364 ಹೆಕ್ಟೇರ್‌ನಲ್ಲಿ ನೆಲಕಚ್ಚಿದ ಮಾವು, ದ್ರಾಕ್ಷಿ, ಬಾಳೆ

ಜಿಲ್ಲಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ • ಶಿಡ್ಲಘಟ್ಟ ತಾಲೂಕಿನಲ್ಲಿ ಅತೀ ಹೆಚ್ಚು ನಷ್ಟ

Team Udayavani, May 28, 2019, 8:36 AM IST

cb-tdy-1..

ಚಿಕ್ಕಬಳ್ಳಾಪುರ, ಮೇ. 27: ಜಿಲ್ಲೆಯಲ್ಲಿ ಮಳೆಗಿಂತ ಬಿರುಗಾಳಿಯ ಅಬ್ಬರವೇ ಜೋರಾಗಿದ್ದು, ಕಳೆದ ಎರಡು ದಿನಗಳಿಂದ ಜಿಲ್ಲಾದ್ಯಂತ ಬಿರುಗಾಳಿ ಸಮೇತ ಬಿದ್ದಿರುವ ಮಳೆಗೆ 364 ಹೆಕ್ಟೇರ್‌ನಷ್ಟು ಮಾವು, ದ್ರಾಕ್ಷಿ, ಬಾಳೆ ಸೇರಿದಂತೆ ಪ್ರಮುಖ ವಾಣಿಜ್ಯ ಬೆಳೆಗಳು ನೆಲ ಕಚ್ಚಿರುವುದು ಜಿಲ್ಲೆಯ ಅನ್ನದಾತರನ್ನು ಸಂಕಷ್ಟಕ್ಕೀಡು ಮಾಡಿದೆ.

ವಾಣಿಜ್ಯ ಬೆಳೆಗಳು ಮಣ್ಣುಪಾಲು: ಹಲವು ದಿನಗಳಿಂದ ಮಳೆಗಾಗಿ ಚಾತಕ ಪಕ್ಷಿಗಳಂತೆ ಎದುರು ನೋಡುತ್ತಿದ್ದ ರೈತರಿಗೆ ಒಂದೆಡೆ ಮಳೆಯ ದರ್ಶನ ಸಹವಾಗಿಯೇ ಸಂತಸ ತಂದಿದ್ದರೂ ಮತ್ತೂಂದೆಡೆ ಜಿಲ್ಲೆಯಲ್ಲಿ ಕಳೆದ ಭಾನುವಾರ ಹಾಗೂ ಸೋಮವಾರ ರಾತ್ರಿ ಸುರಿದಿರುವ ಬಿರುಗಾಳಿ ಮಳೆಗೆ ಅಪಾರ ಪ್ರಮಾಣದ ವಾಣಿಜ್ಯ ಬೆಳೆಗಳು ಮಣ್ಣು ಪಾಲಾಗಿರುದು ಬೆಳೆಗಾರರನ್ನು ಚಿಂತೆಗೀಡು ಮಾಡಿದೆ. ಮತ್ತೂಂದೆಡೆ ಬೆಳೆ ರಕ್ಷಣೆ ಮಾಡಲಾಗಿದ್ದ ಲಕ್ಷಾಂತರ ರೂ. ಮೌಲ್ಯದ ಪಾಲಿಹೌಸ್‌ಗಳು ಗಾಳಿಗೆ ಚದುರಿ ಹೋಗಿ ರೈತರನ್ನು ಸಂಕಷ್ಟಕ್ಕೆ ತಳ್ಳಿದೆ.

364 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ನಷ್ಟ: ಜಿಲ್ಲೆಯಲ್ಲಿ ತೋಟಗಾರಿಕೆ ಇಲಾಖೆ ನಡೆಸಿರುವ ಪ್ರಾಥಮಿಕ ಸಮೀಕ್ಷೆಯಲ್ಲಿ 364 ಹೆಕ್ಟೇರ್‌ನಷ್ಟು ಕೊಯ್ಲಿಗೆ ಬಂದಿದ್ದ ಮಾವು, ದ್ರಾಕ್ಷಿ, ಬಾಳೆ ತೋಟ ಹಾಗೂ ಹೂವು, ಹಣ್ಣು ಹಾಗೂ ತರಕಾರಿ ಬೆಳೆಗಳು ನೆಲಕಚ್ಚಿದ್ದು, ಜಿಲ್ಲೆಯಲ್ಲಿ ಶಿಡ್ಲಘಟ್ಟ ತಾಲೂಕಿನಲ್ಲಿ ಹೆಚ್ಚಿನ ಬೆಳೆ ಹಾನಿಯಾಗಿದೆ.

ಶಿಡ್ಲಘಟ್ಟ ತಾಲೂಕು ಒಂದರಲ್ಲಿಯೇ 258 ಹೆಕ್ಟೇರ್‌ ಪ್ರದೇಶದಲ್ಲಿ ಮಾವು, ದ್ರಾಕ್ಷಿ, ತರಕಾರಿ ಬೆಳೆಗಳು ನೆಲಕಚ್ಚಿವೆ ಎಂದು ಜಿಲ್ಲಾ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಕುಮಾರಸ್ವಾಮಿ ಸೋಮವಾರ ಉದಯವಾಣಿಗೆ ಬೆಳೆ ನಷ್ಟದ ಕುರಿತು ಮಾಹಿತಿ ನೀಡಿದರು.

