ಅಕ್ರಮ ಗಣಿಗಾರಿಕೆ: ಯಂತ್ರಗಳ ವಶ

Team Udayavani, Apr 22, 2019, 3:00 AM IST

akrama

ಬಾಗೇಪಲ್ಲಿ: ತಾಲೂಕಿನ ಗೂಳೂರು ಹೋಬಳಿ ಐವಾರ‌್ಲಪಲ್ಲಿ ಗ್ರಾಮದ ಬಳಿ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದಾರೆ ಎಂಬ ನಿಖರ ಮಾಹಿತಿ ಮೇರೆಗೆ ಶನಿವಾರ ಪೊಲೀಸ್‌ ಇಲಾಖೆಯ ಪಿಎಎಸ್‌ಐ ಪಿ.ಎಂ.ನವೀನ್‌ ಮತ್ತು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಆಶಾ ಅವರ ಜಂಟಿ ನೇತೃತ್ವದಲ್ಲಿ ದಾಳಿ ನಡೆಸಿ ಕ್ರೇನ್‌, ಟ್ರ್ಯಾಕ್ಟರ್‌, ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.

ಗೂಳೂರು ಗ್ರಾಮಕ್ಕೆ 5ಕಿ.ಮೀ ವ್ಯಾಪ್ತಿಯಲ್ಲಿ ದೇವನಹಳ್ಳಿಯ ಉದ್ಯಮಿಯೊಬ್ಬರು ಕಳೆದ 2 ವರ್ಷಗಳಿಂದ ಸರ್ಕಾರದಿಂದ ಪರವಾನಿಗೆ ಪಡೆಯದೆ ರಾಜಾರೋಷವಾಗಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದರು ಎನ್ನಲಾಗಿದೆ. ಇದರ ಮಾಹಿತಿ ಅಧಿಕಾರಿಗಳಿಗೆ ಗೊತ್ತಿದ್ದರೂ ಸ್ಥಳಕ್ಕೆ ಬಂದು ಕ್ರಮ ಜರುಗಿಸುತ್ತಿಲ್ಲ ಎಂಬ ಆರೋಪ ಕೇಳಿ ಬರುತ್ತಿತ್ತು.

ಬೆಳಗ್ಗೆ 11 ಗಂಟೆ ಸಮಯದಲ್ಲಿ ಖಾಸಗಿ ವಾಹನದಲ್ಲಿ ಗಣಿಗಾರಿಕೆ ನಡಸುತ್ತಿದ್ದ ಸ್ಥಳಕ್ಕೆ ತೆರಳಿ ದಾಳಿ ಮಾಡಿದಾಗ ಸ್ಥಳದಲ್ಲಿಯೇ ಇದ್ದ ಕೂಲಿಯಾಳುಗಳು ಪರಾರಿಯಾಗಿದ್ದಾರೆ. ಆ ಸ್ಥಳದಲ್ಲಿ ಮಾಲೀಕ ನಾಪತ್ತೆಯಾಗಿದ್ದ, ನಂತರ ಅಧಿಕಾರಿಗಳು ಗಣಿಗಾರಿಕೆಗೆ ಬಳಸುತ್ತಿದ್ದ ಟ್ರ್ಯಾಕ್ಟರ್‌, ಕ್ರೇನ್‌, ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲು ಮಾಡಿದ್ದಾರೆ.

ಅಕ್ರಮವಾಗಿ ನಡೆಸುತ್ತಿರುವ ಯಾವುದೇ ಗಣಿಗಾರಿಕೆಗೆ ಅವಕಾಶ ನೀಡಲ್ಲ. ಈಗ ಸದ್ಯಕ್ಕೆ ಗೂಳೂರು ಬಳಿ ನಡೆಸುತ್ತಿರುವ ಅಕ್ರಮ ಕ್ವಾರಿಯನ್ನು ಬಂದ್‌ ಮಾಡಿಸಲಾಗಿದೆ. ಪ್ರಕರಣ ದಾಖಲು ಮಾಡಲಾಗಿದ್ದು, ಇನ್ಮುಂದೆ ಗಣಿ ಮಾಫಿಯದವರ ಮೇಲೆ ಹದ್ದಿನ ಕಣ್ಣು ಇಡಲಾಗುವುದು ಎಂದು ಅಧಿಕಾರಿಗಳು ಹೇಳಿದರು.

ಈ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಆಶಾ ಪ್ರತಿಕ್ರಿಯಿಸಿ, ಐವಾರ‌್ಲಪಲ್ಲಿ ಗ್ರಾಮದ ಬಳಿ ಅಕ್ರಮವಾಗಿ ಕ್ವಾರಿ ನಡೆಸುತ್ತಿದ್ದಾರೆ ಎಂಬ ಮಾಹಿತಿ ಬಂದ ತಕ್ಷಣ ದಾಳಿ ಮಾಡಿ ಕೆಲ ಯಂತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದರು. ದಾಳಿಯಲ್ಲಿ ಮುಖ್ಯ ಪೇದೆ ಶಂಕರರೆಡ್ಡಿ, ನರಸಿಂಹಪ್ಪ, ಶ್ರೀಪತಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.