ಸೇವಾ ಭದ್ರತೆಗೆ ಆಗ್ರಹಿಸಿ ಧರಣಿ


Team Udayavani, Jan 13, 2020, 3:00 AM IST

seva-bhadarte

ಚಿಕ್ಕಬಳ್ಳಾಪುರ: ಗ್ರಾಮೀಣ ದಿವ್ಯಾಂಗರ ಪುನರ್ವಸತಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಕಾರ್ಯಕರ್ತರಿಗೆ ಸರ್ಕಾರ ಕನಿಷ್ಠ ವೇತನ ಜಾರಿಗೊಳಿಸಿ ಸೇವಾ ಭದ್ರತೆ ಒದಗಿಸುವಂತೆ ಆಗ್ರಹಿಸಿ ಜ.16ರಿಂದ ರಾಜ್ಯ ವಿಕಲಚೇತನರ ಹಾಗೂ ವಿವಿಧೋದ್ದೇಶ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಒಕ್ಕೂಟ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವದಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ರಾಜ್ಯ ಕಾರ್ಯದರ್ಶಿ ಎಸ್‌.ಕೃಷ್ಣಪ್ಪ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಭಾನುವಾರ ಈ ಕುರಿತು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸತತ 11 ವರ್ಷಗಳಿಂದ ಜಾರಿಯಲ್ಲಿರುವ ಯೋಜನೆಯಡಿ ವಿಕಲಚೇತನರ ಪುನರ್ವಸತಿಗಾಗಿ ಕಾರ್ಯಕರ್ತರು ಅಲ್ಪ ಗೌರವ ಧನ ಪಡೆದು ಕಾರ್ಯ ನಿರ್ವಹಿಸುತ್ತಿದ್ದು, ಸರ್ಕಾರ ಇದುವರೆಗೂ ನಮ್ಮ ಸೇವೆಗೆ ಭದ್ರತೆ ಒದಗಿಸದೇ ಕನಿಷ್ಠ ವೇತನ ಜಾರಿಗೊಳಿಸದೇ ದ್ರೋಹ ಬಗೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅರ್ಹ ದಿವ್ಯಾಂಗರಿಗೆ ಸೌಕರ್ಯ: ಸರ್ಕಾರದ ಶೇ.5 ರಷ್ಟು ಅನುದಾನ ಎಲ್ಲಾ ಇಲಾಖೆಗಳಲ್ಲಿ ನಿಗದಿಪಡಿಸಿರುವ ಅನುದಾನಗಳ ಬಳಕೆ, ಗ್ರಾಪಂ, ತಾಪಂನ, ನಗರಸಭೆ, ಶಾಸಕರ ಹಾಗೂ ಸಂಸದರ ಅನುದಾನಗಳ ಬಳಕೆ ಕುರಿತು ಕಾರ್ಯಕರ್ತರು ಕಾರ್ಯ ನಿರ್ವಹಿಸುತ್ತಾ ಸರ್ಕಾರದ ನಿರಾಮಯ, ನಿರುದ್ಯೋಗ ಭತ್ಯೆ, ಸ್ಪರ್ಧಾಚೇತನ, ಇಂಧನ ಚಾಲಿತ ವಾಹನ, ಪ್ರತಿಭಾ ಪುರಸ್ಕಾರ, ಶಿಶುಪಾಲನಾ ಭತ್ಯೆ, ವಿದ್ಯಾರ್ಥಿ ವೇತನ, ಬಸ್‌ಪಾಸ್‌ ಮತ್ತಿತರ ಸೌಲಭ್ಯಗಳನ್ನು ಅರ್ಹ ದಿವ್ಯಾಂಗರಿಗೆ ತಲುಪಿಸುವ ಕೆಲಸವನ್ನು ಮಾಡಲಾಗುತ್ತಿದೆ ಎಂದರು.

ಒಕ್ಕೂಟ ನಿರ್ಧಾರ: ಸರ್ಕಾರ ಪುನರ್ವಸತಿ ಕಾರ್ಯಕರ್ತರಿಗೆ ಇದುವರೆಗೂ ಯಾವುದೇ ರೀತಿಯ ಮೂಲ ಸೌಕರ್ಯ ಕಲ್ಪಿಸಿಲ್ಲ. ಕನಿಷ್ಠ ವೇತನ ಹಾಗೂ ಸೇವಾ ಭದ್ರತೆ ಒದಗಿಸಿಲ್ಲ. ಹಲವಾರು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಏನು ಪ್ರಯೋಜನವಾಗದ ಕಾರಣ ಜ.16 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಲು ರಾಜ್ಯ ಒಕ್ಕೂಟ ನಿರ್ಧರಿಸಿದೆ ಎಂದರು.

ಕಾಯಂಗೊಳಿಸಲು ಆಗ್ರಹ: ತಾಲೂಕು ಮಟ್ಟದಲ್ಲಿ ಎಲ್ಲಾ ಇಲಾಖೆಗಳೊಂದಿಗೆ ಸಮನ್ವಯತೆ ಸಾಧಿಸಿ ಕಾರ್ಯಕರ್ತರು ಪ್ರಾಮಾಣಿಕವಾಗಿ ದಿವ್ಯಾಂಗರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸ ಮಾಡುತ್ತಿದ್ದು, ಕೂಡಲೇ ಸರ್ಕಾರ ಎಲ್ಲಾ ಎಂಆರ್‌ಡಬ್ಲೂé ಹಾಗೂ ವಿಆರ್‌ಡಬ್ಲೂé ಕಾರ್ಯಕರ್ತರನ್ನು ಕಾಯಂಗೊಳಿಸಿ ಕನಿಷ್ಠ ವೇತನ ಜಾರಿಗೊಳಿಸಬೇಕು, ಎಲ್ಲ ಸರ್ಕಾರಿ ನೌಕರರಿಗೆ ಸಿಗುವ ಸೌಲಭ್ಯಗಳನ್ನು ಪುನರ್ವಸತಿ ಕಾರ್ಯಕರ್ತರಿಗೂ ಕಲ್ಪಿಸಬೇಕೆಂದು ಆಗ್ರಹಿಸಿದರು.

