ತೂಕ ನೋಡಿ ಕುರಿ, ಮೇಕೆ ಬೆಲೆ ನಿಗದಿ


Team Udayavani, Mar 3, 2020, 3:00 AM IST

tooka-nodui

ಚಿಕ್ಕಬಳ್ಳಾಪುರ: ಕುರಿ ಹಾಗೂ ಮೇಕೆಗಳ ಸೊಂಟ ನೋಡಿ ಮನಸ್ಸಿಗೆ ಬಂದಷ್ಟು ತೂಕ ಹೇಳಿ ಸಾಕಾಣಿಕೆದಾರರಿಂದ ವ್ಯಾಪಾರಸ್ಥರು ಇನ್ಮೆಲೆ ಕೈಗೆ ಬಂದ ಬೆಲೆಗೆ ಖರೀದಿ ಮಾಡುವಂತಿಲ್ಲ. ಇನ್ಮುಂದೆ ಕುರಿ ಹಾಗೂ ಮೇಕೆಗಳ ತೂಕದ ಮೇಲೆಯೇ ವೈಜ್ಞಾನಿಕವಾಗಿ ಬೆಲೆ ನಿಗದಿಯಾಗಲಿದೆ. ಹೌದು, ರಾಜ್ಯ ಸಹಕಾರಿ ಕುರಿ ಮತ್ತು ಮೇಕೆ ಸಾಕಾಣಿಕೆ ಸಂಘಗಳ ಮಹಾ ಮಂಡಳ ತಾಲೂಕಿನ ಪೆರೇಸಂದ್ರದಲ್ಲಿ ಜಿಲ್ಲೆಯಲ್ಲಿ ಮೊದಲ ಬಾರಿಗೆ 40 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ವೈಜ್ಞಾನಿಕ ಕುರಿ ಹಾಗೂ ಮೇಕೆಗಳ ಮಾರುಕಟ್ಟೆಗೆ ಸೋಮವಾರ ಜಿಪಂ ಸಿಇಒ ಬಿ.ಫೌಝೀಯಾ ತರುನ್ನುಮ್‌ ಚಾಲನೆ ನೀಡಿದರು.

ಜಿಲ್ಲೆಯಲ್ಲಿ ರೈತಾಪಿ ಜನ ಕೃಷಿಯಷ್ಟೇ ಉಪ ಕಸುಬುಗಳಾಗಿ ಕುರಿ ಹಾಗೂ ಮೇಕೆಗಳ ಸಾಕಾಣಿಕೆಯಲ್ಲಿ ತೊಡಗಿದ್ದು, ರೈತರಿಗೆ ಸಂತೆಗಳಲ್ಲಿ ಮಧ್ಯವರ್ತಿಗಳ ಹಾಗೂ ದಲ್ಲಾಳಿಗಳಿಂದ ಆಗುತ್ತಿರುವ ತೂಕದ ವಂಚನೆ, ಬೆಲೆ ನಿಗದಿಯಲ್ಲಿ ಮೋಸ ಆಗುತ್ತಿದೆ. ಇದನ್ನು ತಪ್ಪಿಸಿ ಬೆಳೆಗಾರರಿಗೆ ವೈಜ್ಞಾನಿಕವಾಗಿ ಸ್ಥಳದಲ್ಲಿಯೇ ತೂಕ ಮಾಡಿಸಿ ದರ ನಿಗದಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಸಹಯೋಗದೊಂದಿಗೆ ರಾಜ್ಯದ ಸಹಕಾರಿ ಕುರಿ

