ಇಂದಿರಾ ಕ್ಯಾಂಟೀನ್‌ ಅಪೂರ್ಣ


Team Udayavani, Jan 3, 2019, 9:30 AM IST

chikk-1.jpg

ಗುಡಿಬಂಡೆ: ಬಡವರಿಗೆ, ಕೂಲಿ ಕಾರ್ಮಿಕರಿಗೆ ಕಡಿಮೆ ದರದಲ್ಲಿ ಊಟ ನೀಡುವ ಉದ್ದೇಶದಿಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಜಾರಿ ಮಾಡಿದ್ದ ಮಹತ್ವಕಾಂಕ್ಷೆಯ ಇಂದಿರಾ ಕ್ಯಾಂಟೀನ್‌ ಯೋಜನೆ ರಾಜ್ಯದ ಹಲವೆಡೆ ಅನುಷ್ಠಾನಗೊಂಡು ಒಂದು ವರ್ಷ ಕಳೆದರೂ, ಗುಡಿ ಬಂಡೆ ತಾಲೂಕಿನಲ್ಲಿ ಕ್ಯಾಂಟೀನ್‌ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ.

ಪಟ್ಟಣದ ತಾಲೂಕು ಕಚೇರಿಗೆ ತಾಲೂಕಿನ ವಿವಿಧ ಹಳ್ಳಿಗಳಿಂದ ಸಹಸ್ರಾರು ಜನರು ತಮ್ಮ ಕೆಲಸ ಕಾರ್ಯ ನಿಮಿತ್ತ ಆಗಮಿಸುವವರಿಗೆ ಹಾಗೂ ಕೂಲಿ, ಕಾರ್ಮಿಕರಿಗೆ ಸಾರ್ವಜನಿಕರಿಗೆ ಅನು ಕೂಲವಾಗಲಿ ಎಂಬ ನಿಟ್ಟಿನಲ್ಲಿ ತಾಲೂಕು ಕಚೇರಿಯ ಮುಂಭಾಗದಲ್ಲಿ ಮಹತ್ವಕಾಂಕ್ಷೆಯ ಇಂದಿರಾ ಕ್ಯಾಂಟೀನ್‌ ನಿರ್ಮಿಸಲು ಯೋಜನೆ ರೂಪಿಸಲಾಗಿದ್ದು, ವಿಪರ್ಯಾಸ ಎಂದರೆ ಕ್ಯಾಂಟೀನ್‌ ಕೆಲಸ ಪ್ರಾರಂಭವಾಗಿ 5 ತಿಂಗಳು ಕಳೆದರೂ ಗುತ್ತಿಗೆದಾರರ ನಿರ್ಲಕ್ಷ್ಯ ದಿಂದಾಗಿ ಇನ್ನೂ ಪೂರ್ಣಗೊಂಡಿಲ್ಲದಿರುವುದು ಸಾರ್ವಜನಿ ಕರ ಆಕ್ರೋಶಕ್ಕೆ ಕಾರಣವಾಗಿದೆ. ಪಟ್ಟಣದಲ್ಲಿ ಕ್ಯಾಂಟೀನ್‌ ಉದ್ಘಾಟನೆ ಯಾವಾಗ ಎಂಬು ವುದರ ನಿರೀಕ್ಷೆಯಲ್ಲಿ ಬಡವರು, ಕೂಲಿ ಕಾರ್ಮಿಕರು, ಸಾರ್ವಜನಿಕರು ಎದುರು ನೋಡುತ್ತಿದ್ದಾರೆ.

