ಸರ್ಕಾರ-ಸಚಿವ ಸುರೇಶ್ ಕುಮಾರ್ ದ್ವಂದ್ವ ಹೇಳಿಕೆಗೆ ಆಕ್ರೋಶ
ರಾಜ್ಯ ಸರ್ಕಾರದ ಧೋರಣೆ ಮತ್ತು ನೀತಿ ವಿರುದ್ಧ ಆಕ್ರೋಶ, ಖಾಸಗಿ ಶಾಲಾ ಶಿಕ್ಷಕರು, ಸಿಬ್ಬಂದಿ ಪ್ರತಿಭಟನೆ
Team Udayavani, Dec 3, 2020, 7:21 PM IST
ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರ ಮತ್ತು ಶಿಕ್ಷಣ ಸಚಿವರ ದ್ವಂದ್ವ ಹೇಳಿಕೆ, ಮಲತಾಯಿ ಧೋರಣೆ ವಿರೋಧಿಸಿ ಜಿಲ್ಲೆಯ ಖಾಸಗಿ ಶಿಕ್ಷಣ ಸಂಸ್ಥೆಗಳಶಿಕ್ಷಕರು ಮತ್ತು ಸಿಬ್ಬಂದಿ ವರ್ಗ ಕಪ್ಪುಪಟ್ಟಿ ಮತ್ತು ಶ್ವೇತ ಟೋಪಿಗಳನ್ನು ಧರಿಸಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಜಿಲ್ಲಾಖಾಸಗಿ ಶಾಲಾಕಾಲೇಜುಗಳ ಒಕ್ಕೂಟದ ನೇತೃತ್ವದಲ್ಲಿ ನಗರದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯ ಸರ್ಕಾರದ ಧೋರಣೆ ಮತ್ತು ನೀತಿ ವಿರುದ್ಧ ಘೋಷಣೆಕೂಗಿದರು.
ಸಂಕಷ್ಟ: ರಾಜ್ಯದಲ್ಲಿ ಕೋವಿಡ್ ಸೋಂಕು ನಿಯಂತ್ರಿಸುವ ಸಲುವಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಿದರಿಂದ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುವ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗ ಸಂಕಷ್ಟದಲ್ಲಿ ಸಿಲುಕುವಂತಾಗಿದೆ. ಸರ್ಕಾರ ಮತ್ತು ಶಿಕ್ಷಣ ಸಚಿವ ಸುರೇಶ್‌ಕುಮಾರ್ ಅವರ ಗೊಂದಲಮಯ ಹೇಳಿಕೆಗಳಿಂದ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ನಿರ್ದೇಶಕರು ಸ್ಪಷ್ಟ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಾಗದೆ ಶಿಕ್ಷಕರು ಮತ್ತು ಸಿಬ್ಬಂದಿ ವೇತನವಿಲ್ಲದೇ ಪರ ದಾಡುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಡೀಸಿಗೆ ಮನವಿ: ಜಿಲ್ಲಾ ಖಾಸಗಿ ಶಾಲಾಕಾಲೇಜುಗಳ ಒಕ್ಕೂಟದ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಮಾತನಾಡಿ, ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರಪ್ರತಿಭಟನೆ ನಡೆಸಲಾಗುವುದೆಂದು ಎಚ್ಚರಿಕೆ ನೀಡಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಖಾಸಗಿ ಶಾಲಾ ಕಾಲೇಜುಗಳ ಒಕ್ಕೂಟದ ಕಾರ್ಯದರ್ಶಿಎನ್.ಡಿ ಪ್ರಸನ್ನಕುಮಾರ್, ಚಿಕ್ಕಬಳ್ಳಾಪುರಬಿಜಿಎಸ್ ಶಾಲೆಯ ಪ್ರಾಂಶುಪಾಲ ಮೋಹನ್‌ಕುಮಾರ್, ಶಿಡ್ಲಘಟ್ಟ ಬಿಜಿಎಸ್ ಪ್ರಾಂಶುಪಾಲಮಹದೇವ್, ಜಿಲ್ಲಾ ಸಂಚಾಲಕ ಮುಶ್ತಾಕ್, ಜಾರ್ಜ್, ಖಜಾಂಚಿ, ವೈ.ವಿ.ಆನಂದ್, ಶಿಡ್ಲಘಟ್ಟ ತಾಲೂಕು ಅಧ್ಯಕ್ಷ ಡಾಲ್ಫಿನ್ ನಾಗರಾಜ್, ಕಾರ್ಯದರ್ಶಿ ಮೊಹಮದ್ ತಮೀಮ್ ಅನ್ಸಾರಿ, ಚಿಂತಾಮಣಿ ತಾ.ಅಧ್ಯಕ್ಷ ವೇಮನಾರಾಯಣ್, ಕಾರ್ಯದರ್ಶಿ ಮಾಲತಿ, ಗೌರಿಬಿದನೂರು ತಾಲೂಕು ಅಧ್ಯಕ್ಷ ವರಹಾಮೂರ್ತಿ, ಕಾರ್ಯ ದರ್ಶಿ ಚಂದ್ರಮೌಳಿ, ಬಾಗೇಪಲ್ಲಿ ತಾಲೂಕು ಅಧ್ಯಕ್ಷ ಶಿವಣ್ಣ ಕಾರ್ಯದರ್ಶಿ ಪೃಥ್ವಿ, ಬಾಗೇಪಲ್ಲಿ ತಾಲೂಕಿನ ಮೊಹಮದ್ ನೂರುಲ್ಲಾ, ಖಜಾಂಚಿ, ಹರೀಶ್ ಮತ್ತಿತರರು ಉಪಸ್ಥಿತರಿದ್ದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೃಷಿ ಕಾಯ್ದೆ ವಾಪಸ್ಸು ಪಡೆಯದಿದ್ದರೆ ದ್ವಿತೀಯ ಸ್ವಾತಂತ್ರ್ಯಚಳುವಳಿ: ಕೋಡಿಹಳ್ಳಿ ಚಂದ್ರಶೇಖರ್
ಯುವಪೀಳಿಗೆಗೆ ಸಂಸ್ಕೃತಿ, ಪರಂಪರೆ ತಿಳಿಸಿ
ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಲಸಿಕೆ ವಿತರಣೆ ಅಭಿಯಾನಕ್ಕೆ ಡಿ.ಸಿ ಆರ್.ಲತಾ ಚಾಲನೆ
ರಾಮಮಂದಿರ ನಿರ್ಮಾಣ ದೇಶ ಒಗ್ಗೂಡಿಸುವ ಕಾರ್ಯ: ಸಚಿವ ಡಾ.ಕೆ.ಸುಧಾಕರ್
ಸೂಕ್ತ ಭಧ್ರತೆಯಲ್ಲಿ ಚಿಕ್ಕಬಳ್ಳಾಪುರಕ್ಕೆ ಕೋವಿಡ್-19 ಲಸಿಕೆ ಆಗಮನ : ಸುರಕ್ಷಿತವಾಗಿ ಶೇಖರಣೆ