ಹಾಗೂ ಮೇಕೆ ಸಾಕಾಣಿಕೆದಾರರ ಸಂಘಗಳ ಮಹಾ ಮಂಡಲ ಹಾಗೂ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಸಹಯೋಗದೊಂದಿಗೆ ರಾಜ್ಯದ 80 ಎಪಿಎಂಸಿ ಮಾರುಕಟ್ಟೆಗಳಲ್ಲಿ ವೈಜ್ಞಾನಿಕ ಕುರಿ ಮತ್ತು ಮೇಕೆಗಳ ಮಾರುಕಟ್ಟೆಯನ್ನು ಸ್ಥಾಪಿಸಲಾಗಿದೆ. ಜಿಲ್ಲೆಯಲ್ಲಿ ಪೆರೇಸಂದ್ರದ ಸ್ಥಳೀಯ ಎಪಿಎಂಸಿ ಮಾರುಕಟ್ಟೆ ಪ್ರಾಂಗಣದಲ್ಲಿ ಮಾರುಕಟ್ಟೆ ಸ್ಥಾಪಿಸುವ ಮೂಲಕ ಜಿಲ್ಲೆಯ ಕುರಿ ಹಾಗೂ ಮೇಕೆ ಸಾಕಾಣಿಕೆದಾರರಿಗೆ ಅನುಕೂಲ ಕಲ್ಪಿಸಿದೆ.

ನ್ಯಾಯಯುತ ಬೆಲೆ: ವೈಜ್ಞಾನಿಕ ಕುರಿ ಹಾಗೂ ಮೇಕೆ ಮಾರುಕಟ್ಟೆಗೆ ಚಾಲನೆ ನೀಡಿ ಮಾತನಾಡಿದ ಜಿಪಂ ಸಿಇಒ, ಕ್ರಮಬದ್ಧ ಬೆಲೆ ನಿರ್ಧರಿಸುವ ವಿಧಾನದಿಂದ ರೈತರಿಗೆ ಹೆಚ್ಚಿನ ಬೆಲೆ ದೊರೆಯುವಂತಾಗುತ್ತದೆ. ಉತ್ಪಾದಕರು ಖರೀದಿದಾರರೊಂದಿಗೆ ನೇರವಾಗಿ ವ್ಯಾಪಾರ ಮಾಡಿಕೊಳ್ಳಲು ಸಹಾಯವಾಗುತ್ತದೆ. ಇದರಿಂದಾಗಿ ನ್ಯಾಯಯುತ ಬೆಲೆ ಪಡೆಯುವಲ್ಲಿ ಸಾಕಾಣಿಕೆದಾರರು ವಂಚಿತರಾಗುವುದನ್ನು ತಪ್ಪಿಸಬಹುದಾಗಿದೆ ಎಂದರು.

ರ್‍ಯಾಂಪ್‌ ನಿರ್ಮಾಣ: ಎಪಿಎಂಸಿ ಅಧ್ಯಕ್ಷ ನಾರಾಯಣಸ್ವಾಮಿ ಮಾತನಾಡಿ, ಆಧುನಿಕ ವ್ಯವಸ್ಥೆಯಲ್ಲಿ ಪ್ರಾಣಿಗಳು ನಿಲ್ಲುವ ಜಾಗ, ನೀರಿನ ಸೌಲಭ್ಯ, ತೂಕ ಮಾಡುವ ವ್ಯವಸ್ಥೆ ಮತ್ತು ಪ್ರಾಣಿಗಳನ್ನು ಇಳಿಸಲು ಹಾಗೂ ವಾಹನಗಳಿಗೆ ತುಂಬಲು ರ್‍ಯಾಂಪ್‌ಗ್ಳನ್ನು ನಿರ್ಮಿಸಲಾಗಿದೆ. ಸ್ಥಳೀಯವಾಗಿ ಚಾಲ್ತಿಯಲ್ಲಿರುವ ಮಾರುಕಟ್ಟೆ ದರ ಆಧರಿಸಿ ತೂಕ ಪರಿಗಣಿಸಿ ದರ ನಿಗದಿಪಡಿಸಲಾಗುವುದು. ಆಧುನಿಕ ಮಾರುಕಟ್ಟೆ ವ್ಯವಸ್ಥೆಯಲ್ಲಿ ಎಲ್ಲಾ ವಿಭಾಗೀಯದಾರರು ಭಾಗವಹಿಸಿ ಇದರ ಪ್ರಯೋಜನ ಪಡೆಯಬೇಕೆಂದರು.

