಲಿ ಪ್ರಸಿದ್ಧ ಸಂಗೀತ ವಿದ್ವಾಂಸರು, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅನೇಕ ಸಂಗೀತ ದಿಗ್ಗಜರು ಈ ರಾಷ್ಟ್ರೀಯ ಸಂಗೀತೋತ್ಸವದಲ್ಲಿ ಭಾಗವಹಿಸಲಿದ್ದಾರೆ.

ಸಿಮೆಂಟ್ ಸೀಟ್ ಅಳವಡಿಕೆ: ಮೂರು ದಿನಗಳ ಗುರು ಪೂಜಾ ಹಾಗೂ ಸಂಗೀತೋತ್ಸವಕ್ಕೆ ಯೋಗಿ ನಾರೇಯಣ ಮಠದ ಸಭಾಂಗಣವನ್ನು ವಿಶೇಷವಾಗಿ ಸಿದ್ಧತೆ ಮಾಡುವ ಕಾರ್ಯ ಪ್ರಗತಿಯಲ್ಲಿದೆ. ಸಭಾಂ ಗಣದ ಮುಂದೆಯೂ ಮಳೆಗಾಲ ಆಗಿರುವುದರಿಂದ ಭಕ್ತರಿಗೆ ಅನುಕೂಲವಾಗುವಂತೆ ವಿಶಾಲ ಸಭಾಂಗಣ ನಿರ್ಮಿಸಿ ಸಿಮೆಂಟ್ ಸೀಟ್ ಅಳವಡಿಸಲಾಗುತ್ತಿದೆ.

ಭಕ್ತರಿಗೆ ವಸತಿ ಮತ್ತು ಊಟದ ವ್ಯವಸ್ಥೆ ಮಾಡಲು ಆಯೋಜಿ ಸಲಾಗಿದೆ ಎಂದು ಕೈವಾರ ಶ್ರೀ ಯೋಗಿನಾರೇಯಣ ಮಠದ ಆಡಳಿತಾಧಿ ಕಾರಿ ಕೆ.ಲಕ್ಷ್ಮೀನಾರಾಯಣ್‌ ತಿಳಿಸಿದರು.

● ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.