ಕಾರ್ಮಿಕರ ಹಕ್ಕುಗಳಿಗೆ ಕಾನೂನು ಬಲ: ನ್ಯಾ.ಕೋರಡ್ಡಿ

Team Udayavani, May 2, 2019, 3:00 AM IST

karmikara

ಚಿಕ್ಕಬಳ್ಳಾಪುರ: ದೇಶದಲ್ಲಿಂದು ಕಾರ್ಮಿಕರಿಗೆ ಮೊದಲಿನಂತೆ ಮಾಲೀಕರ ಶೋಷಣೆ, ದಬ್ಟಾಳಿಕೆ ಇಲ್ಲ. ಕನಿಷ್ಟ ವೇತನ ಕಾನೂನು ಜಾರಿಯಿಂದ ಕಾರ್ಮಿಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ಪಡೆಯುವ ಕಾನೂನುಗಳ ಬಲ ಇದ್ದು, ಬಸವಣ್ಣನವರು ಹೇಳಿರುವಂತೆ ಕಾಯಕವೇ ಕೈಲಾಸ ಎಂಬುದನ್ನು ಅರ್ಥ ಮಾಡಿಕೊಂಡು ಕಾರ್ಮಿಕರು ದುಡಿದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶ ಎಸ್‌.ಎಚ್‌.ಕೋರಡ್ಡಿ ತಿಳಿಸಿದರು.

ನಗರದ ಹೊರ ವಲಯದ ಕೈಐಎಡಿಬಿ ವಲಯದ ಟೈಟಾನ್‌ ಕಂಪನಿ ಆವರಣದಲ್ಲಿ ಬುಧವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಕಾರ್ಮಿಕ ಇಲಾಖೆ ಮತ್ತು ಟೈಟಾನ್‌ ಕಂಪನಿ ಲಿಮಿಟೆಡ್‌ ಐವೇರ್‌ ಡಿವಿಷನ್‌ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಮಿಕರ ಶ್ರಮ ಅಪಾರ: ಕಾರ್ಮಿಕರ ನೆರವಿಲದೇ ದೇಶದಲ್ಲಿನ ಯಾವುದೇ ಕ್ಷೇತ್ರವು ಸರ್ವಾಂಗೀಣ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ. ಕಾರ್ಮಿಕರು ಇಲ್ಲದ ದೇಶವನ್ನು ನಾವು ಊಹಿಸಿಕೊಳ್ಳಲು ಕೂಡ ಸಾಧ್ಯವಿಲ್ಲ. ದೇಶದ ಆರ್ಥಿಕ, ಸಾಮಾಜಿಕ ಕ್ಷೇತ್ರಗಳ ಪ್ರಗತಿಯಲ್ಲಿ ಕಾರ್ಮಿಕರ ಶ್ರಮ ಅಪಾರವಾಗಿದೆ ಎಂದರು.

ಕಾರ್ಯಕ್ರಮ ರೂಪಿಸಬೇಕಿದೆ: ಸಮಾಜದಲ್ಲಿ ಅಸಂಘಟಿತ ಕಾರ್ಮಿಕರ ಸಂಖ್ಯೆ ಹೆಚ್ಚಾಗಿದೆ. ಸಮರ್ಪಕವಾಗಿ ಕಾನೂನು ಅರಿವು ಇಲ್ಲದೇ ಅವರಿಗೆ ಸಂವಿಧಾನ ಬದ್ಧವಾಗಿ ಸಿಗಬೇಕಾದ ಹಕ್ಕುಗಳು ಇನ್ನೂ ಸಿಗುತ್ತಿಲ್ಲ. ಕಾರ್ಮಿಕರ ಹಕ್ಕುಗಳ ಹಾಗೂ ಅವರಿಗೆ ಸಿಗುವ ಸೌಲಭ್ಯಗಳ ಬಗ್ಗೆ ಕಾರ್ಮಿಕ ಇಲಾಖೆ ಇನ್ನುಷ್ಟು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ರೂಪಿಸಬೇಕಿದೆ ಎಂದರು.

