ಗ್ರಾಮ ನೈರ್ಮಲ್ಯ, ಹೈನುಗಾರಿಕೆಗೆ ಉತ್ತೇಜನ

ನರೇಗಾದಡಿ ಪೌಷ್ಟಿಕ ತೋಟ, ಅಣಬೆ ಬೇಸಾಯ, ದನಕರು ಶೆಡ್‌, ಬಚ cಲುಗುಂಡಿ ನಿರ್ಮಿಸಲು ಸಿಇಒ ಅಭಿಯಾನ

Team Udayavani, Sep 7, 2020, 1:48 PM IST

ಗ್ರಾಮ ನೈರ್ಮಲ್ಯ, ಹೈನುಗಾರಿಕೆಗೆ ಉತ್ತೇಜನ

ಶಿಡ್ಲಘಟ್ಟ: ಉದ್ಯೋಗ ಖಾತ್ರಿ ಯೋಜನೆಯ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸರ್ಕಾರಿ ಶಾಲೆ, ಅಂಗನವಾಡಿ ಕೇಂದ್ರಗಳನ್ನು ಮಾದರಿಯಾಗಿ ಪರಿವರ್ತಿಸಿದ ಬಳಿಕ ಇದೀಗ ಗ್ರಾಮ ನೈರ್ಮಲ್ಯ ಕಾಪಾಡಲು ಬಚ್ಚಲಗುಂಡಿ (ಸೋಕ್‌ ಫಿಟ್), ಪೌಷ್ಟಿಕ ತೋಟ, ಅಣಬೆ ಬೇಸಾಯ, ಹೈನುಗಾರಿಕೆ ಉತ್ತೇಜನಕ್ಕೆ ದನಕರುಗಳ ಶೆಡ್‌ ನಿರ್ಮಿ ಸಲು ಜಿಪಂ ಸಿಇಒ ಫೌಝೀಯಾ ತರು ನುಮ್‌ ಮಾಸ್ಟರ್‌ ಪ್ಲಾನ್‌ ಮಾಡಿದ್ದಾರೆ

ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಪ್ರತಿ ಗ್ರಾಪಂ ಕೇಂದ್ರಗಳಲ್ಲಿ ಕನಿಷ್ಠ 50 ಬಚ್ಚಲುಗುಂಡಿ (ವೈಯಕ್ತಿಕ ಮತ್ತು ಸಮು ದಾಯ), 20 ಪೌಷ್ಟಿಕ ತೋಟ, ಮಹಿಳಾ ಸ್ವಸಹಾಯಗಳ ಮೂಲಕ ಗ್ರಾಪಂಗೊಂದು ಅಣಬೆ ಬೇಸಾಯ ಮಾಡಲು ಶೆಡ್‌ ನಿರ್ಮಿಸಿ, ಹೈನುಗಾರಿಕೆಯಲ್ಲಿ ತೊಡಗುವ ರೈತರಿಗೆ ದನಕರುಗಳಿಗೆ ಶೆಡ್‌ ನಿರ್ಮಿಸಲು ಯೋಜನೆ ರೂಪಿಸಿ, ಗುರಿ ಸಾಧಿಸಲು ಜಿಲ್ಲೆಯ ತಾಪಂ ಇಒ, ನರೇಗಾ ಸಹಾಯಕ ನಿರ್ದೇಶಕರು ಮತ್ತು ಪಿಡಿಒಗಳಿಗೆ ಜಿಪಂ ಸಿಇಒ ನಿರ್ದೇಶನ ನೀಡಿದ್ದಾರೆ.

