ಜಾನುವಾರು ಆರೋಗ್ಯದ ಕಡೆಗೆ ಗಮನ ಹರಿಸಿ


Team Udayavani, Apr 8, 2017, 4:46 PM IST

9-rain-05.jpg

ಚಿಕ್ಕಬಳ್ಳಾಪುರ: ಬರಪೀಡಿತ ಜಿಲ್ಲೆಯಲ್ಲಿ ಸಾವಿರಾರು ಕುಟುಂಬಗಳಿಗೆ ಹೈನೋದ್ಯಮವೇ ಜೀವನಧಾರವಾಗಿದೆ. ಆದ್ದರಿಂದ, ರೈತರು ಜಾನುವಾರುಗಳ ಆರೋಗ್ಯದ ಕಡೆಗೆ ಹೆಚ್ಚಿನ ಕಾಳಜಿ ವಹಿಸಬೇಕು. ಕಾಲು ಬಾಯಿ ಜ್ವರದ ನಿಯಂತ್ರಣಕ್ಕೆ ಪಶು ವೈದ್ಯ ಇಲಾಖೆ ಮೂಲಕ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಪಂ ಸಿಇಒ ಜೆ.ಮಂಜುನಾಥ ತಿಳಿಸಿದರು.

ನಗರದ ಪಶು ವೈದ್ಯ ಇಲಾಖೆಯ ಉಪ ನಿರ್ದೇಶಕರ ಕಚೇರಿ ಆವರಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಪಂ ಹಾಗೂ ಪಶು ಪಾಲನಾ ಇಲಾಖೆ, ಕೋಚಿಮುಲ್‌ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ 12ನೇ ಸುತ್ತಿನ ಕಾಲು ಬಾಯಿ ಜ್ವರದ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಜಾನುವಾರುಗಳಿಗೆ ಲಸಿಕೆ ಹಾಕಿಸಿ: ಕಳೆದ ವರ್ಷಕ್ಕೆ ಹೋಲಿಸಿದರೆ ಜಿಲ್ಲೆಯಲ್ಲಿ ಕಾಲುಬಾಯಿ ಜ್ವರ ನಿಯಂತ್ರಣದಲ್ಲಿದೆ. ಆದರೂ, ಮುಂಜಾಗ್ರತೆಯಿಂದ ರಾಸುಗಳಿಗೆ 12ನೇ ಸುತ್ತಿನಲ್ಲಿ ಲಸಿಕೆ ಹಾಕುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ರೈತರು ಅಭಿಯಾನದಲ್ಲಿ ಪಾಲ್ಗೊಂಡು ತಮ್ಮ ಜಾನುವಾರುಗಳಿಗೆ ತಪ್ಪದೇ ಲಸಿಕೆ ಹಾಕಿಸಬೇಕು. ಜಾನುವಾರುಗಳಿಗೆ ಜ್ವರ ಬಂದಾಗ ತಡ ಮಾಡದೇ ಪಶು ವೈದ್ಯರ ಬಳಿಗೆ ಕರೆದುಕೊಂಡು ಬರಬೇಕು ಎಂದರು. ಗ್ರಾಮೀಣ ಭಾಗದಲ್ಲಿ ಕಾಲುಬಾಯಿ ಜ್ವರದ ಬಗ್ಗೆ ಹಲವಾರು ತಪ್ಪು ಕಲ್ಪನೆಗಳಿರುವುದರಿಂದ ರೈತರು ತಮ್ಮ ಜಾನುವಾರುಗಳನ್ನು ಕಳೆದುಕೊಳ್ಳುತ್ತಿ¨ªಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಮೇವಿನ ಕಿಟ್‌: ಜಿಲ್ಲೆಯಲ್ಲಿ ಬರ ಪರಿಸ್ಥಿತಿಯನ್ನು ಜಿಲ್ಲಾಡಳಿತ ಸಮರ್ಥವಾಗಿ ನಿಭಾಯಿಸುತ್ತಿದೆ. ರೈತರಿಗೆ ಪಶು ಪಾಲನಾ ಇಲಾಖೆಯಿಂದ 25 ಸಾವಿರಕ್ಕೂ ಅಧಿಕ ಮೇವಿನ ಕಿಟ್‌ಗಳನ್ನು ವಿತರಿಸಲಾಗಿದೆ. ಬೇಡಿಕೆಗೆ ತಕ್ಕಂತೆ ಮೇವಿನ ಕಿಟ್‌ಗಳನ್ನು ವಿತರಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ರಿಯಾಯಿತಿ ದರದಲ್ಲಿ ಹಸಿಲು ಮೇವು ವಿತರಣೆಗೆ ಜಿಲ್ಲಾಡಳಿತ ಚಿಂತನೆ ನಡೆಸಿದೆ. ಜಿಲ್ಲೆಯ 125ಕ್ಕೂ ಹೆಚ್ಚು ಗ್ರಾಪಂ ಮಟ್ಟದಲ್ಲಿ ಮೇವು ಬ್ಯಾಂಕ್‌ ಸ್ಥಾಪಿಸಿ, ಬೇಡಿಕೆಗೆ ತಕ್ಕಂತೆ ವಿತರಣೆ ಮಾಡಲಾಗುತ್ತಿದೆ ಎಂದು ಹೇಳಿದರು.

