ಮಾರಾಕಾಸ್ತ್ರದಿಂದ ಕೊಚ್ಚಿ ವ್ಯಕ್ತಿಯ ಭೀಕರ ಕೊಲೆ: ಗುಡಿಬಂಡೆ ಠಾಣಾ ವ್ಯಾಪ್ತಿಯಲ್ಲಿ ಘಟನೆ
Team Udayavani, Feb 6, 2021, 9:06 PM IST
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪೋಲಿಸ್ ಠಾಣಾ ವ್ಯಾಪ್ತಿಯ ಬೋಗೇನಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ತಲೆ ಹಿಂಭಾಗದಲ್ಲಿ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಸಂಭವಿಸಿದೆ.
ನರಸಿಂಹಪ್ಪ(45) ಕೊಲೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ ದುಷ್ಕರ್ಮಿಗಳು ದ್ವಿಚಕ್ರ ವಾಹನವನ್ನು ಹಿಂಬಾಳಿಸಿಕೊಂಡು ಬಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಕೊಲೆಗೀಡಾದ ನರಸಿಂಹಪ್ಪನವರ ಮೃತದೇಹ ದ್ವಿಚಕ್ರ ವಾಹನದ ಮೇಲೆ ಬಿದ್ದಿದ್ದು ತಲೆಯ ಹಿಂಭಾಗದಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವುದು ಸ್ಪಷ್ಟವಾಗಿ ಕಂಡುಬರುತ್ತಿದೆ ನರಸಿಂಹಪ್ಪ ಎಂಬುವರನ್ನು ಯಾವ ಉದ್ದೇಶಕ್ಕಾಗಿ ಕೊಲೆ ಮಾಡಲಾಗಿದೆ ಎಂಬುದರ ಕುರಿತು ಪೋಲಿಸರು ತನಿಖೆ ನಡೆಸುತ್ತಿದ್ದಾರೆ ಘಟನಾ ಸ್ಥಳಕ್ಕೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಿಕೆ ಮಿಥುನ್ಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಇದನ್ನೂ ಓದಿ:‘ಆ ದೇವರಿಂದಲೂ ನನ್ನನ್ನು ಹಿಡಿಯಲಾಗುವುದಿಲ್ಲ’ ಎಂದ ಆರೋಪಿಯನ್ನು ಜೈಲಿಗಟ್ಟಿದ ಪೊಲೀಸರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