ಪಲ್ಸ್‌ ಪೋಲಿಯೋ: ಶೆ.92 ಗುರಿ ಸಾಧನೆ


Team Udayavani, Mar 11, 2019, 7:41 AM IST

pulse.jpg

ಚಿಕ್ಕಬಳ್ಳಾಪುರ: ಜಿಲ್ಲಾದ್ಯಂತ ಜಿಲ್ಲಾಡಳಿತ, ಜಿಪಂ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭಾನುವಾರ 640 ಬೂತ್‌ಗಳಲ್ಲಿ ಆಯೋಜಿಸಿದ್ದ ಪಲ್ಸ್‌ ಪೋಲಿಯೋ ಅಭಿಯಾನದಲ್ಲಿ ಒಟ್ಟು ಗುರಿ ಹೊಂದಿದ್ದ 1.26 ಲಕ್ಷ ಮಕ್ಕಳ ಪೈಕಿ 1.17 ಲಕ್ಷ ಮಕ್ಕಳಿಗೆ ಲಸಿಕೆ ಹಾಕಿ ಜಿಲ್ಲೆಯಲ್ಲಿ ಶೇ.92 ರಷ್ಟು ಗುರಿ ಸಾಧನೆ ಮಾಡಿದೆ. ಗ್ರಾಮಾಂತರ ಪ್ರದೇಶದಲ್ಲಿ ಒಟ್ಟು 93 ಸಾವಿರ ಮಕ್ಕಳ ಪೈಕಿ 87 ಸಾವಿರ ಮಕ್ಕಳಿಗೆ ಹಾಗೂ ನಗರ ಪ್ರದೇಶದಲ್ಲಿ ಒಟ್ಟು 33 ಸಾವಿರ ಮಕ್ಕಳ ಪೈಕಿ 29 ಸಾವಿರ ಮಕ್ಕಳಿಗೆ ಲಸಿಕೆ ಹಾಕಲಾಗಿದೆ. 

ತಾಲೂಕುವಾರು ಮಾಹಿತಿ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗ್ರಾಮಾಂತರ ಪ್ರದೇಶದಲ್ಲಿ 15 ಸಾವಿರ ಮಕ್ಕಳ ಪೈಕಿ 14 ಸಾವಿರ ಮಕ್ಕಳಿಗೆ ಲಸಿಕೆ ಹಾಕಿ ಶೇ.91.12 ಗುರಿ ಸಾಧಿಸಿದ್ದರೆ, ನಗರ ಪ್ರದೇಶದಲ್ಲಿ 3,635 ಮಕ್ಕಳ ಪೈಕಿ 2,795 ಮಕ್ಕಳಿಗೆ ಲಸಿಕೆ ಹಾಕಿ ಶೇ.76.89 ಗುರಿ ಸಾಧಿಸಲಾಗಿದೆ. ಒಟ್ಟಾರೆ ತಾಲೂಕಿನಲ್ಲಿ 19,570 ಮಕ್ಕಳ ಪೈಕಿ 17,315 ಮಕ್ಕಳಿಗೆ ಲಸಿಕೆ ಹಾಕಿ ಶೇ.88.48 ಗುರಿ ಸಾಧಿಸಲಾಗಿದೆ. 

ಚಿಕ್ಕಬಳ್ಳಾಪುರ ತಾಲೂಕು: ಗ್ರಾಮಾಂತರ ಪ್ರದೇಶದಲ್ಲಿ 15,847 ಮಕ್ಕಳ ಪೈಕಿ 15,221 ಮಕ್ಕಳಿಗೆ ಲಸಿಕೆ ಹಾಕಿ ಶೇ.96.05 ಗುರಿ ಸಾಧಿಸಲಾಗಿದೆ. ನಗರ ಪ್ರದೇಶದಲ್ಲಿ 8,016 ಮಕ್ಕಳ ಪೈಕಿ 6,903 ಮಕ್ಕಳಿಗೆ ಲಸಿಕೆ ಹಾಕಿ ಶೇ.86.12 ಗುರಿ ಸಾಧಿಸಲಾಗಿದೆ. ಒಟ್ಟಾರೆ ತಾಲೂಕಿನಲ್ಲಿ 23, 863 ಮಕ್ಕಳ ಪೈಕಿ 22,124 ಮಕ್ಕಳಿಗೆ ಲಸಿಕೆ ಶೇ.92.71 ಗುರಿ ಸಾಧಿಸಲಾಗಿದೆ.

