ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಪೋಟ ಪ್ರಕರಣ: ಸಂತಾಪ ಸೂಚಿಸಿದ ಪ್ರಧಾನಿ ಮೋದಿ
Team Udayavani, Feb 23, 2021, 10:47 AM IST
ಚಿಕ್ಕಬಳ್ಳಾಪುರ: ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ಹಿರೇನಾಗವೇಲಿ ಗ್ರಾಮದ ಬಳಿ ನಡೆದ ಜಿಲೆಟಿನ್ ಸ್ಪೋಟ ಪ್ರಕರಣದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣಗಳಲ್ಲಿ ಹಲವರು ಸಾವನ್ನಪ್ಪಿದ್ದು, ಘಟನೆ ಸಾಕಷ್ಟು ನೋವನ್ನು ತಂದಿದೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ ಹಾಗೂ ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಹೇಳಿದ್ದಾರೆ.
ಸಿಎಂ ಸಂತಾಪ: ಘಟನೆಯ ಬಗ್ಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಷಾದ ವ್ಯಕ್ತಪಡಿಸಿದ್ದಾರೆ. ಟ್ವೀಟ್ ಮಾಡಿರುವ ಅವರು, ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿ ಗ್ರಾಮದ ಬಳಿ ಜಿಲೆಟಿನ್ ಸ್ಫೋಟದಿಂದ ಆರು ಮಂದಿ ಸಾವನ್ನಪ್ಪಿರುವುದು ತೀವ್ರ ಆಘಾತ ತಂದಿದೆ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುತ್ತಿದ್ದು, ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದಿದ್ದಾರೆ.
ಇದನ್ನೂ ಓದಿ:ಮುರುಗೇಶ್ ನಿರಾಣಿಗೆ ಅಮಿತ್ ಶಾ ದಿಢೀರ್ ಬುಲಾವ್: ಕುತೂಹಲ ಮೂಡಿಸಿದ ನಿರಾಣಿ ದಿಲ್ಲಿ ಭೇಟಿ!
ಮೃತರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ, ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಈ ದುರ್ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದ ಎಂದು ಸಿಎಂ ಹೇಳಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
“ಏನು ಬೇಕೋ ಮಾತಾಡೋಣ”: ಸಿಎಂ ಯಡಿಯೂರಪ್ಪ- ಯತ್ನಾಳ್ ಅಪರೂಪದ ಭೇಟಿ
2-+3-4 ಫಾರ್ಮುಲಾದ ಬಗ್ಗೆ ಕೋರ್ಟ್ ಗೆ ಹೋದವರಿಗೆ ಗೊತ್ತಿರಬಹುದು: ಕುಮಾರಸ್ವಾಮಿ
ಅನೈತಿಕ ಸರ್ಕಾರವಾಗಿದ್ದರೆ ಸದನದಲ್ಲಿ ಚರ್ಚಿಸಿ: ಕಾಂಗ್ರೆಸ್ ಗೆ ಜಗದೀಶ್ ಶೆಟ್ಟರ್ ಸವಾಲು
ಬುಕ್ ಆಫ್ ಲಾ ಪ್ರಕಾರ ಜಾರಕಿಹೊಳಿ ಪ್ರಕರಣ ತನಿಖೆ: ಬಸವರಾಜ ಬೊಮ್ಮಾಯಿ
ಇತಿಮಿತಿ ನಡುವೆಯೂ ವಾಸ್ತವಕ್ಕೆ ಹತ್ತಿರವಾದ ಬಜೆಟ್