ನರೇಗಾ ಯೋಜನೆ ಮೂಲಕ ಈಗಾಗಲೇ ಸರ್ಕಾರಿ ಶಾಲೆ, ಕಚೇರಿಗಳಲ್ಲಿ ಮಳೆ ನೀರು ಕೊಯ್ಲು ಪದ್ಧತಿ ಅಳವಡಿಸಿ, ನೀರು ಶೇಖರಣೆ ಮಾಡಲಾಗುತ್ತಿದೆ. ಅಲ್ಲದೆ, ಅಂತರ್ಜಲ ವೃದ್ಧಿಸಲು ಬಹುಕಮಾನ್‌ ಚೆಕ್‌ ಡ್ಯಾಮ್‌, ಬದು, ಕಾಲುವೆ, ಕೃಷಿ ಹೊಂಡ, ಕೆರೆ, ಗೋಕುಂಟೆ, ಕಲ್ಯಾಣಿ ಅಭಿವೃದ್ಧಿಗೊಳಿಸಲಾಗಿದೆ. ಸರ್ಕಾರಿ ಶಾಲೆಗೆ ಕಾಂಪೌಂಡ್‌ ನಿರ್ಮಿಸಿ, ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ 50 ಸರ್ಕಾರಿ ಶಾಲೆ, ಅಂಗನ ವಾಡಿ ಕೇಂದ್ರ ಮಾದರಿಯಾಗಿ ಅಭಿವೃದ್ಧಿಗೊಳಿಸಲು ಸಿಇಒ ಕ್ರಮ ಕೈಗೊಂಡಿದ್ದಾರೆ.

ಕೋವಿಡ್ ಸಂಕಷ್ಟದ ಸಮಯದಲ್ಲಿ ಕೂಲಿ ಕಾರ್ಮಿಕರಿಗೆ ಉದ್ಯೋಗ ನೀಡಿ, ವಲಸೆ ಹೋಗುವು ದನ್ನು ತಪ್ಪಿಸಲು ನರೇಗಾ ಯೋಜನೆ ಮೂಲಕ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳ ಸುಧಾರಣೆಗಾಗಿ ರೈತರ ಅಭಿವೃದ್ಧಿಗೆ ಪೂರಕ ಯೋಜನೆ ಜಾರಿಗೊಳಿಸಿ ಇದೀಗ ಅಂತರ್ಜಲ ವೃದ್ಧಿಗೊಳಿಸಲು ಸಾಂಕ್ರಾಮಿಕ ರೋಗ ತಡೆಗಟ್ಟಲು ಮತ್ತು ರೈತರಿಗೆ ಅನುಕೂಲ ಕಲ್ಪಿಸುವ ಯೋಜನೆ ಆರಂಭಿಸಲಾಗಿದೆ.

ಏನಿದು ಯೋಜನೆ? :  ಗ್ರಾಮೀಣ ಜನರು ವೈಯಕ್ತಿಕವಾಗಿ ಬಚ್ಚಲುಗುಂಡಿ ನಿರ್ಮಿಸಿಕೊಂಡರೇ ನರೇಗಾ ಯೋಜನೆ ಮೂಲಕ 17 ಸಾವಿರ ರೂ. ವರೆಗೆ ಸಹಾಯಧನ ನೀಡಲಾಗುತ್ತದೆ. ಅಲ್ಲದೆ, ಸಮುದಾಯ ಕಾಮಗಾರಿಗಳು ಸಹ ನಡೆಸಬಹುದು. ಕ್ಲೀನ್‌ ಆ್ಯಂಡ್‌ ಗ್ರೀನ್‌ ಕಲ್ಪನೆಯೊಂದಿಗೆ ಪೌಷ್ಟಿಕ ತೋಟ(ಕಿಚನ್‌ ಗಾರ್ಡನ್‌) ನಿರ್ಮಿಸಿಕೊಂಡರೂ ಸಹಾಯಧನ ವಿತರಿಸಲು ಯೋಜನೆ ರೂಪಿಸಲಾಗಿದೆ. ಮಹಿಳಾ ಸ್ವಸಹಾಯ ಸಂಘಗಳು ಆದಾಯೋತ್ಪನ್ನ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಕುಟುಂಬ ನಿರ್ವಹಣೆ ಮಾಡಿಕೊಳ್ಳಲು ಅನುಕೂಲ ಕಲ್ಪಿಸುವ ಸಲುವಾಗಿ ಅಣಬೆ ಬೇಸಾಯಕ್ಕೆ ಶೆಡ್‌ ನಿರ್ಮಿಸಿ ಅಲ್ಲಿ ಮಹಿಳಾ ಸ್ವಸಹಾಯ ಸಂಘಗಳಿಗೆ ಅಣಬೆ ಬೇಸಾಯ ತರಬೇತಿ ನೀಡಲು ಮಾಸ್ಟರ್‌ ಪ್ಲಾನ್‌ ಮಾಡಿ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್‌ ಅವರಿಂದ ಚಾಲನೆ ನೀಡಲಾಗಿದೆ. ಸೆಪ್ಟೆಂಬರ್‌ ತಿಂಗಳಿನಲ್ಲಿ ನಾಲ್ಕು ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮಾಸಾಚರಣೆ ನಡೆಸಲಾಗುತ್ತಿದೆ.

