Udayavni Special

ಮೂಲ ಸೌಲಭ್ಯ ಯೋಜನೆ ಪೂರ್ಣಗೊಳಿಸಿ


Team Udayavani, Sep 5, 2020, 3:09 PM IST

ಮೂಲ ಸೌಲಭ್ಯ ಯೋಜನೆ ಪೂರ್ಣಗೊಳಿಸಿ

ಗೌರಿಬಿದನೂರು: ಮೂಲ ಸೌಕರ್ಯಗಳಿಗೆ ಸಂಬಂಧಿಸಿದ ಯೋಜನೆಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ಇಲಾಖಾವಾರು ಪ್ರಗತಿ ಪರಿಶೀಲನೆ ನಡೆಸಿದ ಅವರು, ಮೊದಲಿಗೆ ಕುಡಿಯುವ ನೀರಿನ ಸಮಸ್ಯೆ ಆಲಿಸಿ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ, ಕೃಷಿ, ತೋಟಗಾರಿಕೆ, ರೇಷ್ಮೆ, ಪಶುವೈದ್ಯ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ, ರೈತರಿಗೆ ಸರ್ಕಾರದಿಂದ ಬೆಳೆವಾರು ಒದಗಿಸಿರುವ ಸಹಾಯಧನವನ್ನು ಕೂಡಲೇ ರೈತರ ಖಾತೆಗಳಿಗೆ ವರ್ಗಾಯಿಸಲು ಸೂಚಿಸಿದರು.

ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಗ್ರಾಮೀಣ ಭಾಗದ ಎಲ್ಲಾ ಶಾಲೆಗಳಲ್ಲಿ ಮೂಲ ಸೌಕರ್ಯ ಕಡ್ಡಾಯವಾಗಿ ಒದಗಿಸಲು ಸೂಚಿಸಿ, ನರೇಗಾ ಯೋಜನೆಯಡಿ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಸಿಇಒ ಹಾಗೂ ಇಒಗೆ ಆದೇಶಿಸಿದರು. ನಗರ ಪ್ರದೇಶ ಹಾಗೂ ಗ್ರಾಮೀಣ ಭಾಗಗಳಲ್ಲಿ ವಸತಿ ರಹಿತರಿಗೆ ನಿವೇಶನ ವಿತರಿಸಲು ಕ್ರಮ ವಹಿಸಬೇಕು, ಲಭ್ಯವಿರುವ ಸರ್ಕಾರಿ ಜಮೀನನ್ನು ಕೂಡಲೇ ಗುರುತಿಸಿ ಆದ್ಯತೆಯ ಮೇರೆಗೆ ಕ್ರಮ ವಹಿಸಲು ತಹಶೀಲ್ದಾರ್‌ಗೆ ಸೂಚಿಸಿದರು.

ಪಿಎಂಜಿಎಸ್‌ವೈ, ಲೋಕೋಪಯೋಗಿ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಗಳಿಂದ ನಿರ್ಮಿಸುತ್ತಿರುವ ರಸ್ತೆಗಳ ಗುಣಮಟ್ಟ ವಾರ್ಷಿಕ ನಿರ್ವಹಣೆ ಸೇರಿದಂತೆ ರಸ್ತೆಗಳ ನಿರ್ಮಾಣದಲ್ಲಿಯೂ ಗುಣಮಟ್ಟವನ್ನು ಕಾಪಾಡಲು ಅಧಿಕಾರಿಗಳಿಗೆ ಸೂಚಿಸಿದರು. ಅನುದಾನ ಬಿಡುಗಡೆ: ಲೋಕೋಪಯೋಗಿ ಇಲಾಖೆಯಿಂದ ಇನ್ನೂ ತಾಲೂಕಾದ್ಯಂತ 113 ಕಿ.ಮೀ. ಉದ್ದದ ರಸ್ತೆಗಳನ್ನು ಅಭಿವೃದ್ಧಿಪಡಿಸಬೇಕಾಗಿದೆ ಎಂಬ ಅಧಿಕಾರಿಯ ಉತ್ತರಕ್ಕೆ ಮುಂದಿನ ದಿನಗಳಲ್ಲಿ ಸರ್ಕಾರದಿಂದ ಅನುದಾನ ಬಿಡುಗಡೆಗಾಗಿ ಅಗತ್ಯ ಕ್ರಮ ವಹಿಸಲಾಗುವುದು ಎಂದು ಸಚಿವರು ತಿಳಿಸಿದರು. ಹೆಚ್ಚಿನ ಅರಿವು ಮೂಡಿಸಿ: ಕೋವಿಡ್‌-19 ನಿಯಂತ್ರಣ ಕ್ರಮಗಳ ಕುರಿತು ಮಾತನಾಡಿದ ಸಚಿವರು, ಕಡ್ಡಾಯ ಮಾಸ್ಕ್ ಧರಿಸುವುದರ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗ ಅಸಮಾಧಾನ ವ್ಯಕ್ತಪಡಿಸಿ, ಈ ಕುರಿತು ಇನ್ನಷ್ಟು ಹೆಚ್ಚಿನ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ತಾಲೂಕು ಆರೋಗ್ಯಾಧಿಕಾರಿ, ತಾಪಂ ಜನಪ್ರತಿನಿಧಿಗಳು ಕೈಕೊಳ್ಳಬೇಕು, ಇದನ್ನು ಆಂದೊಲನದ ರೀತಿ ನಡೆಸಬೇಕು ಎಂದು ಸೂಚಿಸಿದರು.

