ಮನುಷ್ಯನ ಆರೋಗ್ಯ ಸದೃಢತೆಗೆ ಸಿರಿಧಾನ್ಯಗಳ ಬಳಕೆ ಅಗತ್ಯ

Team Udayavani, Oct 2, 2019, 3:00 AM IST

manushya

ಚಿಕ್ಕಬಳ್ಳಾಪುರ: ತಾಯಿ ಗರ್ಭಾವಸ್ಥೆಯಲ್ಲಿ ಇರುವಾಗಲೇ ಮಗುವನ್ನು ಪೌಷ್ಟಿಕತೆಯಿಂದ ಕಾಪಾಡಿಕೊಳ್ಳಲು ಸಿರಿಧಾನ್ಯಗಳಿಂದ ಮಾಡಿದ ಪದಾರ್ಥಗಳ ಸೇವನೆ ಅಗತ್ಯವಾಗಿದ್ದು, ಇದರಿಂದ ಸಮಾಜಕ್ಕೆ ಕಂಟಕವಾಗಿರುವ ಅಪೌಷ್ಟಿಕತೆ, ರಕ್ತಹೀನತೆ ಸಮಸ್ಯೆಯಿಂದ ದೂರವಾಗಿ ಮನುಷ್ಯನ ಆರೋಗ್ಯ ಸದೃಢಗೊಳ್ಳುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್‌ ನ್ಯಾಯಾಧೀಶ ಎಚ್‌.ದೇವರಾಜ್‌ ತಿಳಿಸಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ರಾಷ್ಟ್ರೀಯ ಪೋಷಣ್‌ ಮಾಸ-2019ರ ಪ್ರಯುಕ್ತ ಆಯೋಜಿಸಿದ್ದ ಸಿರಿಧಾನ್ಯಗಳ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.

ಫಾಸ್ಟ್‌ಫ‌ುಡ್‌ ಆಹಾರ ಹೆಚ್ಚು ಸೇವನೆ: ರೋಗಗ್ರಸ್ಥ ಸಮಾಜದಿಂದ ಬೆಳವಣಿಗೆ ಕುಂಠಿತವಾಗುತ್ತದೆ. ಹೀಗಾಗಿ ಕುಂಠಿತ ಬೆಳವಣಿಗೆಯನ್ನು ಹೋಗಲಾಡಿಸಬೇಕಾದರೆ ಪೌಷ್ಟಿಕತೆಯನ್ನು ಹೆಚ್ಚಿಸಲು ಎಲ್ಲರೂ ಎಚ್ಚೆತ್ತುಕೊಳ್ಳಬೇಕು. ಆದರೆ ಆಧುನಿಕ ಸಮಾಜದಲ್ಲಿ ದೇಶಿಯರಿಂದ ಪರಿಚಿತವಾಗಿರುವ ಬೇಕರಿ ತಿಂಡಿಗಳು, ಫಿಜ್ಜಾ ಬರ್ಗರ್‌ ಅಂತಹ ಫಾಸ್ಟ್‌ಫ‌ುಡ್‌ ಪದಾರ್ಥಗಳನ್ನು ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೂ ಹೆಚ್ಚು ಸೇವಿಸುತ್ತಾರೆ ಎಂದರು.

ಸಿರಿಧಾನ್ಯ ಮಹತ್ವ ತಿಳಿಯಿರಿ: ಜಿಪಂ ಸಿಇಒ ಬಿ.ಫೌಜಿಯಾ ತರನ್ನುಮ್‌ ಮಾತನಾಡಿ, ಜಿಲ್ಲೆಯಲ್ಲೇ ಮೊದಲ ಪೋಷಣ್‌ ಪುನರ್ವಸತಿ ಕೇಂದ್ರವು ಜಿಲ್ಲಾಸ್ಪತ್ರೆಯಲ್ಲಿ ಸ್ಥಾಪಿಸಿ ಅಪೌಷ್ಟಿಕತೆಯಿಂದ ಬಳಲುವ ತಾಯಿ ಮತ್ತು ಮಗುವನ್ನು ಆರೈಕೆ ಮಾಡುತ್ತಿದೆ. ಪಾಶ್ಚಿಮಾತ್ಯರಿಂದ ಬಂದ ಬೇಕರಿ ತಿಂಡಿಗಳಿಂದ ದೂರವಾಗಿ ಸಾಂಪ್ರಾದಾಯಿಕ ಸಿರಿಧಾನ್ಯಗಳ ಮಹತ್ವವನ್ನು ಎಲ್ಲಾ ತಾಯಂದಿರು ಅರಿಯಬೇಕೆಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಜಿ.ಕೆ. ಲಕ್ಷೀದೇವಮ್ಮ ಮಾತನಾಡಿ, ಕೇಂದ್ರ ಸರ್ಕಾರ ರಾಷ್ಟ್ರೀಯ ಪೋಷಣ್‌ ಅಭಿಯಾನದಿಂದ ಮೊದಲ ಮೂರು ತಿಂಗಳ ಗರ್ಭಿಣಿಯ ಹಂತದಿಂದ ತಾಯಿ ಹಾಗೂ ಮಗುವನ್ನು 1000 ದಿವಸಗಳ ಕಾಲ ಯಾವ ರೀತಿ ಆರೈಕೆ ಮಾಡಬೇಕು, ರಕ್ತಹೀನತೆ, ಸ್ವಚ್ಛತೆ, ನೈರ್ಮಲ್ಯ ವಿಷಯಗಳ ಬಗ್ಗೆ ಸೆಪ್ಟೆಂಬರ್‌ ತಿಂಗಳಾಂತ್ಯವು ಜಿಲ್ಲೆಯಲ್ಲಿ ಗ್ರಾಮ ಮಟ್ಟದಿಂದ ನಗರ ಮಟ್ಟದವರೆಗೂ ಪ್ರತಿಯೊಬ್ಬ ಜನಸಾಮಾನ್ಯರಿಗೂ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಎಂದು ತಿಳಿಸಿದರು.

ಈ ಕಾರ್ಯಕ್ರಮಕ್ಕೆ ವಿವಿಧ ಇಲಾಖೆಯ ಅಧಿಕಾರಿಗಳು, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಸಹಕರಿಸಿ ಜನರಲ್ಲಿ ಅರಿವು ಮೂಡಿಸಲು ಮುಂದಾಗಿ ಅಭಿಯಾನವನ್ನು ಯಶಸ್ವಿಗೊಳಿಸಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ಕೆ. ಹೆಚ್‌. ತಮ್ಮೇಗೌಡ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ವಿನೋದ್‌ ಕುಮಾರ್‌, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಎಲ್‌.ರೂಪ, ಉಪ ಕೃಷಿ ನಿರ್ದೇಶಕಿ ಕೆ.ಅನುರೂಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಹುಸೇನ್‌, ರಾಜೇಂದ್ರ ಪ್ರಸಾದ್‌, ಗೋಪಾಲ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.