ಡಿಕೆಶಿಗೆ ಇಡಿ ಸಂಕಷ್ಟ: ಸಾಯಿಬಾಬಾ ಮೊರೆ ಹೋದ ಬೆಂಬಲಿಗರು

Team Udayavani, Sep 5, 2019, 1:23 PM IST

ಚಿಕ್ಕಬಳ್ಳಾಪುರ: ಇ ಡಿ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವರಾದ ಡಿ.ಕೆ.ಶಿವಕುಮಾರ್ ಬೇಗನೆ ಬಂಧನ ಮುಕ್ತರಾಗಲು ಚಿಕ್ಕಬಳ್ಳಾಪುರ ತಾಲ್ಲೂಕು ಹಾರೋಬಂಡೆ ಗ್ರಾಮದಲ್ಲಿರುವ ಶ್ರೀ ಸಾಯಿಬಾಬಾ ದೇವಸ್ಥಾನದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಡಿ.ಕೆ.ಶಿವಕುಮಾರ್ ಅಭಿಮಾನಿಗಳು ಗುರುವಾರ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಹಿರಿಯ ಮುಖಂಡ ಜಿ.ಹೆಚ್. ನಾಗರಾಜ್, ಬಿಜೆಪಿ ತನ್ನ ರಾಜಕೀಯ ವಿರೋಧಿಗಳ ವಿರುದ್ಧ ಉದ್ದೇಶ ಪೂರ್ವಕವಾಗಿಯೇ ಐಟಿ, ಇಡಿ, ಸಿಬಿಐ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಇಂತಹ ಸೇಡಿನ ರಾಜಕಾರಣವನ್ನು ದೇಶದ ಇತಿಹಾಸದಲ್ಲೇ ನೋಡಿಲ್ಲ. ಯಾರಾದರೂ ತಪ್ಪು ಮಾಡಿದರೆ ಕಾನೂನು ಪ್ರಕಾರ ಕ್ರಮಕೈಗೊಳ್ಳುವುದಕ್ಕೆ ಯಾರೂ ಅಡ್ಡಿ ಬರುವುದಿಲ್ಲ. ಆದರೆ
ಬಿಜೆಪಿಯ ಷಢ್ಯಂತ್ರ, ಮೋಸ, ವಂಚನೆಯನ್ನು ಖಂಡಿಸುತ್ತೇವೆ. ಇದಕ್ಕೆ ತಕ್ಕ ಉತ್ತರ ನೀಡಲು ಜನಾಭಿಪ್ರಾಯ ರೂಪಿಸಲಾಗುವುದು. ಇದರಿಂದ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಗಂಡಾಂತರ ಇದೆ. ಎಲ್ಲರೂ ಒಗ್ಗಟ್ಟಾಗಿ ಎದುರಿಸುವ ಅಗತ್ಯತೆ ಇದ್ದು, ಕಾಂಗ್ರೆಸ್ ಈ ಕೆಲಸ ಮಾಡಲಿದೆ. ಜನರಿಗೆ ಸತ್ಯವನ್ನು ಮನವರಿಗೆ ಮಾಡಿಕೊಡಲಾಗುವುದು ಎಂದರು.

ಈ ಸಂದರ್ಭದಲ್ಲಿ ವಕ್ಕಲಿಗರ ಸಂಘದ ನಿರ್ದೇಶಕ ಯಲುವಹಳ್ಳಿ ರಮೇಶ್, ಕೆಪಿಸಿಸಿ ಸದಸ್ಯ ಎಸ್.ಪಿ.ಶ್ರೀನಿವಾಸ್, ಮುಖಂಡರಾದ ಜಯರಾಂ, ನಾರಾಯಣಸ್ವಾಮಿ,ಲಕ್ಷ್ಮಣ್, ಮಂಚನಬಲೆ ವೆಂಕಟೇಶ್, ಮರಸನಹಳ್ಳಿ ಪ್ರಕಾಶ್, ಗೇರಹಳ್ಳಿ ವಿಜಯ್ ಕುಮಾರ್, ರಾಜಶೇಖರ್, ವೆಂಕಟೇಶ್, ಡಿಕೆಶಿ ಸಂಘದ ಜಿಲ್ಲಾಧ್ಯಕ್ಷ ಶಶಿ,ತಾಲ್ಲೂಕು ಅಧ್ಯಕ್ಷ ಶಿವಕುಮಾರ್, ಯುವ ಮುಖಂಡರಾದ ಪಟ್ರೇನಹಳ್ಳಿ ಕೃಷ್ಣ ಷಾಹಿದ್, ಸುರೇಶ್, ಹಮೀಮ್ ಮುಂತಾದವರು ಹಾಜರಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