ವೃತ್ತಿಯ ನೈಪುಣ್ಯತೆ ಅಗತ್ಯ

Team Udayavani, Aug 6, 2019, 3:00 AM IST

ಚಿಕ್ಕಬಳ್ಳಾಪುರ: ಪ್ರತಿ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳನ್ನು ಗಿಟ್ಟಿಸಿಕೊಳ್ಳಲು ತೀವ್ರ ಪೈಪೋಟಿ ಇರುವ ಸಂದರ್ಭದಲ್ಲಿ ಕಾರ್ಮಿಕರು ವೃತ್ತಿ ಕೌಶಲ್ಯ ಹಾಗೂ ನೈಪುಣ್ಯತೆಯನ್ನು ಹೆಚ್ಚಿಸಿಕೊಂಡಾಗ ವೃತ್ತಿಯಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಕಾರ್ಮಿಕ ಇಲಾಖೆ ನಿರೀಕ್ಷಕ ಸೋಮಶೇಖರ್‌ ತಿಳಿಸಿದರು.

ನಗರದ ಹೊರ ವಲಯದ ನಿರ್ಮಿತಿ ಕೇಂದ್ರದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಪಂ ಹಾಗೂ ಕಾರ್ಮಿಕ ಇಲಾಖೆ ವತಿಯಿಂದ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಇಲಾಖೆ ಸಹಯೋಗದೊಂದಿಗೆ ಶ್ರಮ ಸಾಮರ್ಥ್ಯ ಯೋಜನೆಯಡಿ ಜಿಲ್ಲೆಯಲ್ಲಿ ನೋಂದಾಯಿತ ಕಾರ್ಮಿಕರಿಗೆ 30 ದಿನಗಳ ತರಬೇತಿ ಹಾಗೂ ಟೂಲ್‌ ಕಿಟ್‌ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಯಾಗಾರ: ಕಾರ್ಮಿಕ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಇಲಾಖೆಯು ಜಿಲ್ಲೆಯಲ್ಲಿ ವಿವಿಧ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಕಾರ್ಮಿಕರನ್ನು ಸಶಕ್ತಗೊಳಿಸುವ ನಿಟ್ಟಿನಲ್ಲಿ ಅವರಿಗೆ ಸೂಕ್ತ ಮಾರ್ಗದರ್ಶನದ ಜೊತೆಗೆ ತರಬೇತಿ ಮೂಲಕ ಕೌಶಲ್ಯಗಳನ್ನು ಬೆಳೆಸುವ ಮಹತ್ವಕಾಂಕ್ಷೆ ಹೊತ್ತು ಟ್ರೆçನಿಂಗ್‌-ಕಮ್‌-ಟೂಲ್‌ಕಿಟ್‌ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದರು.

ಕಾರ್ಯಾಗಾರದಲ್ಲಿ ಸುಮಾರು 21 ವಿವಿಧ ವೃತ್ತಿಗಳಿಗೆ ಸಂಬಂಧಿಸಿದ ತರಬೇತಿ ನೀಡಲಾಗುತ್ತಿದ್ದು, ಸಂಘಟಿತ ಹಾಗೂ ಅಸಂಘಟಿತ ವಲಯದಲ್ಲಿರುವ ಕಾರ್ಮಿಕರಿಗೆ ವೃತ್ತಿಗೆ ಅವಶ್ಯಕವಾದ ಕೌಶಲ್ಯದ ಕೊರತೆ ಇರುವುದರಿಂದ ಈ ಕಾರ್ಯಾಗಾರ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.

ಹೆಚ್ಚಿನ ಉದ್ಯೋಗಾವಕಾಶ: ಜಿಲ್ಲೆಯಲ್ಲಿರುವ ನೋಂದಾಯಿತತ ಕಾರ್ಮಿಕರಿಗೆ ಹಂತ ಹಂತವಾಗಿ ಈ ತರಬೇತಿ ಕಾರ್ಯಾಗಾರ ನೀಡಲಾಗುವುದು. ತರಬೇತಿಯಲ್ಲಿ ಭಾಗವಹಿಸುವ ಕಾರ್ಮಿಕರಿಗೆ ವಸತಿ ಸೌಲಭ್ಯ ಒದಗಿಸಿದ್ದು, ತರಬೇತಿ ಪೂರ್ಣಗೊಳಿಸಿದ ನಂತರ ವೆಬ್‌ ವಿಳಾಸದಲ್ಲಿ ಕಾರ್ಮಿಕರ ಹೆಸರು, ವಿಳಾಸವನ್ನು ನೋಂದಾಯಿಸಿ ಕೌಶಲ್ಯ ವರ್ಧಿತ ಕಾರ್ಮಿಕರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಲಾಗುವು ಎಂದು ಹೇಳಿದರು.