ಚಿಂತಾಮಣಿ: ತಾಲೂಕಿನಲ್ಲಿ ಗ್ರಾಮೀಣ ಪ್ರದೇಶದಲ್ಲಿ 18,484 ಮಕ್ಕಳ ಪೈಕಿ 18,118 ಮಕ್ಕಳಿಗೆ ಲಸಿಕೆ ಹಾಕಿ ಶೇ.98.02 ಗುರಿ ಸಾಧಿಸಲಾಗಿದೆ. ನಗರ ಪ್ರದೇಶದಲ್ಲಿ 9,300 ಮಕ್ಕಳ ಪೈಕಿ 8,350 ಮಕ್ಕಳಿಗೆ ಲಸಿಕೆ ಹಾಕಿ ಶೇ.89.78 ಗುರಿ ಸಾಧಿಸಿ ಒಟ್ಟಾರೆ 27,784 ಮಕ್ಕಳ ಪೈಕಿ 26.468 ಮಕ್ಕಳಿಗೆ ಲಸಿಕೆ ಹಾಕಿ ಶೇ.95.26 ಗುರಿ ಸಾಧಿಸಲಾಗಿದೆ. 

ಗೌರಿಬಿದನೂರು: ತಾಲೂಕಿನ ಗ್ರಾಮಾಂತರ ಪ್ರದೇಶದಲ್ಲಿ 21,101 ಮಕ್ಕಳ ಪೈಕಿ 18,751 ಮಕ್ಕಳಿಗೆ ಲಸಿಕೆ ಹಾಕಿ ಶೇ.93.28 ಗುರಿ ಸಾಧಿಸಲಾಗಿದೆ. ನಗರ ಪ್ರದೇಶದಲ್ಲಿ 4,391 ಮಕ್ಕಳ ಪೈಕಿ 3,823 ಮಕ್ಕಳಿಗೆ ಲಸಿಕೆ ಹಾಕಿ ಶೇ.87.06 ಗುರಿ ಸಾಧಿಸಿ ಒಟ್ಟಾರೆ ತಾಲೂಕಿನಲ್ಲಿ 24,492 ಮಕ್ಕಳ ಪೈಕಿ 22,574 ಮಕ್ಕಳಿಗೆ ಲಸಿಕೆ ಹಾಕಿ ಶೇ.92.17 ಗುರಿ ಸಾಧಿಸಲಾಗಿದೆ.

ಗುಡಿಬಂಡೆ: ತಾಲೂಕಿನ ಗ್ರಾಮಾಂತರ ಪ್ರದೇಶದಲ್ಲಿ 5,422 ಮಕ್ಕಳ ಪೈಕಿ 4,066 ಮಕ್ಕಳಿಗೆ ಲಸಿಕೆ ಹಾಕಿ ಶೇ.74.99 ಗುರಿ ಸಾಧಿಸಲಾಗಿದೆ. ನಗರ ಪ್ರದೇಶದಲ್ಲಿ 863 ಮಕ್ಕಳ ಪೈಕಿ 877 ಮಕ್ಕಳಿಗೆ ಲಸಿಕೆ ಹಾಕಿ ಶೇ.101 ಗುರಿ ಸಾಧಿಸಲಾಗಿದೆ. ಒಟ್ಟಾರೆ ತಾಲೂಕಿನಲ್ಲಿ 6,285 ಮಕ್ಕಳ ಪೈಕಿ 4,943 ಮಕ್ಕಳಿಗೆ ಲಸಿಕೆ ಹಾಕಿ ಶೇ.78.65 ರಷ್ಟು ಗುರಿ ಸಾಧಿಸಲಾಗಿದೆ. 

