ವಿಮಾ ಕಂತಿಗೆ ಜಿಎಸ್‌ಟಿ: ಆಕ್ರೋಶ

Team Udayavani, Jan 11, 2020, 3:00 AM IST

vima-kantu

ಚಿಕ್ಕಬಳ್ಳಾಪುರ: ಭಾರತೀಯ ಜೀವಿ ವಿಮಾ ನಿಗಮದಲ್ಲಿ ಪಾಲಿಸಿದಾರರ ಮೇಲೆ ವಿಧಿಸುತ್ತಿರುವ ಜಿಎಸ್‌ಟಿಯನ್ನು ಕೂಡಲೇ ರದ್ದುಗೊಳಿಸಿ ಪಾಲಿಸಿದಾರರ ಬೋನಸ್‌ನ್ನು ಹೆಚ್ಚಳ ಮಾಡುವಂತೆ ಆಗ್ರಹಿಸಿ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಶುಕ್ರವಾರ ಜಿಲ್ಲಾ ಕೇಂದ್ರದ ಎಲ್‌ಐಸಿ ಶಾಖಾ ಕಚೇರಿ ಎದುರು ಎಲ್‌ಐಸಿ ಪ್ರತಿನಿಧಿಗಳ ಒಕ್ಕೂಟದ ಸದಸ್ಯರು ಪ್ರತಿಭಟನಾ ಧರಣಿ ನಡೆಸಿ ಘೋಷಣೆಗಳನ್ನು ಕೂಗಿದರು.

ಎಲ್‌ಐಸಿ ಪ್ರತಿನಿಧಿಗಳ ಒಕ್ಕೂಟದ ವಿಭಾಗೀಯ ಅಧ್ಯಕ್ಷ ವಿ.ರವೀಂದ್ರನಾಥ್‌ ನೇತೃತ್ವದಲ್ಲಿ ಜಿಲ್ಲೆಯ ಎಲ್‌ಐಸಿ ಪ್ರತಿನಿಧಿಗಳು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಡೀ ದಿನ ಧರಣಿ ನಡೆಸಿ ಗಮನ ಸೆಳೆದು ಪಾಲಿಸಿದಾರರ ಮೇಲೆ ಜಿಎಸ್‌ಟಿ ವಿಧಿಸುತ್ತಿರುವುದನ್ನು ತೀವ್ರ ಖಂಡಿಸಿ ಕೂಡಲೇ ಜಿಎಸ್‌ಟಿ ಹಾಕುವುದನ್ನು ಕೇಂದ್ರ ಸರ್ಕಾರ ಕೈ ಬಿಡಬೇಕೆಂದರು.

ಕಳವಳ: ಪಾಲಿಸಿದಾರರ ಮೇಲೆ ಜಿಎಸ್‌ಟಿ ವಿಧಿಸುತ್ತಿರುವುದರಿಂದ ಜೀವ ವಿಮಾ ಕಂತು ಪಾವತಿ ಮಾಡುವ ಪಾಲಿಸಿದಾರರ ಮೇಲೆ ಹೆಚ್ಚು ಆರ್ಥಿಕ ಹೊರೆ ಆಗುತ್ತದೆ. ಇದರಿಂದ ಪ್ರತಿನಿಧಿಗಳ ವಹಿವಾಟು ಮೇಲೆ ದುಷ್ಪರಿಣಾಮ ಬೀರುತ್ತದೆ. ಎಲ್‌ಐಸಿ ದೇಶದ ಆರ್ಥಿಕ ಭದ್ರತೆಗೆ ಸಾಕಷ್ಟು ಕೊಡುಗೆ ನೀಡಿದ್ದು, ಇಂತಹ ಸಂದರ್ಭದಲ್ಲಿ ಪಾಲಿಸಿದಾರರ ಮೇಲೆ ಜಿಎಸ್‌ಟಿ ಹಾಕುವುದರಿಂದ ಅದರ ನೇರ ಪರಿಣಾಮ ಪ್ರತಿನಿಧಿಗಳ ಮೇಲೆ ಉಂಟಾಗುತ್ತದೆ ಎಂದು ಪ್ರತಿಭಟನಾ ನಿರತ ಎಲ್‌ಐಸಿ ಪ್ರತಿನಿಧಿಗಳು ಕಳವಳ ವ್ಯಕ್ತಪಡಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಚಿಕ್ಕಬಳ್ಳಾಪುರ ಶಾಖಾ ಅಧ್ಯಕ್ಷ ಎಂ.ಸೋಮಶೇಖರ್‌ ಮಾತನಾಡಿ, ಕೇಂದ್ರ ಸರ್ಕಾರ ಪಾಲಿಸಿದಾರರ ವಿಮಾ ಕಂತಿನ ಮೇಲೆ ಜಿಎಸ್‌ಟಿ ರದ್ದುಗೊಳಿಸಿ, ಪಾಲಿಸಿದಾರರ ಬೋನಸ್‌ ಹೆಚ್ಚಿಸಬೇಕು. ಐಆರ್‌ಡಿಎ ಪ್ರಕಾರ ಪ್ರತಿನಿಧಿಗಳ ಗ್ರೂಪ್‌ ಇನುÏರೆನ್ಸ್‌ ಮತ್ತು ಗ್ರಾಚ್ಯುಟಿಯನ್ನು ಹೆಚ್ಚಿಸಿ ಪ್ರತಿನಿಧಿಗಳ ಹಿತ ಕಾಯಬೇಕೆಂದರು.

