ರಾಮಾಯಣ ಅವಹೇಳನ: ಪ್ರಾಂಶುಪಾಲ ಕ್ಷಮೆಯಾಚನೆ

Team Udayavani, Mar 16, 2021, 12:53 PM IST

ರಾಮಾಯಣ ಅವಹೇಳನ: ಪ್ರಾಂಶುಪಾಲ ಕ್ಷಮೆಯಾಚನೆ

ಗೌರಿಬಿದನೂರು: ನಗರದ ಯಶಸ್ವಿ ಪ.ಪೂ ಕಾಲೇಜಿನ ವಾರ್ಷಿಕೊತ್ಸವ ಸಮಾರಂಭದಲ್ಲಿ ಮನರಂಜನೆ ಹೆಸರಿನಲ್ಲಿ ಮಾರ್ಡನ್‌ ರಾಮಾಯಣ ಎಂಬ ನಾಟಕದಲ್ಲಿ ರಾಮ, ಸೀತೆ, ಲಕ್ಷ್ಮಣ ಪಾತ್ರಗಳನ್ನು ಅವಹೇಳನ ಕಾರಿಯಾಗಿ ಬಿಂಬಿಸಿದ್ದನ್ನು ಖಂಡಿಸಿ ವಿಶ್ವ ಹಿಂದೂ ಪರಿಷದ್‌, ಹಿಂದೂ ಜಾಗರಣ ವೇದಿಕೆ ಹಾಗೂ ಬಿಜೆಪಿ ಕಾರ್ಯಕರ್ತರು ಯಶಸ್ವಿನಿ ಕಾಲೇಜಿನ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಈ ಸಂಧರ್ಭದಲ್ಲಿ ವಿಶ್ವ ಹಿಂದೂ ಪರಿಷದ್‌ ಅಧ್ಯಕ್ಷ ಸಾಗಾನಹಳ್ಳಿ ಶಿವಕುಮಾರ್‌ ಮಾತನಾಡಿ, ಕಾಲೇಜಿನ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರ ಹಿಂದೂ ವಿರೋಧಿ ಧೋರಣೆ ಖಂಡಿಸಿ ಹಿಂದೂ ಧರ್ಮದ ಪದ್ಧತಿ, ನಂಬಿಕೆಗಳನ್ನು ಅವಹೇಳನ ಮಾಡುತ್ತಿರುವುದು ಖಂಡನೀಯ. ಒಬ್ಬರ ನಂಬಿಕೆಯನ್ನು ಅಪಹಾಸ್ಯ ಮಾಡುವಂತಹ ಹಕ್ಕು ನಿಮಗೆ ಕೊಟ್ಟವರು ಯಾರು ಎಂದು ಪ್ರಶ್ನಿಸಿದರು. ಮುಂದಿನ ದಿನಗಳಲ್ಲಿ ರಾಮಾಯಣದ ಬಗ್ಗೆ ವಿದ್ಯಾ ರ್ಥಿಗಳಿಗೆ ಉಪನ್ಯಾಸ ಏರ್ಪಡಿಸಿ ಅವರ ಆದರ್ಶಗಳು ತಂದೆ, ತಾಯಿ, ಪಿತೃವಾಕ್ಯ ಪರಿಪಾಲನೆಯಂತ ಧ್ಯೇಯ ಗಳ ಬಗ್ಗೆ ತಿಳಿಸಬೇಕು ಎಂದು ಒತ್ತಾಯಿಸಿದ ಅವರು, ತಪ್ಪಿದರೆ ಉಗ್ರ ಹೋರಾಟ ನಡೆಸಲಾಗುವುದು ಎಂದರು.

ಆರ್‌ಎಸ್‌ಎಸ್‌ನ ಪ್ರಮುಖರಾದ ವೇಣುಜೀ ಮಾತನಾಡಿ, ಮನುಕುಲಕ್ಕೆ ಬದುಕುವ ಮಾರ್ಗವನ್ನು ತಿಳಿಸಿಕೊಡುವ, ರಾಮಾಯಣವನ್ನೇ ಅವಹೇಳನ ಮಾಡುವುದು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಕೂಡಲೇ ಆಡಳಿತ ಮಂಡಳಿ ಸದರಿ ಪ್ರಕರಣಕ್ಕೆ ಕ್ಷಮೆಯಾಚಿಸ ಬೇಕು. ಇಲ್ಲದಿದ್ದರೆ ಕಠಿಣ ಕಾನೂನು ಹಾಗೂ ಹೋರಾಟ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕಾಲೇಜಿನ ಪ್ರಾಂಶು ಪಾಲ ಶಶಿಧರ್‌ ಪ್ರಕರಣಕ್ಕೆ ಸಂಬಂಧಿಸಿ ಬಹಿರಂಗವಾಗಿ ಕ್ಷಮೆಯಾಚಿಸಿ ಮುಂದೆ ಇಂತಹ ಘಟನೆಗಳು ನಡೆಯ ದಂತೆ ನೋಡಿಕೊಳ್ಳುವುದಾಗಿಯೂ ಹಾಗೂ ವಿದ್ಯಾರ್ಥಿ ಗಳಿಗೆ ರಾಮಾಯಣದ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.

ಪ್ರತಿಭಟನೆಯಲ್ಲಿ ಹಿಂದೂ ಜಾಗರಣ ವೇದಿಕೆಯ ಜಿಲ್ಲಾಧ್ಯಕ್ಷ ಸ್ವಾಗತ್‌ ಜೈನ್‌, ನಗರಸಭೆ ಸದಸ್ಯ ಮಾರ್ಕೆಟ್‌ ಮೋಹನ್‌, ಜಯಣ್ಣ, ನಿಖಿಲ್, ಶಶಿಕುಮಾರ್‌, ಚರಣ್‌ ಕುಮಾರ್‌, ಮುದ್ದುವೀರಪ್ಪ, ಹೇಮಂತ್‌, ವೆಂಕಟೇಶ್‌, ಪ್ರಸಾದ್‌, ಮನೋಹರ್‌, ದೇವು,ಪವನ್‌ರೆಡ್ಡಿ, ಆನಂದ್‌, ಸುರೇಶ್‌, ನವೀನ್‌, ಮುದ್ದುಕೃಷ್ಣ, ರಾಜೇಶ್‌, ಚಂದನ್‌, ಅಂಬರೀಶ್‌, ಶಿವರಾಜ್‌ ಮುಂತಾದವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.