ಸರ್ಕಾರಿ ನೌಕರರು ಕ್ರೀಡೆಗಳಲ್ಲಿ ಸಕ್ರಿಯರಾಗಲಿ: ಶಾಸಕ
Team Udayavani, Feb 17, 2021, 3:06 PM IST
ಶಿಡ್ಲಘಟ್ಟ: ಸಾರ್ವಜನಿಕರ ಸೇವೆಯಲ್ಲಿ ಸದಾ ತೊಡಗಿರುವ ಸರ್ಕಾರಿ ನೌಕರರು ಯೋಗ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಬೇಕು ಎಂದು ಹಿರಿಯ ಶಾಸಕ ವಿ.ಮುನಿಯಪ್ಪ ಹೇಳಿದರು.
ನಗರದ ನೆಹರೂ ಕ್ರೀಡಾಂಗಣದಲ್ಲಿ ತಾಲೂಕು ಸರ್ಕಾರಿ ನೌಕರರ ಸಂಘದಿಂದ ಏರ್ಪಡಿಸಿದ್ದ 2020-21 ನೇ ಸಾಲಿನ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿ, ತಾಪಂ ಅಧ್ಯಕ್ಷ ರಾಜಶೇಖರ್, ಇಒ ಚಂದ್ರ ಕಾಂತ್, ತಹಶೀಲ್ದಾರ್ ರಾಜೀವ್, ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ಸಿಡಿಪಿಒ ನಾಗವೇಣಿ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಶ್ರೀನಿವಾಸ್, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ವಾಣಿ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ಟಾರೆಡ್ಡಿ, ಕಾರ್ಯ ದರ್ಶಿ ಅಕ್ಕಲ್‌ರೆಡ್ಡಿ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮುನಿರಾಜು, ಕುಂದಲಗುರ್ಕಿಮಂಜುನಾಥ್, ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಶಶಿಕುಮಾರ್, ಟಿಟಿ ನರಸಿಂಹಪ್ಪ, ನಗರಸಭಾ ಸದಸ್ಯ ಕೃಷ್ಣಮೂರ್ತಿ, ಕಾಂಗ್ರೆಸ್ ಯುವ ಮುಖಂಡ ಬಾಂಬೆ ನವಾಜ್, ಬಾಬಾ ಫಕ್ರುದ್ದೀನ್, ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಮಧುಸೂದನ್, ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಶ್ರೀನಾಥ್, ಸರ್ಕಾರಿ ಪ್ರೌಢ ಶಾಲೆಯ ಮಧುಸೂದನ್, ಮಳ್ಳೂರು ದೇವರಾಜ್ ಮತ್ತಿತರರು ಉಪಸ್ಥಿತರಿದ್ದರು.
ಮಹಿಳೆಯರು ಹಾಗೂ ಪುರುಷರ ವಿಭಾಗಗಳಿಗೆ ವಯಸ್ಸಿನ ಆಧಾರದ ಮೇಲೆ ಪ್ರತ್ಯೇಕ ಸ್ಪರ್ಧೆ ಆಯೋ ಜಿಸಲಾಗಿತ್ತು. 100, 200, 400 ಮೀ. ಓಟ, ಷಾಟ್ ಪುಟ್, ಡಿಸ್ಕಸ್ ಥ್ರೋ, ಸಂಗೀತ ಸ್ಪರ್ಧೆ ಮತ್ತಿತರರ ಸ್ಪರ್ಧೆಗಳಲ್ಲಿ ನೌಕರರು ಭಾಗವಹಿಸಿ ಪ್ರತಿಭೆ ಪ್ರದರ್ಶನ ಮಾಡಿದರು. ವಿಜೇತರಿಗೆ ಪ್ರಮಾಣಪತ್ರ, ಬಹುಮಾನ ವಿತರಿಸಲಾಯಿತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಿಮ್ಮ ಗ್ರಹಬಲ: ನಿಮ್ಮಿಂದ ಅನಾವಶ್ಯಕ ಖರ್ಚು ಮಾಡಿಸುವ ಗೆಳೆಯರು ದೊರೆತಾರು..!
ಸಿಮ್ ಹ್ಯಾಕ್ : ಮಣಿಪಾಲದವರ ನಂಬರ್ ಬಿಹಾರದವರಿಗೆ ! ದೂರವಾಣಿ ಸಂಸ್ಥೆಗೆ ಪೊಲೀಸರ ನೋಟಿಸ್
ಜಾರಕಿಹೊಳಿ ರಾಜೀನಾಮೆ: ರಾಜ್ಯ ರಾಜಕಾರಣದ ದಿಕ್ಕು ಬದಲಿಸುವ ಸಾಧ್ಯತೆ
1ರಿಂದ 5ಕ್ಕೂ ಪೂರ್ಣ ತರಗತಿ: ಅನುಮತಿ ಕೋರಿ ಸರಕಾರಕ್ಕೆ ಪತ್ರ
ಕಂಪ್ಯೂಟರ್ ಆಪ್ಟಿಟ್ಯೂಡ್ ಟೆಸ್ಟ್ನಲ್ಲಿ ಊಹೆಗೂ ಮೀರಿ ಅಂಕ ಪಡೆದಿದ್ದ ಮಸ್ಕ್