ಮಾವು, ದಾಳಿಂಬೆ, ದ್ರಾಕ್ಷಿಗೆ ಆಲಿಕಲ್ಲಿನೇಟು


Team Udayavani, May 22, 2023, 2:56 PM IST

tdy-12

ಚಿಕ್ಕಬಳ್ಳಾಪುರ: ಮುಂಗಾರು ಹಂಗಾಮಿನ ಹೊಸ್ತಿಲಲ್ಲಿರುವ ಜಿಲ್ಲೆಯ ರೈತರು ಮಳೆಗಾಗಿ ಎದುರು ನೋಡುತ್ತಿದ್ದ ಬೆನ್ನಲ್ಲೇ ಭಾನುವಾರ ಆಲಿಕಲ್ಲು ಸಹಿತ ಬಿದ್ದ ಭಾರೀ ಮಳೆ ದಾಳಿಂಬೆ, ದ್ರಾಕ್ಷಿ, ಮಾವು ಬೆಳೆಗೆ ಪೆಟ್ಟು ನೀಡಿದ್ದು ಅಪಾರ ನಷ್ಟ ಸಂಭವಿಸಿದೆ.

ಜಿಲ್ಲೆಯಲ್ಲಿ ಹಲವು ದಿನಗಳಿಂದ ಮೋಡ ಕವಿದ ವಾತಾವರಣ ಇತ್ತಾದರೂ ಮಳೆ ಬಿದ್ದಿರಲಿಲ್ಲ. ಜಿಲ್ಲೆಯ ಚಿಂತಾಮಣಿ, ಶಿಡ್ಲಘಟ್ಟ, ಬಾಗೇಪಲ್ಲಿ ಹಾಗೂ ಚಿಕ್ಕಬಳ್ಳಾಪುರ ತಾಲೂಕಿನ ಹಲವು ಭಾಗಗಳಲ್ಲಿ ಆಲಿಕಲ್ಲು ಸಹಿತ ಮಳೆ ಆಗಿರುವುದು ವಾಣಜ್ಯ ಬೆಳೆಗೆ ಸಾಕಷ್ಟು ಹಾನಿ ಮಾಡಿದೆ. ಜಿಲ್ಲಾದ್ಯಂತ ಜೂನ್‌ ಆರಂಭಕ್ಕೆ ಮುಂಗಾರು ಮಳೆ ಪ್ರವೇಶಿಸಲಿದ್ದು ಬಿತ್ತನೆ ಚಟುವಟಿಕೆಗೆ ರೈತರು ಸಿದ್ಧತೆ ನಡೆಸಿದ್ದಾರೆ. ಆದರೆ, ಜಿಲ್ಲೆಯಲ್ಲಿ ಆಲಿಕಲ್ಲು ಸಹಿತ ಆಕಾಲಿಕ ಮಳೆ ವಾಣಿಜ್ಯ ಬೆಳೆ ಬೆಳೆಯುವ ರೈತರನ್ನು ಸಂಕಷ್ಟಕ್ಕೀಡು ಮಾಡುತ್ತಿದೆ. ವಿಶೇಷವಾಗಿ ಇತ್ತೀಚಿನಲ್ಲಿ ಜಿಲ್ಲೆಯಲ್ಲಿ ವಾರ್ಷಿಕ ಬೆಳೆಗಳ ಬದಲಾಗಿ ವಾಣಿಜ್ಯ ಬೆಳೆಗಳ ಕಡೆ ರೈತರು ಹೆಚ್ಚು ಒಲವು ತೋರಿ ದ್ರಾಕ್ಷಿ, ದಾಳಿಂಬೆ, ಹೂ, ಹಣ್ಣು, ತರಕಾರಿ ಬೆಳೆಗಳನ್ನು ವ್ಯಾಪಕ ಪ್ರಮಾಣದಲ್ಲಿ ಬೆಳೆಯುತ್ತಿದ್ದಾರೆ.

ಹೂ, ಹಣ್ಣಿಗೂ ಹೊಡೆತ: ಚಿಕ್ಕ ಬಳ್ಳಾ ಪುರದಲ್ಲಿ ರಾತ್ರಿ ಸುರಿದ ಮಳೆಯಿಂದ ಅಪಾರ ಪ್ರಮಾಣದ ಹೂ, ಹಣ್ಣು, ತರಕಾರಿ ನೆಲ ಕಚ್ಚಿದೆ. ನಂದಿ ಹಾಗೂ ಕಸಬಾ ಹೋಬಳಿಯ ಹಲವು ಗ್ರಾಮಗಳಲ್ಲಿ ಬಿದ್ದ ಆಲಿಕಲ್ಲು ಸಹಿತ ಬಿರುಗಾಳಿ ಮಳೆ ತೋಟಗಳಲ್ಲಿನ ಹೂಗಳನ್ನು ಮಣ್ಣು ಪಾಲು ಮಾಡಿದೆ. ಇನ್ನೂ ಟೊಮೆಟೋ ಮತ್ತಿತರ ಬೆಳೆಗಳಿಗೂ ಮಳೆ ಕಾಟದ ಪರಿಣಾಮ ಹಲವು ರೋಗ ಕಾಣಿಸಿಕೊಳ್ಳುವ ಭೀತಿ ರೈತರಲ್ಲಿ ಆವರಿಸಿದೆ.