ಗುಡಿಬಂಡೆ ಹಿಂದುಳಿದ ತಾಲೂಕು ಎಂಬ ಹಣೆಪಟ್ಟಿ ಕಟ್ಟಿಕೊಂಡಿದ್ದು, ಜನರು ನೀರಿನ ಸಮಸ್ಯೆ ಹಾಗೂ ಮೂಲಸೌಕರ್ಯಗಳ ಕೊರತೆಯಿಂದ ತತ್ತರಿಸುತ್ತಿದ್ದಾರೆ. ಇತ್ತ ಕಡಿಮೆ ಹಣಕ್ಕೆ ಊಟ ಮಾಡುವ ಕನಸು ನನಸಾಗದಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಮಾತ್ರ ಪೂರ್ಣ: ಜಿಲ್ಲೆಗೆ ಒಟ್ಟು 6 ಇಂದಿರಾ ಕ್ಯಾಂಟೀನ್‌ ಮುಂಜೂರಾಗಿದ್ದು, ಚಿಕ್ಕಬಳ್ಳಾಪುರ ನಗರ ದಲ್ಲಿ ಮಾತ್ರ ಕ್ಯಾಂಟೀನ್‌ ನಿರ್ಮಾಣ ಕಾರ್ಯ ಮುಗಿ  ದಿದ್ದು, ಗುಡಿಬಂಡೆಯಲ್ಲಿ ಮರೀಚಿಕೆಯಾಗಿದೆ. ಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿ ನಿರ್ಮಾಣ ಹಂತದಲ್ಲಿರುವ ಇಂದಿರಾ ಕ್ಯಾಂಟೀನ್‌ ಕಾಮಗಾರಿ ಸ್ಥಗಿತಗೊಂಡು ಅನೇಕ ತಿಂಗಳುಗಳೇ ಕಳೆದರೂ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಇತ್ತ ಸುಳಿದಿಲ್ಲ. ಯಾವಾಗ ಮುಗಿಯುತ್ತದೆಯೋ ಎಂಬುದು ತಿಳಿಯದಾಗಿದೆ.

ಟ್ರಂಜ್‌ ಮುಚ್ಚದಿರುವುದು: ಕ್ಯಾಂಟೀನ್‌ ನಿರ್ಮಾಣದ ಸುತ್ತ ಕಾಂಪೌಂಡ್‌ ಕಟ್ಟಲು ದೊಡ್ಡದಾಗಿ ಟ್ರಂಜ್‌ ಅಗೆದಿದ್ದು, ಮುಚ್ಚದೆ ಹಾಗೇ ಬಿಟ್ಟಿರುವುದರಿಂದ ಮೃತ್ಯುಕೂಪವಾಗಿ ಪರಿಣಮಿಸಿದೆ. ಅನಾಹುತಗಳು ಸಂಭವಿಸುವ ಮುನ್ನ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ. 

ಹಾಳಾಗುತ್ತಿರುವ ವಸ್ತುಗಳು: ವಿಪರ್ಯಾಸ ಎಂದರೆ ಕ್ಯಾಂಟೀನ್‌ಗೆ ಬಂದಿರುವ ಅನೇಕ ವಸ್ತುಗಳು, ಸಾಮಗ್ರಿಗಳು ಹಲವು ತಿಂಗಳಿನಿಂದ ಧೂಳು ಹಿಡಿಯುತ್ತಿದ್ದು, ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಹಾಳಾಗಿ ಹೋಗುತ್ತಿದ್ದರೂ ಸಂಬಂಧಪಟ್ಟವರು ಕಣ್ಮುಚ್ಚಿ ಕುಳಿತ್ತಿದ್ದಾರೆ.  ಚುನಾವಣೆ ಪ್ರಕ್ರಿಯೆ ಮುಗಿದು ಹೊಸ ಸಮ್ಮಿಶ್ರ ಸರ್ಕಾರ ಆಡಳಿತಕ್ಕೆ ಬಂದು ಆರು ತಿಂಗಳು ಗತಿಸಿದರೂ ಕಾಮಗಾರಿಗೆ ಮುಕ್ತಿ ಸಿಕ್ಕಿಲ್ಲ. ಇನ್ನಾದ್ರೂ ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಯೋಜನಾಧಿಕಾರಿಗಳು ಇಂದಿರಾ ಕ್ಯಾಂಟೀನ್‌ ಗೆ ಉದ್ಘಾಟನೆ ಭಾಗ್ಯ ತಂದುಕೊಡ್ತರಾ ಎಂಬುದನ್ನು ಕಾದು ನೋಡಬೇಕಿದೆ.

ಗುಡಿಬಂಡೆ ಪಟ್ಟಣದ ಕಚೇರಿ ಆವರಣದಲ್ಲಿ ಇಂದಿರಾ ಕ್ಯಾಂಟೀನ್‌ ನಿರ್ಮಾಣ ಕಾರ್ಯ ವಿಳಂಬವಾಗಿದೆ. ಪಟ್ಟಣ ಪಂಚಾಯಿತಿ ವತಿಯಿಂದ ಕಾಂಪೌಂಡ್‌ ನಿರ್ಮಾಣ ಮತ್ತು ಸಿಸಿಟಿವಿ ಅಳವಡಿಕೆ ಕಾಮಗಾರಿ ನಡೆಯಬೇಕಿದ್ದು, ಟೆಂಡರ್‌ ಕರೆಯಲಾಗಿದೆ. ಗುತ್ತಿಗೆದಾರರಿಗೆ ಆದೇಶ ವರ್ಕ್‌ ಆರ್ಡರ್‌ ನೀಡಬೇಕಿದೆ.
 ನಾಗರಾಜ್‌, ಪಪಂ ಮುಖ್ಯಧಿಕಾರಿ ಗುಡಿಬಂಡೆ