ಮಾರುಕಟ್ಟೆ ನಿರ್ವಹಣೆ ಮಹಾ ಮಂಡಳಕ್ಕೆ: ಕರ್ನಾಟಕ ರಾಜ್ಯ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಸಹಕಾರ ಸಂಘಗಳ ರಾಜ್ಯಾಧ್ಯಕ್ಷ ಬಳುವನಹಳ್ಳಿ ಲೋಕೇಶ್‌ ಮಾತನಾಡಿ, ಕುರಿ ಹಾಗೂ ಮೇಕೆಗಳನ್ನು ವೈಜ್ಞಾನಿಕವಾಗಿ ಮಾರಾಟ ಮಾಡುವ ವ್ಯವಸ್ಥೆಗೆ ಸರ್ಕಾರ ಪ್ರೋತ್ಸಾಹ ನೀಡಿದ್ದು, ಮಾರುಕಟ್ಟೆಗಳ ನಿರ್ವಹಣೆ ಮಾಡಲು ಸರ್ಕಾರ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಸಂಘಗಳ ಮಹಾ ಮಂಡಳಕ್ಕೆ ವಹಿಸಿ ಕೊಟ್ಟಿದೆ.

ಅದರಂತೆ ಮಾರುಕಟ್ಟೆಯಲ್ಲಿ ಸ್ಥಳೀಯ ಕೃಷಿ ಮಾರುಕಟ್ಟೆ ಸಮಿತಿ ಸಹಯೋಗದೊಂದಿಗೆ ಕ್ರಮ ಬದ್ಧವಾಗಿ ನಿರ್ವಹಿಸಲು ಸ್ಥಳೀಯ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಸಹಕಾರ ಸಂಘ ರಚಿಸಲಾಗಿದೆ ಎಂದರು. ಎಪಿಎಂಸಿ ಮಾಜಿ ಅಧ್ಯಕ್ಷ ಗೋವಿಂದಸ್ವಾಮಿ, ನಿರ್ದೇಶಕರಾದ ಕೃಷ್ಣಾರೆಡ್ಡಿ, ಮಿಲ್ಟನ್‌ ವೆಂಕಟೇಶ್‌, ಪಶು ವೈದ್ಯಕೀಯ ಇಲಾಖೆ ಕುರಿ ಮತ್ತು ಮೇಕೆ ಉಣ್ಣೆ ನಿಗಮದ ಉಸ್ತುವಾರಿ ಡಾ.ಜ್ಞಾನೇಶ್‌, ಗ್ರಾಪಂ ಅಧ್ಯಕ್ಷ ಚೆನ್ನಕೃಷ್ಣಾರೆಡ್ಡಿ, ಎಪಿಎಂಸಿ ಕಾರ್ಯದರ್ಶಿ ರಾಮದಾಸ್‌ ಉಪಸ್ಥಿತರಿದ್ದರು.

ಕುರಿ ಮತ್ತು ಮೇಕೆ ಮಾರಾಟ ಮಾಡಲು ಹಾಗೂ ಖರೀದಿಸಲು ಎಪಿಎಂಸಿ ಮಾರುಕಟ್ಟೆ ಪ್ರಮುಖ ಸ್ಥಳವಾಗಿರುತ್ತದೆ. ಎಪಿಎಂಸಿ ಪ್ರಾಂಗಣದಲ್ಲಿ ಮಾರುಕಟ್ಟೆಗೆ ಪೂರಕವಾದ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
-ಫೌಝೀಯಾ ತರುನ್ನುಮ್‌, ಜಿಪಂ ಸಿಇಒ