ನೆಲ ಕಚ್ಚುತ್ತಿದೆ ಮಾವು: ಮೊದಲೇ ಜಿಲ್ಲೆಯಲ್ಲಿ ಈ ವರ್ಷ ಹವಾಮಾನ ವೈಪರೀತ್ಯದ ಪರಿಣಾಮ ಮಾವು ಶೇ.30 ಮಾತ್ರ ಫ‌ಸಲು ಬಂದಿದೆ. ಈಗಷ್ಟೇ ಮಾವಿನ ಕಾಯಿಯನ್ನು ಬೆಳೆಗಾರರು ಕೊಯ್ಲು ಮಾಡಿ ಮಾರುಕಟ್ಟೆಗೆ ತರುವ ಕೆಲಸ ಮಾಡುತ್ತಿದ್ದಾರೆ. ಆದರೆ, ಶನಿವಾರ ಜಿಲ್ಲೆಯ ಹಲವು ಕಡೆ ಭಾರೀ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಬಿದ್ದಿರುವುದು ರೈತರನ್ನು ಆತಂಕಕ್ಕೀಡು ಮಾಡಿದೆ. ಆಲಿಕಲ್ಲು ಮಳೆ ಬಿದ್ದಷ್ಟು ಮಾವು ಗುಣಮಟ್ಟ ಕಳೆದುಕೊಳ್ಳಲಿದೆ. ಅದೇ ಪರಿಸ್ಥಿತಿ ಚಿಕ್ಕಬಳ್ಳಾಪುರದ ದ್ರಾಕ್ಷಿ ಬೆಳೆಗಾರರದ್ದಾಗಿದೆ. ಚಿಕ್ಕಬಳ್ಳಾಪುರದಲ್ಲಿ ದ್ರಾಕ್ಷಿ ಈಗಷ್ಟೇ ಗೊನೆ ಬಿಟ್ಟು ಕಾಯಿ ಗಟ್ಟಿಯಾಗುತ್ತಿದೆ.

ಬೆಳೆ ನಷ್ಟ ಪರಿಹಾರಕ್ಕೆ ಅಲೆದಾಟ: ಕಳೆದ ಫೆಬ್ರವರಿ, ಮಾರ್ಚ್‌ನಲ್ಲಿ ಬಿದ್ದ ಆಲಿಕಲ್ಲು ಸಹಿತ ಮಳೆಗೆ 100 ಹೆಕ್ಟೇರ್‌ಗೂ ಅಧಿಕ ಪ್ರಮಾಣದಲ್ಲಿ ಪಪ್ಪಾಯಿ, ದ್ರಾಕ್ಷಿ, ಹೂ, ಹಣ್ಣು ಮತ್ತಿತರ ವಾಣಿಜ್ಯ ಬೆಳೆಗೆ ತೀವ್ರ ಹಾನಿಯಾಗಿ 2 ಕೋಟಿ ರೂ.ಗೂ ಅಧಿಕ ಮೊತ್ತದ ಬೆಳೆ ನಷ್ಟ ಆಗಿತ್ತು. ತೋಟಗಾರಿಕಾ ಇಲಾಖೆ ಬೆಳೆ ನಷ್ಟ ರೈತರ ವಿವರ ಸರ್ಕಾರಕ್ಕೆ ಸಲ್ಲಿಸಿ ತಿಂಗಳೇಕಳೆದರೂ ಪರಿಹಾರ ಸಿಕ್ಕಿಲ್ಲ. ಬೆಳೆ ಕಳೆದುಕೊಂಡು ರೈತರು ತೋಟಗಾರಿಕಾ ಕಚೇರಿಗೆ, ಬ್ಯಾಂಕ್‌ಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಮಳೆಗೆ ಮುದುಡಿದ ಹಿಪ್ಪುನೇರಳೆ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನಲ್ಲಿ ಶನಿವಾರ ವ್ಯಾಪಕ ಆಲಿಕಲ್ಲು ಮಳೆ ಬಿದ್ದು ಅಪಾರ ಪ್ರಮಾಣದ ರೇಷ್ಮೆ ಕೃಷಿಗೆ ಬಳಸುವ ಹಿಪ್ಪುನೇರಳೆ ಸೊಪ್ಪು ಮುದುಡಿ ಹೋಗಿದೆ. ಇದರಿಂದ ರೇಷ್ಮೆಹುಳು ಸಾಕಾಣಿಕೆಗೆ ಮಳೆ ಅಡ್ಡಿಯಾಗಿದ್ದು ಗುಣಮಟ್ಟದ ರೇಷ್ಮೆ ಸೊಪ್ಪು ಸಿಗದೇ ರೈತರು ಇನ್ನಿಲ್ಲದ ರೀತಿ ತೊಂದರೆ ಅನುಭವಿಸುವಂತಾಗಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.