ನೆರೆ, ಬರ ಇದ್ದರೂ ಮದ್ಯ ಮಾರಾಟ ಕಡಿಮೆ ಆಗಿಲ್ಲ


Team Udayavani, Oct 20, 2019, 3:00 AM IST

nere-bara

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಬರ ಹಾಗೂ ನೆರೆ ಆವರಿಸಿದ್ದರೂ ಮದ್ಯ ಮಾರಾಟದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಮೊದಲಿನಂತೆ ಮದ್ಯ ಮಾರಾಟ ನಡೆಯುತ್ತಿದೆ. ನಗರಕ್ಕಿಂತ ಗ್ರಾಮೀಣ ಪ್ರದೇಶಗಳಲ್ಲಿ ಎಂಎಸ್‌ಐಎಲ್‌ ಮದ್ಯದಂಗಡಿಗಳನ್ನು ತೆರೆಯಲು ಪರವಾನಿಗೆ ನೀಡಲಾಗುವುದು ಎಂದು ಅಬಕಾರಿ ಸಚಿವ ಎಚ್‌.ನಾಗೇಶ್‌ ತಿಳಿಸಿದರು.

ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್‌ ಗ್ರಾಮದಲ್ಲಿ ಶನಿವಾರ ಉದ್ಯೋಗ ತರಬೇತಿ ಇಲಾಖೆ ವತಿಯಿಂದ 1.36 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ನೂತನ ಸರ್ಕಾರಿ ಐಟಿಐ ಕಾಲೇಜು ಕಟ್ಟಡ ಉದ್ಘಾಟಿಸಿದ ಬಳಿಕ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸತ್ತು ಹೋಗಿದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ವಿಪಕ್ಷಗಳ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಬೇಕಿಲ್ಲ ಎಂದರು.

ದಿನಕ್ಕೊಂದು ಹೇಳಿಕೆ, ವ್ಯಾಖ್ಯಾನ: ವಿಪಕ್ಷ ನಾಯಕರು ಅಂದ್ರೆ ಬರೀ ವಿರೋಧ ಮಾಡುವ ಕೆಲಸ ಮಾಡುತ್ತಾರೆ. ರಾಜ್ಯದಲ್ಲಿ ವಿರೋಧ ಪಕ್ಷಗಳು ಇರುವುದೇ ವಿರೋಧ ಮಾಡುವುದಕ್ಕೆ ಅಲ್ಲವಾ? ಅವರು ಸುಮ್ಮನೆ ಇರಲು ಆಗುವುದಿಲ್ಲ. ಸರ್ಕಾರದ ವಿರುದ್ಧ ದಿನಕ್ಕೊಂದು ಹೇಳಿಕೆ, ವ್ಯಾಖ್ಯಾನ ಮಾಡುತ್ತಾರೆ. ಆದರೆ ನಾವು ಶ್ರದ್ಧೆಯಿಂದ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ ಎಂದರು.

ದೇವರ ಅನುಗ್ರಹ: ನೆರೆ ಸಂತ್ರಸ್ತರು ಹಾಗೂ ಎಲ್ಲರಿಗೂ ಸಾಕಷ್ಟು ಅನುದಾನ ಬಿಡುಗಡೆ ಆಗಿದೆ. ಕೆಲಸ ಕಾರ್ಯಗಳು ನಡೆಯುತ್ತಿವೆ. ಸಚಿವ ಸಂಪುಟದಲ್ಲಿ ತೆಗೆದುಕೊಂಡ ಎಲ್ಲಾ ತೀರ್ಮಾನಗಳು ಅನುಷ್ಠಾನಗೊಳ್ಳುತ್ತಿವೆ. ಎಲ್ಲಾ ಕಡೆ ಪಕ್ಷಪಾತ ಇಲ್ಲದೇ ಸಿಎಂ ಯಡಿಯೂರಪ್ಪ ಒಳ್ಳೆಯ ಆಡಳಿತ ನೀಡುತ್ತಿದ್ದಾರೆ ಎಂದರು.

