ಬೀಗ ರಿಪೇರಿ ಮಾಡುವರನ್ನು ಕರೆಸಿ ದೇವರ ಕೋಣೆ ಲಾಕರ್ ಒಡೆದ ಐಟಿ ಅಧಿಕಾರಿಗಳು!

Team Udayavani, Oct 10, 2019, 2:55 PM IST

ಚಿಕ್ಕಬಳ್ಳಾಪುರ: ನಗರದ ಪ್ರಶಾಂತ ನಗರದಲ್ಲಿ ವಾಸವಾಗಿರುವ ಮಾಜಿ ಕೇಂದ್ರ ಸಚಿವ ಆರ್.ಎಲ್.ಜಾಲಪ್ಪ ಸಂಬಂಧಿ ಜಿ.ಹೆಚ್.ನಾಗರಾಜ್ ಮನೆ ಮೇಲೆ ದಾಳಿ ನಡೆಸಿ ತೀವ್ರ ಶೋಧ ಕಾರ್ಯ ಮಾಡುತ್ತಿರುವ ಆದಾಯ ತೆರಿಗೆ ಅಧಿಕಾರಿಗಳು ಮನೆಯಲ್ಲಿರುವ ದೇವರ ಕೊಣೆಯಲ್ಲಿ ಶೋಧ ಕಾರ್ಯ ನಡೆಸುವ ಮೂಲಕ ಜಾಲಪ್ಪ ಕುಟುಂಬಕ್ಕೆ ಶಾಕ್ ಕೊಟ್ಟಿದೆ.

ಬೆಂಗಳೂರಿನಿಂದ ಎರಡು ತಂಡಗಳಲ್ಲಿ ಮೂರು ಕಾರುಗಳಲ್ಲಿ ಆಗಮಿಸಿರುವ ಐಟಿ ಅಧಿಕಾರಿಗಳು ಕೋಲಾರದ ಮೆಡಿಕಲ್ ಕಾಲೇಜು ಕಾರ್ಯದರ್ಶಿಯು ಆಗಿರುವ ಜಿ.ಹೆಚ್.ನಾಗರಾಜ್ ಮನೆಯನ್ನು ಇಂಚಿಂಚು ಬಿಡದೇ ಶೋಧ ನಡೆಸಿದ್ದಾರೆ. ಇದರ ನಡುವೆ ನಾಗರಾಜ್ ಮನೆಯ ದೇವರ ಕೊಣೆಯನ್ನು ಪರಿಶೀಲನೆ ನಡೆಸುತ್ತಿರುವ ಅಧಿಕಾರಿಗಳು, ಮನೆಗೆ ಬೀಗ ರಿಪೇರಿ ಮಾಡುವರನ್ನು ಕರೆಸಿ ದೇವರ ಮನೆಯಲ್ಲಿನ ಲಾಕರ್ ಹೊಡೆದು ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.

ಮನೆ ಸುತ್ತವರೆದ ಅಧಿಕಾರಿಗಳು

ಪೂರ್ವತಯಾರಿ ಮಾಡಿಕೊಂಡು ದಾಳಿ ನಡೆಸಿರುವ ಐಟಿ ಅಧಿಕಾರಿಗಳು ಕೋಲಾರ, ದೊಡ್ಡಬಳ್ಳಾಪುರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಂಸದ ಆರ್.ಎಲ್.ಜಾಲಪ್ಪ ಸಂಬಂಧಿಕರ ಮನೆ. ಕಾಲೇಜುಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ಚಿಕ್ಕಬಳ್ಳಾಪುರದಲ್ಲಿ ಹೆಚ್.ನಾಗರಾಜ್ ಮನೆಯನ್ನು ಐಟಿ ಅಧಿಕಾರಿಗಳು ಸಂಪೂರ್ಣ ಸುತ್ತವರೆದು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಸಮಸ್ಯೆ ಯಾವುದೇ ಇರಲಿ, ಇಷ್ಟಾರ್ಥ ಕಾರ್ಯವಿರಲಿ, ಕೇವಲ 5 ದಿನಗಳಲ್ಲಿ ಪರಿಹಾರಕ್ಕಾಗಿ ಇಂದೇ ಭೇಟಿ ನೀಡಿ
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