ಇಂದಿರಾ ಕ್ಯಾಂಟೀನ್‌ ಕಾಮಗಾರಿ ಆರಂಭಗೊಂಡು ಐದು ತಿಂಗಳು ಕಳೆದರೂ ಇನ್ನೂ ಪೂರ್ಣಗೊಂಡಿಲ್ಲ. ಸಂಬಂಧಪಟ್ಟ
ಅಧಿಕಾರಿಗಳು, ಜನಪ್ರತಿನಿಧಿಗಳು ಕಂಡು ಕಾಣದಂತೆ ಜಾಣಕುರುಡುತನ ಪ್ರದರ್ಶಿಸುತ್ತಿದ್ದಾರೆ. ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು.
 ನವೀನ್‌ ಗರುಡಾಚಾರ‌್ಲಹಳ್ಳಿ,  ಕರವೇ, ತಾಲೂಕು ಅಧ್ಯಕ್ಷ ಗುಡಿಬಂಡೆ

ಟಾಪ್ ನ್ಯೂಸ್

Minister Sunil kumar

ಟಿಪ್ಪು ಆದರ್ಶ ಪ್ರತಿಪಾದಕರಿಂದ ನಾರಾಯಣ ಗುರುಗಳಿಗೆ ಅವಮಾನ: ಸಿದ್ದು ವಿರುದ್ಧ ಸುನಿಲ್ ಆಕ್ರೋಶ

cm-bomm

ನೈಟ್ ಕರ್ಫ್ಯೂ ಸಡಿಲಿಕೆ : ಇಕ್ಕಟ್ಟಿನಲ್ಲಿ ಸಿಎಂ,ಬೆಂಬಲಕ್ಕೆ ಅಶೋಕ್

ಗೋರಖ್ ಪುರ್ ಕ್ಷೇತ್ರ: ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಚಂದ್ರಶೇಖರ್ ಆಜಾದ್ ಕಣಕ್ಕೆ

ಗೋರಖ್ ಪುರ್ ಕ್ಷೇತ್ರ: ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಚಂದ್ರಶೇಖರ್ ಆಜಾದ್ ಕಣಕ್ಕೆ

ಎಸ್ಎಸ್ಎಲ್ ಸಿ ಪ್ರಿಪರೇಟರಿ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ

ಎಸ್ಎಸ್ಎಲ್ ಸಿ ಪ್ರಿಪರೇಟರಿ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ

renukaacharya

ಯತ್ನಾಳ್ ಭೇಟಿಯಾದ ರೇಣುಕಾಚಾರ್ಯ: ಕಾಲ ಬಂದರೆ ವರಿಷ್ಠರ ಭೇಟಿ

babar azam

ವರ್ಷದ ಏಕದಿನ ತಂಡ ಪ್ರಕಟಿಸಿದ ಐಸಿಸಿ: ಭಾರತೀಯರಿಗೆ ಸ್ಥಾನವಿಲ್ಲ! ಬಾಬರ್ ಗೆ ನಾಯಕತ್ವ

12arrest

ಸಂಕೇಶ್ವರ: ಮಹಿಳೆಯ ಶೂಟೌಟ್ ಪ್ರಕರಣ:  ಪುರಸಭೆ ಸದಸ್ಯನ ಬಂಧನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2,054 ಮನೆಗೆ ಉಚಿತ ವಿದ್ಯುತ್‌ ಭಾಗ್ಯ!

2,054 ಮನೆಗೆ ಉಚಿತ ವಿದ್ಯುತ್‌ ಭಾಗ್ಯ!

