ಸರ್ಕಾರಿ ಶಾಲೆಗಳ ಉಳಿವಿಗೆ ಸಹಭಾಗಿತ್ವ ಅಗತ್ಯ

Team Udayavani, Feb 25, 2020, 3:00 AM IST

sarkari-sh

ಚಿಕ್ಕಬಳ್ಳಾಪುರ: ಸರ್ಕಾರಿ ಶಾಲೆಗಳು ಸದೃಢವಾಗಿ ಸಮಾಜಕ್ಕೆ ಮಾದರಿಯಾಗಿ ಬೆಳೆಯಬೇಕು. ಈ ನಿಟ್ಟಿನಲ್ಲಿ ಸರ್ಕಾರಗಳ ಶಾಲೆಗಳ ಉಳಿವಿಗೆ ಸಮುದಾಯದ ಸಹಭಾಗಿತ್ವ ಬಹಳ ಅಗತ್ಯ ಎಂದು ಚಿಕ್ಕಬಳ್ಳಾಪುರ ಉಪವಿಭಾಗಾಧಿಕಾರಿ ಎ.ಎನ್‌.ರಘುನಂದನ್‌ ಹೇಳಿದರು.

ತಾಲೂಕಿನ ದೇವಸ್ಥಾನ ಹೊಸಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ರಂಗಮಂದಿರ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿದ್ದು, ಈ ಬಗ್ಗೆ ಪೋಷಕರು ಗಮನ ಹರಿಸಬೇಕೆಂದರು.

ರಂಗಮಂದಿರ ನಿರ್ಮಾಣ: ದೇವಸ್ಥಾನ ಹೊಸಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯು ಸರ್ಕಾರದ ಅನುದಾನ ಪಡೆಯದೇ ಗ್ರಾಮಸ್ಥರು ಹಾಗೂ ದಾನಿಗಳಿಂದ ಸಂಗ್ರಹವಾದ ಹಣದಿಂದ ವಿನೂತನವಾಗಿ ರಂಗಮಂದಿರ ನಿರ್ಮಿಸಿರುವುದು ಶ್ಲಾಘನೀಯ. ಈ ಶಾಲೆಯು ಗುಣಮಟ್ಟದ ಶಿಕ್ಷಣ ಮಕ್ಕಳಿಗೆ ನೀಡುತ್ತಿದೆ ಎಂದರು.

ಸ್ಪರ್ಧಾತ್ಮಕ ಯುಗಕ್ಕೆ ತಕ್ಕಂತೆ ಬೆಳೆಸಿ: ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದು ಅಧಿಕವಾಗುತ್ತಿವೆ. ಸರ್ಕಾರಿ ಶಾಲೆಗಳನ್ನು ಸಮಾಜಕ್ಕೆ ಮಾದರಿಯನ್ನಾಗಿಸುವಲ್ಲಿ ಶಿಕ್ಷಕರು, ಮಕ್ಕಳು ಹಾಗೂ ಗ್ರಾಮಸ್ಥರು ಸಹಕಾರ ಅಗತ್ಯ. ಮಕ್ಕಳಿಗೆ ಉತ್ತಮ ಮೌಲ್ಯಗಳನ್ನು ಕಲಿಸಿ ಕೊಡುವ ಕೆಲಸ ಶಿಕ್ಷಕರಿಂದ ಆಗಬೇಕು. ಮಕ್ಕಳನ್ನು ಇಂದಿನ ಸ್ಪರ್ಧಾತ್ಮಕ ಯುಗಕ್ಕೆ ತಕ್ಕಂತ ಬೆಳೆಸಬೇಕು. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳನ್ನು ಹೆಚ್ಚು ಆಯೋಜಿಸಬೇಕೆಂದರು.

ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಮುನಿರಾಜು, ಜೀವನ್‌ ಆಸ್ಪತ್ರೆಯ ಮುಖ್ಯಸ್ಥ ಐ.ಎಸ್‌. ರಾವ್‌, ಯುವ ಮುಖಂಡ ಸಂತೋಷ್‌, ಮುಖ್ಯ ಶಿಕ್ಷಕ ಶಾಂತ ಮೂರ್ತಿ, ಶಿಕ್ಷಕರಾದ ಬಿ.ಸಿ.ಮಂಜುಳಾ, ಪ್ರಕಾಶ್‌, ಹನುಮಂತ ರೆಡ್ಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ನಾರಾಯಣ ಸ್ವಾಮಿ, ತಾಲೂಕು ಅಧ್ಯಕ್ಷ ರಾಮಶೇಷಪ್ಪ, ಅರಸನಹಳ್ಳಿ ಕ್ಲಸ್ಟರ್‌ ವೆಂಕಟೇಶ್‌, ಗ್ರಾಮದ ಮುಖಂಡ ರಾಮಣ ಉಪಸ್ಥಿತರಿದ್ದರು.

ಮಕ್ಕಳಿಂದ ಸಾಂಸ್ಕೃತಿಕ ಚಟುವಟಿಕೆ: ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಶಾಲೆಯ ಮಕ್ಕಳಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿ ಬಂದವು. ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಗಣ್ಯರು ಬಹುಮಾನ ವಿತರಿಸಿ ಅಭಿನಂದಿಸಿದರು. ವಿಶೇಷವಾಗಿ ಶಾಲಾ ಮಕ್ಕಳು ಕಲಿತು ಪ್ರದರ್ಶಿಸಿದ ಭರತನಾಟ್ಯ ನೃತ್ಯ ಪ್ರೇಕ್ಷಕರ ಗಮನ ಸೆಳೆಯಿತು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ

Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.