ನಗರ ಸ್ಥಳೀಯ ಸಂಸ್ಥೆಗಳಿಗೆ ಶುಕ್ರದೆಸೆ


Team Udayavani, Jan 17, 2022, 4:50 PM IST

ನಗರ ಸ್ಥಳೀಯ ಸಂಸ್ಥೆಗಳಿಗೆ ಶುಕ್ರದೆಸೆ

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೊರೊನಾ ಸೋಂಕು ಅನುದಾನ ಕಡಿತದಿಂದ ಸಂಕಷ್ಟದಲ್ಲಿ ಸಿಲುಕಿದ್ದ ಸ್ಥಳೀಯ ಸಂಸ್ಥೆಗಳಿಗೆ ಶುಕ್ರದೆಸೆ ಕೂಡಿ ಬಂದಂತಾಗಿದೆ.

ರಾಜ್ಯ ಸರ್ಕಾರ ಪೌರಾಡಳಿತ ನಿರ್ದೇಶನಾಲಯದ ಪ್ರಸ್ತಾವನೆಗೆ ಮನ್ನಣೆ ನೀಡಿ ಕೊನೆಗೂ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ (ಹಂತ 4) ನಗರ ಸ್ಥಳೀಯ ಸಂಸ್ಥೆಗಳಿಗೆ ಅನುದಾನ ಮಂಜೂರು ಮಾಡಿದೆ.

ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಮೂಲ ಸೌಲಭ್ಯಗಳ ಕೊರತೆ ನೀಗಿಸಲು ಸಣ್ಣ ಮತ್ತು ಮಧ್ಯಮ ಪಟ್ಟಣಗಳ ಸಮಗ್ರ ಅಭಿವೃದ್ಧಿ ಮೇಲೆ ಕೇಂದ್ರೀಕರಿಸಲು ರಾಜ್ಯ ಸರ್ಕಾರವು ಪಟ್ಟಣಗಳಲ್ಲಿ ಪೌರಸೇವೆಗಳನ್ನು ಮೇಲ್ದರ್ಜೆಗೆ ಏರಿಸಲು ಮತ್ತು ವಿಸ್ತರಿಸಲು ಅವಶ್ಯಕ ಎಂದು ಭಾವಿಸಿ ವಿವಿಧ ಕ್ಷೇತ್ರಗಳಲ್ಲಿ ಮೂಲ ಸೌಲಭ್ಯಗಳ ಮೇಲ್ದರ್ಜೆ ಮತ್ತು ನಾಗರಿಕರಿಗೆ ಸೇವೆಗಳನ್ನು ತಲುಪಿಸಿ ಸುಧಾರಣೆ ತರುವ ಸಲುವಾಗಿ ಮುಖ್ಯಮಂತ್ರಿಗಳ ಸಣ್ಣ ಮತ್ತು ಮಧ್ಯಮ ಪಟ್ಟಣಗಳ ಅಭಿವೃದ್ಧಿ ಕಾರ್ಯಕ್ರಮ (ಸಿಎಂಎಸ್‌ಎಂಟಿಡಿಪಿ) ಮೊದಲನೇ, ಎರಡನೇ ಹಂತದ ಯೋಜನೆ ಮತ್ತು ನಗರೋತ್ಥಾನ (ಮುನ್ಸಿಪಾಲಿಟಿ)-3 ಯೋಜನೆಯನ್ನು 2009-10, 2012-13, 2016-17ನೇ ಸಾಲಿನಲ್ಲಿ ಅನುಷ್ಠಾನಕ್ಕೆ ತರಲಾಗಿತ್ತು.

145 ಕೋಟಿ ರೂ. ಅನುದಾನ ಮಂಜೂರು: ರಾಜ್ಯದ 10 ಮಹಾನಗರ ಪಾಲಿಕೆಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆ ಮಾದರಿಯಂತೆ ನಗರ ಸ್ಥಳೀಯ ಸಂಸ್ಥೆಗಳನ್ನು ಅಭಿವೃದ್ಧಿಪಡಿಸಲು ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ (ಮುನ್ಸಿಪಾಲಿಟಿ) ಯೋಜನೆ ಹಂತ 4 ಅನುಷ್ಠಾನಗೊಳಿಸಲು ಉದ್ದೇಶಿಸಿರುವ ಸರ್ಕಾರ, ನಗರ ಸ್ಥಳೀಯ ಸಂಸ್ಥೆಗಳು, ಮೇಲ್ದರ್ಜೆಗೇರಿಸಿರುವ ನಗರ ಸ್ಥಳೀಯ ಸಂಸ್ಥೆಗಳು, ಹೊಸದಾಗಿ ಸೃಜಿಸಲಾಗಿರುವ ಸ್ಥಳೀಯ ಸಂಸ್ಥೆಗಳಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲು 3885 ಕೋಟಿ ರೂ. ಪ್ರಸ್ತಾವನೆ ಅಂಗೀಕರಿಸಿ ಅನುದಾನ ಮಂಜೂರು ಮಾಡಿದ್ದು, ಇದರಿಂದ ಚಿಕ್ಕಬಳ್ಳಾಪುರ ಜಿಲ್ಲೆಗೆ 145 ಕೋಟಿ ರೂ. ಅನುದಾನ ಮಂಜೂರು ಆಗಿದೆ.

