ಸರ್ಕಾರಿ ಶಾಲೆ ಈಗ ಕುರಿ ದೊಡ್ಡಿ


Team Udayavani, Jun 11, 2020, 6:12 AM IST

vatavarana

ಶಿಡ್ಲಘಟ್ಟ: ಕೋವಿಡ್ 19 ಸೋಂಕು ಭಾರೀ ಪ್ರಮಾಣದಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಸರ್ಕಾರಿ ಶಾಲೆ ಆರಂಭಿಸಬೇಕೆ? ಅಥವಾ ಬೇಡವೇ? ಎಂಬ ಗೊಂದಲದ ವಾತಾವರಣ ಮುಂದುವರಿದಿದೆ.  ಆದರೆ ಶಿಡ್ಲಘಟ್ಟ ತಾಲೂಕಿನ ರಾಮಲಿಂಗಾಪುರ ಗ್ರಾಮದ  ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕುರಿ-ಮೇಕೆ ಹಾಗೂ ದನಕರುಗಳ ದೊಡ್ಡಿಯಾಗಿ ಪರಿವರ್ತನೆಗೊಂಡಿದೆ.

ಶಾಲೆಯೇ ಜ್ಞಾನದೇಗುಲ ಕೈಮುಗಿದು ಬನ್ನಿ ಎಂಬುದು  ಸಾಮಾನ್ಯ. ಆದರೆ ರಾಮಲಿಂಗಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸ್ಥಿತಿ ತದ್ವಿರುದ್ಧವಾಗಿದೆ. ಸದ್ಯದ ಸ್ಥಿತಿಯಲ್ಲಿ ಸರ್ಕಾರಿ ಹಾಗೂ ಖಾಸಗಿ ಶಾಲೆ ಆರಂಭಿಸಬಾರದೆಂದು ಬಹುತೇಕ ಪೋಷಕರು ಸರ್ಕಾರವನ್ನು  ಒತ್ತಾಯಿಸುತ್ತಿದ್ದಾರೆ. ಈ ಮಧ್ಯೆ ಜೂ.8 ರಿಂದ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳನ್ನು ತೆರದು ಶಾಲಾಭಿವೃದ್ಧಿ ಸಮಿತಿಗಳ ಸಭೆ ಕರೆದು ಪೋಷಕರ ಅಭಿಪ್ರಾಯ ಸಂಗ್ರಹಿಸಿ ಸಾರ್ವಜ ನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳ ಮೂಲಕ  ಸರ್ಕಾರಕ್ಕೆ ಸಲ್ಲಿಸಬೇಕೆಂದು ಆದೇಶಿ ಸಲಾಗಿದೆ.

ಆದರೆ ಸರ್ಕಾರದ ಆದೇಶವನ್ನು ಉಲಂಘಿಸಿ ಶಿಕ್ಷಕರು ಶಾಲೆಗಳಿಗೆ ಚಕ್ಕರ್‌ ಹೊಡೆದಿದ್ದಾರೆ ಎಂಬುದಕ್ಕೆ ರಾಮಲಿಂಗಾಪುರ ಸರ್ಕಾರಿ ಶಾಲೆಯೇ ನಿದರ್ಶನವಾಗಿದೆ. ಗ್ರಾಮದಲ್ಲಿ ಸರ್ಕಾರಿ  ಶಾಲೆ ಮತ್ತು ಅಂಗನವಾಡಿ ಕೇಂದ್ರ ಅಕ್ಕಪಕ್ಕದಲ್ಲಿ ನಡೆಯುತ್ತಿದೆ. ಸರ್ಕಾರಿ ಶಾಲೆಯಲ್ಲಿ 1ರಿಂದ 7ನೇ ತರಗತಿ ವರೆಗೆ ಇದೆ. ಅಚ್ಚರಿ ಎಂದರೆ ಈ  ಶಾಲೆಯಲ್ಲಿ ಇರುವುದು ಒಬ್ಬನೇ ಒಬ್ಬ ವಿದ್ಯಾರ್ಥಿ ಮಾತ್ರ. ವಿದ್ಯಾರ್ಥಿಗಳು   ಇಲ್ಲದಿರುವುದರಿಂದ ಶಾಲೆಯ ಒಂದು ಕಟ್ಟಡವನ್ನು ಅಂಗನವಾಡಿ ಕೇಂದ್ರಕ್ಕೆ ಬಿಟ್ಟು ಕೊಡಲಾಗಿದೆ. ಅಲ್ಲಿ ಮೂರು ಮಕ್ಕಳ ದಾಖಲಾತಿ ಇದೆ ಎಂದು ಮಾಹಿತಿ ಬಂದಿದೆ. ಆದರೆ ಶಾಲೆ ಮತ್ತು ಅಂಗನವಾಡಿ ಕೇಂದ್ರದ ಆವರಣ ಮಾತ್ರ  ಕುರಿ-ಮೇಕೆ ಮತ್ತು ದನಕರುಗಳಿಗೆ ಆಶ್ರಯತಾಣದೆ.