ಸಮಾಜದಲ್ಲಿ ಕಾರ್ಮಿಕರ ಶಕ್ತಿ ಆಗಾದವಾದದ್ದು. ಮಾಲೀಕರು ಕೂಡ ಅವರ ದುಡಿಮಗೆ ತಕ್ಕ ಕೂಲಿ ಕೊಡಬೇಕಿದೆ. ಕಾರ್ಮಿಕರ ಬದುಕು ಚೆನ್ನಾಗಿದ್ದಾರೆ ಮಾತ್ರ ಮಾಲೀಕರ ಉದ್ದಾರ ಆಗುತ್ತಾರೆ. ಆದ್ದರಿಂದ ಕಾರ್ಮಿಕರಿಗೆ ಸಿಗಬೇಕಾದ ಎಲ್ಲಾ ರೀತಿಯ ಸೌಲಭ್ಯಗಳನ್ನು ಕೈಗಾರಿಕೆಗಳ ಮಾಲೀಕರು ವಂಚಿಸದೇ ಕೊಡಬೇಕಿದೆ ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಎಚ್‌.ದೇವರಾಜ್‌ ಮಾತನಾಡಿ, ರೈತರಷ್ಟೇ ಕಾರ್ಮಿಕರು ಕೂಡ ದೇಶದ ಬೆನ್ನಲುಬಾಗಿದ್ದಾರೆ. ಆದರೆ ನಾವು ಎಲ್ಲಿ ಕೂಡ ಕಾರ್ಮಿಕರು ದೇಶದ ಬೆನ್ನಲುಬು ಎನ್ನುವುದಿಲ್ಲ. ದೇಶದ ಪ್ರಗತಿಗೆ ಭುನಾದಿಯಾಗಿರುವ ಕಾರ್ಮಿಕರನ್ನು ಸಮಾಜ ಕಡೆಗಣಿಸಬಾರದು ಎಂದರು.

ಅಭದ್ರತೆಯಲ್ಲಿ ಜೀವನ: ನಾಗರಿಕ ಸಮಾಜದ ಪ್ರಗತಿಗೆ ಕಾರಣವಾಗಿರುವ ಕಾರ್ಮಿಕರ ಬದುಕು ಕೂಡ ಹಸನಾಗಬೇಕಿದೆ. ಕಾರ್ಮಿಕರು ಯಾವುದೇ ಮೋಸ, ವಂಚನೆ, ಅನ್ಯಾಯ, ಅಕ್ರಮಗಳಲ್ಲಿ ತೊಡಗಿಸಿಕೊಳ್ಳದೇ ಇತರರಿಗೆ ಮಾದರಿಯಾಗಿ ಸ್ವಂತ ದುಡಿಮೆಯಲ್ಲಿ ಸ್ವಾವಲಂಬಿಗಳಾಗಿ ಬದುಕುತ್ತಿದ್ದಾರೆ. ಕಾರ್ಮಿಕರ ಶ್ರಮ, ದುಡಿಮೆ ಇತರರಿಗೆ ಮಾದರಿಯಾಬೇಕಿದೆ ಎಂದರು.

ಇಂದಿಗೂ ದೇಶದ ಕಾರ್ಮಿಕರ ಸ್ಥಿತಿ ಬದಲಾಗಿಲ್ಲ. ಲಕ್ಷಾಂತರ ಕಾರ್ಮಿಕ ಕುಟುಂಬಗಳ ಅಭದ್ರತೆಯಲ್ಲಿ ಜೀವನ ನಡೆಸುತ್ತಿವೆ. ಕಾನೂನು ಅರಿವು ಪಡೆದು ಸರ್ಕಾರಗಳು ರೂಪಿಸಿರುವ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳನ್ನು ಸದ್ಬಳಕೆ ಮಾಡಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದರು.

ಜಿಲ್ಲಾ ಕಾರ್ಮಿಕ ಇಲಾಖೆ ನಿರೀಕ್ಷಕ ಎಚ್‌.ಎಂ.ಸೋಮಶೇಖರ್‌ ಮಾತನಾಡಿ, ಕಾರ್ಮಿಕರ ಕಾನೂನುಗಳು ಇರುವುದು ಯಾರ ಪರವಾಗಿಯು ಅಲ್ಲ. ಮಾಲೀಕರ ಹಾಗೂ ಕಾರ್ಮಿಕರ ನಡುವಿನ ಸಂಬಂಧವನ್ನು ಉತ್ತಮ ಪಡಿಸಲಿಕ್ಕೆ ಕಾನೂನುಗಳು ಇವೆ. ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಸುಮಾರು 10 ರಿಂದ 15 ಕೈಗಾರಿಕೆಗಳಿದ್ದು, 4 ರಿಂದ 5 ಸಾವಿರ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ ಎಂದರು.

