“ಸಾಲ ವಿತರಣೆಯಲ್ಲಿ ರಾಜಕಾರಣ ಮಾಡುತ್ತಿಲ್ಲ’


Team Udayavani, Sep 13, 2020, 4:13 PM IST

“ಸಾಲ ವಿತರಣೆಯಲ್ಲಿ ರಾಜಕಾರಣ ಮಾಡುತ್ತಿಲ್ಲ’

ಚಿಕ್ಕಬಳ್ಳಾಪುರ: ಕೋಲಾರ ಮತ್ತು ಚಿಕ್ಕ ಬಳ್ಳಾಪುರ ಜಿಲ್ಲೆಯಲ್ಲಿ ರೈತರು ಮತ್ತು ಮಹಿಳಾ ಸಬಲೀಕರಣಕ್ಕೆ ಡಿಸಿಸಿ ಬ್ಯಾಂಕ್‌ನಿಂದ ಉತ್ತೇಜನ ನೀಡುತ್ತಿದ್ದೇವೆ ಹೊರತು ರಾಜಕಾರಣ ಮಾಡುತ್ತಿಲ್ಲ ಎಂದು ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಹೇಳಿದರು.

ನಗರದ ಡಿಸಿಸಿ ಬ್ಯಾಂಕ್‌ಗೆ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತತ ಬರಗಾಲದಿಂದ ತತ್ತರಿಸುತ್ತಿರುವ ಕೋಲಾರ ಮತ್ತು ಚಿಕ್ಕಬಳ್ಳಾಪುರಜಿಲ್ಲೆಯಲ್ಲಿ ಶ್ರಮಜೀವಿಗಳಾದ ರೈತರು ಮತ್ತು ಮಹಿಳಾ ಸ್ವಸಹಾಯ ಸಂಘಗಳಿಗೆ ಅವರ ಸಾಧನೆ ಮತ್ತು ಕಾರ್ಯವೈಖರಿ ಪರಿಗಣಿಸಿ ಪಕ್ಷಾತೀತ ಮತ್ತು ಜಾತ್ಯತೀತವಾಗಿ ಸಾಲ ಸೌಲಭ್ಯ ನೀಡುತ್ತಿದ್ದೇವೆ ಎಂದರು.

ಕೇಂದ್ರ, ರಾಜ್ಯ ಸರ್ಕಾರಗಳ ಮಾರ್ಗಸೂಚಿ, ಆರ್‌ಬಿಐ ಬ್ಯಾಂಕ್‌ನ ಮಾನದಂಡ ಪಾಲಿಸುವ ಡಿಸಿಸಿ ಬ್ಯಾಂಕ್‌ನಿಂದ ಮಹಿಳಾ ಸ್ವಸಹಾಯ ಸಂಘಗಳಿಗೆ ಬಡ್ಡಿರಹಿತ ಸಾಲ ಸೌಲಭ್ಯನೀಡುತ್ತಿದ್ದೇವೆ. ಮಹಿಳಾಸ್ವಸಹಾಯ ಸಂಘಗಳು ಬ್ಯಾಂಕ್‌ನಲ್ಲಿ ನಡೆಸಿರುವ ವಹಿವಾಟು-ಉಳಿತಾಯ ಮೊತ್ತ ಮತ್ತು ನಿಯಮಾವಳಿ ಪ್ರಕಾರ ಸಭೆಗಳನ್ನು ನಡೆಸಿರುವುದನ್ನು ಗಮನಿಸಿ ಸಾಲ ಸೌಲಭ್ಯ ನೀಡುತ್ತಿದ್ದೇವೆ. ಸಂಘಗಳ ಉಳಿತಾಯ ಮೊತ್ತದಲ್ಲಿ ಷೇರು ಕಟ್ಟಿಕೊಂಡು ಅವರಿಗೆ ಬಾಂಡ್‌ ನೀಡುತ್ತಿದ್ದೇವೆ. ಸಾಲ ಮರು ಪಾವತಿಯಾದ ಬಳಿಕ ಅವರ ಹಣವನ್ನು ವಾಪಸ್‌ ನೀಡುತ್ತೇವೆ ಎಂದು ಸ್ಪಷ್ಟಪಡಿಸಿದರು.