ಹಳ್ಳಿಗೆ ಹೋಗದ ವೈದ್ಯರ ಮೇಲೆ ಕ್ರಮ: ಗ್ರಾಮಾಂತರ ಪ್ರದೇಶದಲ್ಲಿ ಬಹಳಷ್ಟು ಪಶು ವೈದ್ಯರು ಹಳ್ಳಿಗಳಲ್ಲಿ ಸಮರ್ಪಕ ಸೇವೆ ಸಲ್ಲಿಸುತ್ತಿಲ್ಲ ಎಂಬ ಆರೋಪವಿದೆ. ಇದು ತೊಲಗಬೇಕು. ರೈತರು ದೂರವಾಣಿ ಕರೆ ಮಾಡಿದ ತಕ್ಷಣ ಸ್ಥಳಕ್ಕೆ ಹೋಗಿ ಪಶುಗಳಿಗೆ ಆರೋಗ್ಯ ಸೇವೆ ನೀಡಬೇಕು. ಗ್ರಾಮೀಣ ಭಾಗಕ್ಕೆ ಹೋಗದೇ ಕರ್ತವ್ಯ ಲೋಪವೆಸಗುವ ವೈದ್ಯರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಮದು ಎಚ್ಚರಿಸಿದರು. 

ರೋಗ ಹರದಡಂತೆ ಮುಂಜಾಗ್ರತೆ ಅಗತ್ಯ: ಕಾಲು ಬಾಯಿ ಜ್ವರದ ನಿಯಂತ್ರಣಕ್ಕೆ ವೈದ್ಯರ ಸೇವೆ ಬಹಳ ಮುಖ್ಯ. ಈ ಬಗ್ಗೆ ರೈತರಲ್ಲಿ ರೋಗ ಹರದಡಂತೆ ಮುಂಜಾಗ್ರತೆಗಳ ಬಗ್ಗೆ ಅರಿವು ಮೂಡಿಸಬೇಕು. ಇದರಿಂದ ರೋಗವನ್ನು ಸಂಪೂರ್ಣವಾಗಿ ಹತೋಟಿಗೆ ತರುವ ಮೂಲಕ ಅಪಾರ ಪಶು ಸಂಪತ್ತು ರಕ್ಷಿಸಿದಂತಾಗುತ್ತದೆ. ಜಾನುರಾರುಗಳನ್ನು ನಂಬಿದ ರೈತರ ಕುಟುಂಬಗಳು ಆರ್ಥಿಕವಾಗಿ ಬಲಗೊಂಡು ಸಮೃದ್ಧಿ ಜೀವನ ನಡೆಸುತ್ತವೆ ಎಂದರು.

ಪಶು ವೈದ್ಯ ಇಲಾಖೆ ಜಿಲ್ಲಾ ಉಪ ನಿರ್ದೇಶಕ ಡಾ.ಪಾಂಡುರಂಗಪ್ಪ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 208 ಲಸಿಕೆದಾರರಿದ್ದು, ಒಟ್ಟು 28 ತಂಡಗಳನ್ನು ರಚನೆ ಮಾಡಲಾಗಿದೆ. 5 ದಿನಗಳ ವರೆಗೆ ಜಾನುವಾರುಗಳಿಗೆ ಲಸಿಕೆ ಹಾಕಲಾಗುವುದು ಎಂದರು. ಈ ಸಂದರ್ಭದಲ್ಲಿ ಪಶು ಪಾಲನಾ ಹಾಗೂ ಪಶು ವೈದ್ಯ ಇಲಾಖೆಯ ನುರಿತ ತಜ್ಞರು, ಲಸಿಕೆದಾರರು, ರೈತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Gundlupete: ಕಚೇರಿಯ ಕೊಠಡಿಯಲ್ಲೇ ನೇಣಿಗೆ ಶರಣಾದ ಪೈನಾನ್ಸ್ ಸಿಬ್ಬಂದಿ… ಕಾರಣ ನಿಗೂಢ