ನಗರ ಸ್ಥಳೀಯ ಸಂಸ್ಥೆಯ ಪಾಲು ಶೇ.5ರಿಂದ 15: ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ರಾಜ್ಯ ಸರ್ಕಾರವು ಕೆಯುಐಡಿಎಫ್‌ಸಿ ಹಾಗೂ ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ಹಲವು ನೀರು ಸರಬರಾಜು ಮತ್ತು ಒಳಚರಂಡಿ ಯೋಜನೆಗಳನ್ನು ಕೈಗೆತ್ತಿಕೊಂಡಿದೆ. ಈ ಯೋಜನೆಗಳಡಿ ನಗರ ಸ್ಥಳೀಯ ಸಂಸ್ಥೆಯ ಪಾಲು ಶೇ.5ರಿಂದ 15 ರಷ್ಟಿದ್ದು, ನಗರ ಸ್ಥಳೀಯ ಸಂಸ್ಥೆಗಳು ತಮ್ಮ ಪಾಲನ್ನು ಹಲವು ವರ್ಷಗಳಿಂದ ನೀಡದೇ ಇರುವುದರಿಂದ ಯೋಜನೆಯ ಪ್ರಗತಿಯು ಕುಂಠಿತವಾಗಿದೆ. ಆದ್ದರಿಂದ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಮುನ್ಸಿಪಾಲಿಟಿ ಯೋಜನೆಯ ಹಂತ-04 ರಲ್ಲಿ ಒದಗಿಸಿರುವ ಅನುದಾನದಲ್ಲಿಮೊದನೆ ಪ್ರಾಶಸ್ತ್ಯವನ್ನು ಈ ಕಾಮಗಾರಿಗಳಿಗೆ ನೀಡಿ ಅನುದಾನ ಮೀಸಲಿಡಬೇಕೆಂದು ಸರ್ಕಾರ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ.

15 ದಿನಗಳೊಳಗಾಗಿ ಅನುಮೋದನೆ: ರಾಜ್ಯ ಸರ್ಕಾರ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನಮುನ್ಸಿಪಾಲಿಟಿ ಯೋಜನೆಯ ಅನುಷ್ಠಾನಕ್ಕಾಗಿ ಜಿಲ್ಲಾಮಟ್ಟದ ಸಮಿತಿ ರಚಿಸಿದೆ. ಈ ಸಮಿತಿಯ ಕ್ರಿಯಾ ಯೋಜನೆಯನ್ನು 15 ದಿನಗಳ ಒಳಗಾಗಿಅನುಮೋದಿಸಿ ರಾಜ್ಯ ಮಟ್ಟದ ಸಮಿತಿಗೆ ಶಿಫಾರಸು ಮಾಡಬೇಕಾಗಿದೆ ಹಾಗೂ ರಾಜ್ಯ ಮಟ್ಟದಸಮಿತಿಯು 15 ದಿನಗಳೊಳಗಾಗಿ ತಮ್ಮಅನುಮೋದನೆ ನೀಡುವ ಮೂಲಕ ಕಾಮಗಾರಿಗೆ ಚಾಲನೆ ನೀಡಲಾಗುತ್ತದೆ.

ಸದಸ್ಯ ಕಾರ್ಯದರ್ಶಿ ಆಗಿ ಕಾರ್ಯನಿರ್ವಹಣೆ: ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಸಮಿತಿಯ ಅಧ್ಯಕ್ಷರಾಗಲಿದ್ದಾರೆ. ಜೊತೆಗೆ ಡೀಸಿ ಸಮಿತಿ ಸದಸ್ಯರಾಗಿರುತ್ತಾರೆ. ಅಲ್ಲದೆ, ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಯಿಂದ ಶಾಸಕರು, ನಗರ ಸ್ಥಳೀಯಸಂಸ್ಥೆಯ ಅಧ್ಯಕ್ಷರು, ಜಿಲ್ಲಾ ಯೋಜನಾನಿರ್ದೇಶಕರು, ನಗರ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು, ಪಿಡಬ್ಲೂéಡಿ ಕಾರ್ಯಪಾಲಕಅಭಿಯಂತರರು, ಜಿಲ್ಲಾ ನಗರ ಅಭಿವೃದ್ಧಿ ಕೋಶದ ಕಾರ್ಯಪಾಲಕ ಅಭಿಯಂತರರು ಸದಸ್ಯ ಕಾರ್ಯದರ್ಶಿ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಅನುಷ್ಠಾನ ಸಮಿತಿಯು ಸಹರಚಿಸಲು ಅವಕಾಶ ಕಲ್ಪಿಸಲಾಗಿದೆ. ಈ ಸಮಿತಿಗೆ ಜಿಲ್ಲಾಧಿಕಾರಿಗಳು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. ಜಿಲ್ಲಾ ಯೋಜನಾ ನಿರ್ದೇಶಕರು, ನಗರ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರರು, ಸಹಾಯಕಕಾರ್ಯಪಾಲಕ ಅಭಿಯಂತರರು ಸದಸ್ಯರಾಗಲಿದ್ದಾರೆ. ಜಿಲ್ಲಾ ನಗರ ಅಭಿವೃದ್ಧಿ ಕೋಶದಕಾರ್ಯಪಾಲಕ ಅಭಿಯಂತರರು ಸದಸ್ಯ ಕಾರ್ಯದರ್ಶಿ ಆಗಿ ಕಾರ್ಯನಿರ್ವಹಿಸಲಿದ್ದಾರೆ.