100 ಕೋಟಿ ಷೇರುಹಣ ಕೊಡಿಸಲಿ: ಡಿಸಿಸಿ ಬ್ಯಾಂಕ್‌ನಲ್ಲಿ 109.49 ಕೋಟಿ ಷೇರು ಮೊತ್ತವಿದೆ. ಜೊತೆಗೆ ಕ್ಷೇತ್ರದ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾ ಕರ್‌ ಅವರು ರಾಜ್ಯ ಸರ್ಕಾರದಲ್ಲಿ ಪ್ರಾಬಲ್ಯ ಹೊಂದಿದ್ದಾರೆ. ಹೀಗಾಗಿ ಸರ್ಕಾರದಿಂದ 100 ಕೋಟಿ ರೂ.ಗಳ ಷೇರು ಹಣ ಪಾವತಿಸಿದರೆ ಮಹಿಳಾ ಸ್ವಸಹಾಯ ಸಂಘಗಳಿಂದಉಳಿತಾಯಮೊತ್ತದಲ್ಲಿ ಷೇರು ಕಟ್ಟಿಸಿಕೊಳ್ಳುವ ಪದ್ಧತಿ ನಿಲ್ಲಿಸಲು ಅನುಕೂಲವಾಗುತ್ತದೆ.

ಜೊತೆಗೆ ಮಹಿಳಾ ಸಂಘಗಳಿಗೆ ನೀಡಿರುವ ಸಾಲದ ಮೇಲಿನ 40 ಕೋಟಿ ರೂ. ಬಡ್ಡಿ ಹಣ ಕೇಂದ್ರ ಸರ್ಕಾರದಿಂದ ಪಾವತಿಯಾಗಬೇಕಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಮುಖ್ಯಮಂತ್ರಿ ಬಳಿ ಚರ್ಚಿಸಿ ಬಡ್ಡಿ ಹಣ ಬಿಡುಗಡೆಮಾಡಲು ಸಹಕಾರ ನೀಡಬೇಕೆಂದು ಮನವಿ ಮಾಡಿದರು.

ಡಿಸಿಸಿ ಬ್ಯಾಂಕ್‌ ನಿರ್ದೇಶಕ ಮೋಹನ್‌ರೆಡ್ಡಿ, ಕೆ.ಎಸ್‌.ದ್ಯಾವಪ್ಪ, ಬಿ.ಆರ್‌.ಅಶ್ವತ್ಥಪ್ಪ, ಬ್ಯಾಂಕ್‌ನ ವ್ಯವಸ್ಥಾಪಕಿ ಜ್ಯೋತಿ, ಮೇಲ್ವಿಚಾರಕಿ ವಸಂತ ಹಾಗೂ ಬ್ಯಾಂಕ್‌ನ ಸಿಬ್ಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kuwait ಅಗ್ನಿ ದುರಂತ: ತಾಯ್ನಾಡಿನತ್ತ ಹೊರಟ 45 ಭಾರತೀಯರ ಮೃತದೇಹ ಹೊತ್ತ ವಿಶೇಷ ವಿಮಾನ

Kuwait ಅಗ್ನಿ ದುರಂತ: 45 ಭಾರತೀಯರ ಮೃತದೇಹ ಹೊತ್ತು ಕೊಚ್ಚಿಗೆ ಹೊರಟ ವಿಶೇಷ ವಿಮಾನ

3-bhalki

Bhalki: ಸಿಡಿಲು ಬಡಿದು ಕುರಿ, ಆಡುಗಳ ಸಾವು

2-udupi

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಪ್ರಗತಿ ತೃಪ್ತಿಕರ

32

Actor Darshan: ರೇಣುಕಾಸ್ವಾಮಿ ಹತ್ಯೆ ಕೇಸ್‌; ದರ್ಶನ್‌ ರಕ್ಷಣೆಗೆ ಸದ್ದಿಲ್ಲದೇ ಕಸರತ್ತು?