ನೋಟಿಸ್‌ ಜಾರಿ: ಸರ್ಕಾರಿ ಶಾಲೆಗಳನ್ನು ತೆರೆದು ಪೋಷಕರ ಸಭೆ ಆಯೋಜಿಸಬೇಕೆಂದು ಈಗಾಗಲೇ ಮುಖ್ಯಶಿಕ್ಷಕರಿಗೆ ಸೂಚನೆ ನೀಡಲಾಗಿದೆ. ಆದರೆ ಕೆಲ ಸರ್ಕಾರಿ ಶಾಲೆಗಳಿಗೆ ಶಿಕ್ಷಕರು ಹೋಗುತ್ತಿಲ್ಲ ಎಂಬುದರ ಬಗ್ಗೆ ದೂರುಗಳು   ಕೇಳಿಬಂದಿದೆ. ರಾಮಲಿಂಗಾಪುರ ಗ್ರಾಮದ ಸರ್ಕಾರಿ ಶಾಲೆಯನ್ನು ಗ್ರಾಮದ ಕೆಲವರು ಕುರಿ-ಮೇಕೆ, ದನಕರುಗಳ ದೊಡ್ಡಿ ಮಾಡಿ  ಕೊಂಡಿರುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಕಾರಣ ಕೇಳಿ ಮುಖ್ಯ ಶಿಕ್ಷ ಕರಿಗೆ ನೋಟಿಸ್‌  ಜಾರಿಗೊಳಿಸಲಾಗಿದೆ. ಅವರಿಂದ ಸೂಕ್ತ ಮಾಹಿತಿ ದೊರೆಯದಿದ್ದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಆರ್‌.ಶ್ರೀನಿವಾಸ್‌ ಉದಯವಾಣಿಗೆ ತಿಳಿಸಿದ್ದಾರೆ.

* ಎಂ.ಎ.ತಮೀಮ್‌ ಪಾಷ

ಟಾಪ್ ನ್ಯೂಸ್

ನಥಿಂಗ್‍ ನಲ್ಲಿ ಯುವರಾಜ್‍ ಸಿಂಗ್‍, ಕರಣ್‍ ಜೋಹರ್ ಹೂಡಿಕೆ

ನಥಿಂಗ್‍ ನಲ್ಲಿ ಯುವರಾಜ್‍ ಸಿಂಗ್‍, ಕರಣ್‍ ಜೋಹರ್ ಹೂಡಿಕೆ

ಕಾರು ಶೋರೂಂ ಒಳಗೆ ನುಗ್ಗಿದ ಕಾಡು ಹಂದಿ!

ಮಂಗಳೂರು:ಕಾರು ಶೋರೂಂ ಒಳಗೆ ನುಗ್ಗಿದ ಕಾಡು ಹಂದಿ! ವ್ಯಕ್ತಿಗೆ ತಿವಿಯಲು ಯತ್ನ, ವಿಡಿಯೋ ವೈರಲ್

horocospe

ಈ ರಾಶಿಯವರಿಗಿಂದು ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ

ತಮಿಳುನಾಡಿನಲ್ಲಿ ನ. 30ರ ವರೆಗೆ ಮಳೆ

ತಮಿಳುನಾಡಿನಲ್ಲಿ ನ. 30ರ ವರೆಗೆ ಮಳೆ

ಸರಕಾರಿ ಹಾಸ್ಟೆಲ್‌ಗೆ ಅಧಿಕಾರಿಗಳೇ ಮಾರ್ಗದರ್ಶಕರು

ಸರಕಾರಿ ಹಾಸ್ಟೆಲ್‌ಗೆ ಅಧಿಕಾರಿಗಳೇ ಮಾರ್ಗದರ್ಶಕರು

ಬಿಹಾರವೇ ಬಡ ರಾಜ್ಯ! ನೀತಿ ಆಯೋಗದ ಬಡತನ ಸೂಚ್ಯಂಕ ವರದಿ ಬಿಡುಗಡೆ

ಬಿಹಾರವೇ ಬಡ ರಾಜ್ಯ! ನೀತಿ ಆಯೋಗದ ಬಡತನ ಸೂಚ್ಯಂಕ ವರದಿ ಬಿಡುಗಡೆ

ಹಲವು ದೇಶಗಳಲ್ಲಿ ಕಟ್ಟೆಚ್ಚರ; ಹೊಸ ರೂಪಾಂತರಿಯಿಂದ ಆತಂಕ

ಹಲವು ದೇಶಗಳಲ್ಲಿ ಕಟ್ಟೆಚ್ಚರ; ಹೊಸ ರೂಪಾಂತರಿಯಿಂದ ಆತಂಕಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡಿ.18ಕ್ಕೆ ಮೆಗಾ ಲೋಕ ಅದಾಲತ್‌