ಅಮಾನತಿಗೆ ಸೂಚನೆ: ಗ್ರಾಮವಿಕಾಸ ಯೋಜನೆಯಡಿ 47 ಕಾಮಗಾರಿ ಕೈಗೆತ್ತಿಗೊಂಡಿದ್ದು, 33 ಕಾಮಗಾರಿ ಮಾತ್ರ ಪೂರ್ಣಗೊಳಿಸಲಾಗಿದೆ. ಇನ್ನೂ 14 ಕಾಮಗಾರಿಗಳನ್ನು ಅನುಷ್ಠಾನಗೊಳಿಸದೇ ಇರುವುದಕ್ಕೆ ಸಚಿವರು ಬೇಸರ ವ್ಯಕ್ತಪಡಿಸಿ, ಸಂಬಂಧಿಸಿದ ಅಧಿಕಾರಿಗಳನ್ನು ಅಮಾನತ್ತುಗೊಳಿಸುವಂತೆ ಜಿಪಂ ಸಿಇಒಗೆ ಸೂಚಿಸಿದರು. ಈ ಯೋಜನೆಯಡಿ ಅನುದಾನ ಬಿಡುಗಡೆಯಾಗಿ ನಾಲ್ಕು ವರ್ಷಗಳು ಕಳೆದರೂ ಕಾಮಗಾರಿಗಳು ಇದುವರೆಗೂ ಪೂರ್ಣವಾಗಿ ಅನುಷ್ಠಾನಗೊಳಿಸಿಲ್ಲ. ಇನ್ನೂ ಮೂರು ತಿಂಗಳಲ್ಲಿ ಉಳಿಕೆ 14 ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗೆ ಸೂಚಿಸಿದ ಸಚಿವರು, ನಿರ್ಮಿತಿ ಕೇಂದ್ರ, ಕ್ರೆಡಿಲ್‌ ಸಂಸ್ಥೆಗಳಿಗೆ ಜಿಲ್ಲೆಯಲ್ಲಿ ಇನ್ನು ಮುಂದೆ ಯಾವುದೇ ಕಾಮಗಾರಿ ನೀಡಬಾರದು ಎಂದು ಎಚ್ಚರಿಸಿದರು.

 

ಟಾಪ್ ನ್ಯೂಸ್

ಆರ್‌ಸಿಬಿಗೆ ಸತತ ಎರಡನೇ ಸೋಲು

ಆರ್‌ಸಿಬಿಗೆ ಸತತ ಎರಡನೇ ಸೋಲು

ತಿಂಡಿ ತಿನಿಸಿ ಬಾಲಕಿಗೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ

ತಿಂಡಿ ತಿನಿಸಿ ಬಾಲಕಿಗೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ

ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ; ಕಾನೂನು ತಿದ್ದುಪಡಿಗೆ ಕೇಂದ್ರಕ್ಕೆ ಪ್ರಸ್ತಾವನೆ: ಮಾಧುಸ್ವಾಮಿ

ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ; ಕಾನೂನು ತಿದ್ದುಪಡಿಗೆ ಕೇಂದ್ರಕ್ಕೆ ಪ್ರಸ್ತಾವನೆ:ಮಾಧುಸ್ವಾಮಿ

ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆ ಬಲಗೊಳಿಸಲು ಆತ್ಮಾವಲೋಕನ ಅಗತ್ಯ: ಕಾಗೇರಿ

ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆ ಬಲಗೊಳಿಸಲು ಆತ್ಮಾವಲೋಕನ ಅಗತ್ಯ: ಕಾಗೇರಿ

ಅವಿವಾಹಿತ ಮಹಿಳೆಯರೂ ರಕ್ಷಣಾ ಅಕಾಡೆಮಿ ಪರೀಕ್ಷೆ ಬರೆಯಬಹುದು!

ಅವಿವಾಹಿತ ಮಹಿಳೆಯರೂ ರಕ್ಷಣಾ ಅಕಾಡೆಮಿ ಪರೀಕ್ಷೆ ಬರೆಯಬಹುದು!

