ಮಹನೀಯರ ಜಯಂತಿ ಆಚರಣೆಗೆ ಸೀಮಿತ ಬೇಡ


Team Udayavani, Nov 1, 2020, 4:29 PM IST

ಮಹನೀಯರ ಜಯಂತಿ ಆಚರಣೆಗೆ ಸೀಮಿತ ಬೇಡ

ಗುಡಿಬಂಡೆ: ಮಹನೀಯರ ಜಯಂತಿಗಳು ಆಚರಣೆಗೆ ಸೀಮಿತವಾಗಬಾರದು. ಆಚರಣೆಗಳ ಮೂಲಕ ನಮ್ಮ ತಪ್ಪುಗಳನ್ನು ತಿದ್ದಿಕೊಂಡು ಸರಿದಾರಿಯತ್ತ ನಡೆಯಲು ಪ್ರೇರೇಪಣೆ ಆಗಬೇಕು ಎಂದು ತಾಲೂಕು ವಾಲ್ಮೀಕಿ ಸಂಘಧ ಅಧ್ಯಕ್ಷ ಎನ್‌.ವಿ.  ಗಂಗಾಧರ್‌ ತಿಳಿಸಿದರು.

ಪಟ್ಟಣದ ತಾಲೂಕು ಕಚೇರಿ ಸಭಾಂಗಣ ದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹರ್ಷಿ ವಾಲ್ಮೀಕಿಯವರು ಜಗತ್ತಿನ ಮಾನವನ ಮನಸ್ಸಿನ ಚಿತ್ರಣವನ್ನು ರಾಮಾಯಣದಲ್ಲಿ ಚಿತ್ರಿಸಿದ್ದಾರೆ. ಆ ಮೂಲಕ ಅಸಂಖ್ಯಾತ ಸಾಹಿತಿಗಳಿಗೆ ಪ್ರೇರಕ ಶಕ್ತಿಯಾಗಿದ್ದಾರೆ. ಹೀಗಾಗಿ ಜಾತಿ ಧರ್ಮ ದೇಶವ್ಯಾಪ್ತಿ ಮೀರಿದ ಮಹಾನು ಪುರುಷರಲ್ಲಿ ವಾಲ್ಮೀಕಿ ಮಹರ್ಷಿಗಳು ಒಬ್ಬರಾಗಿದ್ದಾರೆ ಎಂದರು.

ಪ್ರತಿಭಟನೆ ಎಚ್ಚರಿಕೆ: ಸಂವಿಧಾನ ಬದ್ಧವಾಗಿ ವಾಲ್ಮೀಕಿ ಜನಾಂಗಕ್ಕೆ ನೀಡಬೇಕಾದ ಮೀಸಲಾತಿ ಜಾರಿಗೊಳಿಸಲು ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಶೇ.7.5 ರಷ್ಟು ಮೀಸಲಾತಿಗಾಗಿ ಈಗಾಗಲೇ ಬೃಹತ್‌ ಮಟ್ಟದ ಪ್ರತಿಭಟನೆ ಸಹ ನಡೆದಿದೆ. ವಾಲ್ಮೀಕಿ ಪೀಠದ ಗುರುಗಳು ನೀಡಿದ ಗಡುವಿನೊಳಗೆ ಮೀಸಲಾತಿ ಜಾರಿ ಮಾಡದಿದ್ದಲ್ಲಿ ಉಗ್ರ ಹೋರಾಟ ಕೈಗೊಳ್ಳ ಬೇಕಾಗುತ್ತದೆ ಎಂದರು. ಮುಖ್ಯ ಭಾಷಣಕಾರರಾಗಿ ಮಾತನಾಡಿದ ಶಿಕ್ಷಕ ಪಿ.ಎಸ್‌.ರಾಜಶೇಖರ್‌, ವಾಲ್ಮೀಕಿ ಅವರ ತತ್ವ ಸಿದ್ಧಾಂತ ಎಂದೆಂದಿಗೂ ಪ್ರಸ್ತುತ ಎಂದರು.

ತಹಶೀಲ್ದಾರ್‌ ಸಿಗ್ಬತ್ತುಲ್ಲಾ ಮಾತನಾಡಿ, ಕೋವಿಡ್‌ ಹಿನ್ನೆಲೆಯಲ್ಲಿ ಜಯಂತಿಯನ್ನು ಸರಳವಾಗಿ ಆಚರಿಸಲಾಗುತ್ತಿದೆ. ಈಗಾಗಲೇ ವಾಲ್ಮೀಕಿ ಮುಖಂಡರ ಮನವಿಯಂತೆ ಅನೇಕ ಗ್ರಾಮಗಳಲ್ಲಿ ವಸತಿ, ಸ್ಮಶಾನಕ್ಕಾಗಿ ಸ್ಥಳ ಗುರುತಿಸುವಿಕೆ ಸೇರಿದಂತೆ ಪಿಂಚಣಿ ಸಹ ನೀಡಲಾಗುತ್ತಿದೆ ಎಂದರು.

ತಾಪಂ ಇ.ಒ ರವೀಂದ್ರ, ಆರಕ್ಷಕ ವೃತ್ತ  ನಿರೀಕ್ಷಕ ಮಂಜುನಾಥ್‌, ಬಿಇಒ ವೆಂಕಟೇಶಪ್ಪ, ತಾಲೂಕುಆರೋಗ್ಯಾಧಿಕಾರಿ ಡಾ.ನರಸಿಂಹಮೂರ್ತಿ, ಪ.ಪಂ. ಮುಖ್ಯಾಧಿಕಾರಿ ರಾಜಶೇಖರ್‌, ಸಮಾಜ ಕಲ್ಯಾಣಾಧಿಕಾರಿ ಜಗದೀಶ್‌, ದಾಸಪ್ಪ, ಬಿಸಿಎಂ ರಾಮಯ್ಯ, ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಸ.ನ.ನಾಗೇಂದ್ರ, ಮುಖಂಡರಾದ ನಾಗರಾಜ್‌, ಮುದ್ದಪ್ಪ, ಜಿ.ಎನ್‌.ನರಸಿಂಹಯ್ಯ, ನರೇಂದ್ರ, ರಾಮಾಂಜಿ, ರಮೇಶ್‌, ಬಿ. ಮಂಜುನಾಥ್‌, ಆನಂದಪ್ಪ, ಆಂಜಿನಪ್ಪ, ಬಾಲಾಜಿ, ತಿಲಕ್‌, ಶಿಕ್ಷಕರಾದ ಗೋವಿಂದಪ್ಪ, ರಾಮಾಂಜಿನೇಯ್ಯ, ಶಂಕರ್‌, ಶ್ರೀರಾಮಪ್ಪ, ಮುನಿಕೃಷ್ಣ ಇದ್ದರು.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.