ವಕೀಲರಾದ ಶ್ರೀನಾಥ್‌, ಟೈಟಾನ್‌ ಕಂಪನಿ ಮಾನವ ಸಂಪನ್ಮೂಲ ಅಧಿಕಾರಿ ರಾಜಶೇಖರ್‌ ಸೇರಿದಂತೆ ಟೈಟಾನ್‌ ಕಂಪನಿಯ ಕಾರ್ಮಿಕರು, ಜಿಲ್ಲಾ ನ್ಯಾಯಾಲಯದ ವಕೀಲರು, ಕಾರ್ಮಿಕ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಮಿಕರನ್ನು ನಿರ್ಲಕ್ಷಿಸುವ ಯಾವ ಸಮಾಜ ಕೂಡ ಅಭಿವೃದ್ಧಿ ಕಾಣಲು ಸಾಧ್ಯವಿಲ್ಲ. ಜಗತ್ತಿನ ಮುಂದುವರಿದ ದೇಶಗಳು ಎಲ್ಲಾ ರಂಗಗಳಲ್ಲಿ ಇಂದು ಪ್ರಗತಿ ಕಂಡಿದ್ದರೆ ಅದಕ್ಕೆ ಕಾರ್ಮಿಕರ ಶ್ರಮವೇ ಹೊರತು ಬೇರೆ ಏನು ಅಲ್ಲ. ಸಮಾಜವು ಕಾರ್ಮಿಕರನ್ನು ಗೌರಿವಿಸಬೇಕು. ಕಾರ್ಮಿಕರನ್ನು ಮುಖ್ಯವಾಹಿನಿಗೆ ತರುವ ಕೆಲಸವನ್ನು ಸರ್ಕಾರಗಳು, ಸಂಘ ಸಂಸ್ಥೆಗಳು ಜೊತೆಯಾಗಿ ಮಾಡಬೇಕು.
-ಎಸ್‌.ಎಚ್‌.ಕೋರಡ್ಡಿ, ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶರು

ಟಾಪ್ ನ್ಯೂಸ್

ಬಸ್‌ ಟಿಕೆಟ್‌ ದರ ಏರಿಕೆ? ನಾಲ್ಕೂ ನಿಗಮಗಳಿಂದ ಶೇ. 25 ಹೆಚ್ಚಳಕ್ಕೆ ಪ್ರಸ್ತಾವನೆ

ಬಸ್‌ ಟಿಕೆಟ್‌ ದರ ಏರಿಕೆ? ನಾಲ್ಕೂ ನಿಗಮಗಳಿಂದ ಶೇ. 25 ಹೆಚ್ಚಳಕ್ಕೆ ಪ್ರಸ್ತಾವನೆ

Udupi ಇನ್ನು ಮುತ್ತು ರತ್ನ ನಗರಿ! ಕೇಂದ್ರ ಸರಕಾರದ ಒಂದು ಜಿಲ್ಲೆ ಒಂದು ಉತ್ಪನ್ನ ಪರಿಕಲ್ಪನೆ

Udupi ಇನ್ನು ಮುತ್ತು ರತ್ನ ನಗರಿ! ಕೇಂದ್ರ ಸರಕಾರದ ಒಂದು ಜಿಲ್ಲೆ ಒಂದು ಉತ್ಪನ್ನ ಪರಿಕಲ್ಪನೆ

1-24-tuesday

Daily Horoscope: ಉದ್ಯೋಗದಲ್ಲಿ ನಿರೀಕ್ಷೆ ಮೀರಿ ಪ್ರಗತಿ, ಮನೋಬಲದಿಂದ ಕಾರ್ಯಸಿದ್ದಿ

ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರ ನೇಮಕ!

Kannada ಶಾಲೆಗಳಿಗೆ ಮರಾಠಿ ಶಿಕ್ಷಕರ ನೇಮಕ! ಕಾಸರಗೋಡಿನಂತೆ ಗಡಿಭಾಗದಲ್ಲಿ ಮಹಾ ಉದ್ಧಟತನ

ಮೂರೂವರೆ ತಾಸು ಬಿಎಸ್‌ವೈ ವಿಚಾರಣೆ ; ಅಪ್ರಾಪ್ತ ವಯಸ್ಕಳಿಗೆ ನಾನು ತೊಂದರೆ ನೀಡಿಲ್ಲ

ಮೂರೂವರೆ ತಾಸು ಬಿಎಸ್‌ವೈ ವಿಚಾರಣೆ ; ಅಪ್ರಾಪ್ತ ವಯಸ್ಕಳಿಗೆ ನಾನು ತೊಂದರೆ ನೀಡಿಲ್ಲ

1-sads-das

Kanchanjunga Express ‘ಕವಚ’ ಇದ್ದಿದ್ದರೆ ರೈಲು ಅಪಘಾತ ತಪ್ಪುತ್ತಿತ್ತು!