5 ನಗರ ಸ್ಥಳೀಯ ಸಂಸ್ಥೆಗೆ 85 ಕೋಟಿ ರೂ. ಮಂಜೂರು :

ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊಂದಿಕೊಂಡಿರುವ ಚಿಕ್ಕಬಳ್ಳಾಪುರ ನಿರೀಕ್ಷಿತ ಪ್ರಮಾಣದಲ್ಲಿ ಅಭಿವೃದ್ಧಿ ಕಂಡಿಲ್ಲ ಎಂಬ ದೂರು ಸಾಮಾನ್ಯವಾಗಿದೆ. ರಾಜ್ಯ ಸರ್ಕಾರ ಈಗಾಗಲೇ ಮೇಲ್ದರ್ಜೆಗೇರಿದ ನಗರಸಭೆ, ಪುರಸಭೆ, ಪಪಂಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಅನುದಾನವನ್ನು ಮಂಜೂರು ಮಾಡಿದೆ.ಇದರಿಂದ ನಗರ ಪ್ರದೇಶಗಳಲ್ಲಿ ಮೂಲ ಸೌಲಭ್ಯ ವೃದ್ಧಿಯಾಗಲಿದೆ. ಚಿಕ್ಕಬಳ್ಳಾಪುರ ನಗರಸಭೆಗೆ 40 ಕೋಟಿ ರೂ., ಶಿಡ್ಲಘಟ್ಟ, ಚಿಂತಾಮಣಿ, ಗೌರಿಬಿದನೂರು ನಗರಸಭೆಗೆ ತಲಾ 30 ಕೋಟಿ ರೂ., ಬಾಗೇಪಲ್ಲಿ ಪುರಸಭೆಗೆ 10 ಕೋಟಿ ರೂ. ಹಾಗೂ ಗುಡಿಬಂಡೆಯ ಪಪಂಗೆ 5 ಕೋಟಿ ರೂ. ಸರ್ಕಾರ ಮಂಜೂರು ಮಾಡಿದೆ.

ಮುಖ್ಯಮಂತ್ರಿಗಳ ಅಮೃತನಗರೋತ್ಥಾನ ಯೋಜನೆಹಂತ-4 ಅಡಿಯಲ್ಲಿ ರಾಜ್ಯ ಸರ್ಕಾರರಾಜ್ಯದ 302 ನಗರ ಸ್ಥಳೀಯ ಸಂಸ್ಥೆಗಳಅಭಿವೃದ್ಧಿಗಾಗಿ 3,885 ಕೋಟಿ ರೂ.ಘೋಷಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಗೆ145 ಕೋಟಿ ರೂ. ಅನುದಾನ ನೀಡಿದಮುಖ್ಯಮಂತ್ರಿಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ.– ಡಾ.ಕೆ.ಸುಧಾಕರ್‌, ಜಿಲ್ಲಾ ಉಸ್ತುವಾರಿ ಸಚಿವ

ಅಖಂಡ ಕೋಲಾರ ಜಿಲ್ಲೆಯಲ್ಲಿ ಮೊದಲಬಾರಿಗೆ ಶಿಡ್ಲಘಟ್ಟ ನಗರದಲ್ಲಿ ಒಳಚರಂಡಿ ಯೋಜನೆ ಯಶಸ್ವಿ ಆಗಿ ಅನುಷ್ಠಾನಗೊಳಿಸಲಾಗಿದೆ. ಉಳಿದ ಪ್ರದೇಶದಲ್ಲಿ 2ನೇ ಹಂತದಲ್ಲಿ ಕೈಗೆತ್ತಿಕೊಳ್ಳಲು ಕ್ರಿಯಾ ಯೋಜನೆ ಸಿದ್ಧಪಡಿಸಿ ಸರ್ಕಾರಕ್ಕೆ ಕಳುಹಿಸಲಾಗಿತ್ತು. ಕೊರೊನಾ ಸೋಂಕಿನ ಪ್ರಭಾವದಿಂದ ಮಂಜೂರಾದ ಅನುದಾನ ವಾಪಸ್‌ ಹೋಯಿತು. ಮತ್ತೆ ಅನುದಾನ ಬಂದಿದೆ. ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು.– ವಿ.ಮುನಿಯಪ್ಪ, ಶಾಸಕ, ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರ

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.