ರಾಜ್ಯದಲ್ಲಿ 6500 ಕ್ಕೂ ಹೆಚ್ಚು ಪುನರ್ವಸತಿ ಕಾರ್ಯಕರ್ತರು ಇದ್ದು ಜಿಲ್ಲೆಯಲ್ಲಿ ಒಟ್ಟು 150 ಮಂದಿ ಇದ್ದಾರೆ. ಸರ್ಕಾರ ನಮ್ಮ ನ್ಯಾಯುತವಾದ ಬೇಡಿಕೆಗಳನ್ನು ಈಡೇರಿಸುವವರೆಗೂ ಧರಣಿ ಕೈ ಬಿಡುವುದಿಲ್ಲ. ಜಿಲ್ಲೆಯ ದಿವ್ಯಾಂಗರ ಪುನರ್ವಸತಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರಿನಲ್ಲಿ ನಡೆಯುವ ಹೋರಾಟದಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಜಿಲ್ಲಾಧ್ಯಕ್ಷ ಡಿ.ಟಿ.ರಾಮಲಿಂಗಪ್ಪ, ಪದಾಧಿಕಾರಿಗಳಾದ ಗುಡಿಬಂಡೆ ಕೆ.ಸಿ.ರಮೇಶ್‌, ಚಿಕ್ಕಬಳ್ಳಾಪುರದ ನರಸಿಂಹಮೂರ್ತಿ, ಬಾಗೇಪಲ್ಲಿ ಎ.ವಿ.ರಾಮಪ್ಪ, ಚಿಂತಾಮಣಿಯ ಎಸ್‌.ಮಂಜುನಾಥ, ಚಿಕ್ಕಬಳ್ಳಾಪುರದ ಎಸ್‌.ಸುನೀಲ್‌, ಲಕ್ಷ್ಮೀನಾರಾಯಣ, ಶಿವ ವರ‌್ಲಕೊಂಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಮುಖ್ಯ ಬೇಡಿಕೆಗಳೇನು?: 6ನೇ ವೇತನ ಆಯೋಗದ ಶಿಫಾರಸ್ಸಿನಂತೆ ಗ್ರಾಮೀಣ ಪುನರ್ವಸತಿ ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಿಗೆ ಕನಿಷ್ಠ ವೇತನ ಜಾರಿಗೊಳಿಸಬೇಕು, ತಾಲೂಕು ಮಟ್ಟದಲ್ಲಿ ಕಾರ್ಯ ನಿರ್ವಹಿಸುವ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ತಾಲೂಕು ದಿವ್ಯಾಂಗ ಅಧಿಕಾರಿಗಳನ್ನಾಗಿ ಹಾಗೂ ಗ್ರಾಪಂ ಮಟ್ಟದಲ್ಲಿ ಕಾರ್ಯ ನಿರ್ವಹಿಸುವರನ್ನು ಗ್ರಾಮೀಣ ವಿಕಲಚೇತನರ ಅಭಿವೃದ್ದಿ ಸಹಾಯಕರನ್ನಾಗಿ ಹುದ್ದೆಯನ್ನು ಕಾಯಂಗೊಳಿಸಬೇಕು.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-gudibande

Gudibande: ಬೆಳ್ಳಂಬೆಳಗ್ಗೆ ಶೂಟ್ ಔಟ್, ಓರ್ವ ಸಾವು

Chikkaballapura: ಇದು ರಾಜಕೀಯ ಬಜೆಟ್‌ ಅಲ್ಲ, ರಾಷ್ಟ್ರೀಯ ಬಜೆಟ್‌: ಸಂಸದ ಡಾ.ಕೆ.ಸುಧಾಕರ್‌

Chikkaballapura: ಇದು ರಾಜಕೀಯ ಬಜೆಟ್‌ ಅಲ್ಲ, ರಾಷ್ಟ್ರೀಯ ಬಜೆಟ್‌: ಸಂಸದ ಡಾ.ಕೆ.ಸುಧಾಕರ್‌

Chikkaballapur: Siddaramaiah should resign if there is morality: MP Dr K Sudhakar

Chikkaballapur: ನೈತಿಕತೆ ಇದ್ದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು: ಸಂಸದ ಡಾ.ಕೆ.ಸುಧಾಕರ್

Mysore ಮೂಡಾ ಹಗರಣ… ಸಿಎಂ ಸಿದ್ದರಾಮಯ್ಯಗೆ ಕಪ್ಪು ‌ಚುಕ್ಕೆ: ನಟ ಚೇತನ್ ಆರೋಪ

MUDA Scam: ಸಿಎಂ ಸಿದ್ದರಾಮಯ್ಯಗೆ ಕಪ್ಪು ‌ಚುಕ್ಕೆ… ಸಿಬಿಐ ತನಿಖೆಗೆ ವಹಿಸಿ: ನಟ ಚೇತನ್

4-gudibande

Gudibanda: ಎರಡು ಪ್ರತ್ಯೇಕ ಅಪಘಾತ; ಒಬ್ಬ ಸವಾರ ಸ್ಥಳದಲ್ಲೇ ಸಾವು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.