ಮಳೆಯಾಗದ ಕಡೆ ಶೀಘ್ರ ಮೋಡ ಬಿತ್ತನೆ


Team Udayavani, Jun 16, 2019, 3:00 AM IST

male-agada

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಬಿತ್ತನೆ ಪ್ರಮಾಣ ಸಾಕಷ್ಟು ಕುಸಿದಿದ್ದು ಮಳೆಯಾಗದ ಕಡೆಗೆ ಶೀಘ್ರದಲ್ಲಿಯೇ ಮೋಡ ಬಿತ್ತನೆ ಕಾರ್ಯವನ್ನು ಸರ್ಕಾರ ಕೈಗೆತ್ತಿಕೊಳ್ಳಲಿದ್ದು, ಈಗಾಗಲೇ ಗ್ರಾಮೀಣಾಭಿವೃದ್ಧಿ ಇಲಾಖೆ ಮೋಡ ಬಿತ್ತನೆ ಕಾರ್ಯಕ್ಕೆ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಕೃಷಿ ಸಚಿವ ಎನ್‌.ಹೆಚ್‌.ಶಿವಶಂಕರರೆಡ್ಡಿ ತಿಳಿಸಿದರು.

ಜಿಲ್ಲಾಡಳಿತದ ವತಿಯಿಂದ ನಗರದಲ್ಲಿ ಆಯ್ಕೆಯಾಗಿದ್ದ ಜಲಾಮೃತ ಹಾಗೂ ಸ್ವತ್ಛಮೇವ ಜಯತೆ ಕಾರ್ಯಕ್ರಮ ಉದ್ಘಾಟಿಸಲು ಆಗಮಿಸಿದ್ದ ವೇಳೆ ತಮ್ಮನ್ನುಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವರ್ಷದಲ್ಲಿ ರಾಜ್ಯದಲ್ಲಿ ಇಷ್ಟೊತ್ತಿಗಾಗಲೇ 18 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿ ಶೇ. ಶೇ.27 ರಷ್ಟು ಗುರಿ ಸಾಧಿಸಲಾಗಿತ್ತು. ಆದರೆ ಈ ವರ್ಷ ಇದುವರೆಗೂ ಶೇ.14 ರಷ್ಟು ಪ್ರಮಾಣದಲ್ಲಿ ಮಾತ್ರ ಬಿತ್ತನೆಯಾಗಿದ್ದು, ರಾಜ್ಯಾದ್ಯಂತ ಒಟ್ಟಾರೆ 8 ಲಕ್ಷ ಹೆಕ್ಟೇರ್‌ನಷ್ಟು ಪ್ರದೇಶದಲ್ಲಿ ಬಿತ್ತನೆಗೊಂಡಿದೆ ಎಂದರು.

ರಸಗೊಬ್ಬರ ದಾಸ್ತಾನು: ರಾಜ್ಯದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗುತ್ತಿಲ್ಲ. ಇದರಿಂದ ಬಿತ್ತನೆ ಪ್ರಮಾಣ ಕುಸಿದಿದೆ. ಮೋಡ ಬಿತ್ತನೆಗೆ ಮಳೆಯಾಗುವ ಮೋಡಗಳು ಇರಬೇಕಿದ್ದು, ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವರ ಉಸ್ತುವಾರಿಯಲ್ಲಿ ಮೋಡ ಬಿತ್ತನೆ ಕಾರ್ಯ ನಡೆಯಲಿದೆ ಎಂದರು.
ರೈತರಿಗೆ ಅಗತ್ಯವಾದ ಬಿತ್ತನೆ ಬೀಜ, ರಸಗೊಬ್ಬರಗಳನ್ನು ಇಲಾಖೆ ಮೂಲಕ ವಿತರಿಸಲು ಕ್ರಮ ವಹಿಸಲಾಗಿದ್ದು, ಅಗತ್ಯ ಬೇಡಿಕೆಗೆ ಅನುಗುಣಮವಾಗಿ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ದಾಸ್ತಾನು ಮಾಡಿಕೊಳ್ಳಲಾಗಿದೆ ಎಂದರು.