1-qweewewqewq

Air India ಆಹಾರದಲ್ಲಿ ಪ್ರಯಾಣಿಕನಿಗೆ ಸಿಕ್ಕಿತು ಬ್ಲೇಡ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Monsoon: ಕುರಿ, ಕೋಳಿ ಸಾಕಾಣಿಕೆ ಜೋರು!

chiಅಖಾಡದಲ್ಲಿ ನಾನೇ ಇದ್ದಿದ್ದರೆ ಫ‌ಲಿತಾಂಶ ಬೇರೆಯೇ ರೀತಿಯಲ್ಲಿ ಇರುತ್ತಿತ್ತು: ಪ್ರದೀಪ್‌

ಅಖಾಡದಲ್ಲಿ ನಾನೇ ಇದ್ದಿದ್ದರೆ ಫ‌ಲಿತಾಂಶ ಬೇರೆಯೇ ರೀತಿಯಲ್ಲಿ ಇರುತ್ತಿತ್ತು: ಪ್ರದೀಪ್‌

Chikkaballapura; ಸುಧಾಕರ್ ಗೆ ಜನಾಭಿಪ್ರಾಯ ಸಿಕ್ಕಿದೆ, ಆದರೆ ರಾಜೀನಾಮೆ….:ಪ್ರದೀಪ್ ಈಶ್ವರ್

Chikkaballapura; ಸುಧಾಕರ್ ಗೆ ಜನಾಭಿಪ್ರಾಯ ಸಿಕ್ಕಿದೆ, ಆದರೆ ರಾಜೀನಾಮೆ….:ಪ್ರದೀಪ್ ಈಶ್ವರ್

manchenahalli

Manchenahalli; ವಿದ್ಯುತ್ ಸ್ಪರ್ಶವಾಗಿ ಕಂಬದಲ್ಲಿಯೇ ಮೃತಪಟ್ಟ ಬೆಸ್ಕಾಂ ಸಿಬ್ಬಂದಿ

3-gudibande

Gudibanda: ಕಾರು ಅಪಘಾತ: ಮೂವರು ಬೆಸ್ಕಾಂ ಸಿಬ್ಬಂದಿಗಳು ಸಾವು

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

ಬಸ್‌ ಟಿಕೆಟ್‌ ದರ ಏರಿಕೆ? ನಾಲ್ಕೂ ನಿಗಮಗಳಿಂದ ಶೇ. 25 ಹೆಚ್ಚಳಕ್ಕೆ ಪ್ರಸ್ತಾವನೆ

ಬಸ್‌ ಟಿಕೆಟ್‌ ದರ ಏರಿಕೆ? ನಾಲ್ಕೂ ನಿಗಮಗಳಿಂದ ಶೇ. 25 ಹೆಚ್ಚಳಕ್ಕೆ ಪ್ರಸ್ತಾವನೆ

Udupi ಇನ್ನು ಮುತ್ತು ರತ್ನ ನಗರಿ! ಕೇಂದ್ರ ಸರಕಾರದ ಒಂದು ಜಿಲ್ಲೆ ಒಂದು ಉತ್ಪನ್ನ ಪರಿಕಲ್ಪನೆ

Udupi ಇನ್ನು ಮುತ್ತು ರತ್ನ ನಗರಿ! ಕೇಂದ್ರ ಸರಕಾರದ ಒಂದು ಜಿಲ್ಲೆ ಒಂದು ಉತ್ಪನ್ನ ಪರಿಕಲ್ಪನೆ

1-24-tuesday

Daily Horoscope: ಉದ್ಯೋಗದಲ್ಲಿ ನಿರೀಕ್ಷೆ ಮೀರಿ ಪ್ರಗತಿ, ಮನೋಬಲದಿಂದ ಕಾರ್ಯಸಿದ್ದಿ

ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರ ನೇಮಕ!

Kannada ಶಾಲೆಗಳಿಗೆ ಮರಾಠಿ ಶಿಕ್ಷಕರ ನೇಮಕ! ಕಾಸರಗೋಡಿನಂತೆ ಗಡಿಭಾಗದಲ್ಲಿ ಮಹಾ ಉದ್ಧಟತನ

ಮೂರೂವರೆ ತಾಸು ಬಿಎಸ್‌ವೈ ವಿಚಾರಣೆ ; ಅಪ್ರಾಪ್ತ ವಯಸ್ಕಳಿಗೆ ನಾನು ತೊಂದರೆ ನೀಡಿಲ್ಲ

ಮೂರೂವರೆ ತಾಸು ಬಿಎಸ್‌ವೈ ವಿಚಾರಣೆ ; ಅಪ್ರಾಪ್ತ ವಯಸ್ಕಳಿಗೆ ನಾನು ತೊಂದರೆ ನೀಡಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.