ಪ್ರಭು ಚೌಹಾಣ್‌ ಸಂಪುಟದಿಂದ ಕೈಬಿಡಿ: ಪ್ರತಿಭಟನೆ

Team Udayavani, Sep 18, 2021, 3:50 PM IST

prabhu-chowhan

ಚಿಂತಾಮಣಿ: ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್‌ ಪರಿಶಿಷ್ಟರ ವಿರೋಧಿ ಆಗಿದ್ದು, ಕೂಡಲೇ ಸಂಪುಟದಿಂದ ಕೈಬಿಡಬೇಕು ಹಾಗೂ ನ್ಯಾ.ಎ.ಜೆ. ಸದಾಶಿವ ಆಯೋಗ ಸಲ್ಲಿಸಿದ ವರದಿ ಅಧಿವೇಶನದಲ್ಲಿ ಅಂಗೀಕರಿಸಲು ಒತ್ತಾಯಿಸಿ ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿ ತಾಲೂಕು ಕಚೇರಿ ಮುಂಭಾಗ ಪ್ರತಿಭಟಿಸಿತು.

ಈ ವೇಳೆ ಉಪವಿಭಾಗಾಧಿಕಾರಿ ರಘುನಂದನ್‌, ತಹಶೀಲ್ದಾರ್‌ ಡಿ.ಹನುಮಂತ ರಾಯಪ್ಪ ಅವರ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು.

ಈ ವೇಳೆ ದಂಡೋರ ಜಿಲ್ಲಾಧ್ಯಕ್ಷ ಎಂ.ವಿ.ರಾಮಪ್ಪ ಮಾತನಾಡಿ, ಪರಿಶಿಷ್ಟ ಜಾತಿ, ಪಂಗಡದವರಿಗೆ ಸಂವಿಧಾನಾತ್ಮಕ, ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ, ಎಲ್ಲಾ ರಂಗದಲ್ಲೂ ಸಮಾನ ಅವಕಾಶ ಒದಗಿಸಬೇಕು, ಪರಿಶಿಷ್ಟ ಜಾತಿಯಲ್ಲಿ ನೂರ ಒಂದು ಜಾತಿಗಳಿವೆ, ರಾಜಕೀಯ, ಶೈಕ್ಷಣಿಕವಾಗಿ ಸಮಾನ ಹಕ್ಕುಗಳು ಬರಬೇಕು ಎಂದು ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗ ವರದಿ 2012ರಲ್ಲಿ ಸಲ್ಲಿಕೆ ಆಗಿದೆ, ಇದುವರೆಗೂ ಜಾರಿ ಮಾಡದೆ ಆಡಳಿತ ಸರ್ಕಾರಗಳು ಮೀನಮೇಷ ಎಣಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇತ್ತೀಚಿನ ದಿನಗಳಲ್ಲಿ ಮೀಸಲಾತಿ ಲಾಭ ಪಡೆಯುತ್ತಿರುವ ಕೆಲವು ಸಚಿವರು, ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್‌ ಅವಹೇಳನಕಾರಿ ಹೇಳಿಕೆ ನೀಡಿ ಸರ್ಕಾರ ಮತ್ತು ಸಾರ್ವಜನಿಕವಾಗಿ ಪರಿಶಿಷ್ಟರನ್ನು ಅವಮಾನ ಮಾಡುತ್ತಿದ್ದಾರೆ. ಸದಾಶಿವ ಆಯೋಗದ ವರದಿ ಅಂಗೀಕಾರ ಮಾಡಲು ಅಡ್ಡಿ ಮಾಡುತ್ತಿದ್ದಾರೆ ಎಂದು ಹೇಳಿದರು. ಇವರನ್ನು ಕೂಡಲೇ ಸಚಿವ ಸಂಪುಟದಿಂದ ಕೈ ಬಿಡದೇ ಇದ್ದರೆ ಮುಂದಿನ ದಿನಗಳಲ್ಲಿ ಮಾದಿಗ ದಂಡೋರ ರಾಜ್ಯಾದ್ಯಂತ ಹೋರಾಟ ಮಾಡುತ್ತದೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ರಾಜ್ಯ ಉಪಾಧ್ಯಕ್ಷ ಪಿ.ಎಂ.ನರಸಿಂಹ  ಯ್ಯ, ತಾಲೂಕಾಧ್ಯಕ್ಷ ಕೆ.ಗುರುಪ್ರಸಾದ್‌, ಪ್ರಧಾನ ಕಾರ್ಯದರ್ಶಿ ನಾರಾಯಣಸ್ವಾಮಿ, ತಾಲೂಕು ಉಪಾಧ್ಯಕ್ಷ ಸೂಲದೇನಹಳ್ಳಿ ವೆಂಕಟಾರಾಯಪ್ಪ, ಅಫ‌ರ್‌ ಪಾಷ, ಕೃಷ್ಣಪ್ಪ, ಮುನಿಸ್ವಾಮಿ, ರಮೇಶ್‌ ಕೊತ್ತೂರು ಇತರರಿದ್ದರು.

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.