ಕಾಂಟ್ರ್ಯಾಕ್ಟ್ ಕೃಷಿ ಅಲ್ಲ: ಸಾಮೂಹಿಕವಾಗಿ ನಡೆಸುವ ಕೃಷಿಯನ್ನು ಕೆಲವರು ಕಾಂಟ್ರ್ಯಾಕ್ಟ್ ಕೃಷಿಯೆಂದು ತಪ್ಪಾಗಿ ಅರ್ಥೈಸಲಾಗಿದೆ. ಹೆಚ್ಚು ಆಹಾರ ಉತ್ಪಾದನೆ ಮಾಡುವ ದೃಷ್ಟಿಯಿಂದ 500, 1000 ಹೆಕ್ಟೇರ್‌ ಪ್ರದೇಶದಲ್ಲಿ ರೈತರನ್ನು ಒಗ್ಗೂಡಿಸಿ ಸಾಮೂಹಿಕವಾಗಿ ಕೃಷಿ ಮಾಡಿಸುವ ಬಗ್ಗೆ ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ.

ಇದರಿಂದ ರೈತರು ಒಂದೆಡೆ ಆಹಾರ ಪದಾರ್ಥಗಳನ್ನು ಬೆಳೆಯುವುದರಿಂದ ಸೂಕ್ತ ಮಾರುಕಟ್ಟೆ ಒದಗಿಸಲು ಕೂಡ ನೆರವಾಗಲಿದೆ. ಇತ್ತೀಚಿನ ದಿನಗಳಲ್ಲಿ ರೈತರು ಒಂದೆರೆಡು ಎಕರೆ ಪ್ರದೇಶದಲ್ಲಿ ಬೆಳೆ ತೆಗೆಯುತ್ತಿರುವುದರಿಂದ ರೈತರಿಗೆ ನಿಖರ ಬೆಲೆ ಸಿಗುತ್ತಿಲ್ಲ.

ಇಸ್ರೇಲ್‌ ಮಾದರಿ ಕೃಷಿ ಪದ್ಧತಿಯನ್ನು ರಾಜ್ಯದಲ್ಲಿ ವಿಸ್ತರಿಸಿ ಸರ್ಕಾರವೇ ರೈತರಿಗೆ ಬೇಕಾದ ಎಲ್ಲಾ ರೀತಿಯ ಮೂಲ ಸೌಕರ್ಯ, ಆಧುನಿಕ ಯಂತ್ರೋಪಕರಣಗಳನ್ನು ಒದಗಿಸಿ ಹೆಚ್ಚು ಉತ್ಪಾದನೆ ಮಾಡಿಸುವ ನಿಟ್ಟಿನಲ್ಲಿ ಅನೇಕ ಕ್ರಮಗಳನ್ನು ಇಲಾಖೆ ಮೂಲಕ ಕೈಗೆತ್ತಿಕೊಳ್ಳಲಾಗಿದ್ದು, ಇದಕ್ಕೆ ಕಾನೂನು ತಿದ್ದುಪಡಿ ಕೂಡ ಮಾಡಬೇಕಿದೆ. ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ತಿಳಿಸಿದರು.

ರಾಜೀನಾಮೆ ನೀಡಲು ಸಿದ್ಧ – ಶಿವಶಂಕರ ರೆಡ್ಡಿ: ಪಕ್ಷೇತರ ಶಾಸಕರಿಗೆ ಸಚಿವ ಸ್ಥಾನ ನೀಡಿರುವ ಕುರಿತು ಕಾಂಗ್ರೆಸ್‌ ಪಕ್ಷದ ಹಿರಿಯ ಶಾಸಕರಲ್ಲಿ ಅಸಮಾದಾನ ಭುಗಿಲೇಳಿರುವ ಕುರಿತು ಪತ್ರಿಕ್ರಿಯೆ ನೀಡಿದ ಕೃಷಿ ಸಚಿವ ಎನ್‌.ಹೆಚ್‌.ಶಿವಶಂಕರರೆಡ್ಡಿ, ಸದ್ಯದಲೇ ಮತ್ತೂಮ್ಮೆ ಸಚಿವ ಸಂಪುಟ ವಿಸ್ತರಣೆ ಆಗಲಿದೆ. ವರಿಷ್ಠರ ಸೂಚನೆಯಂತೆ ನಮಗೆಲ್ಲಾ ಟೈಮ್‌ಬೌಂಡ್‌ ನಿಗದಿಯಾಗಿದೆ. ಸದ್ಯಕ್ಕೆ ಯಾರು ಅಸಮಾಧಾನ ಹೊಂದುವ ಅಗತ್ಯವಿಲ್ಲ.

