ಕೋವಿಡ್ 19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಾಲಕಿಯ ತೂಕದಲ್ಲಿ ಹೆಚ್ಚಳ

Team Udayavani, Jun 11, 2020, 5:12 PM IST

ಕೋವಿಡ್ 19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಾಲಕಿಯ ತೂಕದಲ್ಲಿ ಹೆಚ್ಚಳ

ಚಿಕ್ಕಬಳ್ಳಾಪುರ: ಕೋವಿಡ್-19‌ ‌ಪಾಸಿಟಿವ್ ಕಂಡು ಬಂದ ಹಿನ್ನೆಲೆಯಲ್ಲಿ ನಗರದ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಒಂದು ವರ್ಷದ‌ ಬಾಲಕಿ ಗುರುವಾರ ಸೋಂಕಿನಿಂದ ಸಂಪೂರ್ಣ ಚೇತರಿಕೆ ಕಂಡು ಡಿಸ್ಚಾರ್ಜ್ ಆಗಿದೆ. ಬಾಲಕಿಯ ಪೋಷಕರಲ್ಲಿ ಈ ಸಂತಸ ಒಂದಡೆಯಾದರೆ ಮತ್ತೊಂದಡೆ  ಮಗುವಿನ ತೂಕದಲ್ಲಿ ಹೆಚ್ಚಳವಾಗಿ ಗಮನ ಸೆಳೆದಿದ್ದಾಳೆ.

ಹೌದು, ಈ ಮೊದಲು ಅಪೌಷ್ಟಿಕತೆಯಿಂದ ಬಳಲುತ್ತಿದ್ದ ಕೋವಿಡ್-19 ಸೋಂಕಿತ ಬಾಲೆಯನ್ನು ಕೋವಿಡ್-19 ಆಸ್ಪತ್ರೆಯ ಐಸೋಲೆಷನ್ ವಾರ್ಡ್ ನಲ್ಲಿ ಕಳೆದ ಮೇ ತಿಂಗಳ 25 ರಂದು ಚಿಕಿತ್ಸೆಗೆ ದಾಖಲಿಸುವ ವೇಳೆ ಕೇವಲ 7.4 ಕೆಜಿ ತೂಕ ಇದ್ದಳು. ಇದೀಗ ಚಿಕಿತ್ಸೆ ಮುಗಿದು ಎರಡು ಬಾರಿ ನಡೆಸಿದ ಗಂಟಲು ದ್ರವ್ಯದ ಮಾದರಿ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದ್ದು ಗುರುವಾರ ಕೋವಿಡ್-19 ಆಸ್ಪತ್ರೆಯಿಂದ ಬಿಡುಗಡೆಯಾದ ಸಂದರ್ಭದಲ್ಲಿ ಬಾಲಕಿಯ ತೂಕ 8.4 ಕೆಜಿ ಹೆಚ್ಚಳವಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಮಕ್ಕಳ ತಜ್ಞರ ಸಲಹೆ, ಸೂಚನೆಯಂತೆ ಕೋವಿಡ್-19 ಸೋಂಕಿನಿಂದ ಬಳಲುತ್ತಿದ್ದ ಬಾಲಕಿಗೆ ಅಗತ್ಯ ಪೌಷ್ಟಿಕಾಹಾರ ನೀಡಲಾಗಿದ್ದು ಇದರಂತೆ ಬಾಲಕಿ ತೂಕದಲ್ಲಿ ಹೆಚ್ಚಳ ಕಂಡಿದೆ.

ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಸ್ಥಾಪಿಸಲಾಗಿರುವ ಮಕ್ಕಳಲ್ಲಿನ ಅಪೌಷ್ಟಿಕತೆ ತೊಲಗಿಸುವ ಘಟಕ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸತ್ತಾ ಇಡೀ ರಾಷ್ಟ್ರದ ಗಮನ ಸೆಳೆದಿದೆ.

ಸಾಮಾನ್ಯವಾಗಿ ಯಾವುದೇ ಸೋಂಕಿಗೆ ವ್ಯಕ್ತಿ ಅಥವ ಮಕ್ಕಳು ತುತ್ತಾದರೆ ಸೊರಗುವುದು ಸಾಮಾನ್ಯ. ಆದರೆ ಕೋವಿಡ್ ಸೋಂಕಿಗೆ ತುತ್ತಾಗಿದ್ದ ಒಂದು ವರ್ಷದ ಬಾಲಕಿಯ ತೂಕದಲ್ಲಿ‌ ಹೆಚ್ಚಳ ಆಗಿರುವುದು ಅವರ ಪೋಷಕರ ಸಂತಸಕ್ಕೆ ಕಾರಣವಾಗಿದೆ.

ಕೋವಿಡ್-19 ಸೋಂಕಿನಿಂದ ಸಂಪೂರ್ಣ ‌ಗುಣಮುಖರಾದ ಬಾಲೆಯನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗುವ ವೇಳೆ‌ ಜಿಲ್ಲಾಸ್ಪತ್ರೆಯ ಮಕ್ಕಳು ತಜ್ಞರು, ವೈದ್ಯಕೀಯ ಸಿಬ್ಬಂದಿ ವಿಶೇಷವಾಗಿ ಕೋವಿಡ್ ನಿಯಂತ್ರಣಕ್ಕೆ ಶ್ರಮಿಸುತ್ತಿರುವ ವೈದ್ಯರು ಉಪಸ್ಥಿತಿ ಇದ್ದು ಬಾಲಕಿಗೆ ಚಪ್ಪಾಳೆ ತಟ್ಟಿ ಶುಭ ಕೋರಿದರು.

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

High temperature: ಉರಿ ಬಿಸಿಲಿಗೆ ಹೈರಾಣ: ಮಳೆಗಾಗಿ ಕಾದ ಜನ!

Lok Sabha election: ಎಸ್ಸೆಸ್ಸೆಲ್ಸಿ, ಪಿಯುಸಿ ಓದಿರುವ ಅಭ್ಯರ್ಥಿಗಳೇ ಹೆಚ್ಚು!

Lok Sabha Elections 2024: 29 ಅಭ್ಯರ್ಥಿಗಳ ಸ್ಪರ್ಧೆ ಇದೇ ಮೊದಲು!

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.