17 ಸಾವಿರ ನೆರವು :  ಪ್ರತಿಯೊಬ್ಬರ ಮನೆಯಲ್ಲಿ ಬಟ್ಟೆ ಮತ್ತು ಪಾತ್ರೆ ತೊಳೆಯುವ ನೀರು ಚರಂಡಿಗೆ ಬಿಡುವ ಅಭ್ಯಾಸ. ಇದರಿಂದ ಚರಂಡಿಯಲ್ಲಿ ನೀರು ಸರಾಗವಾಗಿ ಹರಿಯದೆ ದುರ್ನಾತ ಬೀರುವ ದೂರುಗಳು ಕೇಳಿ ಬರುತ್ತದೆ. ಜೊತೆಗೆ ಚರಂಡಿಗಳಲ್ಲಿ ತ್ಯಾಜ್ಯ ನೀರು ಶೇಖರಣೆಯಾಗಿ ಸೊಳ್ಳೆಗಳಿಗೆ ಆಶ್ರಯತಾಣವಾಗಿ ಪರಿವರ್ತನೆ ಆಗುತ್ತದೆ. ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಾಗಿರುವುದರಿಂದ ಬಚ್ಚಲುಗುಂಡಿ ನಿರ್ಮಿಸಲು ಯೋಜನೆ ರೂಪಿಸಿ ಅದಕ್ಕೆ 17 ಸಾವಿರ ರೂ. ಸಹಾಯಧನ ಕಲ್ಪಿಸಲಾಗುತ್ತದೆ. ಗ್ರಾಮಸ್ಥರು ಈ ಯೋಜನೆ ಸದುಪಯೋಗ ಮಾಡಿಕೊಂಡರೇ ಗ್ರಾಮದಲ್ಲಿ ನೈರ್ಮಲ್ಯ ಕಾಪಾಡಿಕೊಂಡು ಸಾಂಕ್ರಾಮಿಕ ರೋಗ ದೂರ ಮಾಡಲು ಸಹಕಾರಿಯಾಗುತ್ತದೆ.

ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆ ಮೂಲಕ ಸರ್ಕಾರಿ ಶಾಲೆ, ಅಂಗನವಾಡಿ ಕೇಂದ್ರ ನಿರ್ಮಿಸಲು ಕ್ರಮ ಕೈಗೊಂಡು ಸಫಲರಾಗಿದ್ದೇವೆ. ಇದೀಗ ರೈತರಿಗೆ ಹೆಚ್ಚಿನ ಅನುಕೂಲ ಕಲ್ಪಿಸುವ ಸಲುವಾಗಿ ಬಚ್ಚಲು ಗುಂಡಿ, ಪೌಷ್ಟಿಕ ತೋಟ, ಅಣಬೆ ಬೇಸಾಯ, ದನಕರುಗಳಿಗೆ ಶೆಡ್‌ ನಿರ್ಮಿಸುವ ಮಾಸಾಚರಣೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ ನೀಡಲಾಗಿದೆ. ಗುರಿ ಮೀರಿ ಪ್ರಗತಿಸಾಧಿಸಲು ದೃಢಸಂಕಲ್ಪ ಮಾಡಿದ್ದೇವೆ. ಇದಕ್ಕೆ ಪೂರಕವಾಗಿ ನಮ್ಮ ಅ ಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.  ಬಿ.ಫೌಝೀಯಾ ತರುನ್ನುಮ್‌, ಜಿಪಂ ಸಿಇಒ, ಚಿಕ್ಕಬಳ್ಳಾಪುರ