ಉಳಿದಂತೆ ಗೌರಿಬಿದನೂರು ಕ್ಷೇತ್ರದಲ್ಲಿ 11, ಚಿಕ್ಕಬಳ್ಳಾಪುರ ತಾಲೂಕಿನಲ್ಲಿ 33, ಬಾಗೇಪಲ್ಲಿ 1, ಚಿಂತಾಮಣಿ 16 ಹಾಗೂ ಶಿಡ್ಲಘಟ್ಟ 258 ಸೇರಿ ಒಟ್ಟು ಜಿಲ್ಲೆಯಲ್ಲಿ 364 ಹೇಕ್ಟರ್‌ ಪ್ರದೇಶದಲ್ಲಿ ಕೊಯ್ಲಿನ ಹಂತಕ್ಕೆ ಬಂದಿದ್ದ ವಾಣಿಜ್ಯ ಬೆಳೆಗಳು ನಾಶವಾಗಿದೆ.

ಶಿಡ್ಲಘಟ್ಟದಲ್ಲಿ ಮಾವು, ಚಿಕ್ಕಬಳ್ಳಾಪುರದಲ್ಲಿ ದ್ರಾಕ್ಷಿ: ಜಿಲ್ಲೆಯಲ್ಲಿ ಬಿರುಗಾಳಿ ಮಳೆಗೆ ದ್ರಾಕ್ಷಿ ಹಾಗೂ ಮಾವು ಸಿಲುಕಿದ್ದು, ರೇಷ್ಮೆ ನಗರಿ ಶಿಡ್ಲಘಟ್ಟದಲ್ಲಿ ಅಪಾರ ಪ್ರಮಾ ಣದ‌ಲ್ಲಿ ಮಾವು ಹಾಗೂ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ದ್ರಾಕ್ಷಿ ಬಿರುಗಾಳಿಗೆ ಸಿಲುಕಿದೆ.

ಚಿಕ್ಕಬಳ್ಳಾಪುರದ ಜಾತವಾರ, ಹೊಸವುಡ್ಯ, ನಾಯನಹಳ್ಳಿ, ನಂದಿ, ಇನಿಮಿಂಚೇನಹಳ್ಳಿ, ಆರೂರು, ಹಾರೋ ಬಂಡೆ, ಕೇಶವಾರ, ಅಂದಾರ‌್ಲಹಳ್ಳಿ ಮತ್ತಿತರ ಕಡೆ ಹೇರಳ ಪ್ರಮಾಣದಲ್ಲಿ ಕೊಯ್ಲಿಗೆ ಬಂದಿರುವ ದ್ರಾಕ್ಷಿ ಮಳೆ ಹಾಗೂ ಆಲಿಕಲ್ಲು ಮಳೆಗೆ ಮಣ್ಣು ಪಾಲಾಗಿ ರೈತರು ಕಣ್ಣೀರು ಸುರಿಸುವಂತಾದರೆ, ಶಿಡ್ಲಘಟ್ಟ ತಾಲೂ ಕಿನ ಕಸಬಾ ಹೋಬಳಿಯ ಹೈಹುಣಿಸೇನಹಳ್ಳಿ, ಸೊಣ್ಣ ಹಳ್ಳಿ, ವೀರಾಪುರ, ಬಶೆಟ್ಟಿಹಳ್ಳಿ, ಹುಜಗೂರು, ಗೊರ ಮಡಗು ಮತ್ತಿತರ ಕಡೆಗಳಲ್ಲಿ ಮಾವು ಬಿರುಗಾಳಿಗೆ ನೆಲಕ್ಕುರುಳಿದೆ.

ಹಿಪ್ಪುನೇರಳೆ ಸೊಪ್ಪಿಗೆ ಸಂಕಷ್ಟ: ತೀವ್ರ ಬಿರುಗಾಳಿ ಮಳೆಗೆ ವಾಣಿಜ್ಯ ಬೆಳೆಗಳು ಮಾತ್ರವಲ್ಲದೇ ರೇಷ್ಮೆ ಸೊಪ್ಪಿಗೆ ಸಂಕಷ್ಟ ಎದುರಾಗಿದೆ. ರೇಷ್ಮೆಗೂಡಿಗೆ ಅಗತ್ಯವಾದ ಹಿಪ್ಪುನೇರಳೆ ಸೊಪ್ಪು ನೆಲಕಚ್ಚಿರುವುದರಿಂದ ರೇಷ್ಮೆ ಬೆಳೆಗಾರರು ಸಂಕಷ್ಟ ಅನುಭವಿಸುವಂತಾಗಿದೆ. ಮಳೆ ಯಿಂದ ನೆನೆಯುತ್ತಿರುವ ರೇಷ್ಮೆ ಸೊಪ್ಪುನಿಂದ ರೇಷ್ಮೆಗೂಡು ಉತ್ಪಾದನೆ ಕುಸಿತದ ಭೀತಿ ಎದುರಿಸು ವಂತಾಗಿದೆ.

ಟಾಪ್ ನ್ಯೂಸ್

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.