ಮಾಸಿಕ ವೇತನ: ಜಿಪಂ ಯೋಜನಾ ನಿರ್ದೇಶಕರಾದ ಗಿರಿಜಾ ಶಂಕರ್‌ ಮಾತನಾಡಿ, ಅಸಂಘಟಿತ ಕಾರ್ಮಿಕ ವಲಯಕ್ಕೆ ಈ ತರಬೇತಿಯಿಂದ ಬಹಳಷ್ಟು ಪ್ರಯೋಜನವಾಗಲಿದೆ. 30 ದಿನಗಳ ತರಬೇತಿಗೆ ಫ‌ಲಾನುಭವಿಗಳು ತಪ್ಪದೇ ಭಾಗವಹಿಸಬೇಕು.

ತರಬೇತಿಯ ನಂತರ ಫ‌ಲಾನುಭವಿಗಳ ಮಕ್ಕಳ ಶಿಕ್ಷಣಕ್ಕೆ ಬೇಕಾದ ವಿದ್ಯಾರ್ಥಿ ವೇತನ, ಮಕ್ಕಳ ಮದುವೆಗೆ ಹಣ ಸಹಾಯ, ಮಾಸಿಕ ವೇತನ ಪಡೆದುಕೊಳ್ಳಬಹುದು. ಇದರಿಂದ ತರಬೇತಿ ಪೂರ್ಣಗೊಳಿಸಿದ ಪ್ರತಿಯೊಬ್ಬ ಅಭ್ಯರ್ಥಿಯು ಇತರರನ್ನು ನೋಂದಾಯಿಸಿ ಅವರು ಕೂಡ ಸೌಲಭ್ಯ ಪಡೆದುಕೊಳ್ಳಲು ಸಹಕರಿಸಿ ಆ ಮೂಲಕ ಕಾರ್ಮಿಕರು ಆರ್ಥಿಕವಾಗಿ ಸಬಲರಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದರು.

ಕಾರ್ಯಾಗಾರದಲ್ಲಿ ಜಿಲ್ಲಾ ಉದ್ಯೋಗಾಧಿಕಾರಿ ಪ್ರಸಾದ್‌ ಎಂ., ಜಿಲ್ಲಾ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಕೃಷ್ಣೇಗೌಡ, ನಿರ್ದೇಶಕರಾದ ನರಸಿಂಹಮೂರ್ತಿ ಸೇರಿದಂತೆ ಕಾರ್ಮಿಕ ಇಲಾಖೆ ಅಧಿಕಾರಿಗಳು, ಇತರೆ ನಿರ್ಮಾಣ ಕಾರ್ಯದಲ್ಲಿ ತೊಡಗಿರುವ ಜಿಲ್ಲೆಯ ನೋಂದಾಯಿತ ಕಾರ್ಮಿಕರು ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.

20 ಸಾವಿರ ಬೆಲೆ ಬಾಳುವ ಟೂಲ್‌ ಕಿಟ್‌: 30 ದಿನಗಳ ವೃತ್ತಿ ಕೌಶಲ್ಯ ಹಾಗೂ ನೈಪುಣ್ಯತೆ ತರಬೇತಿಯಲ್ಲಿ ಭಾಗವಹಿಸಿರುವ ಕಾರ್ಮಿಕರಿಗೆ ಜೀವನ ಕೌಶಲ್ಯ, ಆರೋಗ್ಯ ಹಾಗೂ ರಕ್ಷಣೆಯ ಬಗ್ಗೆ ತಿಳುವಳಿಕೆ ಮೂಡಿಸುವುದರ ಜೊತೆಗೆ 20 ಸಾವಿರ ಬೆಲೆ ಬಾಳುವ ಟೂಲ್‌ಕಿಟ್‌, ಸುರತಕ್ಷತಾ ಕಿಟ್‌, ಕೌಶಲ್ಯ ಪ್ರಮಾಣ ಪತ್ರ ಮತ್ತು ಉದ್ಯೋಗಾವಕಾಶವನ್ನು ಫ‌ಲಾನುಭವಿಗಳು ಪಡೆಯಲಿದ್ದಾರೆ. ತರಬೇತಿಯಲ್ಲಿ ಅಭ್ಯರ್ಥಿಗೆ ಕೂಲಿ ನಷ್ಟ ಪರಿಹಾರಕ್ಕೆ ದಿನಕ್ಕೆ 240 ರೂ. ಮತ್ತು ಪ್ರಯಾಣ ದರ, ಉಪಹಾರ ಹಾಗೂ ಊಟ ನೀಡಲಾಗುತ್ತದೆ ಎಂದು ಕಾರ್ಮಿಕ ನಿರೀಕ್ಷಕ ಸೋಮಶೇಖರ್‌ ತಿಳಿಸಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