ಟಾಪ್ ನ್ಯೂಸ್

1-dfsadsad

ಪ್ರೊ ಅಸ್ಸಾದಿ ಅವರಿಗೆ 26 ವರ್ಷಗಳ ನಂತರ ಕೈ ಸೇರಿದ ರಾಜೀನಾಮೆ ಪತ್ರ

1-wewqewqe

Nothing ಭಾರತದ ಮಾರ್ಕೆಟಿಂಗ್ ಡೈರೆಕ್ಟರ್ ಆಗಿ ಪ್ರಣಯ್ ರಾವ್ ನೇಮಕ

1-ssdsad

Shirva ಬೈಕುಗಳ ಮುಖಾಮುಖಿ:ಓರ್ವ ಮೃತ್ಯು, ಇನ್ನೋರ್ವ ಗಂಭೀರ

1-qwwqewq

Gadag ವಿರೇಶ್ವರ ಪುಣ್ಯಾಶ್ರಮದಲ್ಲಿ ಅದ್ದೂರಿ ಮಹಾರಥೋತ್ಸವ

Jaishankar

Rahul Gandhi ಅವರಿಗೆ ವಿದೇಶದಲ್ಲಿ ಭಾರತವನ್ನು ಟೀಕಿಸುವ ಅಭ್ಯಾಸ: ಜೈಶಂಕರ್

sanjay-raut

BJPಗೆ ಬಜರಂಗ ಬಲಿ ಸಹಾಯ ಮಾಡಲಿಲ್ಲ,ಈಗ ಔರಂಗಜೇಬ..: ರಾವುತ್

1-saddsad

Chikkamagaluru ; ನಾಲ್ವರು ಕುಖ್ಯಾತ ಶ್ರೀಗಂಧ ಕಳ್ಳರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆರ್ಥಿಕ ಸಾಕ್ಷರತೆ ಹೆಚ್ಚಳಕ್ಕೆ ಪ್ರೌಢ ಶಾಲೆಗಳಲ್ಲಿ ಕ್ವಿಜ್‌

ಆರ್ಥಿಕ ಸಾಕ್ಷರತೆ ಹೆಚ್ಚಳಕ್ಕೆ ಪ್ರೌಢ ಶಾಲೆಗಳಲ್ಲಿ ಕ್ವಿಜ್‌

ಮುಂಗಾರು ಹೊಸ್ತಿಲಲ್ಲಿ ಕಳೆಗಟ್ಟಿದ ರಾಸುಗಳ ಸಂತೆ

ಮುಂಗಾರು ಹೊಸ್ತಿಲಲ್ಲಿ ಕಳೆಗಟ್ಟಿದ ರಾಸುಗಳ ಸಂತೆ

ಹಾಲಿನ ದರ ಕಡಿತಕ್ಕೆ ಕಿಡಿ

ಹಾಲಿನ ದರ ಕಡಿತಕ್ಕೆ ಕಿಡಿ

ಪಾಠಕ್ಕೂ ಸೈ, ಪರಿಸರ ಜಾಗೃತಿಗೂ ಜೈ

ಪಾಠಕ್ಕೂ ಸೈ, ಪರಿಸರ ಜಾಗೃತಿಗೂ ಜೈ

Congress condition government: BJP workers protest in Chikkaballapur

ಕಾಂಗ್ರೆಸ್ ಕಂಡಿಷನ್ ಸರ್ಕಾರ: ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

1-adasds

Hunsur; ಅಕ್ರಮ ಮರಳು ಸಾಗಾಟ;ಟಿಪ್ಪರ್‌ ಗಳು ವಶ, ಚಾಲಕರು ಪರಾರಿ

1-asds-dsad

ವಸತಿ ವಿದ್ಯಾಲಯದಲ್ಲಿ ಬಾಲಕಿ ಆಕಸ್ಮಿಕ ಸಾವು; ಸೂಕ್ತ ತನಿಖೆಗೆ ಬೇಳೂರು ಸೂಚನೆ

1-dfsadsad

ಪ್ರೊ ಅಸ್ಸಾದಿ ಅವರಿಗೆ 26 ವರ್ಷಗಳ ನಂತರ ಕೈ ಸೇರಿದ ರಾಜೀನಾಮೆ ಪತ್ರ

1-wewqewqe

Nothing ಭಾರತದ ಮಾರ್ಕೆಟಿಂಗ್ ಡೈರೆಕ್ಟರ್ ಆಗಿ ಪ್ರಣಯ್ ರಾವ್ ನೇಮಕ

1-ssdsad

Shirva ಬೈಕುಗಳ ಮುಖಾಮುಖಿ:ಓರ್ವ ಮೃತ್ಯು, ಇನ್ನೋರ್ವ ಗಂಭೀರ