ಕಚೇರಿಗಳಲಿ ಪ್ಲಾಸ್ಟಿಕ್ ಬಾಟಲ್‌ ಬಳಕೆ ನಿಷೇಧಿಸಿ

Team Udayavani, Jul 31, 2021, 12:08 PM IST

sadhgdfds

ಚಿಕ್ಕಮಗಳೂರು: ಜಿಲ್ಲೆಯ ಗ್ರಾಪಂ ಕಚೇರಿಯಿಂದ ಜಿಲ್ಲಾ ಧಿಕಾರಿ ಕಚೇರಿ ಸೇರಿದಂತೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್‌ ಬಾಟಲ್‌ಗ‌ಳ ಬಳಕೆಯನ್ನು ಒಂದು ವಾರದೊಳಗೆ ನಿಷೇಧಿ ಸಬೇಕು. ಇಲ್ಲದಿದ್ದರೆ ಜಿಲ್ಲಾ ಧಿಕಾರಿ ಕಚೇರಿ ಎದುರು ಪ್ಲಾಸ್ಟಿಕ್‌ ಬಾಟಲ್‌ ಸುರಿದು ಪ್ರತಿಭಟಿಸುವುದಾಗಿ ವಿಧಾನ ಪರಿಷತ್‌ ಸದಸ್ಯ ಎಸ್‌.ಎಲ್‌. ಭೋಜೇಗೌಡ ಎಚ್ಚರಿಸಿದರು.

ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರಿ ಕಚೇರಿಗಳಲ್ಲಿ ಪ್ಲಾಸಿಕ್‌ ಬಾಟಲಿಗಳ ಬಳಕೆಯನ್ನು ನಿಷೇ ಧಿಸಿ ಸರ್ಕಾರ ಮಾಲಿನ್ಯ ಮಂಡಳಿ ಮೂಲಕ ಆದೇಶ ಹೊರಡಿಸಿದೆ. ಜಿಪಂ ಕೆಡಿಪಿ ಸಭೆಯಲ್ಲೂ ನಿರ್ಣಯ ಕೈಗೊಳಲಾಗಿದೆ. ಈ ಆದೇಶವನ್ನು ಸರ್ಕಾರಿ ಅಧಿ  ಕಾರಿಗಳೇ ಉಲ್ಲಂಘಿಸುತ್ತಿದ್ದಾರೆ ಎಂದರು.

ಜಿಲ್ಲಾ ಧಿಕಾರಿ ಕೆ.ಎನ್‌. ರಮೇಶ್‌ ಹಾಗೂ ಜಿ ಪಂ ಸಿಇಒ ಪ್ರಭು ಕೂಡಲೇ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್‌ ಬಳಕೆ ಮಾಡದಂತೆ ಆದೇಶ ಹೊರಡಿಸಬೇಕು ಹಾಗೂ ಪ್ಲಾಸ್ಟಿಕ್‌ ಬಳಕೆ ನಿಷೇಧದ ಬಗ್ಗೆ ಸರ್ಕಾರಿ ಕಚೇರಿಗಳಲ್ಲಿ ನಾಮಫಲಕ ಹಾಕಬೇಕು. ಮುಂದಿನ ಒಂದು ವಾರದಲ್ಲಿ ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್‌ ಬಳಕೆ ತಡೆಯದಿದ್ದಲ್ಲಿ ಪ್ಲಾಸ್ಟಿಕ್‌ ಬಾಟಲಿಗಳನ್ನು ಜಿಲ್ಲಾ ಧಿಕಾರಿ ಕಚೇರಿ ಎದುರು ರಾಶಿ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದರು. ಇತ್ತೀಚೆಗೆ ನಡೆದ ಜಿಪಂ ಕೆಡಿಪಿ ಸಭೆಯಲ್ಲಿ ಅಮೃತ್‌ ಮಹಲ್‌ ಕಾವಲ್‌ ಒತ್ತುವರಿ ಸಮಸ್ಯೆ ಚರ್ಚೆಯಾಗಿದ್ದು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಿಖಾ ಅವರು ನ್ಯಾಯಾಲಯದ ಆದೇಶದಂತೆ ಒತ್ತುವರಿ ತೆರವುಗೊಳಿಸುವುದಾಗಿ ತಿಳಿಸಿದ್ದಾರೆ. ಶೀಘ್ರವೇ ಒತ್ತುವರಿಯನ್ನು ತೆರವುಗೊಳಿಸಬೇಕು.