ಹಿರಿಯ ಶಾಸರಿಗೆ ಸಚಿವರಾಗುವ ಅವಕಾಶ ಬರಲಿದೆ. ಹಾವೇರಿ ಜಿಲ್ಲೆಗೆ ಸಚಿವ ಸ್ಥಾನ ಸಿಗಬೇಕಿತ್ತು. ಬಿ.ಸಿ.ಪಾಟೀಲ್‌ಗೆ ಮಂತ್ರಿ ಸ್ಥಾನ ಸಿಗಬೇಕಿತ್ತು. ಆದರೆ ಪಕ್ಷದಲ್ಲಿ ಕೆಲವರಿಗೆ ತೊಂದರೆ ಆಗಿರುವುದು ನಿಜ, ಮೈತ್ರಿ ಸರ್ಕಾರದ ಪಾಲನೆಯಲ್ಲಿ ಕೆಲವೊಂದು ತೊಂದರೆಗಳಾಗುತ್ತವೆ. ಆದರೆ ಎಲ್ಲವನ್ನು ಸಹಿಸಿಕೊಂಡು ಹೋಗಬೇಕು ಎಂದರು.

ಟಾಪ್ ನ್ಯೂಸ್

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಕೊಚ್ಚಿ ಏರ್‌ಪೋರ್ಟಲ್ಲಿ ಶಬರಿಮಲೆ ದೇಗುಲ ಸಹಾಯಕೇಂದ್ರ

ಕೊಚ್ಚಿ ಏರ್ ಪೋರ್ಟ್ ನಲ್ಲಿ ಶಬರಿಮಲೆ ದೇಗುಲದ ಸಹಾಯಕೇಂದ್ರ

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

Param-Bir-Singh

ಐಪಿಎಸ್‌ ಅಧಿಕಾರಿ ಪರಂಬೀರ್‌ ಸಿಂಗ್‌ ವಿರುದ್ಧ ಶಿಸ್ತಿನ ಕ್ರಮ?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಟ್ಟ

ಅವನತಿಯ ಅಂಚಿನಲ್ಲಿ ಸುರಸದ್ಮಗಿರಿ ಬೆಟ್ಟ

election city corporation

ಅನರ್ಹತೆ ಭೀತಿಯಲಿ 7 “ಕ್ಕೆ ನಗರಸಭೆ ಸದಸ್ಯರು

ರಾಜಕಾಲುವೆ ಡೀಸಿ

ಡೀಸಿ ನೇತೃತದಲ್ಲಿ “ಆಪರೇಷನ್‌ ರಾಜಕಾಲುವೆ”

ಗುಡಿಬಂಡೆ: ಅವನತಿಯ ಅಂಚಿನಲ್ಲಿ ಸುರಸದ್ಮಗಿರಿ ಬೆಟ್ಟ

ಗುಡಿಬಂಡೆ: ಅವನತಿಯ ಅಂಚಿನಲ್ಲಿ ಸುರಸದ್ಮಗಿರಿ ಬೆಟ್ಟ

ಅಕ್ರಮ ಕಲ್ಲು ಗಣಿಗಾರಿಕೆ ತಡೆಯುವಂತೆ ಸ್ಥಳೀಯರಿಂದ ರಸ್ತೆ ತಡೆ

ಅಕ್ರಮ ಕಲ್ಲು ಗಣಿಗಾರಿಕೆ ತಡೆಯುವಂತೆ ಸ್ಥಳೀಯರಿಂದ ರಸ್ತೆ ತಡೆ

MUST WATCH

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

udayavani youtube

ನೋಂದಣೆ ಕಚೇರಿಗೆ ವಕೀಲರು ಬರದಂತೆ ಅಧಿಕಾರಿಗಳ ತಾಕೀತು : ಪ್ರತಿಭಟನೆಗಿಳಿದ ವಕೀಲರು

ಹೊಸ ಸೇರ್ಪಡೆ

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಕೊಚ್ಚಿ ಏರ್‌ಪೋರ್ಟಲ್ಲಿ ಶಬರಿಮಲೆ ದೇಗುಲ ಸಹಾಯಕೇಂದ್ರ

ಕೊಚ್ಚಿ ಏರ್ ಪೋರ್ಟ್ ನಲ್ಲಿ ಶಬರಿಮಲೆ ದೇಗುಲದ ಸಹಾಯಕೇಂದ್ರ

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.