2024ರೊಳಗೆ ಗ್ರಾಮೀಣ ಭಾಗದ ಪ್ರತಿ ಮನೆಗೂ ನಲ್ಲಿ ನೀರು: ಈಶ್ವರಪ್ಪ

2024ರೊಳಗೆ ಗ್ರಾಮೀಣ ಭಾಗದ ಪ್ರತಿ ಮನೆಗೂ ನಲ್ಲಿ ನೀರು: ಈಶ್ವರಪ್ಪ

ಐಐಎಫ್ ಗೆ ಸಿಗಲಿದೆ 56 ಸರಕು ಸಾಗಣೆ ವಿಮಾನಐಐಎಫ್ ಗೆ ಸಿಗಲಿದೆ 56 ಸರಕು ಸಾಗಣೆ ವಿಮಾನ

ಐಐಎಫ್ ಗೆ ಸಿಗಲಿದೆ 56 ಸರಕು ಸಾಗಣೆ ವಿಮಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಿಲ್ಲೆಯ 6,197 ವಿದ್ಯಾರ್ಥಿಗಳು ಇನ್ನೂ ಶಾಲೆಯಿಂದ ದೂರ!

ಜಿಲ್ಲೆಯ 6,197 ವಿದ್ಯಾರ್ಥಿಗಳು ಇನ್ನೂ ಶಾಲೆಯಿಂದ ದೂರ!

Illicit collection of ration rice, sale

ಪಡಿತರ ಅಕ್ಕಿ ಅಕ್ರಮ ಸಂಗ್ರಹ, ಮಾರಾಟ

ಮತ್ತೆ ಎಚ್‌.ಡಿ.ಕುಮಾರಸ್ವಾ0ಮಿ ಸಿಎಂ ಮಾಡಲು ದೃಢಸಂಕಲ್ಪ

ಮತ್ತೆ ಎಚ್‌.ಡಿ.ಕುಮಾರಸ್ವಾ0ಮಿ ಸಿಎಂ ಮಾಡಲು ದೃಢಸಂಕಲ್ಪ

ಮೌಂಟ್‌ ತುಳಿಯನ್‌ ಶಿಖರ ಏರಿದ ಜಿಲ್ಲೆಯ ಸಾಹಸಿಗರು

ಮೌಂಟ್‌ ತುಳಿಯನ್‌ ಶಿಖರ ಏರಿದ ಜಿಲ್ಲೆಯ ಸಾಹಸಿಗರು

chikkaballapura news

ಮೇಕೆದಾಟು ಯೋಜನೆ ಶೀಘ್ರ ಪ್ರಾರಂಭಿಸಿ

MUST WATCH

udayavani youtube

ದಾಂಡೇಲಿ : ಹಂದಿ, ನಾಯಿಗಳಿಗೆ ಹಬ್ಬದೂಟ ನೀಡುವ ಕಸದ ಡಬ್ಬಗಳು

udayavani youtube

ಕೊಂಬು ಕಹಳೆ ವಾಧ್ಯ ತಯಾರಿಸುವ ಚಿಕ್ಕೋಡಿ ಕಲೈಗಾರ ಕುಟುಂಬ

udayavani youtube

ಆಧುನಿಕ ಭರಾಟೆಗೆ ಸಿಲುಕಿ ನಲುಗಿದ ಕುಲುಮೆ ಕೆಲಸಗಾರರ ಬದುಕು

udayavani youtube

ರಾತ್ರೋರಾತ್ರಿ ಕೋಟ್ಯಧಿಪತಿಯಾದ ಆಟೋ ಚಾಲಕ

udayavani youtube

ಕುಣಬಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ವಿಧಾನ ಪರಿಷತ್ ಸದಸ್ಯ ಘೋಟ್ನೇಕರ್ ಆಗ್ರಹ

ಹೊಸ ಸೇರ್ಪಡೆ

Untitled-1

ಬಲ್ನಾಡು–ಬಾಯಾರು-ಕುಂಡಡ್ಕ ರಸ್ತೆಗಿಲ್ಲ ದುರಸ್ತಿ ಭಾಗ್ಯ 

ಕೊಲ್ಲಮೊಗ್ರು: ಸಮಸ್ಯೆಗಿಲ್ಲ ಸ್ಪಂದನೆ

ಕೊಲ್ಲಮೊಗ್ರು: ಸಮಸ್ಯೆಗಿಲ್ಲ ಸ್ಪಂದನೆ

Untitled-1

ಬೆತ್‌ ಮೂನಿ ಅಜೇಯ ಸೆಂಚುರಿ; ಆಸ್ಟ್ರೇಲಿಯ ಸರಣಿ ಜಯಭೇರಿ

ಆರ್‌ಸಿಬಿಗೆ ಸತತ ಎರಡನೇ ಸೋಲು

ಆರ್‌ಸಿಬಿಗೆ ಸತತ ಎರಡನೇ ಸೋಲು

ತಿಂಡಿ ತಿನಿಸಿ ಬಾಲಕಿಗೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ

ತಿಂಡಿ ತಿನಿಸಿ ಬಾಲಕಿಗೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.