ಡಿ.18ಕ್ಕೆ ಮೆಗಾ ಲೋಕ ಅದಾಲತ್‌

ಉದ್ಯೋಗದಲ್ಲಿ ಕನ್ನಡಿಗರಿಗೆ ಪ್ರಾಶಸ್ತ್ಯ ನೀಡಿ

ಉದ್ಯೋಗದಲ್ಲಿ ಕನ್ನಡಿಗರಿಗೆ ಪ್ರಾಶಸ್ತ್ಯ ನೀಡಿ

1-sdssa

ಅಧಿಕಾರ ಸಚಿವ ಸುಧಾಕರ್ ಅವರ ಪಿತ್ರಾರ್ಜಿತ ಆಸ್ತಿಯಲ್ಲ: ಸಿದ್ದರಾಮಯ್ಯ ವಾಗ್ದಾಳಿ

building pending

ಅರ್ಧಕೆ ನಿಂತ ಸಾಹಿತ್ಯ ಸದನ

chinnara mane – school

ಧಾರಾಕಾರ ಮಳೆಗೆ 296 ಶಾಲೆಗಳ 483 ಕೊಠಡಿಗೆ ಹಾನಿ

MUST WATCH

udayavani youtube

ಯುವಕ ಮತ್ತು ಮಹಿಳೆಯನ್ನ ವಿದ್ಯುತ್ ಕಂಬಕ್ಕೆ ಕಟ್ಟಿ ಮನ ಬಂದಂತೆ ಹಲ್ಲೆ

udayavani youtube

ಇಡೀ ವರ್ಷದ ಪಾಠ ಕೇವಲ 199 ರೂಪಾಯಿಗಳಿಗೆ !

udayavani youtube

ಕೃಷಿ ಬಿಕ್ಕಟ್ಟನ್ನು ಹೇಗೆ ಎದುರಿಸಬೇಕು ?

udayavani youtube

ಕಂಗನಾಗೆ ದೆಹಲಿ ವಿಧಾನಸಭೆ ಸಮಿತಿ ಸಮನ್ಸ್‌

udayavani youtube

ಮಾಜಿ ಶಾಸಕರ ಕಾಂಪ್ಲೆಕ್ಸ್ ನಲ್ಲಿ ಲಕ್ಷಾಂತರ ರೂ. ಕಳ್ಳತನ: ಸಿಸಿ ಟಿವಿಯಲ್ಲಿ ಸೆರೆ

ಹೊಸ ಸೇರ್ಪಡೆ

ನಥಿಂಗ್‍ ನಲ್ಲಿ ಯುವರಾಜ್‍ ಸಿಂಗ್‍, ಕರಣ್‍ ಜೋಹರ್ ಹೂಡಿಕೆ

ನಥಿಂಗ್‍ ನಲ್ಲಿ ಯುವರಾಜ್‍ ಸಿಂಗ್‍, ಕರಣ್‍ ಜೋಹರ್ ಹೂಡಿಕೆ

ಕಾರು ಶೋರೂಂ ಒಳಗೆ ನುಗ್ಗಿದ ಕಾಡು ಹಂದಿ!

ಮಂಗಳೂರು:ಕಾರು ಶೋರೂಂ ಒಳಗೆ ನುಗ್ಗಿದ ಕಾಡು ಹಂದಿ! ವ್ಯಕ್ತಿಗೆ ತಿವಿಯಲು ಯತ್ನ, ವಿಡಿಯೋ ವೈರಲ್

horocospe

ಈ ರಾಶಿಯವರಿಗಿಂದು ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ

ತಮಿಳುನಾಡಿನಲ್ಲಿ ನ. 30ರ ವರೆಗೆ ಮಳೆ

ತಮಿಳುನಾಡಿನಲ್ಲಿ ನ. 30ರ ವರೆಗೆ ಮಳೆ

ಸರಕಾರಿ ಹಾಸ್ಟೆಲ್‌ಗೆ ಅಧಿಕಾರಿಗಳೇ ಮಾರ್ಗದರ್ಶಕರು

ಸರಕಾರಿ ಹಾಸ್ಟೆಲ್‌ಗೆ ಅಧಿಕಾರಿಗಳೇ ಮಾರ್ಗದರ್ಶಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.