2023ರೊಳಗೆ ಎತ್ತಿನಹೊಳೆ ಯೋಜನೆ ಪೂರ್ಣ: ಸಂಸದ ಬಿ.ಎನ್‌.ಬಚ್ಚೇಗೌಡ

Team Udayavani, Apr 8, 2021, 3:16 PM IST

2023ರೊಳಗೆ ಎತ್ತಿನಹೊಳೆ ಯೋಜನೆ ಪೂರ್ಣ: ಸಂಸದ ಬಿ.ಎನ್‌.ಬಚ್ಚೇಗೌಡ

ಚಿಕ್ಕಬಳ್ಳಾಪುರ: ಬಯಲುಸೀಮೆ ಜಿಲ್ಲೆಗಳಿಗೆ ಕುಡಿಯುವ ನೀರನ್ನು ಕಲ್ಪಿಸಲು ರೂಪಿಸಿರುವ ಎತ್ತಿನಹೊಳೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಪರಿವರ್ತಿಸಿ, ಹೆಚ್ಚಿನ ಅನುದಾನ ಕೊಡಬೇಕು ಎಂದು ಕೇಂದ್ರ ಸರಕಾರಕ್ಕೆ ಮನವಿ ಮಾಡಿದ್ದು, ಮುಂದಿನ 2023ರೊಳಗೆ ಯೋಜನೆಯನ್ನು ಪೂರ್ಣಗೊಳಿಸಿ ಕ್ಷೇತ್ರದ ಜನರಿಗೆ ಕೊಟ್ಟ ಮಾತನ್ನು ಉಳಿಸಿ ಕೊಳ್ಳುತ್ತೇನೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಬಿ.ಎನ್‌.ಬಚ್ಚೇಗೌಡ ಭರವಸೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎತ್ತಿನಹೊಳೆ ಯೋಜನೆಯು ಕುಡಿವ ನೀರಿನ ಯೋಜನೆ ಯಾಗಿದೆ. ಇದರಿಂದ ಬಯಲು ಸೀಮೆಯ ಸುಮಾರು 7-8 ಜಿಲ್ಲೆಗಳಿಗೆ ನೀರಿನ ದಾಹ ನೀಗಲಿದ್ದು, ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ರೂಪಿಸಬೇಕು. ಇನ್ನೂ ಅಗತ್ಯವಿರುವ ಅನುದಾನವನ್ನು ಕೇಂದ್ರ ಸರಕಾರ ನೀಡಬೇಕು ಎಂದು ಈಗಾಗಲೇ ಮನವಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಯೋಜನೆ ಫಲಪ್ರದವಾಗಲು ಇನ್ನಷ್ಟು ಶ್ರಮ ಹಾಕಲಾಗುವುದು ಎಂದರು.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಗೊಳಪಡುವ 9 ತಾಲೂಕುಗಳಲ್ಲಿ 2020-21ನೇ ಸಾಲಿಗೆ ಪ್ರಧಾನಮಂತ್ರಿಗಳ ಗ್ರಾಮ ಸಡಕ್‌ ಯೋಜನೆಯಡಿ ಒಟ್ಟಾರೆ 249.79 ಕಿ.ಮೀ.ನಷ್ಟು ರಸ್ತೆ ಅಭಿವೃದ್ಧಿಗೆ 173.13 ಕೋಟಿ ರೂ. ಮಂಜೂರು ಆಗಿದೆ. ಇದರಲ್ಲಿ ಬೆಂಗಳೂರಿನ ಯಲಹಂಕ ತಾಲೂಕಿನಲ್ಲಿ 46.11 ಕಿ.ಮೀ. ರಸ್ತೆಗೆ 45.63 ಕೋಟಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ ತಾಲೂಕುಗಳಲ್ಲಿ ಒಟ್ಟು 97.94 ಕಿ.ಮೀ. ರಸ್ತೆಗೆ 61.30 ಕೋಟಿ, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಕ್ಕಬಳ್ಳಾಪುರ, ಗೌರಿಬಿದನೂರು, ಗುಡಿಬಂಡೆ ಹಾಗೂ ಬಾಗೇಪಲ್ಲಿ ತಾಲೂಕುಗಳಲ್ಲಿ ಒಟ್ಟು 105.74 ಕಿ.ಮೀ. ರಸ್ತೆಗೆ 66.20 ಕೋಟಿ ರೂ., ಅನುದಾನ ಮಂಜೂರಾಗಿದೆ ಎಂದು ತಿಳಿಸಿದರು.

ಕೊರೊನಾದಿಂದ ಆರ್ಥಿಕ ಪರಿಸ್ಥಿತಿ ಸರಿಯಿಲ್ಲ: ಕೊರೊನಾದಿಂದ ರಾಜ್ಯ, ದೇಶದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ. ಇಂತಹ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆ ನೀಡುವುದು ಸರಿಯಲ್ಲ. ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವುದು ಅಕ್ಷಮ್ಯ ಅಪರಾಧ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬೇಡಿಕೆ ಈಡೇರಿಸಲು ಹೋರಾಟ ನಡೆಸುವುದು ಪ್ರತಿಯೊಬ್ಬರ ಹಕ್ಕು. ಆದರೆ, ರಾಜ್ಯದಲ್ಲಿ ಕೊರೊನಾದಿಂದ ಆರ್ಥಿಕ ಪರಿಸ್ಥಿತಿ ಸರಿಯಿಲ್ಲ. ಈ ಸಂದರ್ಭದಲ್ಲಿ ಲಕ್ಷಾಂತರ ನೌಕರರು ಸರ್ಕಾರದ ವಿರುದ್ಧ ಹೋರಾಟ ಸರಿಯಲ್ಲ, ಕೂಡಲೇ ಮುಷ್ಕರ ಹಿಂಪಡೆದು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಮನವಿ ಮಾಡಿದರು.

ನರೇಗಾ ಯೋಜನೆ ಮೂಲಕ 73 ಸಾವಿರ 500 ಕೋಟಿ ರೂ.ಗಳ ಅನುದಾನ ನೀಡಲಾಗಿದ್ದು, ಈ ಯೋಜನೆ ವ್ಯಾಪ್ತಿಗೆ ಹುಳು ಸಾಕಾಣಿಕೆ ಮನೆ ನಿರ್ಮಾಣಕ್ಕೆ ಅವಕಾಶ ಕಲ್ಪಿಸಲು ಮನವಿ ಮಾಡಿದ್ದೇವೆ. ಚಿಕ್ಕಬಳ್ಳಾಪುರ ರಾಜ್ಯದಲ್ಲಿ 3ನೇ ಸ್ಥಾನ ಪಡೆದಿದೆ. ಯೋಜನೆ ಅಭಿವೃದ್ಧಿಗೆ ಪೂರಕ ಕಾರ್ಯಕ್ರಮ ಅನುಷ್ಠಾಗೊಳಿಸಲಾಗುವುದು ಎಂದರು.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.