 

  ಎಂ.ಎ.ತಮೀಮ್‌ ಪಾಷ

ಟಾಪ್ ನ್ಯೂಸ್

munenkoppa

ನನಗೆ ರಾಜಕೀಯ ಬದ್ಧತೆಯಿದೆ, ಬೇರೆ ಪಕ್ಷಕ್ಕೆ ಹೋಗಲ್ಲ: ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ

jagadish shettar

ಆಯಾ ಜಿಲ್ಲೆಯ ಸಚಿವರಿಗೆ ಜಿಲ್ಲಾ ಉಸ್ತುವಾರಿ ಸ್ಥಾನ ನೀಡುವುದು ಉತ್ತಮ: ಶೆಟ್ಟರ್

ಹಕ್ಕು ಮತ್ತು ಕರ್ತವ್ಯಗಳು ಜೊತೆಯಾಗಿ ಹೋಗಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹಕ್ಕು ಮತ್ತು ಕರ್ತವ್ಯಗಳು ಜೊತೆಯಾಗಿ ಹೋಗಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

3yakshagana

ಯಕ್ಷಗಾನ ಹಿರಿಯ ಕಲಾವಿದ ಬೇತ ಕುಂಞ ಕುಲಾಲ್ ನಿಧನ

2gold

ಮಂಗಳೂರು ವಿಮಾನ ನಿಲ್ದಾಣದಲ್ಲಿ 29,14,160 ಮೌಲ್ಯದ ಚಿನ್ನ ವಶ

thavarchand gahlot

ಸಮಾಜದ ದುರ್ಬಲ ವರ್ಗಗಳ ಏಳಿಗೆಗೆ ನನ್ನ ಸರ್ಕಾರ ಬದ್ಧ: ರಾಜ್ಯಪಾಲರ ಗಣರಾಜ್ಯೋತ್ಸವ ಸಂದೇಶ

1fire2

ಚಾರ್ಮಾಡಿ ಅರಣ್ಯದಲ್ಲಿ ಅಗ್ನಿ ಆಕಸ್ಮಿಕ: ನೂರಾರು ಎಕರೆ ಅರಣ್ಯ ಬೆಂಕಿಗಾಹುತಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕ್ಲಾವಿಕಲ್ ಬೋನಿನ ಚಿಕಿತ್ಸೆಗಾಗಿ ಲಂಚಕ್ಕೆ ಕೈಯೊಡ್ಡಿದ ಸರ್ಜನ್ ಎಸಿಬಿ ಬಲೆಗೆ