ಜಿಲ್ಲಾ ಧಿಕಾರಿ ಸೇರಿದಂತೆ ಉನ್ನತ ಅಧಿ ಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ತಿಳಿಸಿದರು. ಜಿಲ್ಲೆಯಲ್ಲಿ ಅಮೃತ್‌ ಮಹಲ್‌ ತಳಿ ಸಂರಕ್ಷಿಸುವುದರಲ್ಲಿ ನಿರ್ಲಕ್ಷé ವಹಿಸಲಾಗಿದೆ. ಜಾನುವಾರು ಸಂರಕ್ಷಣೆಗೆ ಸೂಕ್ತ ಶೆಡ್‌ ನಿರ್ಮಿಸಿಲ್ಲ. ಸ್ವತ್ಛತೆ ಕಾಯ್ದುಕೊಂಡಿಲ್ಲ. ಗೊಬ್ಬರ ಮಾರಾಟದ ಲೆಕ್ಕ ಇಟ್ಟಿಲ್ಲ, ಅಮೃತ್‌ ಮಹಲ್‌ ಕಾವಲ್‌ನ 4,500 ಎಕರೆ ಭೂಮಿ ಒತ್ತುವರಿಯಾಗಿದೆ. ಒತ್ತುವರಿಯನ್ನು ಶೀಘ್ರವೇ ತೆರವುಗೊಳಿಸಬೇಕು. ದೇಶದಲ್ಲೇ ಅತ್ಯಂತ ಪ್ರಸಿದ್ಧ ಅಮೃತ್‌ ಮಹಲ್‌ ತಳಿ ಸಂರಕ್ಷಣೆಗೆ ಮುಂದಾಗಬೇಕು ಎಂದು ಆಗ್ರಹಿಸಿದರು.

ಗ್ರಾಪಂಗಳಿಗೆ 15ನೇ ಹಣಕಾಸು ಯೋಜನೆಯಡಿ ರಾಜ್ಯ ಸರ್ಕಾರ ಅನುದಾನ ಬಿಡುಗಡೆಗೊಳಿಸಿದ್ದು, ಅನುದಾನ ಬಳಸದಂತೆ ಸರ್ಕಾರ ಪಂಚಾಯತ್‌ ಅಧಿ ಕಾರಿಗಳಿಗೆ ಮೌಖೀಕ ಆದೇಶ ಹೊರಡಿಸಿದ್ದಾರೆ. ಇದರಿಂದ ಗ್ರಾಮೀಣ ಅಭಿವೃದ್ಧಿ ಸಾಧ್ಯವಿಲ್ಲ, ಕೂಡಲೇ ಕ್ರಿಯಾಯೋಜನೆ ಕೈಗೊಂಡು ಅನುದಾನ ಸಮರ್ಪಕ ಬಳಕೆಗೆ ಮುಂದಾಗಬೇಕು ಎಂದರು.

ಚಿಕ್ಕಮಗಳೂರು ನಗರಸಭೆಗೆ ಚುನಾವಣೆ ನಡೆಯದೆ ವರ್ಷಗಳೇ ಕಳೆದಿದ್ದು, ಚುನಾವಣಾ ಆಯೋಗ ಮೀಸಲು ಪಟ್ಟಿ ಪ್ರಕಟಿಸಿದೆ. ಬಿಜೆಪಿ ಮುಖಂಡರಿಗೆ ನಗರಸಭೆ ಚುನಾವಣೆ ನಡೆಯುವುದು ಬೇಕಿಲ್ಲ. ಜನಪ್ರತಿನಿ ಧಿಗಳ ಆಡಳಿತ ಮಂಡಳಿ ಬಂದರೆ ದುರಾಡಳಿತ, ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಲಿದೆ. ಈ ಕಾರಣಕ್ಕೆ ಮೀಸಲಾತಿ ಕರಡಿನಲ್ಲಿ ಉದ್ದೇಶಪೂರ್ವಕವಾಗಿ ಲೋಪದೋಷ ಇರುವಂತೆ ಬಿಜೆಪಿಯವರೇ ನೋಡಿಕೊಂಡಿದ್ದಾರೆ.

ಮೀಸಲು ಕರಡಿನಲ್ಲಿ ದೋಷಗಳಿದ್ದಲ್ಲಿ ಯಾರಾದರೂ ನ್ಯಾಯಾಲಯದ ಮೊರೆ ಹೋಗುತ್ತಾರೆ. ಇದರಿಂದ ಚುನಾವಣೆ ವಿಳಂಬವಾಗುತ್ತದೆ. ಬಿಜೆಪಿಯವರಿಗೆ ಇದೇ ಬೇಕಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಯುವ ಜನತಾದಳ ಮುಖಂಡರಾದ ಗೋಪಿ, ಪೂರ್ಣೇಶ್‌, ಪ್ರದೀಪ್‌, ಕುಮಾರ್‌ ಇದ್ದರು.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.