ಬಂಡವಾಳ ಹೂಡಿಕೆದಾರರ ಸಭೆ ವಿರೋಧಿಸಿ ಧರಣಿ

ಜಾಗತಿಕ ಬಂಡವಾಳ ಹೂಡಿಕೆದಾರರ ಸಭೆ ಸಂಘಟಿಸುತ್ತಿರುವುದು ನಿರರ್ಥಕ ಕಾರ್ಯ

Team Udayavani, Nov 4, 2022, 6:07 PM IST

ಬಂಡವಾಳ ಹೂಡಿಕೆದಾರರ ಸಭೆ ವಿರೋಧಿಸಿ ಧರಣಿ

ಚಿಕ್ಕಬಳ್ಳಾಪುರ: ಜಾಗತಿಕ ಬಂಡವಾಳ ಹೂಡಿಕೆ ದಾರರ ಸಭೆ ವಿರೋಧಿಸಿ ಹಾಗೂ ರೈತ ವಿರೋಧಿ ಕಾಯ್ದೆಗಳನ್ನು ರದ್ದುಪಡಿಸಲು, ರೈತರ ಭೂಮಿ ಆಹಾರ ಉದ್ಯೋಗದ ಹಕ್ಕುಗಳನ್ನು ರಕ್ಷಿಸಲು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯ ಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಗಣಪತಿ ಶಾಸ್ತ್ರಿ ಅವರಿಗೆ ಮನವಿಪತ್ರ ಸಲ್ಲಿಸಿದರು.

ನಾಲ್ಕು ವರ್ಷಗಳಲ್ಲಿ ಅತಿವೃಷ್ಟಿ, ಬರಗಾಲ ಹಾಗೂ ಕೋವಿಡ್‌ ಲಾಕ್‌ಡೌನ್‌ ಮುಂತಾದ ಪ್ರಾಕೃತಿಕ ವಿಕೋಪಗಳ ಜತೆಗೆ ಎಂದಿನಂತೆ ಸರ್ಕಾರಗಳ ರೈತ ವಿರೋಧಿ ಧೋರಣೆಗಳಿಂದ ನೊಂದಿದ್ದ ರೈತ ಸಮುದಾಯ ಈ ವರ್ಷವಾದರೂ ತಮ್ಮ ಛಿದ್ರಗೊಂಡ ಬದುಕನ್ನು ಸರಿಪಡಿಸಿಕೊಳ್ಳುವ ನಿರೀಕ್ಷೆಯಲ್ಲಿತ್ತು ಆದರೆ ಈ ವರ್ಷವೂ ರಾಜ್ಯದ ಎಲ್ಲೆಡೆ ಉಂಟಾದ ಆತಿವೃಷ್ಟಿಯಿಂದ ರೈತರ ಬದುಕು ಮೂರಾಬಟ್ಟೆಯಾಗಿದೆ.

ಸಮುದಾಯದ ಬಂಡವಾಳ ನೀರು ಪಾಲಾಗಿ ದ್ದರೂ ರಾಜ್ಯ ಬಿಜೆಪಿ ಸರ್ಕಾರ, ರೈತರ ಭೂಮಿ, ವಿದ್ಯುತ್‌, ನೀರು ಇತ್ಯಾದಿ ಅಮುಲ್ಯ ಆಸ್ತಿಗಳನ್ನು ಕಾರ್ಪೊರೇಟ್‌ ಕಂಪನಿಗಳಿಗೆ ಧಾರೆ ಎರೆಯಲು  ಜಾಗತಿಕ ಬಂಡವಾಳ ಹೂಡಿಕದಾರರ ಸಮಾವೇಶ ನಡೆಸುತ್ತಿರುವುದು ರೈತ ವಿರೋಧಿ ಹಾಗೂ ಜನ ವಿರೋಧಿ ಕ್ರಮವಾಗಿದೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಲ್ಯಾಂಡ್‌ ಬ್ಯಾಂಕ್‌, ಕೆಐಎಡಿಬಿ ಮೊದಲಾದ ಹಸರಿನಲ್ಲಿ ಭೂ ಸ್ವಾಧೀನದ ಮೂಲಕ ರಾಜ್ಯಾದ್ಯಂತ ಲಕ್ಷಾಂತರ ಎಕರೆ ಕೃಷಿ ಭೂಮಿಯನ್ನು ಕಿತ್ತುಕೊಳ್ಳ ಲಾಗಿದೆ ಇತ್ತ ಕೃಷಿಯೂ ಇಲ್ಲದೇ ಅತ್ತ ಕೈಗಾರಿಕೆಯೂ ಇಲ್ಲದೇ ಪಾಳು ಬಿದ್ದಿರುವ ಈ ಭೂಮಿಗಳಲ್ಲಿ ಯಾವುದೇ ಪರಿಣಾಮಕಾರಿ, ಉದ್ಯೋಗ ಸೃಷ್ಟಿಯಾಗಿಲ್ಲ. ಕಾರ್ಪೊರೇಟ್‌ ಕಂಪನಿಗಳ ಭೂ ದಾಹಕ್ಕೆ ಮತ್ತು ಆಸ್ತಿ ಮೌಲ್ಯದ ಹೆಚ್ಚಳಕ್ಕೆ ಬಳಕೆಯಾಗಿವೆ ಪರಿಸ್ಥಿತಿ ಹೀಗಿರುವಾಗ ಜಾಗತಿಕ ಬಂಡವಾಳ ಹೂಡಿಕೆದಾರರ ಸಭೆ ಸಂಘಟಿಸುತ್ತಿರುವುದು ನಿರರ್ಥಕ ಕಾರ್ಯ ಎಂದು ದೂರಿದರು.

ಹೀಗಾಗಿ ರೈತ ವಿರೋಧಿ ಬಂಡವಾಳ ಹೂಡಿಕೆ ದಾರರ ಸಭೆಯನ್ನು ರದ್ದುಗೊಳಿಸಿ ಅತಿವೃಷ್ಟಿ ಸಂತ್ರಸ್ತ ರೈತ ಕೂಲಿಕಾರರಿಗೆ ವೈಜ್ಞಾನಿಕ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶ್ರಮಿಸಬೇಕೆಂದು ಆಗ್ರಹಿಸಿದರು.

ವಿವಿಧ 9 ಬೇಡಿಕೆಗಳನ್ನು ಈಡೇರಿಸಲು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು. ಸಂಘದ ಜಿಲ್ಲಾ ಗೌರವಾಧ್ಯಕ್ಷ ಬಿ.ಎನ್‌.ಮುನಿಕೃಷ್ಣ, ಎಂ.ವೆಂಕಟ ಸ್ವಾಮಿ, ಎಚ್‌.ಶ್ರೀನಿವಾಸ್‌, ಎಂ.ವಿ.ಶಿವಪ್ಪ, ಹೆಚ್‌. ಎನ್‌.ಮುನಿರೆಡ್ಡಿ, ಅಮರನಾಥ್‌, ಬಿ.ಚನ್ನಕೃಷ್ಣಪ್ಪ, ವೆಂಕಟೇಶಪ್ಪ, ಬೈರಪ್ಪ ಇತರರಿದ್ದರು.

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.