ಒಂಟಿಸಲಗ: ವಿಪಕ್ಷಗಳ ಹೇಳಿಕೆಯನ್ನು ಒಪ್ಪುವ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪ ಸಿಎಂ ಆದ ಬಳಿಕ ದೇವರ ಅನುಗ್ರಹದಿಂದ ಉತ್ತಮ ಮಳೆ ಬೆಳೆ ಆಗುತ್ತಿದೆ. ಕೆರೆ, ಕುಂಟೆಗಳಲ್ಲಿ ನೀರು ತುಂಬಿದೆ. ಸಚಿವ ಸಂಪುಟ ರಚನೆ ಆಗದಿದ್ದರೂ ಒಂದೂವರೆ ತಿಂಗಳ ಕಾಲ ಒಂಟಿ ಸಲಗದ ರೀತಿಯಲ್ಲಿ ಕೆಲಸ ಮಾಡಿದರು. ಕೇಂದ್ರದಿಂದ 1200 ಕೋಟಿ ಪರಿಹಾರ ತಂದು ಕೆಲಸ ಕಾರ್ಯ ಮಾಡುತ್ತಿದ್ದಾರೆ ಎಂದರು.

ಕೆ.ಸಿ. ವ್ಯಾಲಿ ನೀರು ಶುದ್ಧ, ಕೋಲಾರ ಮಲೆನಾಡಾಗಿದೆ: ಕೆ.ಸಿ.ವ್ಯಾಲಿ ಯೋಜನೆ ಮೂಲಕ ಕೋಲಾರಕ್ಕೆ ಹರಿಸುತ್ತಿರುವ ನೀರು ಶುದ್ಧವಾಗಿದೆ. ಒಳ್ಳೆಯ ಕೆಲಸ ಮಾಡಿದಾಗ ವಿರೋಧ ಮಾಡುವುದು ಸರಿಯಲ್ಲ. ಯಾರೊ ಒಬ್ಬರು ವಿರೋಧ ಮಾಡಿದರೆ ದೇಶವೆಲ್ಲಾ ವಿರೋಧ ಮಾಡಿದಂತೆ ಅಲ್ಲ ಎಂದು ಕೆ.ಸಿ.ವ್ಯಾಲಿ ಯೋಜನೆ ವಿರೋಧಿಸುತ್ತಿರುವ ನೀರಾವರಿ ಹೋರಾಟಗಾರರ ಕ್ರಮಕ್ಕೆ ಸಚಿವ ನಾಗೇಶ್‌ ಗರಂ ಆದರು.

ಕೋಲಾರಕ್ಕೆ ಕೆ.ಸಿ. ವ್ಯಾಲಿ ನೀರು ಬಂದ ಮೇಲೆ ಮಲೆನಾಡು ಆಗಿದೆ. ನೀರಿಗೆ ಸಾಕಷ್ಟು ಬೇಡಿಕೆ ಇದೆ. ಎಲ್ಲಾ ಕೆರೆ, ಕುಂಟೆಗಳು ತುಂಬಿ ಬತ್ತಿ ಹೋಗಿದ್ದ ಕೊಳವೆ ಬಾವಿಗಳು ಮರುಪೂರ್ಣಗೊಂಡಿವೆ ಎಂದರು. ಕೆಸಿ ವ್ಯಾಲಿ ಯೋಜನೆಯ ನೀರನ್ನು ನಾವು ಶುದ್ಧೀಕರಿಸಿಯೇ ಕೊಡುತ್ತಿದ್ದೇವೆ ಎಂದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಉಸ್ತುವಾರಿ ಸಚಿವ ಸ್ಥಾನ ಕೇಳಿದ್ದೆ. ಆದರೆ ಕೋಲಾರ ಕೊಟ್ಟರು. ಎರಡು ಜಿಲ್ಲೆಗಳಿಗೆ ಉಸ್ತುವಾರಿ ಕೊಟ್ಟಿದ್ದರೂ ಇನ್ನಷ್ಟು ಚೆನ್ನಾಗಿ ಕೆಲಸ ಮಾಡಬಹುದಿತ್ತು. ಸ್ನೇಹಿತ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಉಸ್ತುವಾರಿ ಸಿಕ್ಕಿದೆ. ಅವರು ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ.
-ಎಚ್‌.ನಾಗೇಶ್‌, ಅಬಕಾರಿ ಸಚಿವ

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.