ಅಕ್ರಮ ಗ್ಯಾಸ್‌ ರಿಫಿಲ್ಲಿಂಗ್‌: ಸಿಲಿಂಡರ್‌ಗಳ ವಶ

ಅಕ್ರಮ ಗ್ಯಾಸ್‌ ರಿಫಿಲ್ಲಿಂಗ್‌: ಸಿಲಿಂಡರ್‌ಗಳ ವಶ

ನಗರ ಸ್ಥಳೀಯ ಸಂಸ್ಥೆಗಳಿಗೆ ಶುಕ್ರದೆಸೆ

ನಗರ ಸ್ಥಳೀಯ ಸಂಸ್ಥೆಗಳಿಗೆ ಶುಕ್ರದೆಸೆ

ಫೆ.27ಕ್ಕೆ ಪೋಲಿಯೋ ಲಸಿಕಾ ಅಭಿಯಾನ

ಫೆ.27ಕ್ಕೆ ಪೋಲಿಯೋ ಲಸಿಕಾ ಅಭಿಯಾನ

ಕೊರೊನಾ ಕರಿನೆರಳಲ್ಲೇ ಸಂಕ್ರಾಂತಿ ಆಚರಣೆ

ಕೊರೊನಾ ಕರಿನೆರಳಲ್ಲೇ ಸಂಕ್ರಾಂತಿ ಆಚರಣೆ

MUST WATCH

udayavani youtube

ಚಿಂಚೋಳಿ ಜನರ ನಿದ್ದೆಗೆಡಿಸಿದ ಕಳ್ಳರು : ಮತ್ತೆ ಎರಡು ಅಂಗಡಿಗೆ ನುಗ್ಗಿ ಕಳ್ಳತನ

udayavani youtube

ನಲಪಾಡ್ ಹಲ್ಲೆ ವಿಚಾರ, ಸಿದ್ದು ಹಳ್ಳೇಗೌಡ ಹೇಳಿದ್ದೇನು ?

udayavani youtube

24 ಅಡಿ ಎತ್ತರದ ಸೈಕಲ್ ತಯಾರಿಸಿ ರೈಡ್ ಮಾಡಿದ ವ್ಯಕ್ತಿ

udayavani youtube

ನೆಲಕಡಲೆಯ ಕೃಷಿಯಲ್ಲಿ ಯಶಸ್ವಿ ಕಂಡ ರೈತ

udayavani youtube

ಕರ್ಫ್ಯೂ ತೆಗೆಯಿರಿ : ತಮ್ಮ ಸರಕಾರದ ವಿರುದ್ಧವೇ ಗರ್ಜಿಸಿದ ಸಿಂಹ

ಹೊಸ ಸೇರ್ಪಡೆ

Minister Sunil kumar

ಟಿಪ್ಪು ಆದರ್ಶ ಪ್ರತಿಪಾದಕರಿಂದ ನಾರಾಯಣ ಗುರುಗಳಿಗೆ ಅವಮಾನ: ಸಿದ್ದು ವಿರುದ್ಧ ಸುನಿಲ್ ಆಕ್ರೋಶ

ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್‌ ಪ್ರಕರಣ :  ಶಾಲೆಗೆ ರಜೆ ಘೋಷಿಸಲು ಪೋಷಕರ ಒತ್ತಾಯ

ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್‌ ಪ್ರಕರಣ :  ಶಾಲೆಗೆ ರಜೆ ಘೋಷಿಸಲು ಪೋಷಕರ ಒತ್ತಾಯ

ಜಿಲೆಯಲ್ಲಿ 4 ಸಾವಿರ ಗಡಿದಾಟಿದ ಸಕ್ರೀಯ ಪ್ರಕರಣ : ಜನರಲ್ಲಿ ಆತಂಕ

ಜಿಲೆಯಲ್ಲಿ 4 ಸಾವಿರ ಗಡಿದಾಟಿದ ಸಕ್ರೀಯ ಪ್ರಕರಣ : ಜನರಲ್ಲಿ ಆತಂಕ

cm-bomm

ನೈಟ್ ಕರ್ಫ್ಯೂ ಸಡಿಲಿಕೆ : ಇಕ್ಕಟ್ಟಿನಲ್ಲಿ ಸಿಎಂ,ಬೆಂಬಲಕ್ಕೆ ಅಶೋಕ್

ಗೋರಖ್ ಪುರ್ ಕ್ಷೇತ್ರ: ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಚಂದ್ರಶೇಖರ್ ಆಜಾದ್ ಕಣಕ್ಕೆ

ಗೋರಖ್ ಪುರ್ ಕ್ಷೇತ್ರ: ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಚಂದ್ರಶೇಖರ್ ಆಜಾದ್ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.