36

ಫೇಸ್‌ಬುಕ್‌ನಲ್ಲಿ ಕೊರಗಜ್ಜ ಭಕ್ತರಿಂದ ದೇಣಿಗೆ ಸಂಗ್ರಹ: ಆಡಳಿತ ಮಂಡಳಿಯಿಂದ ದೂರು ದಾಖಲು

31

ರೇಣುಕಾಸ್ವಾಮಿ ದೇಹದ 15 ಕಡೆ ಗಂಭೀರ ಗಾಯ ಪೊಲೀಸರ ಕೈ ಸೇರಿದ ಮರಣೋತ್ತರ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

manchenahalli

Manchenahalli; ವಿದ್ಯುತ್ ಸ್ಪರ್ಶವಾಗಿ ಕಂಬದಲ್ಲಿಯೇ ಮೃತಪಟ್ಟ ಬೆಸ್ಕಾಂ ಸಿಬ್ಬಂದಿ

3-gudibande

Gudibanda: ಕಾರು ಅಪಘಾತ: ಮೂವರು ಬೆಸ್ಕಾಂ ಸಿಬ್ಬಂದಿಗಳು ಸಾವು

Pradeep Eshwar: ಶಾಸಕ ಪ್ರದೀಪ್‌ ಈಶ್ವರ್‌ ರಾಜೀನಾಮೆ ಪತ್ರ ವೈರಲ್‌

Pradeep Eshwar: ಶಾಸಕ ಪ್ರದೀಪ್‌ ಈಶ್ವರ್‌ ರಾಜೀನಾಮೆ ಪತ್ರ ವೈರಲ್‌

ನಂದಿಗಿರಿಧಾಮ ಪ್ರವೇಶ ಸಮಯ 1 ಗಂಟೆ ಕಡಿತ

ವಿಶ್ವ ವಿಖ್ಯಾತ ನಂದಿಗಿರಿಧಾಮ ಪ್ರವೇಶ ಸಮಯ 1 ಗಂಟೆ ಕಡಿತ

Pocso Case: ಮುಖ್ಯ ಶಿಕ್ಷಕನಿಂದ ಅತ್ಯಾಚಾರ:13 ವರ್ಷದ ವಿದ್ಯಾರ್ಥಿನಿ ಗರ್ಭಿಣಿ

Pocso Case: ಮುಖ್ಯ ಶಿಕ್ಷಕನಿಂದ ಅತ್ಯಾಚಾರ:13 ವರ್ಷದ ವಿದ್ಯಾರ್ಥಿನಿ ಗರ್ಭಿಣಿ

MUST WATCH

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

udayavani youtube

ಲಾಭದಾಯಕ ಮಲ್ಲಿಗೆ ಕೃಷಿ ಮಾಡುವುದು ಹೇಗೆ? | ಶಂಕರಪುರ ಮಲ್ಲಿಗೆ

ಹೊಸ ಸೇರ್ಪಡೆ

Kuwait ಅಗ್ನಿ ದುರಂತ: ತಾಯ್ನಾಡಿನತ್ತ ಹೊರಟ 45 ಭಾರತೀಯರ ಮೃತದೇಹ ಹೊತ್ತ ವಿಶೇಷ ವಿಮಾನ

Kuwait ಅಗ್ನಿ ದುರಂತ: 45 ಭಾರತೀಯರ ಮೃತದೇಹ ಹೊತ್ತು ಕೊಚ್ಚಿಗೆ ಹೊರಟ ವಿಶೇಷ ವಿಮಾನ

3-bhalki

Bhalki: ಸಿಡಿಲು ಬಡಿದು ಕುರಿ, ಆಡುಗಳ ಸಾವು

2-udupi

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಪ್ರಗತಿ ತೃಪ್ತಿಕರ

32

Actor Darshan: ರೇಣುಕಾಸ್ವಾಮಿ ಹತ್ಯೆ ಕೇಸ್‌; ದರ್ಶನ್‌ ರಕ್ಷಣೆಗೆ ಸದ್ದಿಲ್ಲದೇ ಕಸರತ್ತು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.