ಶಿಡ್ಲಘಟ್ಟ: ತಾಲೂಕಿನ ಗ್ರಾಮಾಂತರ ಪ್ರದೇಶದಲ್ಲಿ 17,773 ಮಕ್ಕಳ ಪೈಕಿ 16,893 ಮಕ್ಕಳಿಗೆ ಲಸಿಕೆ ಹಾಕಿ ಶೇ.95.05 ಗುರಿ ಸಾಧಿಸಲಾಗಿದೆ. ನಗರ ಪ್ರದೇಶದಲ್ಲಿ ಒಟ್ಟು 7,129 ಮಕ್ಕಳ ಪೈಕಿ 6.714 ಮಕ್ಕಳಿಗೆ ಲಸಿಕೆ ಹಾಕಿ ಶೇ.94.18 ರಷ್ಟು ಗುರಿ ಸಾಧಿಸಿದೆ. ಒಟ್ಟಾರೆ ತಾಲೂಕಿನಲ್ಲಿ 24,902 ಮಕ್ಕಳ ಪೈಕಿ 23,607 ಮಕ್ಕಳಿಗೆ ಲಸಿಕೆ ಹಾಕಿ ಶೇ.94.80 ರಷ್ಟು ಗುರಿ ಸಾಧಿಸಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಎಂ.ರವಿಶಂಕರ್‌ ಭಾನುವಾರ “ಉದಯವಾಣಿ’ಗೆ ತಿಳಿಸಿದರು.

ಅಪರ ಜಿಲ್ಲಾಧಿಕಾರಿಗಳ ಚಾಲನೆ: ಚಿಕ್ಕಬಳ್ಳಾಪುರ ನಗರದ ಜಿಲ್ಲಾಸ್ಪತ್ರೆಯಲ್ಲಿ ಪಲ್ಸ್‌ ಪೋಲಿಯೋ ಅಭಿಯಾನಕ್ಕೆ ಅಪರ ಜಿಲ್ಲಾಧಿಕಾರಿ ಆರತಿ ನವಜಾತು ಶಿಶುಗೆ ಪೋಲಿಯೋ ಹನಿ ಹಾಕುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ನಗರಸಭೆ ಅಧ್ಯಕ್ಷ ಎಂ.ಮುನಿಕೃಷ್ಣ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಬಿ.ಎಂ.ರವಿಶಂಕರ್‌, ಜಿಲ್ಲಾಸ್ಪತ್ರೆಯ ಸರ್ಜನ್‌ ಡಾ.ವಿಜಯಕುಮಾರ್‌, ನಿವಾಸಿ ವೈದ್ಯಾಧಿಕಾರಿ ರಮೇಶ್‌, ಮಕ್ಕಳ ತಜ್ಞ ಡಾ,ಪ್ರಕಾಶ್‌, ತಾಲೂಕು ವೈದ್ಯಾಧಿಕಾರಿ ಡಾ.ಮಿತ್ರಣ್ಣ, ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ವೆಂಕಟಾಚಲಪತಿ ಉಪಸ್ಥಿತರಿದ್ದರು.

640 ಬೂತ್‌ಗಳಲ್ಲಿ ಲಸಿಕೆ: ಪಲ್ಸ್‌ ಪೋಲಿಯೋ ಅಭಿಯಾನಕ್ಕಾಗಿ ಜಿಲ್ಲಾದ್ಯಂತ ಒಟ್ಟು 640 ಲಸಿಕಾ ಕೇಂದ್ರಗಳನ್ನು ತೆರೆಯಲಾಗಿತ್ತು. ಒಟ್ಟು 2,568 ವ್ಯಾಕ್ಸಿನೇಟರ್ಗಳು ಲಸಿಕಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಮೇಲ್ವಿಚಾರಣೆಗಾಗಿ ಒಟ್ಟು 137 ಮೇಲ್ವಿಚಾರಕ ಸಿಬ್ಬಂದಿಗಳನ್ನು ನೇಮಿಸಲಾಗಿತ್ತು. ಜಿಲ್ಲಾದ್ಯಂತ ನಗರ ಪ್ರದೇಶಗಳಲ್ಲಿ ಬಸ್‌ ರೈಲ್ವೆ ನಿಲ್ದಾಣ, ಜನ ನಿಬಿಡ ಪ್ರದೇಶಗಳಲ್ಲಿ ಪ್ರಯಾಣ ಮಾಡುವ ಮಕ್ಕಳಿಗೆ ಪೋಲಿಯೋ ಹನಿ ಹಾಕಲು 41 ಟ್ರಾನ್ಸಿಟ್‌ ಬೂತ್‌ಗಳನ್ನು ತೆರೆಯಲಾಗಿತ್ತು ಎಂದು ಡಾ.ಬಿ.ರವಿಶಂಕರ್‌ ತಿಳಿಸಿದರು.

ಟಾಪ್ ನ್ಯೂಸ್

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.