ಕ್ಲಾವಿಕಲ್ ಬೋನಿನ ಚಿಕಿತ್ಸೆಗಾಗಿ ಲಂಚಕ್ಕೆ ಕೈಯೊಡ್ಡಿದ ಸರ್ಜನ್ ಎಸಿಬಿ ಬಲೆಗೆ

ಹೆಣ್ಣು ಮಕ್ಕಳ ಶ್ರೇಯೋಭಿವೃದ್ಧಿಗೆ ಎಲ್ಲರೂ ಶ್ರಮಿಸಿ

ಹೆಣ್ಣು ಮಕ್ಕಳ ಶ್ರೇಯೋಭಿವೃದ್ಧಿಗೆ ಎಲ್ಲರೂ ಶ್ರಮಿಸಿ

ವಾರಾಂತ್ಯ ಕರ್ಫ್ಯೂ ಅಂತ್ಯ: ಸಹಜ ಸಿತಿಗೆ ಜನ ಜೀವನ

ವಾರಾಂತ್ಯ ಕರ್ಫ್ಯೂ ಅಂತ್ಯ: ಸಹಜ ಸಿತಿಗೆ ಜನ ಜೀವನ

ಕಸ ಮುಕ್ತವಾಗಲಿ ಸಂತೆ ಮೈದಾನ

ಕಸ ಮುಕ್ತವಾಗಲಿ ಸಂತೆ ಮೈದಾನ

ರಸ್ತೆ ಬದಿಯ ವಿದ್ಯುತ್‌ ಕಂಬ ಬದಲಿಸಿ ಅಪಾಯ ತಪ್ಪಿಸಿ

ರಸ್ತೆ ಬದಿಯ ವಿದ್ಯುತ್‌ ಕಂಬ ಬದಲಿಸಿ ಅಪಾಯ ತಪ್ಪಿಸಿ

MUST WATCH

udayavani youtube

73ನೇ ಗಣರಾಜ್ಯೋತ್ಸವ ಹಿನ್ನೆಲೆ ರಾಷ್ಟ್ರವನ್ನುದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ

udayavani youtube

ಮದುವೆ ದಿನದಂದು ಕಾಫಿದೊರೆ ಸಿದ್ದಾರ್ಥ ಹೆಗ್ಗಡೆ ಅವರಿಗೆ ನುಡಿ ನಮನ ಸಲ್ಲಿಸಿದ ಮದುಮಗ

udayavani youtube

ಅಭಿಮಾನದಿಂದ ಹಾಕಿದ ಕೇಸರಿ ರುಮಾಲು ಕಿತ್ತೆಸೆದ ಸಿದ್ದರಾಮಯ್ಯ ! ದಂಗಾದ ಅಭಿಮಾನಿ

udayavani youtube

ಮುತ್ತಿನ ಪ್ರಕರಣ : ಶಿಲ್ಪಾ ಶೆಟ್ಟಿಯನ್ನು ’ಸಂತ್ರಸ್ತೆ’ ಎಂದ ಮುಂಬೈ ಕೋರ್ಟ್

udayavani youtube

ವಾಹನ ಸವಾರರ ಗೋಳು ಕೇಳುವವರು ಯಾರು

ಹೊಸ ಸೇರ್ಪಡೆ

munenkoppa

ನನಗೆ ರಾಜಕೀಯ ಬದ್ಧತೆಯಿದೆ, ಬೇರೆ ಪಕ್ಷಕ್ಕೆ ಹೋಗಲ್ಲ: ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ

ಮತದಾನದ ಹಕ್ಕು ಪ್ರಜಾಪ್ರಭುತ್ವದ ಅಡಿಪಾಯ: ಗೋವಾ ರಾಜ್ಯಪಾಲ ಪಿ.ಎಸ್.ಶ್ರೀಧರನ್ ಪಿಳ್ಳೆ

ಮತದಾನದ ಹಕ್ಕು ಪ್ರಜಾಪ್ರಭುತ್ವದ ಅಡಿಪಾಯ: ಗೋವಾ ರಾಜ್ಯಪಾಲ ಪಿ.ಎಸ್.ಶ್ರೀಧರನ್ ಪಿಳ್ಳೆ

5democracy

ಮತದಾರರ ಕೈಯಲ್ಲಿದೆ ಸುಭದ್ರ ಪ್ರಜಾಪ್ರಭುತ್ವ

jagadish shettar

ಆಯಾ ಜಿಲ್ಲೆಯ ಸಚಿವರಿಗೆ ಜಿಲ್ಲಾ ಉಸ್ತುವಾರಿ ಸ್ಥಾನ ನೀಡುವುದು ಉತ್ತಮ: ಶೆಟ್ಟರ್

4——–

ಕಲಬುರಗಿ-ಬೆಂಗಳೂರು ರೈಲು ಶೀಘ್ರ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.