Gundlupete: ಕಚೇರಿಯ ಕೊಠಡಿಯಲ್ಲೇ ನೇಣಿಗೆ ಶರಣಾದ ಫೈನಾನ್ಸ್ ಸಿಬ್ಬಂದಿ… ಕಾರಣ ನಿಗೂಢ

protest

BJP protest: ಶಾಸಕ ಅಭಯ ಪಾಟೀಲರನ್ನು ಹೊತ್ತುಕೊಂಡು ವ್ಯಾನ್ ಗೆ ಹಾಕಿದ ಪೊಲೀಸರು

15-subrahmanya

ರಾಜ್ಯ ಸರಕಾರ ಜನಹಿತ ಮರೆತಿದೆ- ಕುಕ್ಕೆಯಲ್ಲಿ ಮಾಜಿ ಸಿಎಂ ಬಿ.ಎಸ್.ವೈ

Mudhol: ಸಿಲಿಂಡರ್ ಸ್ಫೋಟಗೊಂಡು ಹಾರಿ ಹೋದ ಮನೆಯ ಮೇಲ್ಛಾವಣಿ… ತಪ್ಪಿದ ಅನಾಹುತ

Mudhol: ಸಿಲಿಂಡರ್ ಸ್ಫೋಟಗೊಂಡು ಹಾರಿ ಹೋದ ಮನೆಯ ಮೇಲ್ಛಾವಣಿ… ತಪ್ಪಿದ ಅನಾಹುತ

14-uv-fusion

UV Fusion: ನೆನಪುಗಳು, ಭಾವನೆಗಳು ಸಮತೋಲನ ಆಗಿರಲಿ

R B Thimmapur reacts to Revanna family case

Revanna Case; ಮಾನಗೇಡಿ ಕೆಲಸ ಮಾಡಿ ಅಂತ ನಾವು ಹೇಳಿದ್ವಾ?: ಸಚಿವ ತಿಮ್ಮಾಪುರ ಪ್ರಶ್ನೆ

13-uv-fusion

Education: ಶಿಕ್ಷಣ ಎಂದರೆ ಕೇವಲ ಅಂಕ ಗಳಿಕೆಯೇ ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pradeep-eshwar

Chikkaballapur: ಶಾಸಕ ಪ್ರದೀಪ್ ಈಶ್ವರ್ ಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ

3-chikkaballapura

Chikkaballapur: ಯೋಗಾ ದಿನಾಚರಣೆಯಲ್ಲಿ ರಾಜಕೀಯ ಕಡು ವೈರಿಗಳ ಸಂಗಮ

Cow

Chikkaballapura: ಮುಂಗಾರು ಬೆನ್ನಲ್ಲೇ ಹೈನೋದ್ಯಮಕ್ಕೆ ಜೀವಕಳೆ

Chikkaballapura; ಕ್ರಷರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕ ಸಾವು

Chikkaballapura; ಕ್ರಷರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕ ಸಾವು

Kodi Mutt Seer expressed his opinion regarding actor Darshan’s case

ನಟ ದರ್ಶನ್ ಪ್ರಕರಣಕ್ಕೆ ಸಂಬಂಧಿಸಿ ಅಭಿಪ್ರಾಯ ವ್ಯಕ್ತಪಡಿಸಿದ ಕೋಡಿ ಮಠದ ಶ್ರೀಗಳು

MUST WATCH

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

udayavani youtube

ಮುಳ್ಳಯ್ಯನಗಿರಿ,ದತ್ತಪೀಠ, ಸೀತಾಳಯ್ಯನಗಿರಿಯಲ್ಲಿ ಜನಜಾತ್ರೆ; ಖಾಕಿ ಹೈ ಅಲರ್ಟ್

ಹೊಸ ಸೇರ್ಪಡೆ

17-uv-fusion

UV Fusion: ಐ (i) ಅಂದ್ರೆ?

16-uv-fusion

Life: ಬದುಕು ಕಟ್ಟಿಕೊಳ್ಳುವುದೇ ಸಾಧನೆಯೇ?

Gundlupete: ಕಚೇರಿಯ ಕೊಠಡಿಯಲ್ಲೇ ನೇಣಿಗೆ ಶರಣಾದ ಪೈನಾನ್ಸ್ ಸಿಬ್ಬಂದಿ… ಕಾರಣ ನಿಗೂಢ

Gundlupete: ಕಚೇರಿಯ ಕೊಠಡಿಯಲ್ಲೇ ನೇಣಿಗೆ ಶರಣಾದ ಫೈನಾನ್ಸ್ ಸಿಬ್ಬಂದಿ… ಕಾರಣ ನಿಗೂಢ

protest

BJP protest: ಶಾಸಕ ಅಭಯ ಪಾಟೀಲರನ್ನು ಹೊತ್ತುಕೊಂಡು ವ್ಯಾನ್ ಗೆ ಹಾಕಿದ ಪೊಲೀಸರು

15-subrahmanya

ರಾಜ್ಯ ಸರಕಾರ ಜನಹಿತ ಮರೆತಿದೆ- ಕುಕ್ಕೆಯಲ್ಲಿ ಮಾಜಿ ಸಿಎಂ ಬಿ.ಎಸ್.ವೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.