ಪಾಲಿಸಿ ಮಾಡಿಸಲು ಹಿಂದೇಟು: ಈಗಾಗಲೇ ಐಆರ್‌ಡಿಎ ದೃಢೀಕರಿಸಿರುವ ಪ್ರತಿನಿಧಿಗಳ ಎಲ್ಲಾ ಬೇಡಿಕೆಗಳನ್ನು ಎಲ್‌ಐಸಿ ಆಡಳಿತ ಮಂಡಳಿ ಸಮರ್ಪಕವಾಗಿ ಜಾರಿಗೊಳಿಸಬೇಕೆಂದರು. ಎಲ್‌ಐಸಿ ನಂಬಿಕೊಂಡು ದೇಶದಲ್ಲಿ ಲಕ್ಷಾಂತರ ಪ್ರತಿನಿಧಿಗಳು ಇದ್ದಾರೆ. ಆದರೆ ಇತ್ತೀಚೆಗೆ ಹಲವು ನಿರ್ಧಾರಗಳು ಪ್ರತಿನಿಧಿಗಳ ವಾರ್ಷಿಕ ಗುರಿ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಪ್ರಮುಖವಾಗಿ ಜಿಎಸ್‌ಟಿ ವಿಧಿಸುತ್ತಿರುವುದರಿಂದ ಯಾರು ಪಾಲಿಸಿ ಮಾಡಿಸಲು ಮುಂದೆ ಬರುತ್ತಿಲ್ಲ ಎಂದರು. ಅನೇಕ ಬಾರಿ ಸಾಕಷ್ಟು ಹೋರಾಟ, ಧರಣಿ ನಡೆಸಿ ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಬೇಡಿಕೆಗಳು ಈಡೇರಿಲ್ಲ ಎಂದರು.

ಪ್ರತಿಭಟನೆಯಲ್ಲಿ ಎಲ್‌ಐಸಿ ಪ್ರತಿನಿಧಿಗಳ ಒಕ್ಕೂಟದ ಜಿಲ್ಲಾ ಕಾರ್ಯದರ್ಶಿ ಮೋಹನ್‌ಬಾಬು, ಖಜಾಂಚಿ ರಮೇಶ್‌ಗುಪ್ತಾ, ಸದಸ್ಯರಾದ ಟಿ.ಸಿ.ಲಕ್ಷ್ಮಣ್‌, ಗೌರಿಬಿದನೂರು ಮಂಜುನಾಥ್‌, ಬಾಗೇಪಲ್ಲಿ ಬೈಯ್ನಾರೆಡ್ಡಿ, ಸಿ.ಎಸ್‌.ನಾರಾಯಣ, ವೆಂಕಟೇಶ್‌ಪ್ರಸಾದ್‌, ವೆಂಕಟಶಿವಾರೆಡ್ಡಿ, ಬಿ.ಎನ್‌.ಗುರುರಾಜ್‌, ಶ್ರೀಕಾಂತ್‌, ಚಂದ್ರಕೀರ್ತಿ, ಎನ್‌.ರಾಮಚಂದ್ರರೆಡ್ಡಿ ಸೇರಿದಂತೆ ಅನೇಕ ಎಲ್‌ಐಸಿ ಪ್ರತಿನಿಧಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ನ್ಯಾಯಯುತವಾದ ಬೇಡಿಕೆಗಳು ಈಡೇರಿಸದಿದ್ದಲ್ಲಿ ಜ.18, 20 ರಂದು ಮತ್ತೂಮ್ಮೆ ಶಾಂತಿಯುತ ಪ್ರತಿಭಟಿನೆ ನಡೆಸಲಾಗುವುದು. ಅಷ್ಟರೊಳಗಾಗಿ ಎಲ್‌ಐಸಿ ಆಡಳಿತ ಮಂಡಳಿಯು ಪ್ರತಿನಿಧಿಗಳು ಮುಂದಿಟ್ಟಿರುವ ಬೇಡಿಕೆಗಳು ಈಡೇರದಿದ್ದ ಪಕ್ಷದಲ್ಲಿ ಜ.21 ರಂದು ದೇಶವ್ಯಾಪ್ತಿ ಎಲ್ಲಾ ಶಾಖೆಗಳಲ್ಲಿ ಹೊಸ ಪಾಲಿಸಿಗಳು, ರಿನಿವಲ್ಸ್‌ ಹಾಗೂ ಆ ದಿನದ ಎಲ್‌ಐಸಿ ಶಾಖೆಗಳ ಪೂರ್ಣ ವಹಿವಾಟನ್ನು ಸ್ಥಗಿತಗೊಳಿಸಿ ಧ‌ರಣಿ ನಡೆಸಲಾಗುವುದು.
-ವಿ.ರವೀಂದ್ರನಾಥ್‌, ಪ್ರತಿನಿಧಿಗಳ ಒಕ್ಕೂಟದ ವಿಭಾಗೀಯ ಅಧ್ಯಕ್ಷರು

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.